ಅಪ್ರಾಪ್ತರು ವಾಹನ ಚಲಾಯಿಸಿ ಅಪಘಾತವಾದರೆ ಮಾಲೀಕರೇ ಪರಿಹಾರ ನೀಡಬೇಕು: ಕರ್ನಾಟಕ ಹೈಕೋರ್ಟ್ ತೀರ್ಪು

ಅಪ್ರಾಪ್ತ ಮಕ್ಕಳ ಕೈಯಲ್ಲಿ ವಾಹನ ಕೊಡುವ ಮುನ್ನ ಪಾಲಕರು ಇನ್ನಷ್ಟು ಎಚ್ಚರ ವಹಿಸಲೇಬೇಕಾದ ಸನ್ನಿವೇಶ ಈಗ ಸೃಷ್ಟಿಯಾಗಿದೆ. ಇಲ್ಲವಾದಲ್ಲಿ ಗಂಭೀರ ಪರಿಣಾಮವನ್ನು ಮುಂದೆ ಎದುರಿಸಬೇಕಾಗಿ ಬರಬಹುದು. ಪ್ರಕರಣದವೊಂದರಲ್ಲಿ ಕರ್ನಾಟಕ ಹೈಕೋರ್ಟ್ ನೀಡಿದ ತೀರ್ಪು ಇದಕ್ಕೆ ಉದಾಹರಣೆಯಾಗಿದೆ. ಹಾಗಾದರೆ ಆ ಪ್ರಕರಣ ಏನು? ಹೈಕೋರ್ಟ್ ತೀರ್ಪೇನು ಎಂಬ ವಿವರ ಇಲ್ಲಿದೆ.

ಅಪ್ರಾಪ್ತರು ವಾಹನ ಚಲಾಯಿಸಿ ಅಪಘಾತವಾದರೆ ಮಾಲೀಕರೇ ಪರಿಹಾರ ನೀಡಬೇಕು: ಕರ್ನಾಟಕ ಹೈಕೋರ್ಟ್ ತೀರ್ಪು
ಕರ್ನಾಟಕ ಹೈಕೋರ್ಟ್
Follow us
Ganapathi Sharma
|

Updated on:Jun 12, 2024 | 2:46 PM

ಬೆಂಗಳೂರು, ಜೂನ್ 12: ಅಪ್ರಾಪ್ತ ವಯಸ್ಕರು (Minors) ವಾಹನ ಚಲಾಯಿಸಿ ಅಪಘಾತ (Accident) ಉಂಟು ಮಾಡಿದರೆ, ವಾಹನದ ಮಾಲೀಕರು (Vehicle Owners) ಸಂಬಂಧಪಟ್ಟವರಿಗೆ ಪರಿಹಾರ ನೀಡಬೇಕೇ ಹೊರತು ವಿಮಾ ಕಂಪನಿಯಲ್ಲ ಎಂದು ಕರ್ನಾಟಕ ಹೈಕೋರ್ಟ್ (Karnataka High Court) ತೀರ್ಪು ನೀಡಿದೆ. ವಿಮಾ ಕಂಪನಿಯ ಮೇಲೆ ಹೊಣೆಗಾರಿಕೆ ವಹಿಸಿದ ಮೋಟಾರು ವಾಹನ ಅಪಘಾತ ನ್ಯಾಯಮಂಡಳಿಯ ತೀರ್ಪು ರದ್ದುಗೊಳಿಸಿ ನ್ಯಾಯಮೂರ್ತಿ ಹಂಚಾಟೆ ಸಂಜೀವ್‌ಕುಮಾರ್ ಈ ತೀರ್ಪು ನೀಡಿದ್ದಾರೆ. ಆ ಮೂಲಕ, ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್‌ನ ಮೇಲ್ಮನವಿಯನ್ನು ಪುರಸ್ಕರಿಸಿದ್ದಾರೆ.

ಅಪಘಾತದಿಂದ ತೊಂದರೆಗೆ ಒಳಗಾದವರಿಗೆ ಪರಿಹಾರವನ್ನು ಪಾವತಿಸುವ ಹೊಣೆಗಾರಿಕೆಯಿಂದ ವಿಮಾ ಕಂಪನಿಯನ್ನು ನ್ಯಾಯಾಲಯ ಮುಕ್ತಗೊಳಿಸಿದೆ. ಟ್ರಿಬ್ಯೂನಲ್ ಆದೇಶದ ಪ್ರಕಾರ ನೀಡಬೇಕಿದ್ದ ಪರಿಹಾರದ ಮೊತ್ತವಾದ 2.56 ಲಕ್ಷ ರೂ.ಗೆ ಶೇ 6ರ ವಾರ್ಷಿಕ ಬಡ್ಡಿಯೊಂದಿಗೆ 4.44 ರೂ. ಪಾವತಿಸುವಂತೆಯೂ ಹೈಕೋರ್ಟ್ ಆದೇಶಿಸಿದೆ.

