AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಸುರಂಗ ರಸ್ತೆ ನಿರ್ಮಾಣ:ಲಾಲ್ ಬಾಗ್ ನಲ್ಲಿ ಮರ ಕಡಿಯದಂತೆ ನೀಡಿದ್ದ ಮಧ್ಯಂತರ ಆದೇಶ ಮುಂದುವರಿಕೆ

ರಾಜಧಾನಿ ಬೆಂಗಳೂರಿನ 'ಹೆಬ್ಬಾಳದಿಂದ ಸಿಲ್ಕ್‌ ಬೋರ್ಡ್‌ವರೆಗೂ ಸುರಂಗ ರಸ್ತೆ ನಿರ್ಮಾಣ ಯೋಜನೆ ಪ್ರಶ್ನಿಸಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ಅಂತಿಮ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ (Karnataka High Court) ಮುಂದೂಡಿದೆ. ಅಲ್ಲದೇ ಲಾಲ್​ಬಾಗ್​ನಲ್ಲಿ ಮರ ಕಡಿಯದಂತೆ ನೀಡಿದ್ದ ಮಧ್ಯಂತರ ಆದೇಶ ಮುಂದುವರಿಯಲಿದೆ.

ಬೆಂಗಳೂರಿನಲ್ಲಿ ಸುರಂಗ ರಸ್ತೆ ನಿರ್ಮಾಣ:ಲಾಲ್ ಬಾಗ್ ನಲ್ಲಿ ಮರ ಕಡಿಯದಂತೆ ನೀಡಿದ್ದ ಮಧ್ಯಂತರ ಆದೇಶ ಮುಂದುವರಿಕೆ
ಕರ್ನಾಟಕ ಉಚ್ಛ ನ್ಯಾಯಾಲಯImage Credit source: Karnataka High court website
ರಮೇಶ್​ ಎಮ್​.
| Edited By: |

Updated on: Jul 16, 2026 | 6:05 PM

Share

ಮುಖ್ಯಾಂಶಗಳು

  • ಬೆಂಗಳೂರಿನಲ್ಲಿ ಸುರಂಗ ರಸ್ತೆ ನಿರ್ಮಾಣ ಪ್ರಶ್ನಿಸಿ ಪಿಐಎಲ್
  • ಪಿಐಎಲ್ ಬಾಕಿಯಿರುವ ಬಗ್ಗೆ ಗುತ್ತಿಗೆದಾರರಿಗೆ ಮಾಹಿತಿ ನೀಡಲು ಹೈಕೋರ್ಟ್ ಸೂಚನೆ
  • ಲಾಲ್​ಬಾಗ್​ನಲ್ಲಿ ಮರ ಕಡಿಯದಂತೆ ನೀಡಿದ್ದ ಮಧ್ಯಂತರ ಆದೇಶ ಮುಂದುವರಿಕೆ

ಬೆಂಗಳೂರು, (ಜುಲೈ 16): ಬೆಂಗಳೂರಿನ (Bengaluru) ಹೆಬ್ಬಾಳದಿಂದ ಸಿಲ್ಕ್‌ ಬೋರ್ಡ್‌ವರೆ ನಿರ್ಮಿಸಲು ಉದ್ದೇಶಿಸಿರುವ ಸುರಂಗ ರಸ್ತೆ ಯೋಜನೆಗೆ ಸಂಬಂಧಿಸಿದಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ (Karnataka High Court) ಆಗಸ್ಟ್ 20ಕ್ಕೆ ನಿಗದಿಪಡಿಸಿದೆ. ಸುರಂಗ ರಸ್ತೆ ಯೋಜನೆಗೆ ಮಧ್ಯಂತರ ತಡೆಯಾಜ್ಞೆ ನೀಡುವಂತೆ ಪ್ರಕಾಶ್ ಬೆಳವಾಡಿ, ಡಾ. ಎ.ರವೀಂದ್ರ, ಸಿಟಿಜನ್ ಆಕ್ಷನ್ ಫೋರಂ ಸಲ್ಲಿಸಿದ್ದ  ಪಿಐಎಲ್ ಅರ್ಜಿಯನ್ನು ಇಂದು (ಜುಲೈ 16) ವಿಚಾರಣೆ ನಡೆಸಿದ ಕೋರ್ಟ್, ಕಾಮಗಾರಿ ಹೈಕೋರ್ಟ್​ನ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತದೆ. ಪಿಐಎಲ್ ಬಾಕಿಯಿರುವ ಬಗ್ಗೆ ಗುತ್ತಿಗೆದಾರರಿಗೆ ಮಾಹಿತಿ ನೀಡಲು ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿದೆ. ಅರ್ಜಿದಾರರ ಪರ ತೇಜಸ್ವಿ ಸೂರ್ಯ, ಹಿರಿಯ ವಕೀಲ ಡಿ.ಆರ್.ರವಿಶಂಕರ್ ವಾದ ಮಂಡಿಸಿದರು.

