AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರ್ವಜನಿಕ ಹಿತಾಸಕ್ತಿ ಮುಖ್ಯ: ಎಥೆನಾಲ್ ಉತ್ಪಾದನೆಗೆ ನಿರ್ಬಂಧ,ಕೇಂದ್ರದ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ

ದೇಶದಲ್ಲಿ ಸಕ್ಕರೆ ಕೊರತೆ ಎದುರಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೇಂದ್ರ ಸರ್ಕಾರ ಎಥೆನಾಲ್ ಉತ್ಪಾದನೆ ನಿಷೇಧಿಸಿದೆ.2026-27ನೇ ಸಾಲಿನಲ್ಲಿ ಕಬ್ಬಿನ ಹಾಲು ಮತ್ತು ಕಾಕಂಬಿ 'ಬಿ-ಹೆವಿ' ಮೊಲಾಸಸ್‌ನಿಂದ ಎಥೆನಾಲ್ ಉತ್ಪಾದಿಸುವುದನ್ನು ನಿರ್ಬಂಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು, ಇದೀಗ ಕೋರ್ಟ್​ ಸಹ ಕೇಂದ್ರದ ಆದೇಶಕ್ಕೆ ಮಧ್ಯಂತರ ತಡೆ ನೀಡಲು ನಿರಾಕರಿಸಿದೆ.

ಸಾರ್ವಜನಿಕ ಹಿತಾಸಕ್ತಿ ಮುಖ್ಯ: ಎಥೆನಾಲ್ ಉತ್ಪಾದನೆಗೆ ನಿರ್ಬಂಧ,ಕೇಂದ್ರದ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ
Karnataka High Court
ರಮೇಶ್​ ಎಮ್​.
| Edited By: |

Updated on: Nov 20, 2026 | 10:07 PM

Share

ಬೆಂಗಳೂರು, (ನವೆಂಬರ್ 20): ಎಥೆನಾಲ್ ಉತ್ಪಾದನೆ ನಿಷೇಧಿಸಿ ಕೇಂದ್ರ ಸರ್ಕಾರ ಹೊರಡಿಸಿದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾ ಮಾಡಿದೆ. ದೇಶದಲ್ಲಿ ಸಕ್ಕರೆ ಕೊರತೆ ಎದುರಾಗುವ ಸಾಧ್ಯತೆ ಹಿನ್ನೆಲೆಯಲ್ಲಿ 2026-27ನೇ ಸಾಲಿನಲ್ಲಿ ಎಥೆನಾಲ್ ಉತ್ಪಾದಿಸುವುದನ್ನು ನಿರ್ಬಂಧಿಸಿ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಮಧ್ಯಂತರ ತಡೆ ನೀಡಲು ಹೈಕೋರ್ಟ್ ನಿರಾಕರಿಸಿ ಇಂದು (ನವೆಂಬರ್ 20) ಆದೇಶ ಹೊರಡಿಸಿದೆ. ಇದರೊಂದಿಗೆ ಕೇಂದ್ರದ ಆದೇಶ ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಿದ್ದ ಆಸ್ಕಿನ್ಸ್ ಬಯೋ ಫ್ಯುಯೆಲ್ ಪ್ರೈವೆಟ್.ಲಿಮಿಟೆಡ್​​​​ ಗೆ ಹಿನ್ನಡೆಯಾಗಿದೆ.

ಸಾರ್ವಜನಿಕ ಹಿತಾಸಕ್ತಿ ಮುಖ್ಯ ಎಂದ ಕೋರ್ಟ್

ಕೇಂದ್ರ ಸರ್ಕಾರದ 2026ರ ಅಕ್ಟೋಬರ್ 22ರಂದು ಹೊರಡಿಸಿದ್ದ ಆದೇಶ ಪ್ರಶ್ನಿಸಿ ಮೆಸರ್ಸ್ ಆಸ್ಕಿನ್ಸ್ ಬಯೋಫ್ಯುಯೆಲ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಶ್ರೀ ಬ್ರಹ್ಮಾನಂದಸಾಗರ ಬೆಲ್ಲದ ಕೈಗಾರಿಕೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಿ.ಎಂ.ಪೂಣಚ್ಚ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಅಲ್ಲದೇ 2026-27ನೇ ಸಾಲಿನ ಕಬ್ಬು ಉತ್ಪಾದನೆಯ ಅಂದಾಜು ಹಾಗೂ ಪ್ರಸ್ತುತ ಮಾರುಕಟ್ಟೆಯಲ್ಲಿನ ಸಕ್ಕರೆ ಕೊರತೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಈ ನಿರ್ಬಂಧ ವಿಧಿಸಿದೆ. ಇಂತಹ ಸಾರ್ವಜನಿಕ ಹಿತಾಸಕ್ತಿಯ ಪರಿಸ್ಥಿತಿಯಲ್ಲಿ ಅರ್ಜಿದಾರರ ವಾಣಿಜ್ಯ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡಲು ಸಾಧ್ಯವಿಲ್ಲ ಎಂದಿದೆ.

