ಪ್ರಕರಣ ರದ್ದು ಕೋರಿದ ಶ್ರೀರಾಮುಲುಗೆ ಹೈಕೋರ್ಟ್​ ತರಾಟೆ, ಬಂಧನದ ವಾರೆಂಟ್ ಎಚ್ಚರಿಕೆ

| Updated By: ರಮೇಶ್ ಬಿ. ಜವಳಗೇರಾ

Updated on: Feb 23, 2024 | 10:53 PM

ಕಳೆದ ವಿಧಾಣಸಭಾ ಚುನಾವಣೆಯಲ್ಲಿ ಮಾಜಿ ಸಚಿವ ಶ್ರೀರಾಮುಲು ಅವರು ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಆರೋಪ ಎದುರಿಸುತ್ತಿದ್ದು, ಇದೀಗ ತಮ್ಮ ಪ್ರಕರಣವನ್ನು ರದ್ದುಕೋರಿ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಆದ್ರೆ, ಹೈಕೋರ್ಟ್​ ಶ್ರೀರಾಮುಲುಗೆ ತರಾಟೆಗೆ ತೆಗೆದುಕೊಂಡಿದೆ. ಅಲ್ಲದೇ ಮುಂದಿನ‌ ವಿಚಾರಣೆಗೆ ಹಾಜರಾಗದಿದ್ದರೆ ಬಂಧನದ ವಾರೆಂಟ್ ನೀಡಬೇಕಾಗುತ್ತದೆ ಎಂದು ಖಡಕ್ ಎಚ್ಚರಿಕೆ ನೀಡಿದೆ.

ಪ್ರಕರಣ ರದ್ದು ಕೋರಿದ ಶ್ರೀರಾಮುಲುಗೆ ಹೈಕೋರ್ಟ್​ ತರಾಟೆ, ಬಂಧನದ ವಾರೆಂಟ್ ಎಚ್ಚರಿಕೆ
Follow us on

ಬೆಂಗಳೂರು, (ಫೆಬ್ರವರಿ 23): 2023ರ ವಿಧಾನಸಭೆ ಚುನಾವಣೆ  (Karnataka Assembly Elections 2023)ವೇಳೆ ದಾಖಲಾಗಿದ್ದ ನೀತಿ ಸಂಹಿತಿ ಉಲ್ಲಂಘನೆ ಪ್ರಕರಣವನ್ನು ರದ್ದು ಕೋರಿ ಮಾಜಿ ಸಚಿವ ಶ್ರೀರಾಮುಲು(Sriramulu) ಸಲ್ಲಿದ್ದ ಅರ್ಜಿಯನ್ನು ಹೈಕೋರ್ಟ್(Karnataka high Court ) ವಜಾಗೊಳಿಸಿದೆ. ಅಲ್ಲದೇ ಶ್ರೀರಾಮುಲು ಅವರನ್ನು ತರಾಟೆಗೆ ತೆಗೆದುಕೊಂಡಿದ್ದು,  ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಹಾಜರಾಗಲು ಖಡಕ್​ ಆದೇಶ ಹೊರಡಿಸಿದೆ. ನಾಲ್ಕು ಬಾರಿ ಸಮನ್ಸ್ ನೀಡಿದ್ದರೂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಮುಂದಿನ ವಿಚಾರಣೆಗೆ ವಿಚಾರಣೆಗೆ ಹಾಜರಾಗಲೇ ಬೇಕು ಎಂದು ಆದೇಶಿಸಿದೆ. ಮುಂದಿನ‌ ವಿಚಾರಣೆಗೆ ಹಾಜರಾಗದಿದ್ದರೆ ಬಂಧನದ ವಾರೆಂಟ್ ನೀಡಬೇಕಾಗುತ್ತದೆ ಎಂದು ಖಡಕ್ ಎಚ್ಚರಿಕೆ ಸಹ ನೀಡಿದೆ.

