AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಕೇಸ್: ಸಿದ್ದರಾಮಯ್ಯ ಪತ್ನಿ, ಸಚಿವ ಭೈರತಿ ಸುರೇಶ್​ಗೆ ಬಿಗ್​ ರಿಲೀಫ್, ಇಡಿಗೆ ಹಿನ್ನಡೆ​

ಕರ್ನಾಟಕ ರಾಜ್ಯ ರಾಜಕೀಯದಲ್ಲಿ ತೀವ್ರ ಬಿರುಗಾಳಿ ಎಬ್ಬಿಸಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್​ಗೆ ಹೈಕೋರ್ಟ್​ ಬಿಗ್​ ರಿಲೀಫ್ ನೀಡಿದೆ. ಇದರಿಂದ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಮತ್ತು ಭೈರತಿ ಸುರೇಶ್​ ಇಡಿ ವಿಚಾರಣೆಯಿಂದ ಬಚಾವ್​ ಆಗಿದ್ದಾರೆ.

ಮುಡಾ ಕೇಸ್: ಸಿದ್ದರಾಮಯ್ಯ ಪತ್ನಿ, ಸಚಿವ ಭೈರತಿ ಸುರೇಶ್​ಗೆ ಬಿಗ್​ ರಿಲೀಫ್, ಇಡಿಗೆ ಹಿನ್ನಡೆ​
Muda Scam
ರಾಮ್​, ಮೈಸೂರು
| Edited By: |

Updated on:Mar 07, 2025 | 4:59 PM

Share

ಬೆಂಗಳೂರು, (ಮಾರ್ಚ್​, 07): ಮುಡಾ ಹಗರಣ ಪ್ರಕರಣಕ್ಕೆ (Muda Scam Case) ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ (Siddaramaiah) ಪತ್ನಿ ಪಾರ್ವತಿ (Parvathi) ಹಾಗೂ ಸಚಿವ ಭೈರತಿ ಸುರೇಶ್​ಗೆ (Byrathi Suresh) ಇಡಿ ನೀಡಿದ್ದ ಸಮನ್ಸ್​ ರದ್ದುಗೊಳಿಸಿ ಹೈಕೋರ್ಟ್ (Karnataka High Court)​ ಆದೇಶ ಹೊರಡಿಸಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಹಾಜರಾಗುವಂತೆ ಪಾರ್ವತಿ ಹಾಗೂ ಭೈರತಿ ಸುರೇಶ್​ಗೆ ಇಡಿ ಸಮನ್ಸ್​ ಜಾರಿ ಮಾಡಿತ್ತು. ಇದನ್ನು ಪ್ರಶ್ನಿಸಿ ಇಬ್ಬರು ಹೈಕೋರ್ಟ್​ ಮೊರೆ ಹೋಗಿದ್ದು, ಇಂದು (ಮಾರ್ಚ್​ 07) ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಇಡಿ ಸಮನ್ಸ್​ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಇದರಿಂದ ಸಿಎಂ ಸಿದ್ದರಾಮಯ್ಯ ಸಹಿತ ಪತ್ನಿ ಪಾರ್ವತಿ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ನಿರಾಳಾಗಿದ್ದಾರೆ.

ಪ್ರಕರಣದ ಹಿನ್ನಲೆ

ಮುಡಾ ಹಗರಣ ಪ್ರಕರಣದಲ್ಲಿ ಇಡಿ ಪ್ರವೇಶಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮ್ಯಯನವರ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್​ ಸೇರಿದಂತೆ ಇತರರಿಗೆ ಇಡಿ ಸಮನ್ಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಇದಕ್ಕೆ ತಡೆ ನೀಡುವಂತೆ ಸಿಎಂ ಪತ್ನಿ ಹಾಗೂ ಭೈರತಿ ಸುರೇಶ್ ಅವರು ಇಬ್ಬರು ಪ್ರತ್ಯೇಕವಾಗಿ ಕರ್ನಾಟಕ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್​, ಇಡಿ ಸಮನ್ಸ್​ಗೆ ತಡೆಯಾಜ್ಞೆ ನೀಡಿತ್ತು. ಇದೀಗ ಕೋರ್ಟ್​ ಇಡಿ ಸಮನ್ಸ್​ ಅನ್ನೇ ರದ್ದು ಮಾಡಿ ಆದೇಶಿಸಿದೆ. ಇದರಿಂದ ಇಬ್ಬರು ಇಡಿ ವಿಚಾರಣೆಯಿಂದ ಬಚಾವ್ ಆಗಿದ್ದು, ಸಿಎಂ ಸಿದ್ದರಾಮಯ್ಯ ನಿರಾಳರಾಗಿದ್ದಾರೆ.

