ಡಿಕೆ ಶಿವಕುಮಾರ್​ಗೆ ಬಿಗ್​ ರಿಲೀಫ್: ಐದು ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

|

Updated on: Jun 16, 2023 | 1:27 PM

ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಐದು ಪ್ರಕರಣಗಳನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿ ಆದೇಶಿಸಿದೆ.

ಡಿಕೆ ಶಿವಕುಮಾರ್​ಗೆ ಬಿಗ್​ ರಿಲೀಫ್: ಐದು ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್
ಡಿಸಿಎಂ ಡಿಕೆ ಶಿವಕುಮಾರ್​ ಅವರಿಗೆ ಹೈಕೋರ್ಟ್​ನಿಂದ ರಿಲೀಫ್
Follow us on

ಬೆಂಗಳೂರು: ಉಪಮಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivkumar) ಅವರ ವಿರುದ್ಧ ಐದು ಪ್ರಕರಣಗಳನ್ನು ಕರ್ನಾಟಕ ಹೈಕೋರ್ಟ್(Karnataka High Court) ರದ್ದುಗೊಳಿಸಿದೆ. ಕಾಯ್ದೆ ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ (Mekedatu padayatra Cases) ಮಾಡಿದ ಆರೋಪದ ಐದು ಪ್ರಕರಣಗಳನ್ನು ರದ್ದುಪಡಿಸಿ ಹೈಕೋರ್ಟ್ ಇಂದು (ಜೂನ್ 16) ಆದೇಶ ಹೊರಡಿಸಿದೆ. ಇದರಿಂದ ಡಿಸಿಎಂ ಡಿಕೆ ಶಿವಕುಮಾರ್​ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಇದನ್ನೂ ಓದಿ: ಕೋವಿಡ್ ನಿಯಮ ಮೀರಿ ಮೇಕೆದಾಟು ಪಾದಯಾತ್ರೆ; ಡಿಸಿಎಂ ಡಿಕೆ ಶಿವಕುಮಾರ್‌ಗೆ ಹೈಕೋರ್ಟಲ್ಲಿ ರಿಲೀಫ್

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್​​ ಪಕ್ಷವು 2022 ರ ಜನವರಿ 9 ರಿಂದ 10 ದಿನಗಳ ಕಾಲ ಪಾದಯಾತ್ರೆ ಹಮ್ಮಿಕೊಂಡಿತ್ತು. ಪಾದಯಾತ್ರೆಯಲ್ಲಿ ಕೋವಿಡ್‌ ನಿಯಮ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ರಾಮನಗರ ತಹಶೀಲ್ದಾರ್‌ ಜನವರಿ 13 ರಂದು ರಾಮನಗರ ಗ್ರಾಮೀಣ ಠಾಣಾ ಪೊಲೀಸರಿಗೆ ದೂರು ಸಲ್ಲಿಸಿದ್ದರು.

ಬಳಿಕ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಕ್ರಮ ಪ್ರಶ್ನಿಸಿ ಡಿಕೆ ಶಿವಕುಮಾರ್ ಮತ್ತಿತರ ನಾಯಕರು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾ. ಸುನಿಲ್ ದತ್ ಯಾದವ್ ಅವರನ್ನು ಒಳಗೊಂಡ ಏಕಸದಸ್ಯಪೀಠವು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ತಾತ್ಕಾಲಿಕ ರಿಲೀಫ್ ನೀಡಿತ್ತು. ಅಷ್ಟೇ ಅಲ್ಲ ಅವರ ಜೊತೆ ಕಾಂಗ್ರೆಸ್‌ನ 13 ನಾಯಕರಿಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್ ದೊರೆತಿತ್ತು.

Published On - 11:59 am, Fri, 16 June 23