AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Apply Now: ಕರ್ನಾಟಕ ಹೈಕೋರ್ಟ್‌ನಲ್ಲಿ ಉದ್ಯೋಗವಕಾಶ; 20 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಹೈಕೋರ್ಟ್‌ನಲ್ಲಿ 20 ದ್ವಿತೀಯ ದರ್ಜೆ ಸಹಾಯಕ (SDA) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪದವೀಧರರು ಈ ಹುದ್ದೆಗಳಿಗೆ ಅರ್ಹರಾಗಿದ್ದು, ಆಯ್ಕೆಯಾದವರಿಗೆ 25,500 ರಿಂದ 81,100ರೂ. ವೇತನ ಸಿಗಲಿದೆ. ವಯೋಮಿತಿ 18 ರಿಂದ 40 ವರ್ಷ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯುತ್ತದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 19 ಕೊನೆಯ ದಿನಾಂಕವಾಗಿದೆ.

Apply Now: ಕರ್ನಾಟಕ ಹೈಕೋರ್ಟ್‌ನಲ್ಲಿ ಉದ್ಯೋಗವಕಾಶ; 20 ಹುದ್ದೆಗಳಿಗೆ ಅರ್ಜಿ ಆಹ್ವಾನ
ಕರ್ನಾಟಕ ಉಚ್ಛ ನ್ಯಾಯಾಲಯ ನೇಮಕಾತಿImage Credit source: stock.adobe
ಅಕ್ಷತಾ ವರ್ಕಾಡಿ
|

Updated on: Aug 23, 2026 | 3:49 PM

Share

ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ (Karnataka High Court) ಉದ್ಯೋಗ ಗಿಟ್ಟಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಅತ್ಯುತ್ತಮ ಅವಕಾಶ ಇಲ್ಲಿದೆ. ಖಾಲಿ ಇರುವ 20 ದ್ವಿತೀಯ ದರ್ಜೆ ಸಹಾಯಕ (SDA) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ರಾಜ್ಯದ ನ್ಯಾಯಾಂಗ ಕ್ಷೇತ್ರದಲ್ಲಿ ಸರ್ಕಾರಿ ನೌಕರಿ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.

ಹುದ್ದೆಯ ವಿವರಗಳು ಮತ್ತು ಶೈಕ್ಷಣಿಕ ಅರ್ಹತೆ:

ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 20 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 25,500 ರಿಂದ 81,100 ರೂ. ವರೆಗೆ ವೇತನ ಸಿಗಲಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸೈನ್ಸ್, ಆರ್ಟ್ಸ್, ಕಾಮರ್ಸ್, ಬಿಸಿನೆಸ್ ಮ್ಯಾನೇಜ್‌ಮೆಂಟ್, ಕಂಪ್ಯೂಟರ್ ಅಪ್ಲಿಕೇಶನ್ಸ್ ಅಥವಾ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ವಿಷಯಗಳಲ್ಲಿ ಕನಿಷ್ಠ ಶೇ. 55 ಅಂಕಗಳೊಂದಿಗೆ ಪದವಿ (Degree) ಪೂರ್ಣಗೊಳಿಸಿರಬೇಕು. ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಕನಿಷ್ಠ ಶೇ. 50 ಅಂಕಗಳನ್ನು ನಿಗದಿಪಡಿಸಲಾಗಿದೆ.

ವಯೋಮಿತಿ ಮತ್ತು ಅರ್ಜಿ ಶುಲ್ಕದ ವಿವರಗಳು:

ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ ವಯೋಮಿತಿ 40 ವರ್ಷಗಳಾಗಿದೆ. ಸರ್ಕಾರದ ನಿಯಮಾವಳಿಗಳ ಪ್ರಕಾರ 2A, 2B, 3A, 3B ಅಭ್ಯರ್ಥಿಗಳಿಗೆ 3 ವರ್ಷ ಮತ್ತು SC, ST, Cat-I ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ. ಇನ್ನು ಅರ್ಜಿ ಶುಲ್ಕವಾಗಿ ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ₹350 ಹಾಗೂ SC, ST, Cat-I ಮತ್ತು ವಿಶೇಷ ಚೇತನ ಅಭ್ಯರ್ಥಿಗಳಿಗೆ 200ರೂ. ನಿಗದಿಪಡಿಸಲಾಗಿದ್ದು, ಇದನ್ನು ಆನ್‌ಲೈನ್ ಮೂಲಕವೇ ಪಾವತಿಸಬೇಕಾಗುತ್ತದೆ.

ಇದನ್ನೂ ಓದಿ: 15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ; ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ

ಆಯ್ಕೆ ಪ್ರಕ್ರಿಯೆ ಮತ್ತು ಪರೀಕ್ಷಾ ವಿಧಾನ:

ಅಭ್ಯರ್ಥಿಗಳ ಆಯ್ಕೆಯನ್ನು ಒಟ್ಟು 100 ಅಂಕಗಳ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಆಧಾರದ ಮೇಲೆ ನಡೆಸಲಾಗುತ್ತದೆ. ಇದರಲ್ಲಿ ಇಂಗ್ಲಿಷ್ ಪ್ರಬಂಧಕ್ಕೆ 30 ಅಂಕಗಳು (ಕನಿಷ್ಠ 20 ಅಂಕಗಳು ಪಡೆಯಬೇಕು), ಕನ್ನಡದಿಂದ ಇಂಗ್ಲಿಷ್ ಭಾಷಾಂತರಕ್ಕೆ 30 ಅಂಕಗಳು (ಕನಿಷ್ಠ 20 ಅಂಕಗಳು ಪಡೆಯಬೇಕು), ಸಾಮಾನ್ಯ ಜ್ಞಾನ ಪರೀಕ್ಷೆಗೆ 20 ಅಂಕಗಳು (ಕನಿಷ್ಠ 10 ಅಂಕಗಳು ಪಡೆಯಬೇಕು) ಮತ್ತು ನೇರ ಸಂದರ್ಶನಕ್ಕೆ 20 ಅಂಕಗಳನ್ನು (ಕನಿಷ್ಠ 10 ಅಂಕಗಳು ಪಡೆಯಬೇಕು) ಕಾಯ್ದಿರಿಸಲಾಗಿದೆ. ಉತ್ತೀರ್ಣರಾಗಲು ಒಟ್ಟಾರೆಯಾಗಿ ಕನಿಷ್ಠ 60 ಅಂಕಗಳನ್ನು ಗಳಿಸುವುದು ಕಡ್ಡಾಯವಾಗಿದೆ.

ಅರ್ಜಿ ಸಲ್ಲಿಸುವ ವಿಧಾನ ಮತ್ತು ಕೊನೆಯ ದಿನಾಂಕ:

ಅರ್ಹ ಅಭ್ಯರ್ಥಿಗಳು ಕರ್ನಾಟಕ ಉಚ್ಛ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಂಡು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವಾಗ ಸರಿಯಾದ ಇಮೇಲ್ ಐಡಿ, ಮೊಬೈಲ್ ಸಂಖ್ಯೆ, ಶೈಕ್ಷಣಿಕ ದಾಖಲೆಗಳು, ಇತ್ತೀಚಿನ ಭಾವಚಿತ್ರ ಹಾಗೂ ಸಹಿಯನ್ನು ಅಪ್‌ಲೋಡ್ ಮಾಡಿ ಶುಲ್ಕ ಪಾವತಿಸಬೇಕಾಗುತ್ತದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 19 ಕೊನೆಯ ದಿನಾಂಕವಾಗಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