AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳಿಗೆ ಹೊಡೆದು ಕಲಿಸುವ ಅಗತ್ಯವಿಲ್ಲ: ಶಿಕ್ಷಕಿ ವಿರುದ್ಧದ ಕೇಸ್​​​​ಗೆ ತಡೆ ನೀಡಲು ಹೈಕೋರ್ಟ್ ನಕಾರ

ಶಾಲೆಯಲ್ಲಿ ಮಕ್ಕಳು ತಪ್ಪು ಮಾಡಿದರೂ ಶಿಕ್ಷೆ ಕೊಡಬಾರದು, ಬೈ ಬಾರದು, ಕನಿಷ್ಠ ಪಕ್ಷ ಗಂಭೀರವಾಗಿ ಮನದಟ್ಟು ಮಾಡಬಾರದು, ಸ್ನೇಹ ಪೂರ್ವಕವಾಗಿ ಹೇಳಬೇಕು ಎಂದು ಈಗಿನ ಪೋಷಕರು ಪ್ರತಿಪಾದಿಸುತ್ತಿದ್ದಾರೆ. ಹೀಗಿರುವಾಗ ಮಂಗಳೂರಿನ ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರು ವಿದ್ಯಾರ್ಥಿಗೆ ಹೊಡೆದು ಇದೀಗ ಕೋರ್ಟ್​​ಗೆ ಅಲೆದಾಡುವಂತಾಗಿದ್ದು, ಶಿಕ್ಷಕಿಯ ಕೇಸ್​​​ಗೆ ತಡೆ ನೀಡಲು ಹೈಕೋರ್ಟ್​​ ಸಹ ನಿರಾಕರಿಸಿದೆ. ಹಾಗಾದ್ರೆ, ಏನಿದು ಪ್ರಕರಣ? ಕೋರ್ಟ್ ಹೇಳಿದ್ದೇನು ಎನ್ನುವ ವಿವರ ಇಲ್ಲಿದೆ.

ಮಕ್ಕಳಿಗೆ ಹೊಡೆದು ಕಲಿಸುವ ಅಗತ್ಯವಿಲ್ಲ: ಶಿಕ್ಷಕಿ ವಿರುದ್ಧದ ಕೇಸ್​​​​ಗೆ ತಡೆ ನೀಡಲು ಹೈಕೋರ್ಟ್ ನಕಾರ
ಕರ್ನಾಟಕ ಹೈಕೋರ್ಟ್​​Image Credit source: Getty Images
Ramesha M
| Edited By: |

Updated on: Jul 06, 2026 | 8:08 PM

Share

ಮುಖ್ಯಾಂಶಗಳು

  • 6 ವರ್ಷದ ಬಾಲಕಿಗೆ ಹೊಡೆದ ಶಿಕ್ಷಕಿ ವಿರುದ್ಧದ ಕೇಸಿಗೆ ತಡೆ ನೀಡಲು ಕೋರ್ಟ್ ನಕಾರ
  • ಯಾವುದೇ ಶಿಕ್ಷಕರು ಹೊಡೆದು ಕಲಿಸುವ ಅಗತ್ಯವಿಲ್ಲ ಎಂದ ಕೋರ್ಟ್
  • ಬಾಲಕಿ ತಾಯಿ ದಾಖಲಿಸಿದ್ದ ಎಫ್ಐಆರ್ ಗೆ ತಡೆ ಕೋರಿದ್ದ ಶಿಕ್ಷಕಿ

ಬೆಂಗಳೂರು (ಜುಲೈ 06): ಮಂಗಳೂರಿನ (Mangaluru) ಖಾಸಗಿ ಶಾಲೆಯಲ್ಲಿ 6 ವರ್ಷದ ಬಾಲಕಿಗೆ ಹೊಡೆದ ಶಿಕ್ಷಕಿ (Teacher) ಮೇಲೆ ಪ್ರಕರಣ ದಾಖಲಾಗಿದ್ದು, ಇದೀಗ ಈ ಪ್ರಕರಣಕ್ಕೆ ತಡೆ ಕೋರಿ ಶಿಕ್ಷಕಿ, ಹೈಕೋರ್ಟ್​​​​​ಗೆ (Karnataka High Court) ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಹೌದು…ಮಂಗಳೂರಿನ ಖಾಸಗಿ ಶಾಲೆಯಲ್ಲಿ UKG ಓದುತ್ತಿದ್ದ ಬಾಲಕಿಗೆ ಶಿಕ್ಷಕಿ ಹೊಡೆದ ಪ್ರಕರಣಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಅಲ್ಲದೇ ಯಾವುದೇ ಶಿಕ್ಷಕರು ಹೊಡೆದು ಕಲಿಸುವ ಅಗತ್ಯವಿಲ್ಲ ಎಂದು ನ್ಯಾಯಮೂರ್ತಿ ಎಂ.ನಾಗಪ್ರಸನ್ನರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿದೆ.

