Jobs: ಹುಟ್ಟಿನಲ್ಲಿ ಮಕ್ಕಳಿಗೆ ಆಯ್ಕೆ ಇರದು; 2ನೇ ಪತ್ನಿಯ ಮಕ್ಕಳಿಗೆ ಅನುಕಂಪದ ಆಧಾರದ ಮೇಲೆ ನೌಕರಿ ನಿರ್ಬಂಧ ಸುತ್ತೋಲೆ ರದ್ದುಗೊಳಿದ ಕೋರ್ಟ್

| Updated By: guruganesh bhat

Updated on: Jul 15, 2021 | 11:06 PM

ಹಿಂದೂ ವಿವಾಹ ಕಾಯ್ದೆಯಲ್ಲಿ ಈ ತಾರತಮ್ಯ ಮಾಡದೇ 1 ನೇ ಮತ್ತು 2 ನೇ ಪತ್ನಿಯ ಮಕ್ಕಳಿಗೆ ಸಮಾನ ಅವಕಾಶ ಕಲ್ಪಿಸಲಾಗಿದೆ. ಸಂಸತ್ತು ಮಕ್ಕಳಿಗೆ ಸಮಾನ ಸ್ಥಾನಮಾನ ನೀಡಿದೆ. ಹೀಗಾಗಿ ಕೆಪಿಟಿಸಿಎಲ್ ನ ನಿರ್ಬಂಧ ಕಾನೂನುಬಾಹಿರವೆಂದು ಪರಿಗಣಿಸಿ ಕರ್ನಾಟಕ ಹೈಕೋರ್ಟ್​ನ ವಿಭಾಗೀಯ ಪೀಠ ಈ ತೀರ್ಪು ನೀಡಿದೆ.

Jobs: ಹುಟ್ಟಿನಲ್ಲಿ ಮಕ್ಕಳಿಗೆ ಆಯ್ಕೆ ಇರದು; 2ನೇ ಪತ್ನಿಯ ಮಕ್ಕಳಿಗೆ ಅನುಕಂಪದ ಆಧಾರದ ಮೇಲೆ ನೌಕರಿ ನಿರ್ಬಂಧ ಸುತ್ತೋಲೆ ರದ್ದುಗೊಳಿದ ಕೋರ್ಟ್
ಕರ್ನಾಟಕ ಹೈಕೋರ್ಟ್​
Follow us on

ಬೆಂಗಳೂರು: 2ನೇ ಪತ್ನಿಯ ಮಕ್ಕಳಿಗೆ ಅನುಕಂಪದ ಆಧಾರದ ಮೇಲೆ ನೌಕರಿ ನೀಡುವುದನ್ನು ನಿರ್ಬಂಧಿಸಿದ್ದ ಕೆಪಿಟಿಸಿಎಲ್ ನ ಸುತ್ತೋಲೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ರದ್ದುಗೊಳಿಸಿದೆ. ತಂದೆ ತಾಯಿ ಇಲ್ಲದೇ ಮಕ್ಕಳು ಜನಿಸುವುದಿಲ್ಲ. ತಂದೆ ತಾಯಿ ಮಧ್ಯೆ ಅನೈತಿಕ ಸಂಬಂಧವಿರಬಹುದು. ಆದರೆ ಅನೈತಿಕ ಮಕ್ಕಳಿರುವುದಿಲ್ಲ. ಹುಟ್ಟಿನಲ್ಲಿ ಮಕ್ಕಳಿಗೆ ಆಯ್ಕೆ ಇರುವುದಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಹಿಂದೂ ವಿವಾಹ ಕಾಯ್ದೆಯಲ್ಲಿ ಈ ತಾರತಮ್ಯ ಮಾಡದೇ 1 ನೇ ಮತ್ತು 2 ನೇ ಪತ್ನಿಯ ಮಕ್ಕಳಿಗೆ ಸಮಾನ ಅವಕಾಶ ಕಲ್ಪಿಸಲಾಗಿದೆ. ಸಂಸತ್ತು ಮಕ್ಕಳಿಗೆ ಸಮಾನ ಸ್ಥಾನಮಾನ ನೀಡಿದೆ. ಹೀಗಾಗಿ ಕೆಪಿಟಿಸಿಎಲ್ ನ ನಿರ್ಬಂಧ ಕಾನೂನುಬಾಹಿರವೆಂದು ಪರಿಗಣಿಸಿ ಕರ್ನಾಟಕ ಹೈಕೋರ್ಟ್​ನ ವಿಭಾಗೀಯ ಪೀಠ ಈ ತೀರ್ಪು ನೀಡಿದೆ. ಕನಕಪುರದ ಕೆ.ಸಂತೋಷ್ ಎಂಬುವವರು ಕೆಪಿಟಿಸಿಎಲ್​ನ ಸುತ್ತೋಲೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಕೋರ್ಟ್ ಈ ತೀರ್ಪು ನೀಡಿದೆ. ಜತೆಗೆ 2 ತಿಂಗಳಲ್ಲಿ ಅನುಕಂಪದ ನೌಕರಿಗೆ ಪರಿಗಣಿಸಲು ನ್ಯಾ.ಬಿ.ವಿ.ನಾಗರತ್ನ, ಹಂಚಟೆ ಸಂಜೀವ್ ಕುಮಾರ್ ಅವರುಗಳಿದ್ದ ಹೈಕೋರ್ಟ್​ನ ವಿಭಾಗೀಯ ಪೀಠ ಸೂಚನೆ ನೀಡಿದೆ.

