ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಕೇಸ್: ಪ್ರಕರಣ ರದ್ದು ಕೋರಿ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಜಾ

| Updated By: ರಮೇಶ್ ಬಿ. ಜವಳಗೇರಾ

Updated on: Apr 08, 2024 | 5:16 PM

ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದು ಕೋರಿ ಕಾಂಗ್ರೆಸ್​ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಇದರಿಂದ ಶಾಸಕ ವಿನಯ್ ಕುಲಕರ್ಣಿಗೆ ಹಿನ್ನಡೆಯಾಗಿದೆ.

ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಕೇಸ್: ಪ್ರಕರಣ ರದ್ದು ಕೋರಿ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಜಾ
Follow us on

ಬೆಂಗಳೂರು, (ಏಪ್ರಿಲ್ 08): ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ(yogesh gowda Murder Case)  ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಮೇಲಿನ ಪ್ರಕರಣವನ್ನು ರದ್ದು ಕೋಡಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ (Congress MLA Vinay Kulkarni) ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಯೋಗೇಶ್​ ಗೌಡ ಕೊಲೆ ಪ್ರಕರಣದಲ್ಲಿ ತಮ್ಮ ಮೇಲಿನ ಕೇಸ್ ರದ್ದುಗೊಳಿಡುವಂತೆ ವಿಜಯ್ ಕುಲಕರ್ಣಿ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಇಂದು (ಏಪ್ರಿಲ್ 08) ಈ ಅರ್ಜಿ ಕೈಗೆತ್ತಿಕೊಂಡ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಹೈಕೋರ್ಟ್ ಪೀಠ, ಪ್ರಕರಣ ರದ್ದು ಕೋರಿ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಅಲ್ಲದೇ ಸಾಕ್ಷ್ಯ ವಿಚಾರಣೆ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಲು ಸಿಬಿಐ ಪರ ಅಭಿಯೋಕರಿಗೆ ಸೂಚನೆ ನೀಡಿದ್ದಾರೆ.

ಏನಿದು ಪ್ರಕರಣ?

ಧಾರವಾಡ ಜಿಲ್ಲಾ ಪಂಚಾಯ್ತಿಯ ಬಿಜೆಪಿ ಸದಸ್ಯ ಯೋಗೇಶ ಗೌಡ ಗೌಡರ ಅವರನ್ನು ಸಪ್ತಾಪೂರ ಬಳಿ ಅವರದೇ ಮಾಲೀಕತ್ವದ ಜಿಮ್ ನಲ್ಲಿ 2016 ಜೂನ್ 15 ರಂದು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಘಟನೆ ಬಳಿಕ ಆರೋಪಿಗಳು ತಾವೇ ಈ ಹತ್ಯೆಯನ್ನು ಮಾಡಿರುವುದಾಗಿ ತಪ್ಪೊಪ್ಪಿಕೊಂಡು ಬಂಧನಕ್ಕೆ ಒಳಗಾಗಿದ್ದರು. ಆದರೆ ಮೃತ ಯೋಗೇಶಗೌಡ ಗೌಡರ ಕುಟುಂಬದ ಸದಸ್ಯರು ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಬಲವಾಗಿ ಒತ್ತಾಯಿಸಿದ್ದರು. ಬಳಿಕ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಿತ್ತು. ಹಲವು ಆರೋಪಿಗಳ ಮತ್ತು ಶಂಕಿತರ ವಿಚಾರಣೆ ಬಳಿಕ ಈ ಕೊಲೆಯಲ್ಲಿ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಅವರ ಕೈವಾಡ ಇದೆ ಇದೆ‌ ಎಂದು ಎಂಬುದು ತಿಳಿದು ಬಂದಿತ್ತು. ಕೊಲೆ ಮತ್ತು ಸಾಕ್ಷ್ಯ ನಾಶ ಪ್ರಕರಣದಡಿ ಕುಲಕರ್ಣಿಯವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದರು.  ಬಳಿಕ ಬರೋಬ್ಬರಿ ಒಂಬತ್ತು ತಿಂಗಳ ಬಳಿಕ ವಿನಯ್ ಕುಲಕರ್ಣಿ ಅವರು ಜಾಮೀನಿನ ಮೇಲೆ ಆಚೆ ಬಂದಿದ್ದಾರೆ. ಆದ್ರೆ, ಅವರಿಗೆ ಇದುವರೆಗೂ ಧಾರವಾಡ ಜಿಲ್ಲಾ ಪ್ರವೇಶಕ್ಕೆ ಕೋರ್ಟ್ ಅನುಮತಿ ನೀಡಿಲ್ಲ. ಹೀಗಾಗಿ ಅವರು ಕ್ಷೇತ್ರದಿಂದ ಹೊರಗಿದ್ದುಕೊಂಡೇ  ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:09 pm, Mon, 8 April 24