ಮಂಗಳೂರಿನ ಖಾಸಗಿ ಶಾಲೆಯಲ್ಲಿ UKG ಓದುತ್ತಿದ್ದ ಬಾಲಕಿಗೆ ಹೊಡೆಯಲಾಗಿದೆ ಎಂದು ಶಿಕ್ಷಕಿ ಆಶಾ ಕ್ರಾಸ್ತಾ ವಿರುದ್ಧ ದೂರು ದಾಖಲಿಸಲಾಗಿದ್ದು, ಎಚ್ಚರಿಕೆ ಹೊರತಾಗಿಯೂ ಕೋಲಿನಿಂದ ಹೊಡೆದಿದ್ದಾರೆಂದು ಬಾಲಕಿ ಪೋಷಕರು ದೂರಿನಲ್ಲಿ ಆರೋಪಿಸಿದ್ದಾರೆ. ಇನ್ನು ಶಿಕ್ಷಕಿ ಆಶಾ ಕ್ರಾಸ್ತಾ ಹೈಕೋರ್ಟ್ ಮೆಟ್ಟಿಲೇರಿದ್ದು, ಪ್ರಕರಣಕ್ಕೆ ತಡೆ ಕೋರಿ ಮನವಿ ಮಾಡಿದ್ದಾರೆ. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ.ಎಂ.ನಾಗಪ್ರಸನ್ನರಿದ್ದ ಹೈಕೋರ್ಟ್ ಪೀಠ, ಯಾವುದೇ ಶಿಕ್ಷಕರು ಹೊಡೆದು ಕಲಿಸುವ ಅಗತ್ಯವಿಲ್ಲ ಅಭಿಪ್ರಾಯಪಟ್ಟು, ದ ಕೇಸ್​ಗೆ ತಡೆ ನೀಡಲು ನಿರಾಕರಿಸಿದೆ. ಇದರಿಂದ ಶಿಕ್ಷಕಿಗೆ ಹಿನ್ನಡೆಯಾಗಿದೆ.

ಇದನ್ನೂ ನೋಡಿ: ಬೆಂಗಳೂರಲ್ಲಿ ರ್‍ಯಾಪಿಡೋ ಚಾಲಕನ ಎಡವಟ್ಟಿನಿಂದ ಆಸ್ಪತ್ರೆ ಸೇರಿದ ಯುವತಿ, ಆಗಿದ್ದೇನು?

ನಾಯಿ ಮಾಲೀಕರ ವಿರುದ್ಧದ ಕೇಸ್ ರದ್ದಿಗೆ ಹೈಕೋರ್ಟ್ ನಕಾರ

ಸ್ನೇಹಿತೆ ಮನೆಗೆ ಭೇಟಿ ನೀಡಿದಾಗ ನಾಯಿ ಕಚ್ಚಿದ್ದ ಪ್ರಕರಣವನ್ನು ರದ್ದು ಮಾಡಲು ಹೈಕೋರ್ಟ್ ನಿರಾಕರಿಸಿದೆ. ಸಾಕು ನಾಯಿಯನ್ನು ಕಟ್ಟಿಹಾಕದೇ ಬಿಟ್ಟಿದ್ದು ಸಾಕಿದವರ ಬೇಜವಾಬ್ದಾರಿ. ಬೇಜವಾಬ್ದಾರಿಯಿಂದಾದ ಘಟನೆಗೆ ಅವರೇ ಹೊಣೆ ಹೊರಬೇಕು ಎಂದು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯ ಪಟ್ಟಿದ್ದು, ನಾಯಿ ಮಾಲೀಕರ ವಿರುದ್ಧದ ಕೇಸ್ ರದ್ದಿಗೆ ಹೈಕೋರ್ಟ್ ನಿರಾಕರಿಸಿದೆ.