ನಾಲ್ಕು ಬಾರಿ ಸಮನ್ಸ್ ಜಾರಿಗೊಳಿಸಿದರೂ ಹಾಜರಾಗಿಲ್ಲ. ಕೋರ್ಟ್ ಆದೇಶವನ್ನು ಸಲೀಸಾಗಿ ತೆಗೆದುಕೊಳ್ಳುವಂತಿಲ್ಲ. ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಹಾಜರಾಗಲು ಯಾವ ಪ್ರತಿಷ್ಟೆ ಅಡ್ಡಿಯಾಗಿದೆ. ಮುಂದಿನ‌ ವಿಚಾರಣೆಗೆ ಹಾಜರಾಗದಿದ್ದರೆ ಬಂಧನದ ವಾರೆಂಟ್ ಜಾರಿ ಮಾಡಲಾಗುವುದು ಎಂದು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಹೈಕೋರ್ಟ್ ಪೀಠ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿಕೆಶಿಗೆ ಸಮನ್ಸ್: ಖುದ್ದು ಹಾಜರಿಗೆ ಕೋರ್ಟ್ ಸೂಚನೆ

ಪ್ರಕರಣ ರದ್ದುಕೋರಿ ಸಲ್ಲಿಕೆ ಮಾಡಿದ್ದ ಅರ್ಜಿ ಕೈಗೆತ್ತಿಕೊಂಡ ನ್ಯಾಯಾಲಯ ಅರ್ಜಿದಾರರ ಪರ ವಕೀಲರಿಗೆ ಪ್ರಶ್ನೆ ಮಾಡಿದ್ದಾರೆ. ಅರ್ಜಿದಾರರು ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಎಷ್ಟು ಬಾರಿ ಹಾಜರಾಗಿದ್ದಾರೆ? ಅವರಿಗೆ ಕೋರ್ಟ್‌ಗೆ ಹಾಜರಾಗುವಂತೆ ಎಷ್ಟು ಬಾರಿ ಸಮನ್ಸ್ ಜಾರಿ ಮಾಡಲಾಗಿದೆ? ಎಂದು ಕೇಳಿದ್ದಾರೆ. ಆಗ ವಕೀಲರು ಈವರೆಗೆ 4 ಬಾರಿ ಸಮನ್ಸ್ ಜಾರಿ ಆಗಿದ್ದು, ಒಂದು ಬಾರಿಯೂ ಹಾಜರಾಗಿಲ್ಲ ಎಂದು ಸರ್ಕಾರದ ಪರ ವಕೀಲರು ಹೇಳಿದ್ದಾರೆ. ಇದಕ್ಕೆ ಗರಂ ಆದ ನ್ಯಾಯಾಧೀಶರು ರಾಜ್ಯದಲ್ಲಿ ಯಾವುದೇ ಸಚಿವರಾಗಲಿ, ಮಾಜಿ ಸಚಿವರಾಗಲಿ ಪ್ರಕರಣ ದಾಖಲಾದ ನಂತರ‌ ಮ್ಯಾಜಿಸ್ಟ್ರೇಟ್ ಮುಂದೆ ಹಾಜರಾಗಬೇಕು ಎಂದು ಖಡಕ್ ಎಚ್ಚರಿಕೆ ನೀಡಿದರು. ಅಲ್ಲದೇ ಮುಂದಿನ ವಿಚಾರಣೆ ವೇಳೆ ಮ್ಯಾಜಿಸ್ಟ್ರೇಟ್ ಮುಂದೆ ಶ್ರೀರಾಮುಲು ಹಾಜರಾಗಬೇಕು. ಒಂದು ವೇಳೆ ಹಾಜರಾಗಲಿದ್ದಲ್ಲಿ ಬಂಧನ ವಾರಂಟ್ ಹೊರಡಿಸಬೇಕಾಗುತ್ತದೆ ಎಂದು ಶ್ರೀರಾಮುಲುಗೆ ಎಚ್ಚರಿಕೆ ನೀಡಿದರು.

ಹೀಗಾಗಿ ಪ್ರಕರಣ ರದ್ದು ಕೋರಿ ಹೈಕೋರ್ಟ್​ ಮೆಟ್ಟಿಲೇರಿದ್ದ ಶ್ರೀರಾಮುಲುಗೆ ಹಿನ್ನಡೆಯಾಗಿದ್ದು, ಇದೀಗ ಕೋರ್ಟ್​ಗೆ ಹಾಜರಾಗಬೇಕಾದ ಅನಿರ್ವಾಯತೆಯೂ ಎದುರಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.