AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಚ ಕೇಸ್: ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

Madal Virupakshappa Case: ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧದ ಪ್ರಕರಣವನ್ನು ಹೈಕೋರ್ಟ್​ ರದ್ದುಗೊಳಿಸಿದೆ. ಈ ಪ್ರಕರಣದಿಂದಾಗಿ ಬಿಜೆಪಿಯಿಂದ ಉಚ್ಛಾಟನೆಗೊಂಡಿದ್ದ ಮಾಡಾಳ್​ಗೆ ಇದೀಗ ಕೋರ್ಟ್​ ಕ್ಲೀನ್ ಚಿಟ್​ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಅವರ ಮುಂದಿನ ರಾಜಕೀಯ ನಡೆ ತೀವ್ರ ಕುತೂಹಲ ಮೂಡಿಸಿದೆ,

ಲಂಚ ಕೇಸ್: ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್
ಮಾಡಾಳ್​ ವಿರೂಪಾಕ್ಷಪ್ಪ
Ramesha M
| Edited By: |

Updated on:Dec 20, 2023 | 4:58 PM

Share

ಬೆಂಗಳೂರು, ಡಿಸೆಂಬರ್ 20): ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್ ಡಿಎಲ್) ಟೆಂಡರ್​ಗಾಗಿ ಲಂಚ ಪಡೆದ ಆರೋಪ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ(madal virupakshappa)  ವಿರುದ್ಧದ ಪ್ರಕರಣ ರದ್ದುಗೊಳಿಸಿ ಹೈಕೋರ್ಟ್(Karnataka high court) ಆದೇಶ ಹೊರಡಿಸಿದೆ. ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್​ 17 A ಪ್ರಕಾರ ಪ್ರಕ್ರಿಯೆ ಪಾಲಿಸಿಲ್ಲ ಎಂದು ಮಾಡಾಳ್ ಪರ ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ ವಾದ ಮಂಡಿಸಿದ್ದರು. ವಕೀಲರ ವಾದ ಪುರಸ್ಕರಿಸಿದ ಹೈಕೋರ್ಟ್​, ಪ್ರಕರಣ ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಇನ್ನು ಈ ಪ್ರಕರಣದಲ್ಲಿ ಕೇವಲ ಮಾಡಾಳು ವಿರೂಪಾಕ್ಷಪ್ಪ ವಿರುದ್ಧ ದಾಖಲಾಗಿದ್ದ ಕೇಸ್ ಮಾತ್ರ ರದ್ದುಗೊಳಿಸಿ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠ ಆದೇಶ ಹೊರಡಿಸಿದೆ. ಆದರೆ, ಮಾಡಳು ವಿರೂಪಾಕ್ಷಪ್ಪ ಪುತ್ರ ಸೇರಿ ಇತರ ಆರೋಪಿಗಳ ವಿರುದ್ಧದ ಲೋಕಾಯುಕ್ತ ಪ್ರಕರಣದ ಕೇಸ್ ಮುಂದುವರೆಯಲಿದೆ.

ಇದನ್ನೂ ಓದಿ: Madal Virupakshappa: ಕೊನೆಗೂ ಜೈಲಿನಿಂದ ಹೊರಬಂದ ಮಾಡಾಳ್ ವಿರೂಪಾಕ್ಷಪ್ಪ​​, ಮುಂದಿನ ರಾಜಕೀಯ ನಡೆ ಬಗ್ಗೆ ಹೇಳಿದ್ದಿಷ್ಟು

ಲಂಚ ಕೇಸ್​ನಲ್ಲಿ ಸಿಲುಕಿ ನರಳಾಡುತ್ತಿದ್ದ ಮಾಡಾಳ್ ವಿರೂಪಾಕ್ಷಪ್ಪಗೆ ಬಿಗ್​ ರಿಲೀಫ್ ಸಿಕ್ಕಂತಾಗಿದೆ. ಅಲ್ಲದೇ ಪ್ರಕರಣದಿಂದಾಗಿ ಬಿಜೆಪಿಯಿಂದ ಉಚ್ಛಾಟನೆಗೊಂಡಿದ್ದ ಮಾಡಾಳ್​ ಮತ್ತೆ ರಾಜಕೀಯದತ್ತ ಮುಖ ಮಾಡುತ್ತಾರಾ ಎನ್ನುವುದೇ ಮುಂದಿರುವ ಕುತೂಹಲ.

