Jobs: ಹುಟ್ಟಿನಲ್ಲಿ ಮಕ್ಕಳಿಗೆ ಆಯ್ಕೆ ಇರದು; 2ನೇ ಪತ್ನಿಯ ಮಕ್ಕಳಿಗೆ ಅನುಕಂಪದ ಆಧಾರದ ಮೇಲೆ ನೌಕರಿ ನಿರ್ಬಂಧ ಸುತ್ತೋಲೆ ರದ್ದುಗೊಳಿದ ಕೋರ್ಟ್

ಹಿಂದೂ ವಿವಾಹ ಕಾಯ್ದೆಯಲ್ಲಿ ಈ ತಾರತಮ್ಯ ಮಾಡದೇ 1 ನೇ ಮತ್ತು 2 ನೇ ಪತ್ನಿಯ ಮಕ್ಕಳಿಗೆ ಸಮಾನ ಅವಕಾಶ ಕಲ್ಪಿಸಲಾಗಿದೆ. ಸಂಸತ್ತು ಮಕ್ಕಳಿಗೆ ಸಮಾನ ಸ್ಥಾನಮಾನ ನೀಡಿದೆ. ಹೀಗಾಗಿ ಕೆಪಿಟಿಸಿಎಲ್ ನ ನಿರ್ಬಂಧ ಕಾನೂನುಬಾಹಿರವೆಂದು ಪರಿಗಣಿಸಿ ಕರ್ನಾಟಕ ಹೈಕೋರ್ಟ್​ನ ವಿಭಾಗೀಯ ಪೀಠ ಈ ತೀರ್ಪು ನೀಡಿದೆ.

Jobs: ಹುಟ್ಟಿನಲ್ಲಿ ಮಕ್ಕಳಿಗೆ ಆಯ್ಕೆ ಇರದು; 2ನೇ ಪತ್ನಿಯ ಮಕ್ಕಳಿಗೆ ಅನುಕಂಪದ ಆಧಾರದ ಮೇಲೆ ನೌಕರಿ ನಿರ್ಬಂಧ ಸುತ್ತೋಲೆ ರದ್ದುಗೊಳಿದ ಕೋರ್ಟ್
ಕರ್ನಾಟಕ ಹೈಕೋರ್ಟ್​
Follow us
TV9 Web
| Updated By: guruganesh bhat

Updated on: Jul 15, 2021 | 11:06 PM

ಬೆಂಗಳೂರು: 2ನೇ ಪತ್ನಿಯ ಮಕ್ಕಳಿಗೆ ಅನುಕಂಪದ ಆಧಾರದ ಮೇಲೆ ನೌಕರಿ ನೀಡುವುದನ್ನು ನಿರ್ಬಂಧಿಸಿದ್ದ ಕೆಪಿಟಿಸಿಎಲ್ ನ ಸುತ್ತೋಲೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ರದ್ದುಗೊಳಿಸಿದೆ. ತಂದೆ ತಾಯಿ ಇಲ್ಲದೇ ಮಕ್ಕಳು ಜನಿಸುವುದಿಲ್ಲ. ತಂದೆ ತಾಯಿ ಮಧ್ಯೆ ಅನೈತಿಕ ಸಂಬಂಧವಿರಬಹುದು. ಆದರೆ ಅನೈತಿಕ ಮಕ್ಕಳಿರುವುದಿಲ್ಲ. ಹುಟ್ಟಿನಲ್ಲಿ ಮಕ್ಕಳಿಗೆ ಆಯ್ಕೆ ಇರುವುದಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಹಿಂದೂ ವಿವಾಹ ಕಾಯ್ದೆಯಲ್ಲಿ ಈ ತಾರತಮ್ಯ ಮಾಡದೇ 1 ನೇ ಮತ್ತು 2 ನೇ ಪತ್ನಿಯ ಮಕ್ಕಳಿಗೆ ಸಮಾನ ಅವಕಾಶ ಕಲ್ಪಿಸಲಾಗಿದೆ. ಸಂಸತ್ತು ಮಕ್ಕಳಿಗೆ ಸಮಾನ ಸ್ಥಾನಮಾನ ನೀಡಿದೆ. ಹೀಗಾಗಿ ಕೆಪಿಟಿಸಿಎಲ್ ನ ನಿರ್ಬಂಧ ಕಾನೂನುಬಾಹಿರವೆಂದು ಪರಿಗಣಿಸಿ ಕರ್ನಾಟಕ ಹೈಕೋರ್ಟ್​ನ ವಿಭಾಗೀಯ ಪೀಠ ಈ ತೀರ್ಪು ನೀಡಿದೆ. ಕನಕಪುರದ ಕೆ.ಸಂತೋಷ್ ಎಂಬುವವರು ಕೆಪಿಟಿಸಿಎಲ್​ನ ಸುತ್ತೋಲೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಕೋರ್ಟ್ ಈ ತೀರ್ಪು ನೀಡಿದೆ. ಜತೆಗೆ 2 ತಿಂಗಳಲ್ಲಿ ಅನುಕಂಪದ ನೌಕರಿಗೆ ಪರಿಗಣಿಸಲು ನ್ಯಾ.ಬಿ.ವಿ.ನಾಗರತ್ನ, ಹಂಚಟೆ ಸಂಜೀವ್ ಕುಮಾರ್ ಅವರುಗಳಿದ್ದ ಹೈಕೋರ್ಟ್​ನ ವಿಭಾಗೀಯ ಪೀಠ ಸೂಚನೆ ನೀಡಿದೆ.