ಕಳೆದ ವಿಚಾರಣೆಯ ವೇಳೆ ನ್ಯಾಯಾಲಯವು ಸರ್ಕಾರ, ಗ್ರೇಟರ್ ಬೆಂಗಳೂರು ಪ್ರಾಧಿಕಾರ, ರಾಜ್ಯ ಪರಿಸರ ಅಧ್ಯಯನ ಮೌಲ್ಯಮಾಪನ ಪ್ರಾಧಿಕಾರ, ನಗರ ಭೂಸಾರಿಗೆ ನಿರ್ದೇಶನಾಲಯ, ಬೆಂಗಳೂರು ಸ್ಮಾರ್ಟ್ ಮೂಲಸೌಕರ್ಯ ನಿಯಮಿತ(ಸ್ಮೈಲ್) ರಾಡಿಕ್ ಕನ್ಸಲ್ಟೆಂಟ್ಸ್ ಮತ್ತು ಆಲ್ಟಿನೋಕ್ ಕನ್ಸಲ್ಟೆಂಟ್ಸ್ ಸೇರಿ ಎಲ್ಲಾ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತ್ತು. ಅಲ್ಲದೆ, ಲಾಲ್‌ಬಾಗ್ ಬೊಟಾನಿಕಲ್ ಗಾರ್ಡನ್‌ನಂತಹ ಸೂಕ್ಷ್ಮ ಪ್ರದೇಶಗಳ ಅಡಿಯಲ್ಲಿ ಸುರಂಗ ನಿರ್ಮಾಣ ಮಾಡುವುದರಿಂದ ಆಗುವ ಅಪಾಯಗಳ ಬಗ್ಗೆ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ(ಎಖಐ)ದಿಂದ ಅಭಿಪ್ರಾಯ ಪಡೆಯುವಂತೆ ಸೂಚಿಸಿತ್ತು.

ಇದನ್ನೂ ಓದಿ: ತೇಜಸ್ವಿ ಸೂರ್ಯ ಬಗ್ಗೆ ಕೇಳಬೇಡಿ, ಆತ ವೇಸ್ಟ್ ಮೆಟೀರಿಯಲ್: ಸುರಂಗ ರಸ್ತೆ ವಿರೋಧಿಸಿದ್ದಕ್ಕೆ ಡಿಕೆ ಶಿವಕುಮಾರ್ ತಿರುಗೇಟು

ಹಿನ್ನೆಲೆ: ಬೆಂಗಳೂರು ಮಹಾನಗರದ ಸಂಚಾರ ದಟ್ಟಣೆ ಸಮಸ್ಯೆ ಪರಿಹರಿಸುವ ಸಲುವಾಗಿ ಹೆಬ್ಬಾಳದಿಂದ ಸಿಲ್ಕ್‌  ಬೋರ್ಡ್‌ವರೆಗೆ ಸುಮಾರು 19 ಸಾವಿರ ಕೋಟಿ ರೂ. ವೆಚ್ಚದಲ್ಲಿ ಸುರಂಗ ಮಾರ್ಗ ಯೋಜನೆಯನ್ನು ಪ್ರಸ್ತಾಪಿಸಲಾಗಿದೆ. ಬೆಂಗಳೂರು ಜೋಡಿ ಸುರಂಗ ರಸ್ತೆ ಯೋಜನೆಗೆ 2025ರ ಜು.14ರಂದು ಕರೆದಿರುವ ಟೆಂಡರ್ ಅಧಿಸೂಚನೆಯನ್ನು ರದ್ದುಗೊಳಿಸುವಂತೆ ಅರ್ಜಿಯಲ್ಲಿ ಕೋರಲಾಗಿದೆ.

ಜತೆಗೆ ಆರ್ಎಫ್ಪಿ ಪ್ರಕಟಣೆ, ಪೂರ್ವ-ಬಿಡ್ ಪ್ರಕ್ರಿಯೆಗಳು, ಬಿಡ್ ಸಲ್ಲಿಕೆ, ಬಿಡ್ ಮೌಲ್ಯಮಾಪನ ಮತ್ತು ಉದ್ದೇಶಿತ ಟೆಂಡರ್ ಪ್ರಸ್ತಾವ ಅಂತಿಮಗೊಳಿಸುವ ಪತ್ರ ಸೇರಿದಂತೆ ಎಲ್ಲಾ ಹಂತಗಳನ್ನೂ ರದ್ದುಗೊಳಿಸಲು ಕೋರಲಾಗಿದೆ. ಸುರಂಗ ಮಾರ್ಗ ಯೋಜನೆಗೆ ಪೂರ್ವ ಪರಿಸರ ಅನುಮತಿ ಅಗತ್ಯವಿಲ್ಲ ಎಂದು ಕರ್ನಾಟಕ ರಾಜ್ಯ ಪರಿಸರ ಪರಿಣಾಮ ಮೌಲ್ಯಮಾಪನ ಪ್ರಾಧಿಕಾರ 2024ರ ನ.26ರಂದು ನೀಡಿರುವ ಪತ್ರವನ್ನು ರದ್ದುಗೊಳಿಸಲು ಸಹ ಕೋರಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಮೇಶ್​ ಎಮ್​.
ರಮೇಶ್​ ಎಮ್​.

