ಲಗ್ನ ಪತ್ರಿಕೆಯಲ್ಲಿ ಮೋದಿಗೆ ಮತ ಕೇಳಿದ್ದ ಪ್ರಕರಣ: ಫ್ಲೈಯಿಂಗ್ ಸ್ಕ್ವಾಡ್ ದಾಖಲಿಸಿದ್ದ ಕೇಸ್ ರದ್ದು

| Updated By: ರಮೇಶ್ ಬಿ. ಜವಳಗೇರಾ

Updated on: Dec 17, 2024 | 2:58 PM

ವಿವಾಹ ಆಹ್ವಾನ ಪತ್ರಿಕೆಯಲ್ಲಿ ಪ್ರಧಾನಿ ಮೋದಿಗೆ ಮತ ಯಾಚಿಸಿದ್ದಕ್ಕೆ ಚುನಾವಣಾಧಿಕಾರಿಗಳು ದಾಖಲಿಸಿದ್ದ ಪ್ರಕರಣ ರದ್ದಗೊಂಡಿದೆ. ಕಳೆದ ಲೋಕಸಭಾ ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ಮೋದಿಗೆ ಮತ ಹಾಕಿದರೆ ನನಗೆ ಗಿಫ್ಟ್ ನೀಡಿದಂತೆ ಎಂದು ಲಗ್ನ ಪತ್ರಿಕೆಯಲ್ಲಿ ಕೇಳಿಕೊಳ್ಳಲಾಗಿತ್ತು. ಇದೀಗ ಈ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಲಗ್ನ ಪತ್ರಿಕೆಯಲ್ಲಿ ಮೋದಿಗೆ ಮತ ಕೇಳಿದ್ದ ಪ್ರಕರಣ:  ಫ್ಲೈಯಿಂಗ್ ಸ್ಕ್ವಾಡ್ ದಾಖಲಿಸಿದ್ದ ಕೇಸ್ ರದ್ದು
ಕರ್ನಾಟಕ ಹೈಕೋರ್ಟ್​
Follow us on

ಬೆಂಗಳೂರು, (ಡಿಸೆಂಬರ್ 17): ಕಳೆದ ಲೋಕಸಭಾ ಚುನಾವಣೆ ಸಮಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಶಿವಪ್ರಸಾದ್ ತಮ್ಮ ವಿವಾಹ ಪತ್ರಿಕೆಯಲ್ಲಿ ಮೋದಿ ಮತ ನೀಡುವಂತೆ ಮನವಿ ಮಾಡಿದ್ದರು. ಈ ಸಂಬಂಧ ಫ್ಲೈಯಿಂಗ್ ಸ್ಕ್ವಾಡ್ ಕೇಸ್ ದಾಖಲಿಸಿದ್ದರು. ಈ ಪ್ರಕರಣ ರದ್ದುಕೋರಿ ಶಿವಪ್ರಸಾದ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್​ ಏಕಸದಸ್ಯ ಪೀಠ, ಪ್ರಕರಣ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಚುನಾವಣೆ ನೀತಿ ಸಂಹಿತೆಗಿಂತ ಮೊದಲೇ ಲಗ್ನ ಪತ್ರಿಕೆ ಮುದ್ರಣವಾಗಿರುವ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ರದ್ದುಪಡಿಸಿ ಹೈಕೋರ್ಟ್ ಆದೇಶಿಸಿದೆ.

2024 ಮಾರ್ಚ್ 1 ರಂದು ಮದುವೆ ಆಹ್ವಾನ ಪತ್ರಿಕೆ ಮುದ್ರಣವಾಗಿದೆ. ಆದ್ರೆ, ಚುನಾವಣಾ ನೀತಿಸಂಹಿತೆ ಮಾರ್ಚ್​ 16 ರಂದು ಜಾರಿಯಾಗಿದೆ. ಹೀಗಾಗಿ ಕೇಸ್ ರದ್ದು ಮಾಡುವಂತೆ ವಕೀಲ ಎಂ.ವಿನೋದ್ ಕುಮಾರ್ ಕೋರ್ಟ್​ಗೆ ಮನವಿ ಮಾಡಿದ್ದರು. ಇದನ್ನು ಪರಿಗಣಿಸಿದ ಹೈಕೋರ್ಟ್ ಏಕಸದಸ್ಯ ಪೀಠ, ಶಿವಪ್ರಸಾದ್ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಮದುವೆ ಆಹ್ವಾನ ಪತ್ರಿಕೆಯಲ್ಲಿ ಮೋದಿಗೆ ಮತ ಕೇಳಿದ್ದಕ್ಕೆ ಕೇಸ್​ಗೆ ತಡೆಯಾಜ್ಞೆ ನೀಡಿದ ಹೈಕೋರ್ಟ್

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಆಲಂತಾಯ ನಿವಾಸಿ ಶಿವಪ್ರಸಾದ್ ತಮ್ಮ ವಿವಾಹದ ಆಹ್ವಾನ ಪತ್ರಿಕೆಯಲ್ಲಿ ‘ಮೋದಿಗೆ ಮತ ಹಾಕಿದರೆ ನನಗೆ ಗಿಫ್ಟ್ ನೀಡಿದಂತೆ’ ಎಂದು ಮುದ್ರಿಸಿದ್ದರು. ಇದು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಲಾಗಿದೆ ಎಂದು ವರನ ವಿರುದ್ಧ ಏಪ್ರಿಲ್ 17ರಂದು ಚುನಾವಣಾ ನೋಡಲ್​ ಅಧಿಕಾರಿಗಳಿಗೆ ದೂರು ಬಂದಿತ್ತು. ನಂತರ ಚುನಾವಣಾಧಿಕಾರಿಗಳು ನ್ಯಾಯಾಲಯಕ್ಕೆ ಈ ಬಗ್ಗೆ ವರದಿ ಸಲ್ಲಿಸಿ ಮದುಮಗನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.