ಅಪಘಾತಕ್ಕೀಡಾದ ವಾಹನದ ಮಾಲೀಕರಾದ ಮಹಮ್ಮದ್ ಮುಸ್ತಫಾ ಅವರು ಪರಿಹಾರವನ್ನು ಸಂಬಂಧಪಟ್ಟವರಿಗೆ ನೀಡಬೇಕು. ಅಪಘಾತದ ಸಮಯದಲ್ಲಿ ಮೃತಪಟ್ಟ ವ್ಯಕ್ತಿಗೆ 61 ವರ್ಷ ವಯಸ್ಸಾಗಿದ್ದು, ಅವರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದರು. ಹೀಗಾಗಿ ಅವರಿಗೆ ನೀಡಬೇಕಾದ ಪರಿಹಾರದ ಮೊತ್ತವನ್ನು ಹೆಚ್ಚಿಸಲಾಗಿದೆ.

2014ರ ಆಗಸ್ಟ್ 11ರಂದು ತೀರ್ಪು ನೀಡಿದ್ದ ಟ್ರಿಬ್ಯೂನಲ್, ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ನೆಲೆಸಿರುವ ಮೃತರ ಕುಟುಂಬದ ಸದಸ್ಯರಾದ ಬೀಬಿ ನೈಸಾ ಮತ್ತು ಹಕ್ಕುದಾರರಿಗೆ ವಾರ್ಷಿಕ ಶೇ 8ರ ಬಡ್ಡಿಯೊಂದಿಗೆ 2.56 ಲಕ್ಷ ರೂ.ಗಳ ಪರಿಹಾರ ನೀಡುವಂತೆ ವಿಮಾ ಕಂಪನಿಗೆ ಆದೇಶ ನೀಡಿತ್ತು.

ಪ್ರಕರಣದ ಹಿನ್ನೆಲೆ

2008 ರ ಡಿಸೆಂಬರ್ 12 ರಂದು ಬೆಳಿಗ್ಗೆ 8.45 ರ ಸುಮಾರಿಗೆ, ಭಟ್ಕಳದ ರಂಗಿನಕಟ್ಟಾ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 17 ರಲ್ಲಿ ಅಪ್ರಾಪ್ತ ಮೋಟಾರ್ ಸೈಕಲ್ ಸವಾರ ಹಸನ್ ಶಬ್ಬೀರ್ ಎಂಬವರಿಗೆ ಡಿಕ್ಕಿ ಹೊಡೆದಿದ್ದ. ತೀವ್ರವಾಗಿ ಗಾಯಗೊಂಡ ಶಬ್ಬೀರ್ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದರು.

ಇದನ್ನೂ ಓದಿ: ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ನೋಟಿಸ್: ಕೇಸ್ ರದ್ದು ಕೋರಿ ಬಿಎಸ್​ವೈ ಹೈಕೋರ್ಟ್​​ಗೆ ಮೊರೆ​

ಮೃತರ ಕುಟುಂಬ ಸದಸ್ಯರಿಗೆ 2.56 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ವಿಮಾ ಕಂಪನಿಗೆ ಟ್ರಿಬ್ಯೂನಲ್ ತೀರ್ಪು ನೀಡಿತ್ತು. ಅಪಘಾತವು ಆಗ 16 ವರ್ಷ ವಯಸ್ಸಿನ ಹುಡುಗನಿಂದ ಸಂಭವಿಸಿದೆ ಎಂಬ ಆಧಾರದ ಮೇಲೆ ವಿಮಾ ಕಂಪನಿಯು ಇದನ್ನು ಪ್ರಶ್ನಿಸಿತ್ತು. ಸವಾರನು ಅಪ್ರಾಪ್ತನಾಗಿದ್ದರಿಂದ, ಅವನು ಮಾನ್ಯ ಚಾಲನಾ ಪರವಾನಗಿಯನ್ನು ಹೊಂದಿರಲಿಲ್ಲ. ಆದ್ದರಿಂದ ಪರಿಹಾರವನ್ನು ಪಾವತಿಸಲಾಗದು ಎಂದು ವಿಮಾ ಕಂಪನಿ ವಾದಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:40 pm, Wed, 12 June 24

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?