AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀರ್ ಅಹ್ಮದ್​​ ಖಾನ್​ಗೆ ವಿರುದ್ಧದ ಚುನಾವಣಾ ತಕರಾರು ಅರ್ಜಿ ವಜಾ

ಚಾಮರಾಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಜಮೀರ್ ಅಹ್ಮದ್​​ ಖಾನ್ ಅವರ ಆಯ್ಕೆ ಪ್ರಶ್ನಿಸಿ ಅದೇ ಕ್ಷೇತ್ರದ ಮತದಾರ ಶಶಾಂಕ್ ಜೆ. ಶ್ರೀಧರ್ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​ ಅರ್ಜಿ ವಜಾಗೊಳಿಸಿದೆ.

ಜಮೀರ್ ಅಹ್ಮದ್​​ ಖಾನ್​ಗೆ ವಿರುದ್ಧದ ಚುನಾವಣಾ ತಕರಾರು ಅರ್ಜಿ ವಜಾ
ಸಚಿವ ಜಮೀರ್ ಅಹ್ಮದ್​ ಖಾನ್
ರಮೇಶ್​ ಎಮ್​.
| Edited By: ವಿವೇಕ ಬಿರಾದಾರ|

Updated on: Apr 28, 2024 | 9:55 AM

Share

ಬೆಂಗಳೂರು ಏಪ್ರಿಲ್​ 28: ಚಾಮರಾಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಸಚಿವ ಜಮೀರ್ ಅಹ್ಮದ್​ ಖಾನ್ (Zameer Ahmed Khan) ವಿರುದ್ಧ ಸಲ್ಲಿಸಲಾಗಿದ್ದ ಚುನಾವಣಾ ತಕರಾರು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ (High Court)​ ವಜಾಗೊಳಿಸಿದೆ. ಜಮೀರ್​ ಅಹ್ಮದ್ ಖಾನ್​ ಆಯ್ಕೆ ಪ್ರಶ್ನಿಸಿ ಅದೇ ಕ್ಷೇತ್ರದ ಮತದಾರ ಶಶಾಂಕ್ ಜೆ. ಶ್ರೀಧರ್ ಅವರು ಸಲ್ಲಿಸಿದ್ದ ಅರ್ಜಿ ಪರಿಶೀಲಿಸಿದ ನ್ಯಾ.ಎಂ.ಐ.ಅರುಣ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.

ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಪೀಠ, ” ಭಾರತೀಯ ರಾಷ್ಟ್ರೀಯ ಕಾಂಗ್ರೆಸ್​ ಪಕ್ಷ ನೀಡಿದ ಗ್ಯಾರೆಂಟಿ ಪಕ್ಷಗಳ ತಪ್ಪು ಯೋಜನೆ ಎನ್ನಬಹುದು, ಆದರೆ ಚುನಾವಣಾ ಅಕ್ರಮವೆಂದು ಕರೆಯಲು ಸಾಧ್ಯವಿಲ್ಲ. ಜನಪ್ರಾತಿನಿಧ್ಯ ಕಾಯ್ದೆ ಸೆಕ್ಷನ್​ 123ರ ಅನ್ವಯ ಪಕ್ಷದ ಪ್ರಣಾಳಿಕೆಯನ್ನು ಅಕ್ರಮ ಎಂದು ಹೇಳಲು ಆಗುವುದಿಲ್ಲ. ಕಾಂಗ್ರೆಸ್​ನ ಐದು ಗ್ಯಾರಂಟಿ ಜನ ಕಲ್ಯಾಣ ಯೋಜನೆಗಳೆನ್ನಬಹುದು. ಗ್ಯಾರೆಂಟಿಯಿಂದ ಸರ್ಕಾರದ ಬೊಕ್ಕಸಕ್ಕೆ ಹೊರೆಯೇ ಅಲ್ಲವೇ ಬೇರೆ ವಿಚಾರ, ಗ್ಯಾರಂಟಿಗಳಿಂದ ಹೇಗೆ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ. ಇದು ದುರಾಡಳಿತವೆಂಬುದನ್ನು ನಿರೂಪಿಸುವುದು ಪ್ರತಿಪಕ್ಷಕ್ಕೆ ಬಿಟ್ಟದ್ದು. ಪ್ರಸ್ತುತ ಸ್ಥಿತಿಯಲ್ಲಿ 5 ಗ್ಯಾರಂಟಿ ತಪ್ಪು ನೀತಿಯೆನ್ನಬಹುದು. ಆದರೆ, ಇದು ಚುನಾವಣಾ ಭ್ರಷ್ಟಾಚಾರ ಎನ್ನಲು ಸಾಧ್ಯವಿಲ್ಲ” ಎಂದು ಹೇಳಿದೆ.

ಇದನ್ನೂ ಓದಿ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದ ಬಡ ಮಹಿಳೆಯರಿಗೆ ಮಾಸಿಕ ₹ 10,000 ನೆರವು ಸಿಗಲಿದೆ: ಜಮೀರ್ ಅಹ್ಮದ್

ನ್ಯಾಯಾಲಯ ಸುಪ್ರೀಂಕೋರ್ಟ್​ನ ತೀರ್ಪು ಉಲ್ಲೇಖಿಸಿ “ಪ್ರಣಾಳಿಕೆಯಲ್ಲಿನ ಉಚಿತ ಕೊಡುಗೆಗಳಿಂದ ಮತದಾರರ ಮೇಲೆ ಪ್ರಭಾವ ಬೀರಬಹುದು. ಉಚಿತ ಕೊಡುಗೆಗಳಿಂದ ಪಕ್ಷಗಳ ನಡುವೆ ಸಮಾನತೆ ಇರುವುದಿಲ್ಲ. ಚುನಾವಣಾ ಆಯೋಗ ಈ ಬಗ್ಗೆ ಮಾರ್ಗಸೂಚಿ ರೂಪಿಸಬೇಕು. ಈ ಬಗ್ಗೆ ಸೂಕ್ತ ಶಾಸನ ರೂಪಿಸಬೇಕು ಅಂತ ಸುಪ್ರೀಂಕೋರ್ಟ್ ಸರ್ಕಾರಕ್ಕೆ ​ಸೂಚಿಸಿದೆ ಎಂದು ಹೈಕೋರ್ಟ್​ಸುಪ್ರೀಂಕೋರ್ಟ್ ತೀರ್ಪು ಉಲ್ಲೇಖಿಸಿ, ಆದೇಶ ಹೊರಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