ಇದನ್ನೂ ಓದಿ: ಇ20 ಪೆಟ್ರೋಲ್, ಭಯಪಡುವ ವಿಚಾರವಾ? ಜನರಿಗೆ ಇರುವ ಸಂದೇಹಗಳೇನು? ಸರ್ಕಾರ ಹೇಳುವುದೇನು? ಇಲ್ಲಿದೆ ಡೀಟೇಲ್ಸ್

ವಾದ-ಪ್ರತಿವಾದ ಹೇಗಿತ್ತು?

ಮುನ್ನ ನಡೆದ ವಿಚಾರಣೆ ವೇಳೆ ಅರ್ಜಿದಾರರ ಕಂಪೆನಿಯ ಪರ ವಕೀಲರು, ನಮ್ಮ ಕಕ್ಷಿದಾರರು ಸ್ವತಂತ್ರ ಡಿಸ್ಟಿಲರಿಯಾಗಿದ್ದು, ಸಕ್ಕರೆ ಕಾರ್ಖಾನೆಗಳಿಗೆ ಹಂಚಿಕೆಯಾಗುವ ಶೇ.95ರಷ್ಟು ಕಬ್ಬಿನ ಪ್ರದೇಶವನ್ನು ಬಳಸದೆ, ರೈತರ ವಿವೇಚನೆಗೆ ಬಿಟ್ಟಿರುವ ಶೇ.5ರಷ್ಟು ಕಬ್ಬನ್ನು ಮಾತ್ರ ಬಳಸಿಕೊಳ್ಳುತ್ತಿದ್ದೇವೆ. ಈ ಹಿಂದೆಯೂ ವಿಭಾಗೀಯ ಪೀಠ ತಮಗೆ ಅನುಮತಿ ನೀಡಿದ್ದು, ಈಗ ಉತ್ಪಾದನೆ ಸ್ಥಗಿತಗೊಂಡರೆ ಆರ್ಥಿಕ ನಷ್ಟದ ಜೊತೆಗೆ ಕಾರ್ಮಿಕರಿಗೆ ತೊಂದರೆಯಾಗಲಿದೆ ಎಂದು ವಾದ ಮಂಡಿಸಿದರು.

ಇದಕ್ಕೆ ಆಕ್ಷೇಪಿಸಿದ್ದ ಕೇಂದ್ರ ಸರ್ಕಾರದ ಪರ ವಕೀಲರು, ಅಗತ್ಯ ವಸ್ತುಗಳ ಕಾಯ್ದೆ-1955 ಮತ್ತು ಸಕ್ಕರೆ (ನಿಯಂತ್ರಣ) ಆದೇಶ-2025ರ ಅಡಿಯಲ್ಲಿ ಸಾರ್ವಜನಿಕರಿಗೆ ನ್ಯಾಯಯುತ ಬೆಲೆಯಲ್ಲಿ ಸಕ್ಕರೆ ಲಭ್ಯವಾಗುವಂತೆ ನೋಡಿಕೊಳ್ಳಲು ಈ ತಾತ್ಕಾಲಿಕ ಕ್ರಮ ಕೈಗೊಳ್ಳಲಾಗಿದೆ. ಆದ್ದರಿಂದ ಸರ್ಕಾರದ ಆದೇಶಕ್ಕೆ ತಡೆ ನೀಡಬಾರದು ಎಂದು ಪೀಠಕ್ಕೆ ಮನವಿ ಮಾಡಿದರು. ಈ ವಾದ, ಪ್ರತಿವಾದ ಆಲಿಸಿದ ಪೀಠ, ಆಸ್ಕಿನ್ಸ್ ಬಯೋ ಫ್ಯುಯೆಲ್ ಪ್ರೈ.ಲಿ ಅರ್ಜಿ ವಜಾ ಮಾಡಿದ್ದು, ಅರ್ಜಿದಾರ ಕಂಪನಿಗಳು ಕಾನೂನಿನಲ್ಲಿ ಲಭ್ಯವಿರುವ ಇತರೆ ವಿನಾಯಿತಿ, ಇಲ್ಲವೇ ಅನುಮತಿಗಾಗಿ ಕೇಂದ್ರ ಸರ್ಕಾರದ ಸಂಬಂಧ ಪಟ್ಟ ಇಲಾಖೆಗೆ ಮನವಿ ಸಲ್ಲಿಸಬಹುದಾಗಿದೆ ಎಂದು ಹೇಳಿದೆ.

