ಮಸೀದಿ ಆವರಣದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದರೆ ಧಾರ್ಮಿಕ ಭಾವನೆಗೆ ಧಕ್ಕೆಯಾಗಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪ್ರದೇಶದಲ್ಲಿ ಮಸೀದಿಯೊಂದರ ಆವರಣದಲ್ಲಿ ‘ಜೈ ಶ್ರೀರಾಮ್’ ಘೋಷಣೆ ಕೂಗಿದ ವಿಚಾರವಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮಸೀದಿ ಆವರಣದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದರೆ ಭಾವನೆಗೆ ಧಕ್ಕೆಯಾಗುವುದು ಹೇಗೆ ಎಂದು ಪ್ರಶ್ನಿಸಿರುವ ಕೋರ್ಟ್, ಕೆಳ ಹಂತದ ನ್ಯಾಯಾಲದಯ ವಿಚಾರಣೆ ರದ್ದುಗೊಳಿಸಿ ತೀರ್ಪು ನೀಡಿದೆ.

ಮಸೀದಿ ಆವರಣದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದರೆ ಧಾರ್ಮಿಕ ಭಾವನೆಗೆ ಧಕ್ಕೆಯಾಗಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ
ಕರ್ನಾಟಕ ಹೈಕೋರ್ಟ್
Follow us
Ganapathi Sharma
|

Updated on: Oct 16, 2024 | 10:23 AM

ಬೆಂಗಳೂರು, ಅಕ್ಟೋಬರ್ 16: ಮಹತ್ವದ ಬೆಳವಣಿಗೆಯೊಂದರಲ್ಲಿ, ಮಸೀದಿ ಆವರಣದಲ್ಲಿ ‘ಜೈ ಶ್ರೀರಾಮ್’ ಘೋಷಣೆ ಕೂಗಿದ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ವ್ಯಕ್ತಿಗಳ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್ ಮೊಕದ್ದಮೆಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಮೊಕದ್ದಮೆಯ ವಿಚಾರಣೆ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠ, ‘ಜೈ ಶ್ರೀರಾಮ್’ ಎಂದು ಕೂಗುವುದು ಯಾವುದೇ ವರ್ಗದ ಧಾರ್ಮಿಕ ಭಾವನೆಯನ್ನು ಹೇಗೆ ಕೆರಳಿಸುತ್ತದೆ, ಭಾವನೆಗೆ ಹೇಗೆ ಧಕ್ಕೆಯಾಗುತ್ತದೆ ಎಂಬುದು ಅರ್ಥವಾಗುತ್ತಿಲ್ಲ ಎಂದಿದ್ದಾರೆ.

ಮಸೀದಿ ಆವರಣದಲ್ಲಿ ಜೈ ಶ್ರೀರಾಮ್ ಘೋಷಣೆ: ಘಟನೆ ಹಿನ್ನೆಲೆ

2023 ರ ಸೆಪ್ಟೆಂಬರ್ 24 ರ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಐತ್ತೂರು ಗ್ರಾಮದ ಕಡಬ-ಮರ್ದಾಳ ರಸ್ತೆಯಲ್ಲಿರುವ ಮಸೀದಿ ಆವರಣಕ್ಕೆ ನುಗ್ಗಿದ್ದ ಕೆಲವು ಅಪರಿಚಿತ ವ್ಯಕ್ತಿಗಳು ‘ಜೈ ಶ್ರೀ ರಾಮ್’ ಎಂದು ಘೋಷಣೆಗಳನ್ನು ಕೂಗಿದ್ದರು. ಬ್ಯಾರಿ ಸಮುದಾಯಕ್ಕೆ ಸೇರಿದವರನ್ನು ಬದುಕಲ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ಮರುದಿನ, ಸಿಸಿಟಿವಿ ದೃಶ್ಯಾವಳಿಗಳನ್ನು ವೀಕ್ಷಿಸಿದ ನಂತರ ಮಸೀದಿಯವರು ಪೊಲೀಸರಿಗೆ ದೂರು ನೀಡಿದ್ದರು. ಕೆಲವು ಯುವಕರು ಬೈಕ್‌ಗಳಲ್ಲಿ ಮಸೀದಿ ಸುತ್ತಿದ್ದಲ್ಲದೆ, ಜೈ ಶ್ರೀರಾಮ್ ಘೋಷಣೆಗಳನ್ನು ಕೂಗುತ್ತಿರುವ ಸಿಸಿಟಿವಿ ದೃಶ್ಯವನ್ನೂ ಅವರು ಒದಗಿಸಿದ್ದರು.

