ಭಾರತ ಸರ್ಕಾರವು ಜಾರಿಗೊಳಿಸಿದ ನಿರ್ಬಂಧದ ಆದೇಶಗಳನ್ನು ಪ್ರಶ್ನಿಸಿ ಟ್ವಿಟರ್ ಇಂಕ್ (Twitter Inc) ಸಲ್ಲಿಸಿರುವ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ (Karnataka High Court) ಗುರುವಾರ ವಿಚಾರಣೆ ನಡೆಸಿದೆ. ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ನನ್ನ ಉತ್ತರ ಸಿದ್ಧವಾಗಿದೆ. ಈ ಶನಿವಾರದೊಳಗೆ ನಾನು ಸಲ್ಲಿಸಲು ಸಾಧ್ಯವಾಗುತ್ತದೆ. ಮುಂದಿನ ವಾರದಲ್ಲಿ ವಿಚಾರಣೆಗೆ ಪರಿಗಣಿಸಿ ಎಂದಿದ್ದಾರೆ. ಹೈಕೋರ್ಟ್ ಸೆಪ್ಟೆಂಬರ್ 8 ರಂದು ವಿಚಾರಣೆಯನ್ನು ಮುಂದೂಡಿದೆ.
Karnataka High Court to hear in a short while the petition filed by Twitter Inc challenging the blocking orders passed by the Government of India.@Twitter #Twitter #Karnataka pic.twitter.com/StJQD47JO6
— Live Law (@LiveLawIndia) August 25, 2022
ಏನಿದು ಪ್ರಕರಣ?
ಕೆಲವು ನಿರ್ದಿಷ್ಟ ವಿಷಯಗಳನ್ನು ತೆಗೆದುಹಾಕಬೇಕೆಂಬ ಕೇಂದ್ರ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಅಮೆರಿಕದ ಮೈಕ್ರೋ ಬ್ಲಾಗಿಂಗ್ ಕಂಪನಿ ಟ್ವಿಟರ್ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿತ್ತು. ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆ ಕಲಂ 69ಗೆ ವಿರುದ್ಧವಾಗಿರುವ ಟ್ವಿಟರ್ ಖಾತೆಗಳನ್ನು ರದ್ದು ಮಾಡಬೇಕು ಎಂದು ಕೇಂದ್ರ ಸರ್ಕಾರ ನೀಡಿದ್ದ ನೋಟಿಸ್ ಪ್ರಶ್ನಿಸಿ ಟ್ವಿಟರ್ ಕರ್ನಾಟಕ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು
Published On - 2:13 pm, Thu, 25 August 22