ಇದನ್ನೂ ಓದಿ: ಮುಡಾ ಪ್ರಕರಣ: ಪಟ್ಟು ಸಡಿಲಿಸದ ಸ್ನೇಹಮಯಿ ಕೃಷ್ಣ ಮತ್ತೆ ಕೋರ್ಟ್​ ಮೊರೆ

ಪಾರ್ವತಿ ಅವರು ಅಕ್ಟೋಬರ್ 1, 2024 ರಂದು ವಿವಾದಿತ ಸೈಟ್ ಗಳನ್ನು ಹಿಂದಿರುಗಿಸಿದ್ದಾರೆ|ಮುಡಾದ 14 ಸೈಟ್ ಗಳಲ್ಲದೇ 1708 ಸೈಟ್ ಗಳ ಬಗ್ಗೆಯೂ ತನಿಖೆ ನಡೆಸುತ್ತಿದೆ. ಈಗಾಗಲೇ 160 ಸೈಟ್ ಗಳನ್ನು ಇಡಿ ತಾತ್ಕಾಲಿಕ ಜಪ್ತಿ ಮಾಡಿದೆ. ತನ್ನ ಕಾರ್ಯವ್ಯಾಪ್ತಿ ಮೀರಿ ಇಡಿ ಪರ್ಯಾಯ ತನಿಖೆ ನಡೆಸುತ್ತಿದೆ. ಇಡಿ ತಾತ್ಕಾಲಿಕ ಜಪ್ತಿ ಆದೇಶದಲ್ಲಿ ಹಲವು ಅಂಶಗಳನ್ನು ಪ್ರಸ್ತಾಪಿಸಿದೆ. ಭೂಸ್ವಾಧೀನ, ಭೂಪರಿವರ್ತನೆ ಇತ್ಯಾದಿಗಳ ಬಗ್ಗೆಯೂ ತನಿಖೆ ನಡೆಸಿದೆ. ಲೋಕಾಯುಕ್ತ ಪೊಲೀಸರ ತನಿಖಾ ವ್ಯಾಪ್ತಿಯಲ್ಲಿ ಇಡಿ ಪ್ರವೇಶಿಸಿದೆ. ಮುಡಾಗೆ ಹಿಂತಿರುಗಿಸಿರುವ 14 ಸೈಟ್​ಗಳನ್ನು ಇಡಿ ಜಪ್ತಿ ಮಾಡಿಲ್ಲ. ಆದರೆ ಇತರೆ 160 ಸೈಟ್ ಗಳನ್ನು ಇಡಿ ಜಪ್ತಿ ಮಾಡಿದೆ. ಈಗಾಗಲೇ ಲೋಕಾಯುಕ್ತ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ತನಿಖೆಯಲ್ಲಿ ಯಾವುದೇ ಅಕ್ರಮ ಕಂಡುಬಂದಿಲ್ಲವೆಂದು ವರದಿ ಸಲ್ಲಿಸಿದ್ದಾರೆ ಎಂದು ಸಿಎಂ ಪತ್ನಿ ಪಾರ್ವತಿ ಪರ ಸಂದೇಶ್ ಚೌಟ ವಾದ ಮಂಡಿಸಿದ್ದರು.

ಇದನ್ನೂ ಓದಿ
Image
ಮುಡಾ ಕೇಸ್​: ಲೋಕಾಯುಕ್ತ ವರದಿಗೆ ತಕರಾರು ಎತ್ತಿದ ಸ್ನೇಹಮಯಿ‌ ಕೃಷ್ಣ
Image
ಮುಡಾ ಹಗರಣ: ‘‘ಹಲವು ದಾಖಲೆಗಳನ್ನು ನೀಡಿದ್ದೇ ಕಾಂಗ್ರೆಸ್ ಪಕ್ಷದವರು!’’
Image
ಮುಡಾ: ಸಿದ್ದರಾಮಯ್ಯಗೆ ಕ್ಲೀನ್​ಚಿಟ್ ಬೆನ್ನಲ್ಲೇ ‘ಕೈ’ ಸಂಸದನಿಗೆ ಸಂಕಷ್ಟ
Image
ಮುಡಾ ಹಗರಣ: ಸಿಎಂ ಪತ್ನಿ ಪಾರ್ವತಿಗೆ ಬಿಗ್​ ರಿಲೀಫ್ ನೀಡಿದ ಹೈಕೋರ್ಟ್

ಈ ವಾದ ಪ್ರತಿವಾದ ಆಲಿಸಿದ್ದ ಹೈಕೋರ್ಟ್​, ಜನವರಿ 27ರಂದು ಇಡಿ ಸಮನ್ಸ್​ಗೆ​ ತಡೆ ನೀಡಿ ತೀರ್ಪು ಕಾಯ್ದಿರಿಸಿತ್ತು.

Published On - 4:45 pm, Fri, 7 March 25

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