Copyright Violation: ಕಾಂಗ್ರೆಸ್ ಟ್ವಿಟರ್ ಹ್ಯಾಂಡಲ್ ನಿರ್ಬಂಧ ತೆರವುಗೊಳಿಸಿ ಹೈಕೋರ್ಟ್ ಆದೇಶ
ಭಾರತ್ ಜೋಡೋದ ಟ್ವಿಟರ್ ಹ್ಯಾಂಡಲ್ ನಿರ್ಬಂಧ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಕಾಂಗ್ರೆಸ್ಗೆ ಬಿಗ್ ರಿಲೀಸ್ ಸಿಕ್ಕಿಕ್ಕಿದೆ.
ಬೆಂಗಳೂರು: ಕಾಂಗ್ರೆಸ್ ಟ್ವಿಟರ್ ಹ್ಯಾಂಡಲ್ (Congress Twitter handle) ನಿರ್ಬಂಧ ತೆರವುಗೊಳಿಸಿ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ಆದೇಶ ಆದೇಶ ಹೊರಡಿಸಿದೆ. ಕೆಜಿಎಫ್-2 (KGF Chapter 2) ಹಾಡು ತೆಗೆಯುತ್ತೇವೆಂದು ಕಾಂಗ್ರೆಸ್ ