ಶಾಲೆ ಸ್ಥಗಿತಕ್ಕಿಂತ ಪರಿಸ್ಥಿತಿ ಆಧರಿಸಿ ಆರಂಭಿಸೋದು ಉತ್ತಮ -ಸುರೇಶ್​ ಕುಮಾರ್​ ‘ವಿದ್ಯಾಗಮ’ಕ್ಕೆ ಹೈಕೋರ್ಟ್​ ಸಹಮತಿ

ಹಂತಹಂತವಾಗಿ ಶಾಲೆಗಳನ್ನು ಆರಂಭಿಸಲು ಕ್ರಮವಹಿಸಿ.ಕೊರೊನಾ ಇಲ್ಲದ ತಾಲೂಕುಗಳಲ್ಲಿ ಶಾಲೆಗಳನ್ನು ಆರಂಭಿಸಿ ಶಾಲೆಗಳ ಸ್ಥಗಿತಕ್ಕಿಂತ ಪರಿಸ್ಥಿತಿ ಆಧರಿಸಿ ಆರಂಭಿಸೋದು ಉತ್ತಮ ಎಂದು ನ್ಯಾ.ಬಿ.ವಿ.ನಾಗರತ್ನ, ನ್ಯಾ.ನಟರಾಜ್​ರವರ ಪೀಠ ಅಭಿಪ್ರಾಯಪಟ್ಟಿದೆ.

ಶಾಲೆ ಸ್ಥಗಿತಕ್ಕಿಂತ ಪರಿಸ್ಥಿತಿ ಆಧರಿಸಿ ಆರಂಭಿಸೋದು ಉತ್ತಮ -ಸುರೇಶ್​ ಕುಮಾರ್​ ‘ವಿದ್ಯಾಗಮ’ಕ್ಕೆ ಹೈಕೋರ್ಟ್​ ಸಹಮತಿ
ಸುರೇಶ್​ ಕುಮಾರ್​ ‘ವಿದ್ಯಾಗಮ’ಕ್ಕೆ ಹೈಕೋರ್ಟ್​ ಸಮ್ಮತಿ
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Dec 21, 2020 | 6:18 PM

ಬೆಂಗಳೂರು: ರಾಜ್ಯದ ಎಲ್ಲಾ ಶಾಲೆಗಳಲ್ಲೂ ವಿದ್ಯಾಗಮ ಜಾರಿ ಮಾಡಲಾಗುವುದು ಎಂದು ಹೈಕೋರ್ಟ್​ಗೆ ಸರ್ಕಾರದ ಪರ ವಕೀಲರು ತಿಳಿಸಿದ್ದಾರೆ. 2021ರ ಜ. 1ರಿಂದ ಎಲ್ಲಾ ಶಾಲೆಗಳಲ್ಲಿ ವಿದ್ಯಾಗಮ ಜಾರಿಯಾಗುವುದು. ಎಲ್ಲಾ ಸರ್ಕಾರಿ, ಖಾಸಗಿ ಶಾಲೆಗಳಲ್ಲೂ ಪುನರಾರಂಭವಾಗುವುದು ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ, 1ನೇ ತರಗತಿಯಿಂದ 10ನೇ ತರಗತಿವರೆಗೆ ವಿದ್ಯಾಗಮ ಜಾರಿಯಾಗುವ ರಾಜ್ಯ ಸರ್ಕಾರದ ಹೇಳಿಕೆಯನ್ನು ಹೈಕೋರ್ಟ್ ದಾಖಲಿಸಿಕೊಂಡಿದೆ. ಡಿಸೆಂಬರ್ 15ರಂದು ಸರ್ಕಾರದಿಂದ ಈ ಬಗ್ಗೆ ಸುತ್ತೋಲೆ ಹೊರಡಿಸಲಾಗಿತ್ತು. ಇದೀಗ, ಈ ನಿರ್ಧಾರಕ್ಕೆ ಬದ್ಧವಾಗಿರಲು ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.

‘ಹಂತಹಂತವಾಗಿ ಶಾಲೆಗಳನ್ನು ಆರಂಭಿಸಲು ಕ್ರಮವಹಿಸಿ’ ಹಂತಹಂತವಾಗಿ ಶಾಲೆಗಳನ್ನು ಆರಂಭಿಸಲು ಕ್ರಮವಹಿಸಿ. ಕೊರೊನಾ ಇಲ್ಲದ ತಾಲೂಕುಗಳಲ್ಲಿ ಶಾಲೆಗಳನ್ನು ಆರಂಭಿಸಿ. ಶಾಲೆಗಳ ಸ್ಥಗಿತಕ್ಕಿಂತ ಪರಿಸ್ಥಿತಿ ಆಧರಿಸಿ ಆರಂಭಿಸೋದು ಉತ್ತಮ ಎಂದು ನ್ಯಾ.ಬಿ.ವಿ. ನಾಗರತ್ನ ಮತ್ತು ನ್ಯಾ. ನಟರಾಜ್​ ಅವರ ಪೀಠ ಅಭಿಪ್ರಾಯಪಟ್ಟಿದೆ.

ಜೊತೆಗೆ, CSR ಫಂಡ್ ಅಡಿಯಲ್ಲಿ ಲ್ಯಾಪ್‌ಟಾಪ್, ಕಂಪ್ಯೂಟರ್, ಟ್ಯಾಬ್ಲೆಟ್ ಒದಗಿಸುವ ವಿಚಾರವಾಗಿ ಖಾಸಗಿ ಕಂಪನಿಗಳಿಗೂ ಸರ್ಕಾರ ಮನವಿ ಮಾಡಿಕೊಳ್ಳಬಹುದು. ಶಾಲೆಯಿಂದ ಹೊರಗುಳಿದ ವಿದ್ಯಾರ್ಥಿಗಳ ಶಿಕ್ಷಣಕ್ಕೂ ಗಮನಹರಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ಇದೀಗ, ಹೈಕೋರ್ಟ್ ತನ್ನ ಅಭಿಪ್ರಾಯ ತಿಳಿಸುವ ಮೂಲಕ ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಅವರ ಶಾಲೆಗಳನ್ನು ಪುನರಾರಂಭಗೊಳಿಸುವ ನಿರ್ಧಾರಕ್ಕೆ ಮತ್ತಷ್ಟು ಪುಷ್ಟಿ ಸಿಕ್ಕಂತಾಗಿದೆ. ಶಾಲೆಗಳಲ್ಲಿ ವಿದ್ಯಾಗಮ ಯೋಜನೆಯ ಮುಖಾಂತರ ವಿದ್ಯಾರ್ಥಿಗಳಿಗೆ ಲಾಕ್​ಡೌನ್​ ವೇಳೆಯಲ್ಲಿ ಶಿಕ್ಷಣ ಒದಗಿಸುವ ಮಹತ್ತರ ನಿರ್ಧಾರ ಕೈಗೊಂಡಿದ್ದರು.

ಇದಲ್ಲದೆ ಬಾಲ ಕಾರ್ಮಿಕ, ಬಾಲ್ಯ ವಿವಾಹ ತಡೆಯಲು ಕ್ರಮಕ್ಕೆ ಸೂಚನೆ ನೀಡಿದ ಹೈಕೋರ್ಟ್ ವಿಚಾರಣೆಯನ್ನು ಜನವರಿ 18ಕ್ಕೆ ಮುಂದೂಡಿದೆ. ಸಂಜೀವ್ ನಾರಾಯಣ್ ಎಂಬುವವರು ಈ ಕುರಿತು PIL ಸಲ್ಲಿಸಿದ್ದರು.

Published On - 5:18 pm, Mon, 21 December 20

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!