ಕಡಬ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ

ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಿಂದೂ-ಮುಸ್ಲಿಮರು ಸೌಹಾರ್ದತೆಯಿಂದ ಜೀವನ ನಡೆಸುತ್ತಿದ್ದಾರೆ. ‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗಿರುವ ಈ ವ್ಯಕ್ತಿಗಳು ಕೋಮುಗಲಭೆ ಸೃಷ್ಟಿಸುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು. ನಂತರ, ದಕ್ಷಿಣ ಕನ್ನಡದ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ನಿವಾಸಿ ಕೀರ್ತನ್ ಕುಮಾರ್ ಮತ್ತು ಎನ್ಎಂ ಸಚಿನ್ ಕುಮಾರ್ ವಿರುದ್ಧ ಐಪಿಸಿ ಸೆಕ್ಷನ್ 447, 295 ಎ 505 ಮತ್ತು 506 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಹೈಕೋರ್ಟ್ ಮೆಟ್ಟಿಲೇರಿದ್ದ ಆರೋಪಿಗಳು

ಜೈ ಶ್ರೀರಾಮ ಘೋಷಣೆ ಪ್ರಕರಣದ ಆರೋಪಿಗಳು ಹೈಕೋರ್ಟ್‌ಗೆ ಮೊರೆ ಹೋಗಿದ್ದರು. ತಮ್ಮ ವಿರುದ್ಧದ ಆರೋಪಗಳಿಗೆ ಅಗತ್ಯವಾದ ಯಾವುದೇ ಅಂಶಗಳು ಪ್ರಕರಣದಲ್ಲಿ ಇಲ್ಲ ಎಂದು ಅವರು ಪ್ರತಿಪಾದಿಸಿದ್ದರು.

ಐಪಿಸಿ ಸೆಕ್ಷನ್ 447 (ಕ್ರಿಮಿನಲ್ ಅತಿಕ್ರಮಣ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆದರೆ ಮಸೀದಿಯು ಸಾರ್ವಜನಿಕ ಸ್ಥಳವಾಗಿರುವುದರಿಂದ ಅದರ ಆವರಣಕ್ಕೆ ಪ್ರವೇಶವನ್ನು ಕ್ರಿಮಿನಲ್ ಅತಿಕ್ರಮಣ ಎಂದು ಅರ್ಥೈಸಲಾಗುವುದಿಲ್ಲ ಎಂದು ಆರೋಪಿಗಳ ಪರ ವಕೀಲರು ವಾದಿಸಿದ್ದರು. ಮತ್ತೊಂದೆಡೆ, ಮಸೀದಿಯ ಆವರಣದಲ್ಲಿ ‘ಜೈ ಶ್ರೀರಾಮ್’ ಎಂದು ಕೂಗುವಂತಿಲ್ಲ ಮತ್ತು ಬೆದರಿಕೆ ಹಾಕುವಂತಿಲ್ಲ ಎಂದು ಸರ್ಕಾರಿ ವಕೀಲರು ವಾದಿಸಿದ್ದರು.

