AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದ ಶಿಯೋಮಿಗೆ ಭಾರೀ ಹಿನ್ನಡೆ; 5551 ಕೋಟಿ ರೂ. ಜಪ್ತಿ ಆದೇಶ ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್​​

ಅಕ್ರಮವಾಗಿ ರಾಯಧನ ರೂಪದಲ್ಲಿ ವಿದೇಶಿ ಕಂಪನಿಗಳಿಗೆ ಹಣ ವರ್ಗಾವಣೆ ಮಾಡಿದ್ದ ಆರೋಪದಲ್ಲಿ ಚೀನಾ ಮೂಲದ ಶಿಯೋಮಿಯ ಭಾರತದ ಅಂಗ ಸಂಸ್ಥೆಯ 5,551 ಕೋಟಿ ರೂ.ಗಳನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿರುವುದನ್ನು ಕರ್ನಾಟಕ ಹೈಕೋರ್ಟ್ ಎತ್ತಿಹಿಡಿದಿದೆ.

ಚೀನಾದ ಶಿಯೋಮಿಗೆ ಭಾರೀ ಹಿನ್ನಡೆ; 5551 ಕೋಟಿ ರೂ. ಜಪ್ತಿ ಆದೇಶ ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್​​
ಶಿಯೋಮಿImage Credit source: Reuters
ಗಣಪತಿ ಶರ್ಮಾ
|

Updated on: Apr 22, 2023 | 11:33 AM

Share

ಮುಖ್ಯಾಂಶಗಳು

  • ಅಕ್ರಮವಾಗಿ ರಾಯಧನ ರೂಪದಲ್ಲಿ ವಿದೇಶಿ ಕಂಪನಿಗಳಿಗೆ ಹಣ ವರ್ಗಾವಣೆ ಮಾಡಿದ್ದ ಆರೋಪ
  • ಶಿಯೋಮಿಯ ಭಾರತದ ಅಂಗ ಸಂಸ್ಥೆಗೆ ಹಿನ್ನಡೆ
  • ಇ.ಡಿ ಜಪ್ತಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು: ಅಕ್ರಮವಾಗಿ ರಾಯಧನ ರೂಪದಲ್ಲಿ ವಿದೇಶಿ ಕಂಪನಿಗಳಿಗೆ ಹಣ ವರ್ಗಾವಣೆ ಮಾಡಿದ್ದ ಆರೋಪದಲ್ಲಿ ಚೀನಾ ಮೂಲದ ಶಿಯೋಮಿಯ ಭಾರತದ ಅಂಗ ಸಂಸ್ಥೆಯ 5,551 ಕೋಟಿ ರೂ.ಗಳನ್ನು ಜಾರಿ ನಿರ್ದೇಶನಾಲಯ (Enforcement Directorate) ಮುಟ್ಟುಗೋಲು ಹಾಕಿಕೊಂಡಿರುವುದನ್ನು ಕರ್ನಾಟಕ ಹೈಕೋರ್ಟ್ (Karnataka High Court) ಎತ್ತಿಹಿಡಿದಿದೆ. ಜಪ್ತಿ ಪ್ರಶ್ನಿಸಿ ಶಿಯೋಮಿ (Xiaomi India) ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ತಿರಸ್ಕರಿಸಿದೆ. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (FEMA) ಉಲ್ಲಂಘಿಸಿ ರಾಯಧನ ರೂಪದಲ್ಲಿ ವಿದೇಶಿ ಕಂಪನಿಗಳಿಗೆ ಹಣ ವರ್ಗಾವಣೆ ಮಾಡಿದ ಆರೋಪ ಶಿಯೋಮಿ ಮೇಲಿದೆ.

ದೇಶದ ಕಂಪನಿಗಳು ವಿದೇಶಗಳಿಗೆ ಹಣ ವರ್ಗಾವಣೆ ಮಾಡುವ ಸಂದರ್ಭದಲ್ಲಿ ಫೆಮಾ ಕಾಯ್ದೆಯ ಸೆಕ್ಷನ್ 37ಎ ಪ್ರಕಾರ ಹಣ ವಶಪಡಿಸಿಕೊಳ್ಳಲು ಕೇಂದ್ರ ಸರ್ಕಾರಕ್ಕೆ ಯಾವುದೇ ನಿರ್ಬಂಧ ಇಲ್ಲ ಎಂದು ನ್ಯಾಯಪೀಠ ತಿಳಿಸಿದೆ. ಜತೆಗೆ, ಸದ್ಯ ನೀಡಿರುವ ಆದೇಶವನ್ನು ಮೇಲ್ಮನವಿ ಪ್ರಾಧಿಕಾರದಲ್ಲಿ ಮತ್ತೊಮ್ಮೆ ಪ್ರಶ್ನಿಸಲು ಶಿಯೋಮಿಗೆ ಅವಕಾಶ ಕಲ್ಪಿಸಿದೆ.