ಬೆಂಗಳೂರು ಮೆಟ್ರೋ ಯೋಜನೆಗಾಗಿ ಮರ ಕಡಿಯಲು ಷರತ್ತುಬದ್ಧ ಅನುಮತಿ ನೀಡಿದ ಹೈಕೋರ್ಟ್ ಮೆಟ್ರೋ ರೈಲು ಯೋಜನೆಗಾಗಿ ಮರಗಳನ್ನು ಕಡಿಯಲು ಕರ್ನಾಟಕ ಹೈಕೋರ್ಟ್​ ಗುರುವಾರ ಷರತ್ತುಬದ್ಧ ಅನುಮತಿ ನೀಡಿದೆ. ನಾಗವಾರ-ಗೊಟ್ಟಿಗೆರೆ ಮಾರ್ಗದಲ್ಲಿ ಮೆಟ್ರೋ ಯೋಜನೆಗಾಗಿ ಮರಗಳನ್ನು ಕಡಿಯಬೇಕಾಗಿದೆ. ಈ ಬಗ್ಗೆ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್​, ಪರಿಹಾರ ರೂಪದಲ್ಲಿ 4000 ಮರಗಳನ್ನು ಬೆಳೆಸಬೇಕು ಮತ್ತು ಸ್ಥಳಾಂತರಗೊಂಡ ಮರಗಳನ್ನು ಸರಿಯಾಗಿ ಪೋಷಿಸಬೇಕು ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿತು.

ಮರ ಅಧಿಕಾರಿ ಮತ್ತು ಡಿಸಿಎಫ್ ವರ್ತನೆ ಸರಿಯಿಲ್ಲ ಎಂದು ಅಭಿಪ್ರಾಯಪಟ್ಟ ಹೈಕೋರ್ಟ್​, ಮರ ಬೆಳೆಸಲು ಸೂಕ್ತ ಪರ್ಯಾಯ ಜಾಗವನ್ನು ಪರಿಶೀಲಿಸಬೇಕಿತ್ತು ಎಂದು ಹೇಳಿತು. ಕಡಿಯುವ ಮರಗಳಿಗೆ ಬದಲಿಯಾಗಿ ಬೆಳೆಸುವ ಮರಗಳು ಮತ್ತು ಮಣ್ಣಿನ ಪರೀಕ್ಷೆಯ ವಿವರವನ್ನು ಎರಡು ವಾರಗಳ ಒಳಗೆ ನೀಡಬೇಕು ಎಂದು ಹೇಳಿತು.

ಇದನ್ನೂ ಓದಿ:

ಕರ್ನಾಟಕದ ಜೈಲುಗಳಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಕೈದಿಗಳು: ಹೈಕೋರ್ಟ್​ಗೆ ಕಾನೂನು ಪ್ರಾಧಿಕಾರ ವರದಿ

Sedition Law: ಬ್ರಿಟಿಷರ ಕಾಲದ ದೇಶದ್ರೋಹ ಕಾಯ್ದೆ ಇನ್ನೂ ಅಗತ್ಯವಿದೆಯೇ?; ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್​ ಪ್ರಶ್ನೆ

(Karnataka High Court says Children have no choice at birth and repealing the Employment Restraint Circuit on the basis of sympathy for the children of the 2nd wife)

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