ಮಾಲೂರು ಕೈ ಶಾಸಕ ಕೆ.ವೈ.ನಂಜೇಗೌಡ ವಿರುದ್ಧದ ಇಡಿ ಕೇಸ್ ರದ್ದುಗೊಳಿಸಿದ ಹೈಕೋರ್ಟ್

ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಕೋಮುಲ್ ನೇಮಕಾತಿ ಹಗರಣ ಸಂಬಂಧ ಇಡಿ ಅಧಿಕಾರಿಗಳು ದಾಳಿ ಮಾಡಿ ದಾಖಲಿಸಿದ್ದ ಖಾಸಗಿ ಪ್ರಕರಣ ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಕೆ.ವೈ.ನಂಜೇಗೌಡ ಪರ ಹಿರಿಯ ವಕೀಲ ಕಿರಣ್ ಜವಳಿ ವಾದ ಹಾಗೂ ಪ್ರಕರಣದ ವಿವರ ಇಲ್ಲಿದೆ.

ಮಾಲೂರು ಕೈ ಶಾಸಕ ಕೆ.ವೈ.ನಂಜೇಗೌಡ ವಿರುದ್ಧದ ಇಡಿ ಕೇಸ್ ರದ್ದುಗೊಳಿಸಿದ ಹೈಕೋರ್ಟ್
Ky Nanjegowda
Edited By:

Updated on: Nov 06, 2026 | 4:07 PM

ಬೆಂಗಳೂರು, ನವೆಂಬರ್ 06): ಮಾಲೂರು ಕಾಂಗ್ರೆಸ್​ ಶಾಸಕ ಕೆ.ವೈ.ನಂಜೇಗೌಡ ವಿರುದ್ಧದ ಇಡಿ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಅಕ್ರಮ ಭೂ ಮಂಜೂರಾತಿ ಹಾಗೂ ʼ2023ರ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತದ ನೇಮಕಾತಿ ಹಗರಣ ಆರೋಪ ಸಂಬಂಧ ಇಡಿ, ನಂಜೇಗೌಡ ಮನೆ ಮೇಲೆ ದಾಳಿ ಮಾಡಿದ್ದು, ಬಳಿಕ ಖಾಸಗಿ ದೂರು ದಾಖಲಿಸಿತ್ತು. ಈ ಪ್ರಕರಣ ರದ್ದುಕೋರಿ ಕೆ.ವೈ.ನಂಜೇಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ ಹೈಕೋರ್ಟ್ ಪೀಠ, ಇಡಿ ದಾಖಲಿಸಿದ್ದ ಪ್ರಕರಣವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಅಕ್ರಮ ಭೂ ಮಂಜೂರಾತಿ ಸಂಬಂಧ ಪೊಲೀಸ್ ಕೇಸ್ ದಾಖಲಾಗಿತ್ತು. ಇದನ್ನೇ ಆಧರಿಸಿ ಇಡಿ, ನಂಜೇಗೌಡರ ಮನೆ ಮೇಲೆ ದಾಳಿ ಮಾಡಿತ್ತು. ಈ ವೇಳೆ ಕೊಮುಲ್ ನೇಮಕಾತಿ ಹಗರಣದ ಬಗ್ಗೆಯೂ ಇಡಿ ತನಿಖೆ ನಡೆಸಿ ಖಾಸಗಿ ದೂರು ದಾಖಲಿಸಿತ್ತು. ಆದರೆ ಮೂಲ ಪ್ರಕರಣದಲ್ಲಿ ಪೊಲೀಸರ ಬಿ ರಿಪೋರ್ಟ್ ಅನ್ನು ಕೋರ್ಟ್ ಅಂಗೀಕರಿಸಿತ್ತು. ಹೀಗಾಗಿ ಇಡಿಗೆ ಪ್ರತ್ಯೇಕ ತನಿಖೆ ವ್ಯಾಪ್ತಿ ಇಲ್ಲವೆಂದು ಕೆ.ವೈ.ನಂಜೇಗೌಡ ಪರ ಹಿರಿಯ ವಕೀಲ ಕಿರಣ್ ಜವಳಿ ವಾದ ಮಂಡಿಸಿದ್ದಾರೆ. ಇದನ್ನು ಆಲಿಸಿದ ಹೈಕೋರ್ಟ್, ನಂಜೇಗೌಡ ವಿರುದ್ಧ ಇಡಿ ದಾಖಲಿಸಿದ್ದ ಪ್ರಕರಣವನ್ನು ರದ್ದುಗೊಳಿಸಿ ಆದೇಶಿಸಿದೆ.