5,551 ಕೋಟಿ ರೂಪಾಯಿ ವಿದೇಶಿ ವಿನಿಮಯ ಉಲ್ಲಂಘನೆ ಪ್ರಕರಣದಲ್ಲಿ ಶೇ 84 ಮೊತ್ತವನ್ನು ಪೇಟೆಂಟ್ ತಂತ್ರಜ್ಞಾನದ ಬಳಕೆಗಾಗಿ ಅಮೆರಿಕದ ಮೊಬೈಲ್ ತಂತ್ರಜ್ಞಾನ ಸಂಸ್ಥೆ ಕ್ವಾಲ್ಕಾಮ್ ಇಂಕ್‌ ಟೆಕ್ ಸಂಸ್ಥೆಗೆ ಪಾವತಿ ಮಾಡಿದ್ದೇವೆ ಎಂದು ಶಿಯೋಮಿ ಇಂಡಿಯಾ ಕರ್ನಾಟಕ ಹೈಕೋರ್ಟ್​​​ಗೆ ತಿಳಿಸಿತ್ತು. ಹೀಗೆ ಮೂರು ವಿದೇಶಿ ಕಂಪನಿಗಳಿಗೆ ಪಾವತಿಸಿರುವ ತಂತ್ರಜ್ಞಾನದ ರಾಯಧನವು (ರಾಯಲ್ಟಿ) ಫೆಮಾ ಕಾನೂನಿಗೆ ವಿರುದ್ಧವಾಗಿಲ್ಲ ಎಂದೂ ಶಿಯೋಮಿ ಇಂಡಿಯಾ ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿತ್ತು.

ಇದನ್ನೂ ಓದಿ: ಚೀನಾದ ಶಿಯೋಮಿ ಸಂಸ್ಥೆಯ 5500 ಕೋಟಿ ರೂ ಜಪ್ತಿ ವಿರುದ್ಧ ಸಂಸ್ಥೆ ಆಕ್ಷೇಪ, ರಿಟ್ ಅರ್ಜಿ ವಿಚಾರಣೆ

ಈ ಮಧ್ಯೆ, ಶಿಯೋಮಿ ಟೆಕ್ನಾಲಜಿ ಇಂಡಿಯಾದ ಸ್ಥಿರ ಠೇವಣಿಗಳಿಂದ 3,700 ಕೋಟಿ ರೂ. ವಶಕ್ಕೆ ಪಡೆಯುವ ಆದಾಯ ತೆರಿಗೆ ಇಲಾಖೆ ಆದೇಶವನ್ನು 2022ರ ಡಿಸೆಂಬರ್​​ನಲ್ಲಿ ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿತ್ತು. ಆದರೆ, ಭಾರತದಿಂದ ಹೊರಗಡೆ ಇರುವ ಕಂಪನಿಗಳಲ್ಲಿ ಅಥವಾ ಸಂಸ್ಥೆಗಳಲ್ಲಿ ರಾಯಧನ ಹಾಗೂ ಇನ್ಯಾವುದೇ ರೂಪದಲ್ಲಿ ಸ್ಥಿರ ಠೇವಣಿ ಇಡುವಂತಿಲ್ಲ ಎಂದು ಮೊದಲ ಷರತ್ತನ್ನು ಕೋರ್ಟ್ ವಿಧಿಸಿತ್ತು. ಚೀನಾ ಮೂಲದ ಕಂಪನಿಯು ರಾಯಲ್ಟಿ ಹೆಸರಿನಲ್ಲಿ ಹೊರ ದೇಶಗಳಿಗೆ ಹಣ ಕಳುಹಿಸುತ್ತಿದೆ. ಆ ಮೂಲಕ ತೆರಿಗೆ ವಂಚಿಸುತ್ತಿದೆ ಎಂದು ಆಪಾದಿಸಿದ್ದ ಆದಾಯ ತೆರಿಗೆ ಇಲಾಖೆ ಶಿಯೋಮಿ ವಿರುದ್ಧ ಆದೇಶ ನೀಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