ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆ ಬಹಿರಂಗಪಡಿಸಬೇಕು: ಕರ್ನಾಟಕ ಹೈಕೋರ್ಟ್ ಆದೇಶ
ಲೋಕಸಭೆ, ವಿಧಾನಸಭೆ ಚುನಾವಣೆಗಳಲ್ಲಿ ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆಗಳನ್ನು ಬಹಿರಂಗಪಡಿಸಲಾಗುತ್ತದೆ. ಅದೇ ರೀತಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲೂ ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆ ಬಹಿರಂಗಪಡಿಸಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ್ದು, ಇದನ್ನು ಪಾಲಿಸುವಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.
ಬೆಂಗಳೂರು, ನ.28: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆ ಬಹಿರಂಗಪಡಿಸಬೇಕು ಎಂಬ ಸುಪ್ರೀಂ ಕೋರ್ಟ್ (Supreme Court) ನಿರ್ದೇಶನ ಪಾಲನೆಗೆ ಕರ್ನಾಟಕ ಹೈಕೋರ್ಟ್ (Karnataka High Court) ಆದೇಶ ಹೊರಡಿಸಿದೆ. ಪ್ರಕರಣವೊಂದರಲ್ಲಿ ಸಿವಿಲ್ ಕೋರ್ಟ್ ನೀಡಿದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದು ಈ ಆದೇಶ ಹೊರಡಿಸಿದೆ.
ಕ್ರಿಮಿನಲ್ ಹಿನ್ನೆಲೆ ಬಹಿರಂಗಪಡಿಸದ ಹಿನ್ನೆಲೆ ಹೊಸನಗರ ತಾಲೂಕಿನ ಹರಿದ್ರಾವತಿ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಕೆ.ವಿ.ಅಶೋಕ್ ಅವರ ಆಯ್ಕೆ ಅಸಿಂಧುಗೊಳಿ ಸಿವಿಲ್ ಕೋರ್ಟ್ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಸಿಜೆ ಪ್ರಸನ್ನ ಬಿ ವರಾಳೆ. ನ್ಯಾ. ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಪೀಠ, ಸುಪ್ರೀಂ ಕೋರ್ಟ್ ನಿರ್ದೇಶನ ಪಾಲನೆಗೆ ಆದೇಶಿಸಿತು.
ಇದನ್ನೂ ಓದಿ: ವೈವಾಹಿಕ ಸಂಬಂಧದಿಂದ ಪತ್ನಿ ಪತಿಯ ಯುಐಡಿಎಐ ಮಾಹಿತಿ ಪಡೆಯಲು ಸಾಧ್ಯವಿಲ್ಲ: ಹೈಕೋರ್ಟ್
ಅಭ್ಯರ್ಥಿಗಳು ಚುನಾವಣಾ ಆಯೋಗ ನೀಡುವ ಫಾರ್ಮ್ ತುಂಬಬೇಕು, ಬಾಕಿಯಿರುವ ಕ್ರಿಮಿನಲ್ ಕೇಸ್ಗಳ ವಿವರ ನೀಡಬೇಕು, ಟಿಕೆಟ್ ನೀಡುವ ರಾಜಕೀಯ ಪಕ್ಷಕ್ಕೂ ವಿವರ ಒದಗಿಸಬೇಕು, ಪಕ್ಷದ ವೆಬ್ ಸೈಟ್ನಲ್ಲೂ ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆ ತಿಳಿಸಬೇಕು. ಪತ್ರಿಕೆಗಳಲ್ಲೂ ಅಭ್ಯರ್ಥಿಗಳು ಕ್ರಿಮಿನಲ್ ಹಿನ್ನೆಲೆ ಪ್ರಕಟಿಸಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಪೀಠ ಸೂಚನೆ ನೀಡಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