ಆದಾಗ್ಯೂ, ಎಂಎಸ್ ಧೋನಿ ವರ್ಸಸ್ ಯರ್ರಗುಂಟ್ಲಾ ಶ್ಯಾಮಸುಂದರ್ ಪ್ರಕರಣದಲ್ಲಿನ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿದ ಹೈಕೋರ್ಟ್, ಶಾಂತಿ ಸ್ಥಾಪನೆ ಅಥವಾ ಸಾರ್ವಜನಿಕ ಸುವ್ಯವಸ್ಥೆಯ ಮೇಲೆ ಯಾವುದೇ ಪರಿಣಾಮ ಬೀರದ ಕೃತ್ಯಗಳು ಐಪಿಸಿ ಸೆಕ್ಷನ್ 295 ಎ ಅಡಿಯಲ್ಲಿ ಅಪರಾಧಕ್ಕೆ ಕಾರಣವಾಗುವುದಿಲ್ಲ ಎಂದು ಹೇಳಿದೆ.

‘ಜೈ ಶ್ರೀರಾಮ್ ಕೂಗುವದು ಧಾರ್ಮಿಕ ಭಾವನೆಗೆ ಧಕ್ಕೆಯಲ್ಲ’

ಯಾರಾದರೂ ‘ಜೈ ಶ್ರೀರಾಮ್’ ಎಂದು ಕೂಗಿದರೆ ಅದು ಯಾವುದೇ ವರ್ಗದ ಧಾರ್ಮಿಕ ಭಾವನೆಯನ್ನು ಹೇಗೆ ಕೆರಳಿಸುತ್ತದೆ ಎಂಬುದು ಅರ್ಥವಾಗುವುದಿಲ್ಲ. ಈ ಪ್ರದೇಶದಲ್ಲಿ ಹಿಂದೂ-ಮುಸ್ಲಿಮರು ಸೌಹಾರ್ದತೆಯಿಂದ ಬದುಕುತ್ತಿದ್ದಾರೆ ಎಂದು ದೂರುದಾರರೇ ಹೇಳಿರುವಾಗ, ಘೋಷಣೆಯು ಘರ್ಷಣೆಗೆ ಕಾರಣವಾಗಬಹುದು ಎನ್ನಲಾಗದು ಎಂದು ನ್ಯಾಯಮೂರ್ತಿ ನಾಗಪ್ರಸನ್ನ ಹೇಳಿದ್ದಾರೆ.

ಇದನ್ನೂ ಓದಿ: ಹಳೇ ಹುಬ್ಬಳ್ಳಿ ಕೇಸ್​ ಹಿಂಪಡೆದಿದ್ದಕ್ಕೆ ಜೋಶಿ ವಾಗ್ದಾಳಿ: ಸರ್ಕಾರದ ವಿರುದ್ಧ ಹೋರಾಟಕ್ಕೆ ಮುಂದಾದ ಬಿಜೆಪಿ

ಅಲ್ಲದೆ, ಪ್ರಕರಣ ಸಂಬಂಧ ಪುತ್ತೂರಿನ ಎರಡನೇ ಜೆಎಂಎಫ್​ಸಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಯನ್ನು ರದ್ದುಗೊಳಿಸಿದೆ. ವಿಚಾರಣೆಗೆ ಅನುಮತಿ ನೀಡಿದರೆ ಅದು ಕಾನೂನು ಪ್ರಕ್ರಿಯೆಯ ದುರುಪಯೋಗವಾಗುತ್ತದೆ ಎಂದೂ ಅಭಿಪ್ರಾಯಪಟ್ಟಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

