Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಬಿಐ ತನಿಖೆ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾ: ಡಿಕೆ ಶಿವಕುಮಾರ್​ಗೆ ಮತ್ತೆ ಸಂಕಷ್ಟ

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ಗೆ ಮತ್ತೆ ಸಂಕಷ್ಟ ಎದುರಾಗಿದೆ. ಸಿಬಿಐ ತನಿಖೆ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್  ಇಂದು(ಅಕ್ಟೋಬರ್ 19) ವಜಾಗೊಳಿಸಿ ಆದೇಶ ಹೊರಡಿಸಿದೆ. ಏನಿದು ಕೇಸ್? ಇಲ್ಲಿದೆ ವಿವರ

ಸಿಬಿಐ ತನಿಖೆ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾ: ಡಿಕೆ ಶಿವಕುಮಾರ್​ಗೆ ಮತ್ತೆ ಸಂಕಷ್ಟ
ಡಿಕೆ ಶಿವಕುಮಾರ್ -ಹೈಕೋರ್ಟ್
Follow us
Ramesha M
| Updated By: ರಮೇಶ್ ಬಿ. ಜವಳಗೇರಾ

Updated on:Oct 19, 2023 | 11:05 AM

ಬೆಂಗಳೂರು, (ಅಕ್ಟೋಬರ್ 19): ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ಗೆ (DK Shivakumar) ಸಂಷಕ್ಟ ಎದುರಾಗಿದೆ. ಸಿಬಿಐ ತನಿಖೆ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ (Karnataka High Court)  ಇಂದು(ಅಕ್ಟೋಬರ್ 19) ವಜಾಗೊಳಿಸಿ ಆದೇಶ ಹೊರಡಿಸಿದೆ. ಅಲ್ಲದೇ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನೂ ಸಹ ಹೈಕೋರ್ಟ್ ತೆರವುಗೊಳಿಸಿದ್ದು, 3 ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಲು ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ಗೆ ಮತ್ತೆ ಸಿಬಿಐ ತನಿಖೆ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಇದನ್ನೂ ಓದಿ: ಪಟ್ಟು ಬಿಡದ ಸಿಬಿಐ: ಡಿಸಿಎಂ ಡಿಕೆ ಶಿವಕುಮಾರ್​‌ಗೆ ಸುಪ್ರೀಂಕೋರ್ಟ್ ನೋಟಿಸ್

ಏನಿದು ಪ್ರಕರಣ?

ಡಿಕೆ ಶಿವಕುಮಾರ್ ಅವರು 2023ರಿಂದ 2018ರ ಮಧ್ಯದ ಅವಧಿಯಲ್ಲಿ ತಮ್ಮ ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ್ದಾರೆ ಎಂದು ಸಿಬಿಐ, 2020ರ ಅಕ್ಟೋಬರ್ 3ರಂದು ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ ಅಡಿಯಲ್ಲಿ 13(2), 13(1)ಇ ಕ್ರಿಮಿನಲ್ ಪ್ರಕರಣ ದಾಖಲಿಸಿತ್ತು. ಈ ಪ್ರಕರಣವನ್ನು ರದ್ದು ಕೋರಿ ಡಿಕೆ ಶಿವಕುಮಾರ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ತನಿಖೆಗೆ ಮಧ್ಯಂತರ ತಡೆ ತಡೆಯಾಜ್ಞೆ ನೀಡಿತ್ತು. ಅಲ್ಲದೇ ಮೇಲಿಂದ ಮೇಲೆ ತಡೆಯಾಜ್ಞೆಯನ್ನು ಕೋರ್ಟ್ ವಿಸ್ತರಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:51 am, Thu, 19 October 23

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​