ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ​: ಮಾಜಿ ಸಿಎಂ ಬೊಮ್ಮಾಯಿ ವಿರುದ್ಧದ ಕೇಸ್​ ರದ್ದು

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧದ ವಕ್ಫ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದ ಎರಡು ಪ್ರಕರಣಗಳನ್ನು ಹೈಕೋರ್ಟ್ ರದ್ದುಗೊಳಿಸಿ ಶುಕ್ರವಾರ ಆದೇಶ ಹೊರಡಿಸಿದೆ. ಆ ಮೂಲಕ ಬಸವರಾಜ ಬೊಮ್ಮಾಯಿಗೆ ಬಿಗ್​ ರಿಲೀಫ್ ಸಿಕ್ಕಿದೆ. ಪ್ರಕರಣ ರದ್ದು ಕೋರಿ ಬೊಮ್ಮಾಯಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ​: ಮಾಜಿ ಸಿಎಂ ಬೊಮ್ಮಾಯಿ ವಿರುದ್ಧದ ಕೇಸ್​ ರದ್ದು
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
Edited By:

Updated on: Jun 27, 2025 | 1:09 PM

ಬೆಂಗಳೂರು, ಜೂನ್​ 27: ವಕ್ಫ್ (Wakf) ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ವಿರುದ್ಧದ ಎರಡು ಪ್ರಕರಣಗಳನ್ನು ರದ್ದುಪಡಿಸಿ ಹೈಕೋರ್ಟ್ ಏಕಸದಸ್ಯ ಪೀಠ ಶುಕ್ರವಾರ ಆದೇಶ ಹೊರಡಿಸಿದೆ. ಬಸವರಾಜ ಬೊಮ್ಮಾಯಿ  ಹೇಳಿದ್ದ ಹೇಳಿಕೆಯಲ್ಲಿ ಪ್ರಚೋದನಕಾರಿ ಅಂಶಗಳಿಲ್ಲವೆಂದು ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ ವಾದ ಮಂಡಿಸಿದ್ದರು. ಇದೀಗ ಪ್ರಕರಣ ರದ್ದುಪಡಿಸಿ ನ್ಯಾ.ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಪೀಠ ಆದೇಶಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿ ಜಿಲ್ಲೆಯ ಸವಣೂರು ಹಾಗೂ ಶಿಗ್ಗಾಂವಿ ಪೊಲೀಸ್​ ಠಾಣೆಗಳಲ್ಲಿ 2024ರಲ್ಲಿ ಪ್ರಕರಣಗಳು ದಾಖಲಾಗಿದ್ದವು. ಬಳಿಕ ಕೇಸ್​ ರದ್ದು ಕೋರಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ನಿನ್ನೆ ಅಂದರೆ ಶುಕ್ರವಾರ ಅರ್ಜಿ ವಿಚಾರಣೆ ಮಾಡಿದ ಹೈಕೋರ್ಟ್ ಪ್ರಕರಣಗಳನ್ನು ರದ್ದುಗೊಳಿಸಿದೆ. ಆ ಮೂಲಕ ಬಸವರಾಜ ಬೊಮ್ಮಾಯಿಗೆ ಬಿಗ್​ ರಿಲೀಫ್ ಸಿಕ್ಕಿದೆ.

ಇದನ್ನೂ ಓದಿ: ಕಲಬುರಗಿ ಜಿಲ್ಲೆಗೂ ವ್ಯಾಪಿಸಿದ ವಕ್ಫ್ ವಿವಾದ: 45ಕ್ಕೂ ಹೆಚ್ಚು ರೈತರಿಗೆ ನೋಟಿಸ್

ಇದನ್ನೂ ಓದಿ
ಮನರಂಜನಾ ಪಾರ್ಕ್, ಕಾವೇರಿ ಆರತಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಕೆಂಪೇಗೌಡ ಜಯಂತಿಯಂದು ಇಲ್ಲಿನ ಪ್ರತಿಮೆಗೆ ಮಾಲಾರ್ಪಣೆ: ಶಿವಕುಮಾರ್
ಕಲಬುರಗಿಗೂ ವ್ಯಾಪಿಸಿದ ವಕ್ಫ್ ವಿವಾದ: 45ಕ್ಕೂ ಹೆಚ್ಚು ರೈತರಿಗೆ ನೋಟಿಸ್
ವಕ್ಫ್​ ಆಸ್ತಿ ವಿವಾದ: ರೈತರಿಗೆ ನೀಡಿದ ನೋಟಿಸ್​ ಸಮರ್ಥಿಸಿಕೊಂಡ ಸಚಿವ ಜಮೀರ್