150 ಕೋಟಿ ಆಮಿಷ ಆರೋಪವನ್ನು ಸಿಬಿಐಗೆ ವಹಿಸಲಿ: ವಿಜಯೇಂದ್ರ ಆಗ್ರಹ
150 ಕೋಟಿ ಆಮಿಷ ಆರೋಪವನ್ನು ಸಿಬಿಐಗೆ ವಹಿಸಲಿ: ವಿಜಯೇಂದ್ರ ಆಗ್ರಹ
ಚೌಲಗೆರೆ ಬಳಿ ಹೊಸ ಟೋಲ್​ಗೆ ತೀವ್ರ ವಿರೋಧ, ಹೆದ್ದಾರಿ ತಡೆದು ಪ್ರತಿಭಟನೆ
ಚೌಲಗೆರೆ ಬಳಿ ಹೊಸ ಟೋಲ್​ಗೆ ತೀವ್ರ ವಿರೋಧ, ಹೆದ್ದಾರಿ ತಡೆದು ಪ್ರತಿಭಟನೆ
ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ಸುಳ್ಳು ಆರೋಪ ಮಾಡುತ್ತಿದೆ: ಆರ್ ಅಶೋಕ
ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ಸುಳ್ಳು ಆರೋಪ ಮಾಡುತ್ತಿದೆ: ಆರ್ ಅಶೋಕ
Assembly Session: ಚರ್ಚೆಯಾಗುತ್ತಿವೆ ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳು
Assembly Session: ಚರ್ಚೆಯಾಗುತ್ತಿವೆ ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳು
ಭಿನ್ನಾಭಿಪ್ರಾಯಗಳನ್ನು ಸಾರ್ವಜನಿಕವಾಗಿ ತೋರ್ಪಡಿಸದ ಸಿಎಂ ಮತ್ತು ಡಿಸಿಎಂ
ಭಿನ್ನಾಭಿಪ್ರಾಯಗಳನ್ನು ಸಾರ್ವಜನಿಕವಾಗಿ ತೋರ್ಪಡಿಸದ ಸಿಎಂ ಮತ್ತು ಡಿಸಿಎಂ
ಮಾಯೋಟ್​ನಲ್ಲಿ ಚಿಡೋ ಚಂಡಮಾರುತದ ಅಬ್ಬರ, ಸಾವಿರಕ್ಕೂ ಅಧಿಕ ಮಂದಿ ಸಾವು
ಮಾಯೋಟ್​ನಲ್ಲಿ ಚಿಡೋ ಚಂಡಮಾರುತದ ಅಬ್ಬರ, ಸಾವಿರಕ್ಕೂ ಅಧಿಕ ಮಂದಿ ಸಾವು
Video: ಪೊಲೀಸ್​ ವಾಹನ ಡಿಕ್ಕಿ ರಭಸಕ್ಕೆ ಗಾಳಿಯಲ್ಲಿ ಹಾರಿ ಬಿದ್ದ ವ್ಯಕ್ತಿ
Video: ಪೊಲೀಸ್​ ವಾಹನ ಡಿಕ್ಕಿ ರಭಸಕ್ಕೆ ಗಾಳಿಯಲ್ಲಿ ಹಾರಿ ಬಿದ್ದ ವ್ಯಕ್ತಿ
ಬೆಂಗಳೂರು: ಇಡೀ ಮೊಬೈಲ್​ ಅಂಗಡಿಯನ್ನೇ ದೋಚಿದ ಖದೀಮರು! ವಿಡಿಯೋ ನೋಡಿ
ಬೆಂಗಳೂರು: ಇಡೀ ಮೊಬೈಲ್​ ಅಂಗಡಿಯನ್ನೇ ದೋಚಿದ ಖದೀಮರು! ವಿಡಿಯೋ ನೋಡಿ
ಪಾಸಿಟಿವಿಟಿ ಬಿಟ್ಟು ವೈಲೆಂಟ್ ಆದ ಗೌತಮಿ ಜಾಧವ್; ರಜತ್​ಗೆ ಕೊಟ್ಟರು ಠಕ್ಕರ್
ಪಾಸಿಟಿವಿಟಿ ಬಿಟ್ಟು ವೈಲೆಂಟ್ ಆದ ಗೌತಮಿ ಜಾಧವ್; ರಜತ್​ಗೆ ಕೊಟ್ಟರು ಠಕ್ಕರ್
Daily Devotional: ಚಿಕ್ಕ ಮಕ್ಕಳಿಗೆ ಜಾತಕ ಬರೆಸಬಹುದಾ? ಇಲ್ಲಿದೆ ಉತ್ತರ
Daily Devotional: ಚಿಕ್ಕ ಮಕ್ಕಳಿಗೆ ಜಾತಕ ಬರೆಸಬಹುದಾ? ಇಲ್ಲಿದೆ ಉತ್ತರ