Loading...

ಇದನ್ನೂ ಓದಿ: ಕಾಂಗ್ರೆಸ್ ಶಾಸಕ ನಂಜೇಗೌಡಗೆ ಬಿಗ್ ಶಾಕ್: ಆಸ್ತಿ ಮುಟ್ಟುಗೋಲು ಹಾಕಿಕೊಂಡ ಇಡಿ

ಕಾಂಗ್ರೆಸ್ ಶಾಸಕ ನಂಜೇಗೌಡರ ಮೇಲೆ ದಾಳಿ ಮಾಡಿದ್ದ ಇಡಿ

2023ರಲ್ಲಿ ಕೋಮುಲ್ ನೇಮಕಾತಿ ಹಗರಣ ಸಂಬಂಧ ಇಡಿ ಅಧಿಕಾರಿಗಳು, 2024ರಲ್ಲಿ ನಂಜೇಗೌಡ ನಿವಾಸ ಸೇರಿದಂತೆ ಇತರೆ ಕಡೆ ದಾಳಿ ಮಾಡಿ ಪರಿಶೀಲನೆ ಮಾಡಿತ್ತು. ಬಳಿಕ ಈ ಸಂಬಂಧ ಖಾಸಗಿ ದೂರು ದಾಖಲಿಸಿದ್ದು, ಕೆ.ವೈ.ನಂಜೇಗೌಡ ಹಾಗೂ ಇತರರಿಗೆ ಸೇರಿದ ಒಟ್ಟು 1.32 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಜಪ್ತಿ ಮಾಡಿತ್ತು.

2023ರ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳ ಸಹಕಾರ ಹಾಲು ಉತ್ಪಾದಕರ ಒಕ್ಕೂಟ ಲಿಮಿಟೆಡ್ (KOMUL) ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಿದ್ದು, ಜುಲೈ 16, 2025ರಂದು ಅಧಿಕೃತವಾಗಿ ಈ ಮೌಲ್ಯದ ಆಸ್ತಿಯನ್ನು ಜಪ್ತಿಗೊಳಿಸಲಾಗಿದೆ ಎಂದು ED ಅಧಿಕೃತವಾಗಿ ಪತ್ರಿಕಾ ಪ್ರಕಟಣೆ ಹೊರಡಿಸಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:03 pm, Fri, 6 November 26

ರಮೇಶ್​ ಎಮ್​.

ರಮೇಶ್​ ಎಂ ವಿಶೇಷ ವರದಿಗಾರರಾಗಿದ್ದಾರೆ, ಮೂಲತಃ ಕಾನೂನು ಪದವೀಧರನಾಗಿದ್ದು ಕಳೆದ 18 ವರ್ಷಗಳಿಂದ ಟಿವಿ9 ಸುದ್ದಿ ವಾಹಿನಿಯಲ್ಲಿ ಕಾನೂನು ಸಂಬಂಧಿತ ವರದಿ ನೀಡುತ್ತಿದ್ದಾರೆ. ಹೈಕೋರ್ಟ್, ಸುಪ್ರೀಂ ಕೋರ್ಟ್ ಹಾಗೂ ವಿಚಾರಣಾ ನ್ಯಾಯಾಲಯಗಳ ಪ್ರಮುಖ ಪ್ರಕರಣಗಳ ವರದಿಗಾರಿಕೆ ಮಾಡುತ್ತಿದ್ದು, ಬೆಂಗಳೂರಿನ ನಿವಾಸಿಯಾಗಿದ್ದಾರೆ.

Read More
Loading...
Unable to load recommendations.
Follow Us