ಸಾಕು ನಾಯಿ ಮಿಕ್ಕಿ, ಎಲಾಮ್ ರೇಜಾ ಎಂಬುವರ ಮುಖಕ್ಕೆ ಕಚ್ಚಿತ್ತು. ಈ ಸಂಬಂಧ ಕಾರ್ತಿಕ್, ಲಲಿತಾ ವಿರುದ್ಧ ರೇಜಾ ಎಫ್ಐಆರ್ ದಾಖಲಿಸಿದ್ದರು. ಈ ಪ್ರಕರಣ ರದ್ದು ಕೋರಿ ನಾಯಿ ಮಾಲೀಕ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಇಂಡೋನೇಷ್ಯಾ ತಲುಪಿದ ಪ್ರಧಾನಿ ನರೇಂದ್ರ ಮೋದಿ; ಸರ್ಕಾರಿ ಗೌರವದ ಸ್ವಾಗತ
ಇಂಡೋನೇಷ್ಯಾ ತಲುಪಿದ ಪ್ರಧಾನಿ ನರೇಂದ್ರ ಮೋದಿ; ಸರ್ಕಾರಿ ಗೌರವದ ಸ್ವಾಗತ
ಗುಂಪು ಸೇರಿಸಿ SIR ಮಾಡ್ತಿರುವ ಸ್ಥಳಕ್ಕೆ ಮಾಜಿ ಸಂಸದರ ಸಪ್ರೈಸ್​​ ಎಂಟ್ರಿ!
ಗುಂಪು ಸೇರಿಸಿ SIR ಮಾಡ್ತಿರುವ ಸ್ಥಳಕ್ಕೆ ಮಾಜಿ ಸಂಸದರ ಸಪ್ರೈಸ್​​ ಎಂಟ್ರಿ!
ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ: ಸಚಿವ ಖಾದರ್​​
ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ: ಸಚಿವ ಖಾದರ್​​
ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ, ಬೆಳಗಾವಿಯಲ್ಲಿ ಪರಿಸ್ಥಿತಿ ಹೇಗಿದೆ?
ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ, ಬೆಳಗಾವಿಯಲ್ಲಿ ಪರಿಸ್ಥಿತಿ ಹೇಗಿದೆ?
ಬೆಂಗಳೂರಿನಲ್ಲಿ ದಿನಕ್ಕೆ ಎಷ್ಟು HMT ವಾಚ್​ ತಯಾರಾಗುತ್ತೆ ಗೊತ್ತಾ?
ಬೆಂಗಳೂರಿನಲ್ಲಿ ದಿನಕ್ಕೆ ಎಷ್ಟು HMT ವಾಚ್​ ತಯಾರಾಗುತ್ತೆ ಗೊತ್ತಾ?
ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದ ಅಕ್ರಮವಾಗಿ SIR: ಪ್ರಲ್ಹಾದ್ ಜೋಶಿ
ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದ ಅಕ್ರಮವಾಗಿ SIR: ಪ್ರಲ್ಹಾದ್ ಜೋಶಿ
ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಭ್ರಷ್ಟಾಚಾರ ನಡೆದಿದೆ: ಪ್ರಿಯಾಂಕ್​​ 
ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಭ್ರಷ್ಟಾಚಾರ ನಡೆದಿದೆ: ಪ್ರಿಯಾಂಕ್​​ 
ಮುಂದಿನ ತಿಂಗಳು ಪಿಎಸ್​ಐ, ಕಾನ್ಸ್​ಟೇಬಲ್​ ಹುದ್ದೆ ನೇಮಕಾತಿ ಅಧಿಸೂಚನೆ
ಮುಂದಿನ ತಿಂಗಳು ಪಿಎಸ್​ಐ, ಕಾನ್ಸ್​ಟೇಬಲ್​ ಹುದ್ದೆ ನೇಮಕಾತಿ ಅಧಿಸೂಚನೆ
'ಜನರ ಒಳ್ಳೆಯದಕ್ಕೆ ನಾನು ನಿಷ್ಠುರ ಆದರೂ ಪರವಾಗಿಲ್ಲ'
'ಜನರ ಒಳ್ಳೆಯದಕ್ಕೆ ನಾನು ನಿಷ್ಠುರ ಆದರೂ ಪರವಾಗಿಲ್ಲ'
ಬೆಳಗಾವಿ: ಚಲಿಸುತ್ತಿದ್ದ ಟ್ರ್ಯಾಕ್ಟರ್ ಮೇಲೆ ಮುರಿದು ಬಿದ್ದ ದೈತ್ಯ ಮರ!
ಬೆಳಗಾವಿ: ಚಲಿಸುತ್ತಿದ್ದ ಟ್ರ್ಯಾಕ್ಟರ್ ಮೇಲೆ ಮುರಿದು ಬಿದ್ದ ದೈತ್ಯ ಮರ!