ಪ್ರಜ್ವಲ್ ರೇವಣ್ಣಗೆ ಮತ್ತೊಂದು ಬಿಗ್ ಶಾಕ್, ಮಾಜಿ ಸಂಸದಗೆ ಮತ್ತಷ್ಟು ದಿನ ಜೈಲೇ ಗತಿ

ಅತ್ಯಾಚಾರ ಪ್ರಕರಣದಲ್ಲಿ ಬಂಧನವಾಗಿರುವ ಹಾಸನದ ಮಾಜಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ ಕೊರ್ಟ್​ ಮತ್ತೊಂದು ಶಾಕ್ ಕೊಟ್ಟಿದೆ. ಪ್ರಜ್ವಲ್ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಕೋರ್ಟ್​, ಎರಡು ವಾರ ಮುಂದೂಡಿದೆ. ಇದರಿಂದ ಅಲ್ಲಿಯವರೆಗೂ ಪ್ರಜ್ವಲ್​ಗೆ ಜೈಲೇ ಗತಿ.

ಪ್ರಜ್ವಲ್ ರೇವಣ್ಣಗೆ ಮತ್ತೊಂದು ಬಿಗ್ ಶಾಕ್, ಮಾಜಿ ಸಂಸದಗೆ ಮತ್ತಷ್ಟು ದಿನ ಜೈಲೇ ಗತಿ
ಪ್ರಜ್ವಲ್ ರೇವಣ್ಣ
Follow us
Ramesha M
| Updated By: ರಮೇಶ್ ಬಿ. ಜವಳಗೇರಾ

Updated on:Jul 05, 2024 | 4:00 PM

ಬೆಂಗಳೂರು, (ಜುಲೈ 05): ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಯನ್ನು ಕೋರ್ಟ್​ ಮುಂದೂಡಿದೆ. ಹೊಳೆನರಸೀಪುರ ಪ್ರಕರಣದಲ್ಲಿ ಜಾಮೀನು ಕೋರಿ ಪ್ರಜ್ವಲ್ ಪರ ವಕೀಲರು ಅರ್ಜಿ ಸಲ್ಲಿಸಿದ್ದು, ಉಳಿದ ಕೇಸ್‌ಗಳಲ್ಲಿ ಬಾಡಿ ವಾರಂಟ್‌ ಮೂಲಕ ಕಸ್ಟಡಿಗೆ ಪಡೆದಿದ್ದರು. ಹೀಗಾಗಿ ನಿರೀಕ್ಷಣಾ ಜಾಮೀನು ಅರ್ಜಿ ಪರಿಗಣಿಸುವಂತೆ ವಕೀಲರ ಮನವಿ ಮಾಡಿದ್ದಾರೆ. ಆದ್ರೆ, ಕೃಷ್ಣ ಎಸ್ ದೀಕ್ಷಿತ್‌ ಅವರಿದ್ದ ಹೈಕೋರ್ಟ್ ಪೀಠ, ತನಿಖೆ ನಡೆಯಲಿ. ಶೀಘ್ರ ವಿಚಾರಣೆ ಅಗತ್ಯವಿಲ್ಲ ಎಂದು ಹೇಳಿ ಜಾಮೀನು ಅರ್ಜಿ ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಿ ಆದೇಶ ಹೊರಡಿಸಿದ್ದಾರೆ. ಇದರಿಂದ ಪ್ರಜ್ವಲ್ ರೇವಣ್ಣಗೆ ಹೊಳೆನರಸೀಪುರ ಪ್ರಕರಣದಲ್ಲಿ ಎರಡೂ ವಾರಗಳ ಕಾಲ ಪರಪ್ಪನ ಅಗ್ರಹಾರ ಜೈಲೇ ಗತಿಯಾಗಿದೆ.

ಪ್ರಜ್ವಲ್ ರೇವಣ್ಣ ಪರ ವಕೀಲರು, ವಿಚಾರಣೆ ತ್ವರಿತವಾಗಿ ನಡೆಸುವಂತೆ ಜಡ್ಜ್‌ಗೆ ಮನವಿ ಮಾಡಿದರು. ಇದಕ್ಕೆ ನ್ಯಾಯಮೂರ್ತಿಗಳು ಪ್ರತಿಕ್ರಿಯಿಸಿ, ಆಕ್ಷೇಪಣೆ ಸಲ್ಲಿಕೆ ಆಗಲಿ ನೋಡೋಣ ಎಂದು ಹೇಳಿ 2 ವಾರಗಳ ಕಾಲ ವಿಚಾರಣೆಯನ್ನು ಮುಂದೂಡಿದರು. ಇದೇ ವೇಳೆ ಸರ್ಕಾರದ ಪರ ಎಸ್‌ಪಿಸಿ ಜಗದೀಶ್ ಹಾಜರಾಗಿದ್ದರು.

ಇದನ್ನೂ ಒದಿ: ಇತ್ತ ಜಾಮೀನಿಗಾಗಿ ಹೈಕೋರ್ಟ್​ಗೆ ಅರ್ಜಿ, ಅತ್ತ ಜೈಲಿನಲ್ಲಿ ಪ್ರಜ್ವಲ್​ ಭೇಟಿಯಾದ ರೇವಣ್ಣ

ಪ್ರಜ್ವಲ್‌ ವಿರುದ್ಧ ದಾಖಲಾಗಿರುವ 5 ಪ್ರಕರಣಗಳಲ್ಲಿ ಎಸ್‌ಐಟಿ ವಿಚಾರಣೆ ನಡೆಸಿ ಹೇಳಿಕೆಯನ್ನು ದಾಖಲಿಸಿಕೊಂಡಿದೆ. ದೂರುದಾರ ಮಹಿಳೆಯರ ಕುರಿತು ತನಿಖಾಧಿಕಾರಿಗಳು ಪ್ರಶ್ನಿಸಿದಾಗ ʼನನಗೇನೂ ಗೊತ್ತಿಲ್ಲ’ ಎಂದು ತಿಳಿಸಿದ್ದರು. ಇತ್ತೀಚೆಗೆ ಪ್ರಜ್ವಲ್‌ ವಿರುದ್ಧ ದೂರು ನೀಡಿದ್ದ ಸಂತ್ರಸ್ತೆಯ ಬಗ್ಗೆ ವಿಚಾರಿಸಿದಾಗ, ʼನನಗೆ ಅವರು ಯಾರೆಂಬುದೇ ಗೊತ್ತಿಲ್ಲ’ ಎಂದು ಪ್ರಜ್ವಲ್‌ ಹೇಳಿದ್ದಾರೆನ್ನಲಾಗಿದೆ.

ಈ ನಡುವೆ ಪ್ರಜ್ವಲ್‌ ರೇವಣ್ಣ ಜಾಮೀನು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಪ್ರಜ್ವಲ್‌ ವಿರುದ್ಧ ಹಾಸನದ ಹೊಳೆನರಸೀಪುರ ಟೌನ್‌ ಪೊಲೀಸ್‌ ಠಾಣೆಯಲ್ಲಿ ಒಂದು ಮತ್ತು ಸಿಐಡಿ ಪೊಲೀಸ್‌ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್‌ಐಆರ್‌ಗಳು ದಾಖಲಾಗಿವೆ. ಈ ಸಂಬಂಧ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿತ್ತು. ಹಾಗಾಗಿ ಹೈಕೋರ್ಟ್‌ಗೆ ಮೊರೆ ಹೋಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:46 pm, Fri, 5 July 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