ಬೆಂಗಳೂರು ಮೆಟ್ರೋ ಯೋಜನೆಗಾಗಿ ಮರ ಕಡಿಯಲು ಷರತ್ತುಬದ್ಧ ಅನುಮತಿ ನೀಡಿದ ಹೈಕೋರ್ಟ್
ಮೆಟ್ರೋ ರೈಲು ಯೋಜನೆಗಾಗಿ ಮರಗಳನ್ನು ಕಡಿಯಲು ಕರ್ನಾಟಕ ಹೈಕೋರ್ಟ್​ ಗುರುವಾರ ಷರತ್ತುಬದ್ಧ ಅನುಮತಿ ನೀಡಿದೆ. ನಾಗವಾರ-ಗೊಟ್ಟಿಗೆರೆ ಮಾರ್ಗದಲ್ಲಿ ಮೆಟ್ರೋ ಯೋಜನೆಗಾಗಿ ಮರಗಳನ್ನು ಕಡಿಯಬೇಕಾಗಿದೆ. ಈ ಬಗ್ಗೆ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್​, ಪರಿಹಾರ ರೂಪದಲ್ಲಿ 4000 ಮರಗಳನ್ನು ಬೆಳೆಸಬೇಕು ಮತ್ತು ಸ್ಥಳಾಂತರಗೊಂಡ ಮರಗಳನ್ನು ಸರಿಯಾಗಿ ಪೋಷಿಸಬೇಕು ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿತು.

ಮರ ಅಧಿಕಾರಿ ಮತ್ತು ಡಿಸಿಎಫ್ ವರ್ತನೆ ಸರಿಯಿಲ್ಲ ಎಂದು ಅಭಿಪ್ರಾಯಪಟ್ಟ ಹೈಕೋರ್ಟ್​, ಮರ ಬೆಳೆಸಲು ಸೂಕ್ತ ಪರ್ಯಾಯ ಜಾಗವನ್ನು ಪರಿಶೀಲಿಸಬೇಕಿತ್ತು ಎಂದು ಹೇಳಿತು. ಕಡಿಯುವ ಮರಗಳಿಗೆ ಬದಲಿಯಾಗಿ ಬೆಳೆಸುವ ಮರಗಳು ಮತ್ತು ಮಣ್ಣಿನ ಪರೀಕ್ಷೆಯ ವಿವರವನ್ನು ಎರಡು ವಾರಗಳ ಒಳಗೆ ನೀಡಬೇಕು ಎಂದು ಹೇಳಿತು.

ಇದನ್ನೂ ಓದಿ:

ಕರ್ನಾಟಕದ ಜೈಲುಗಳಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಕೈದಿಗಳು: ಹೈಕೋರ್ಟ್​ಗೆ ಕಾನೂನು ಪ್ರಾಧಿಕಾರ ವರದಿ

Sedition Law: ಬ್ರಿಟಿಷರ ಕಾಲದ ದೇಶದ್ರೋಹ ಕಾಯ್ದೆ ಇನ್ನೂ ಅಗತ್ಯವಿದೆಯೇ?; ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್​ ಪ್ರಶ್ನೆ

(Karnataka High Court says Children have no choice at birth and repealing the Employment Restraint Circuit on the basis of sympathy for the children of the 2nd wife)