ರಮೇಶ್​ ಎಂ ವಿಶೇಷ ವರದಿಗಾರರಾಗಿದ್ದಾರೆ, ಮೂಲತಃ ಕಾನೂನು ಪದವೀಧರನಾಗಿದ್ದು ಕಳೆದ 18 ವರ್ಷಗಳಿಂದ ಟಿವಿ9 ಸುದ್ದಿ ವಾಹಿನಿಯಲ್ಲಿ ಕಾನೂನು ಸಂಬಂಧಿತ ವರದಿ ನೀಡುತ್ತಿದ್ದಾರೆ. ಹೈಕೋರ್ಟ್, ಸುಪ್ರೀಂ ಕೋರ್ಟ್ ಹಾಗೂ ವಿಚಾರಣಾ ನ್ಯಾಯಾಲಯಗಳ ಪ್ರಮುಖ ಪ್ರಕರಣಗಳ ವರದಿಗಾರಿಕೆ ಮಾಡುತ್ತಿದ್ದು, ಬೆಂಗಳೂರಿನ ನಿವಾಸಿಯಾಗಿದ್ದಾರೆ.

Read More
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
ಕಬ್ಬು ಬೆಳೆಗಾರರ ಮೀಟಿಂಗ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೀಗಂದ್ರು
ಕಬ್ಬು ಬೆಳೆಗಾರರ ಮೀಟಿಂಗ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೀಗಂದ್ರು
ಸಾರಿಗೆ ನೌಕರರಿಂದ ಮತ್ತೆ ಪ್ರತಿಭಟನೆ: ವೇತನ ಪರಿಷ್ಕರಣೆಗೆ ಆಗ್ರಹ
ಸಾರಿಗೆ ನೌಕರರಿಂದ ಮತ್ತೆ ಪ್ರತಿಭಟನೆ: ವೇತನ ಪರಿಷ್ಕರಣೆಗೆ ಆಗ್ರಹ
ಮೈಸೂರು: ಚಾಮುಂಡೇಶ್ವರಿ ದರ್ಶನ ಪಡೆದ ತೆಲುಗು ನಟ ಮಂಚು ಮನೋಜ್
ಮೈಸೂರು: ಚಾಮುಂಡೇಶ್ವರಿ ದರ್ಶನ ಪಡೆದ ತೆಲುಗು ನಟ ಮಂಚು ಮನೋಜ್
ಗಾಲ್ಫ್​​ನಲ್ಲಿ ಚಿನ್ನದ ಪದಕ ವಿಜೇತೆ ಪ್ರಣವಿ​ಗೆ ಅದ್ದೂರಿ ಸ್ವಾಗತ
ಗಾಲ್ಫ್​​ನಲ್ಲಿ ಚಿನ್ನದ ಪದಕ ವಿಜೇತೆ ಪ್ರಣವಿ​ಗೆ ಅದ್ದೂರಿ ಸ್ವಾಗತ
ಕಾಲು ಮುರಿದು ಬಿದ್ದಿದ್ದ ದ್ರೋಣ ಆನೆ ಈಗ ಫುಲ್ ಫಿಟ್
ಕಾಲು ಮುರಿದು ಬಿದ್ದಿದ್ದ ದ್ರೋಣ ಆನೆ ಈಗ ಫುಲ್ ಫಿಟ್
ಸ್ವಂತ ಹಣದಲ್ಲಿ ಹೆದ್ದಾರಿಯ ನೂರಾರು ಗುಂಡಿಗಳನ್ನು ಮುಚ್ಚಿದ ಯುವಕರಪಡೆ
ಸ್ವಂತ ಹಣದಲ್ಲಿ ಹೆದ್ದಾರಿಯ ನೂರಾರು ಗುಂಡಿಗಳನ್ನು ಮುಚ್ಚಿದ ಯುವಕರಪಡೆ
ಮೈಸೂರು ದಸರಾ 2026: ಗಜಪಡೆ, ಅಶ್ವಪಡೆಗೆ ಸಿಡಿಮದ್ದು ತಾಲೀಮು
ಮೈಸೂರು ದಸರಾ 2026: ಗಜಪಡೆ, ಅಶ್ವಪಡೆಗೆ ಸಿಡಿಮದ್ದು ತಾಲೀಮು
ಕೊಪ್ಪಳ: ತಾನೇ ನಲ್ಲಿ ತಿರುಗಿಸಿ ದಾಹ ಇಂಗಿಸಿಕೊಂಡ ಗೋಮಾತೆ!
ಕೊಪ್ಪಳ: ತಾನೇ ನಲ್ಲಿ ತಿರುಗಿಸಿ ದಾಹ ಇಂಗಿಸಿಕೊಂಡ ಗೋಮಾತೆ!