ಪ್ರಕರಣ ಹಿನ್ನೆಲೆ

ಮಾರ್ಚ್ 2ರಂದು ಶಾಸಕ ಮಾಡಾಳ್‌ ವಿರುಪಾಕ್ಷಪ್ಪ ಅವರ ಪುತ್ರ ಬೆಂಗಳೂರು ಜಲಮಂಡಳಿಯ ಚೀಫ್‌ ಅಕೌಂಟಿಂಗ್‌ ಆಫೀಸರ್‌ ಮಾಡಾಳ್‌ ಪ್ರಶಾಂತ್‌ ಅವರು 40 ಲಕ್ಷ ರೂ. ಹಣವನ್ನು ಪಡೆಯುವಾಗ ಲೋಕಾಯುಕ್ತರ ಬಲೆಗೆ ಬಿದ್ದಿದ್ದರು. ಈ ವೇಳೆ ಪ್ರಶಾಂತ್‌ ಅವರಿಗೆ ಹಣ ಕೊಡಲು ಬಂದ ವ್ಯಕ್ತಿಗಳು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆಎಸ್‌ಡಿಎಲ್‌) ಅಧ್ಯಕ್ಷರಾಗಿದ್ದ ಮಾಡಾಳ್‌ ವಿರುಪಾಕ್ಷಪ್ಪ ಅವರಿಗೆ ಸಂಬಂಧಪಟ್ಟ ಹಣವಾಗಿದೆ ಎಂದು ಹೇಳಿದ್ದರು. ಬಳಿಕ ಲೋಕಾಯುಕ್ತ ಅಧಿಕಾರಿಗಳು ವಿರುಪಾಕ್ಷಪ್ಪ ಹಾಗೂ ಅವರ ಪುತ್ರ ಪ್ರಶಾಂತ್​ ನಿವಾಸದ ಮೇಲೆ ದಾಳಿ ಮಾಡಿತ್ತು. ಬೆಂಗಳೂರಿನ ಮನೆ, ಕಚೇರಿ, ಚನ್ನೇಶಪುರ ಗ್ರಾಮದ ಮನೆಯಲ್ಲಿ ಕಾರ್ಯಚರಣೆ ನಡೆಸಿತ್ತು, ಈ ವೇಳೆ ಕೋಟಿ ಕೋಟಿ ಹಣ, ಚಿನ್ನ, ಅಪಾರ ಪ್ರಮಾಣದ ಆಸ್ತಿ ಪತ್ರಗಳು ಪತ್ತೆಯಾಗಿದ್ದವು.

ಈ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರಿಗೆ 6 ದಿನಗಳ ಕಾಲ ಸಿಗದೇ ಕಣ್ಮರೆಸಿಕೊಮಡಿದ್ದ ಮಾಡಾಳ್‌ ವಿರುಪಾಕ್ಷಪ್ಪ ಹೈಕೋರ್ಟ್‌ನಿಂದ ಮಧ್ಯಂತರ ನಿರೀಕ್ಷಣಾ ಜಾಮೀನು ಪಡೆದು ಲೋಕಾಯುಕ್ತ ಪೊಲೀಸರ ಮುಂದೆ ಹಾಜರಾಗಿದ್ದರು. ಆದರೆ ಲೋಯುಕ್ತರ ಪ್ರಶ್ನೆಗಳಿಗೆ ಸರಿಯಾದ ಉತ್ತರಗಳನ್ನು ನೀಡಿಲ್ಲ ಎಂದು ತಿಳಿದುಬಂದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:32 pm, Wed, 20 December 23

Follow Us
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