ಕೇಂದ್ರ ಸರ್ಕಾರದ ಆದೇಶವು ಕೇವಲ ಕಬ್ಬಿನ ಹಾಲು ಮತ್ತು ಬಿ-ಹೆವಿ’ ಮೊಲಾಸಸ್ ಬಳಕೆಗೆ ಮಾತ್ರ ಸೀಮಿತವಾಗಿದ್ದು, ‘ಸಿ-ಹೆವಿ’ ಮೊಲಾಸಸ್‌ನಿಂದ ಎಥೆನಾಲ್ ಉತ್ಪಾದಿಸಲು ಯಾವುದೇ ನಿರ್ಬಂಧವಿಲ್ಲ ಎಂಬುದನ್ನು ನ್ಯಾಯಾಲಯ ಆದೇಶದಲ್ಲಿ ಸ್ಪಷ್ಟಪಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಮೇಶ್​ ಎಮ್​.
ರಮೇಶ್​ ಎಮ್​.

ರಮೇಶ್​ ಎಂ ವಿಶೇಷ ವರದಿಗಾರರಾಗಿದ್ದಾರೆ, ಮೂಲತಃ ಕಾನೂನು ಪದವೀಧರನಾಗಿದ್ದು ಕಳೆದ 18 ವರ್ಷಗಳಿಂದ ಟಿವಿ9 ಸುದ್ದಿ ವಾಹಿನಿಯಲ್ಲಿ ಕಾನೂನು ಸಂಬಂಧಿತ ವರದಿ ನೀಡುತ್ತಿದ್ದಾರೆ. ಹೈಕೋರ್ಟ್, ಸುಪ್ರೀಂ ಕೋರ್ಟ್ ಹಾಗೂ ವಿಚಾರಣಾ ನ್ಯಾಯಾಲಯಗಳ ಪ್ರಮುಖ ಪ್ರಕರಣಗಳ ವರದಿಗಾರಿಕೆ ಮಾಡುತ್ತಿದ್ದು, ಬೆಂಗಳೂರಿನ ನಿವಾಸಿಯಾಗಿದ್ದಾರೆ.

