AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಎಲ್‌ಸಿ ಸೂರಜ್ ರೇವಣ್ಣಗೆ ಬಿಗ್ ರಿಲೀಫ್​ ನೀಡಿದ ಕರ್ನಾಟಕ ಹೈಕೋರ್ಟ್ : ಯಾವ ಪ್ರಕರಣ?

Suraj Revanna: ವಿಧಾನ ಪರಿಷತ್ ಸದಸ್ಯ ಸ್ಥಾನದಿಂದ ಸೂರಜ್ ರೇವಣ್ಣ ಅವರನ್ನು ಅನರ್ಹಗೊಳಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಇದರೊಂದಿಗೆ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ

ಎಂಎಲ್‌ಸಿ ಸೂರಜ್ ರೇವಣ್ಣಗೆ ಬಿಗ್ ರಿಲೀಫ್​ ನೀಡಿದ ಕರ್ನಾಟಕ ಹೈಕೋರ್ಟ್ : ಯಾವ ಪ್ರಕರಣ?
ಸೂರಜ್ ರೇವಣ್ಣ-ಹೈಕೋರ್ಟ್
Follow us
Ramesha M
| Updated By: ರಮೇಶ್ ಬಿ. ಜವಳಗೇರಾ

Updated on:Dec 20, 2023 | 4:14 PM

ಬೆಂಗಳೂರು, (ಡಿಸೆಂಬರ್ 20): ಸೂರಜ್ ರೇವಣ್ಣ (Suraj Revanna) ಅವರನ್ನು ವಿಧಾನ ಪರಿಷತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ (Karnataka High Court )ವಜಾ ಮಾಡಿದೆ. ಲೋಕಸಭೆ ಚುನಾವಣೆಯಲ್ಲಿ ಅಕ್ರಮ ನಡೆಸಿದ ಆರೋಪದ ಮೇಲೆ ವಕೀಲ ದೇವರಾಜೇಗೌಡ ಎನ್ನುವರು ವಿಧಾನ ಪರಿಷತ್ ಸದಸ್ಯ ಸ್ಥಾನದಿಂದ ಸೂರಜ್ ರೇವಣ್ಣರನ್ನು ಅನರ್ಹಗೊಳಿಸುವಂತೆ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರು. ಆದ್ರೆ, ಈ ಅರ್ಜಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಹೈಕೊರ್ಟ್ ಪೀಠ ಇಂದು(ಡಿಸೆಂಬರ್ 20) ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಬಿಗ್ ರಿಲೀಫ್​ ಸಿಕ್ಕಿದೆ.

ನಾಮಪತ್ರ ತಿರಸ್ಕೃತವಂತೆ ಸಲ್ಲಿಸಿದ್ದ ಅರ್ಜಿ ಸಹ ವಜಾ

ಈ ಹಿಂದೆ ಹಾಸನ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳಿಂದ ವಿಧಾನ್ ಪರಿಷತ್ ಸ್ಥಾನಕ್ಕೆ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸೂರಜ್ ರೇವಣ್ಣ ಅವರ ನಾಮಪತ್ರ ಅಕ್ರಮವಾಗಿದೆ ಎಂದು ಆಕ್ಷೇಪಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸಹ ಈ ಹಿಂದೆ ಕರ್ನಾಟಕ ಹೈಕೋರ್ಟ್ ವಜಾಗೊಳಿಸಿತ್ತು. ಹಾಸನದ ಕುಂದೂರು ಗ್ರಾಮದ ಕೆ ಎಲ್ ಹರೀಶ್‌ ಸಲ್ಲಿಸಿದ್ದ ಮನವಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ನೇತೃತ್ವದ ಏಕಸದಸ್ಯ ನ್ಯಾಯಪೀಠವು ವಿಚಾರಣೆ ನಡೆಸಿ, ಚುನಾವಣಾ ವೇಳಾಪಟ್ಟಿ ಘೋಷಣೆಯಾದ ಮೇಲೆ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಚುನಾವಣಾ ತಕರಾರು ಅರ್ಜಿ ಸಲ್ಲಿಸುವ ಮೂಲಕ ಪರಿಹಾರ ಪಡೆಯಿರಿ ಎಂದು ಪೀಠವು ಅರ್ಜಿದಾರರಿಗೆ ಸೂಚಿಸಿತ್ತು.

ಇದನ್ನೂ ಓದಿ: Suraj Reavanna: ಡಾ.ಸೂರಜ್ ರೇವಣ್ಣಗೆ ಹೈಕೋರ್ಟ್‌ನಿಂದ ಸಮನ್ಸ್ ಜಾರಿ

ಕರ್ನಾಟಕ ವಿಧಾನ ಪರಿಷತ್‌ ಚುನಾವಣೆಯ ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮೊಮ್ಮಗ ಸೂರಜ್ ರೇವಣ್ಣ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದರು.ಮೊದಲ ಪ್ರಾಶಸ್ತ್ಯದ ಮತದಲ್ಲೇ ಗೆಲುವಿನ ನಗೆ ಬೀರಿದ್ದರು,

ಸೂರಜ್ ರೇವಣ್ಣ 2281 ಮತಗಳು, ಕಾಂಗ್ರೆಸ್ ಅಭ್ಯರ್ಥಿ ಎಂ.ಶಂಕರ್ ಗೆ 748 ಮತಗಳು ಮತ್ತು ಬಿಜೆಪಿ ಅಭ್ಯರ್ಥಿ ಎಚ್.ಎಂ.ವಿಶ್ವನಾಥ್ ಗೆ 421 ಮತಗಳು ಲಭಿಸಿದ್ದವು. ಪಕ್ಷೇತರ ಅಭ್ಯರ್ಥಿ ಎಚ್.ಡಿ.ರೇವಣ್ಣ ಅವರಿಗೆ 18 ಮತಗಳು ದೊರಕಿದ್ದವು. ಇನ್ನು 103 ಮತಗಳು ತಿರಸ್ಕ್ರತಗೊಂಡಿದ್ದು, ಸೂರಜ್ ರೇವಣ್ಣ 1533 ಮತಗಳ ಅಂತರದಿಂದ ಭರ್ಜರಿ ಜಯ ಸಾಧಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:11 pm, Wed, 20 December 23

ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?
ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?
ಜಾಫರ್​ ಎಕ್ಸ್​ಪ್ರೆಸ್​ ಹೈಜಾಕ್ ವಿಡಿಯೋ ಬಿಡುಗಡೆ ಮಾಡಿದ ಬಿಎಲ್​ಎ
ಜಾಫರ್​ ಎಕ್ಸ್​ಪ್ರೆಸ್​ ಹೈಜಾಕ್ ವಿಡಿಯೋ ಬಿಡುಗಡೆ ಮಾಡಿದ ಬಿಎಲ್​ಎ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬದಿಂದ ಎಷ್ಟು ನಷ್ಟವಾಗಿದೆ? ವಿಶ್ವನಾಥ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬದಿಂದ ಎಷ್ಟು ನಷ್ಟವಾಗಿದೆ? ವಿಶ್ವನಾಥ