ವಕ್ಫ್ ಬೋರ್ಡ್ ಆಸ್ತಿ ವಿವಾದ ಕರ್ನಾಟಕದಾದ್ಯಂತ ತೀವ್ರ ಸದ್ದು ಮಾಡಿತ್ತು. ರೈತರು ಮತ್ತು ದೇವಾಲಯಗಳ ಆಸ್ತಿಗಳನ್ನು ಕಬಳಿಸಿದ್ದಕ್ಕಾಗಿ ವಕ್ಫ್ ಮಂಡಳಿ ಮತ್ತು ರಾಜ್ಯ ಸರ್ಕಾರದ ವಿರುದ್ಧ 2024 ರ ನವೆಂಬರ್‌ನಲ್ಲಿ ಬಿಜೆಪಿ ಪ್ರತಿಭಟನೆ ಮಾಡಿತ್ತು. ಈ ವೇಳೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ವಕ್ಫ್ ಮಂಡಳಿ ರೈತರ ಭೂಮಿಯನ್ನು ಕಬಳಿಸುತ್ತಿದೆ. ಸವಣೂರಿನಲ್ಲಿ ನಿಂತು ಎಲ್ಲಿಗೆ ಕಲ್ಲು ಎಸೆದರೂ ಅದು ವಕ್ಫ್ ಭೂಮಿ ಮೇಲೆ ಬೀಳುತ್ತದೆ ಎಂದು ಹೇಳಿದ್ದರು. ಬಳಿಕ ಇದು ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಇದನ್ನೂ ಓದಿ: ವಕ್ಫ್​ ಆಸ್ತಿ ವಿವಾದ: ರೈತರಿಗೆ ನೀಡಿದ ನೋಟಿಸ್​ ಸಮರ್ಥಿಸಿಕೊಂಡ ಸಚಿವ ಜಮೀರ್

ಬಳಿಕ ಭಾರತೀಯ ನ್ಯಾಯ ಸಂಹಿತಾ, 2023 (ಬಿಎನ್‌ಎಸ್) ಸೆಕ್ಷನ್ 196(1)(ಎ) (ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ಬಸವರಾಜ ಬೊಮ್ಮಾಯಿ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ನಂತರ ಪ್ರಕರಣಗಳನ್ನು ರದ್ದು ಕೋರಿ ಬೊಮ್ಮಾಯಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಮೇಶ್​ ಎಮ್​.

ರಮೇಶ್​ ಎಂ ವಿಶೇಷ ವರದಿಗಾರರಾಗಿದ್ದಾರೆ, ಮೂಲತಃ ಕಾನೂನು ಪದವೀಧರನಾಗಿದ್ದು ಕಳೆದ 18 ವರ್ಷಗಳಿಂದ ಟಿವಿ9 ಸುದ್ದಿ ವಾಹಿನಿಯಲ್ಲಿ ಕಾನೂನು ಸಂಬಂಧಿತ ವರದಿ ನೀಡುತ್ತಿದ್ದಾರೆ. ಹೈಕೋರ್ಟ್, ಸುಪ್ರೀಂ ಕೋರ್ಟ್ ಹಾಗೂ ವಿಚಾರಣಾ ನ್ಯಾಯಾಲಯಗಳ ಪ್ರಮುಖ ಪ್ರಕರಣಗಳ ವರದಿಗಾರಿಕೆ ಮಾಡುತ್ತಿದ್ದು, ಬೆಂಗಳೂರಿನ ನಿವಾಸಿಯಾಗಿದ್ದಾರೆ.

Read More
Loading...
Unable to load recommendations.
Follow Us