Read More
ದನದ ಶೆಡ್ ಬಿಲ್ ಬಾಕಿ:ಪಂಚಾಯ್ತಿ ಮುಂದೆ ಎಮ್ಮೆ ಕರು ಕಟ್ಟಿದ ಫಲಾನುಭವಿ
ದನದ ಶೆಡ್ ಬಿಲ್ ಬಾಕಿ:ಪಂಚಾಯ್ತಿ ಮುಂದೆ ಎಮ್ಮೆ ಕರು ಕಟ್ಟಿದ ಫಲಾನುಭವಿ
ಚಿಕ್ಕಣ್ಣನ ಡ್ಯಾನ್ಸ್ ನೋಡಿ ಪ್ರಭುದೇವಗೆ ಹೋಲಿಸಿದ ಶಿವಣ್ಣ
ಚಿಕ್ಕಣ್ಣನ ಡ್ಯಾನ್ಸ್ ನೋಡಿ ಪ್ರಭುದೇವಗೆ ಹೋಲಿಸಿದ ಶಿವಣ್ಣ
ಹೆಚ್​​​ಡಿಕೆ-ಡಿಕೆಶಿ ಜಟಾಪಟಿ:ಕುಮಾರಸ್ವಾಮಿ ನಡೆಗೆ ಸ್ವಾಮೀಜಿ ಅಸಮಾಧಾನ
ಹೆಚ್​​​ಡಿಕೆ-ಡಿಕೆಶಿ ಜಟಾಪಟಿ:ಕುಮಾರಸ್ವಾಮಿ ನಡೆಗೆ ಸ್ವಾಮೀಜಿ ಅಸಮಾಧಾನ
ಲಕ್ಷ್ಮೀಪುತ್ರ ಟ್ರೇಲರ್‌ಗೆ ಶಿವಣ್ಣ ಫಿದಾ; ಚಿಕ್ಕಣ್ಣ ಭವಿಷ್ಯದ ಸ್ಟಾರ್
ಲಕ್ಷ್ಮೀಪುತ್ರ ಟ್ರೇಲರ್‌ಗೆ ಶಿವಣ್ಣ ಫಿದಾ; ಚಿಕ್ಕಣ್ಣ ಭವಿಷ್ಯದ ಸ್ಟಾರ್
ಚಿನ್ನ ಗ್ರಾಂಗೆ 10 ಸಾವಿರದ ಒಳಗೆ ಬರುತ್ತಾ? ಹೂಡಿಕೆ ತಜ್ಞರು ಹೇಳಿದ್ದೇನು?
ಚಿನ್ನ ಗ್ರಾಂಗೆ 10 ಸಾವಿರದ ಒಳಗೆ ಬರುತ್ತಾ? ಹೂಡಿಕೆ ತಜ್ಞರು ಹೇಳಿದ್ದೇನು?
ಸಚಿವ ಸ್ಥಾನ ವಂಚಿತ ಹೆಬ್ಬಾಳ್ಕರ್, ಮಹದೇವಪ್ಪಗೆ ಪ್ರಮುಖ ಹುದ್ದೆ ಸಾಧ್ಯತೆ
ಸಚಿವ ಸ್ಥಾನ ವಂಚಿತ ಹೆಬ್ಬಾಳ್ಕರ್, ಮಹದೇವಪ್ಪಗೆ ಪ್ರಮುಖ ಹುದ್ದೆ ಸಾಧ್ಯತೆ
ಚಿನ್ನದ ಬೆಲೆ ದಿಢೀರ್​​ ಕುಸಿತ ಕಂಡಿದ್ದೇಕೆ? ಇಲ್ಲಿದೆ ತಜ್ಞರ ವಿವರಣೆ
ಚಿನ್ನದ ಬೆಲೆ ದಿಢೀರ್​​ ಕುಸಿತ ಕಂಡಿದ್ದೇಕೆ? ಇಲ್ಲಿದೆ ತಜ್ಞರ ವಿವರಣೆ
ದೆಹಲಿಗೆ ತೆರಳಿದ ಹರಿಪ್ರಸಾದ್​​: KPCC ಕಾರ್ಯಾಧ್ಯಕ್ಷರ ನೇಮಕ ಬಗ್ಗೆ ಚರ್ಚೆ?
ದೆಹಲಿಗೆ ತೆರಳಿದ ಹರಿಪ್ರಸಾದ್​​: KPCC ಕಾರ್ಯಾಧ್ಯಕ್ಷರ ನೇಮಕ ಬಗ್ಗೆ ಚರ್ಚೆ?
ಹಿರಿಯೂರು ಟಿಕೆಟ್ ಫೈಟ್: ಅಮಿತ್ ಶಾ ಭೇಟಿ ಬೆನ್ನಲ್ಲೇ ಕುಮಾರಸ್ವಾಮಿ ಹೇಳಿಕೆ
ಹಿರಿಯೂರು ಟಿಕೆಟ್ ಫೈಟ್: ಅಮಿತ್ ಶಾ ಭೇಟಿ ಬೆನ್ನಲ್ಲೇ ಕುಮಾರಸ್ವಾಮಿ ಹೇಳಿಕೆ
ಬಡವರಿಗೆ ವಿತರಿಸಬೇಕಿದ್ದ ಸರ್ಕಾರಿ ಆಸ್ಪತ್ರೆ ಔಷಧಿಗಳು ನದಿಯಲ್ಲಿ ಪತ್ತೆ!
ಬಡವರಿಗೆ ವಿತರಿಸಬೇಕಿದ್ದ ಸರ್ಕಾರಿ ಆಸ್ಪತ್ರೆ ಔಷಧಿಗಳು ನದಿಯಲ್ಲಿ ಪತ್ತೆ!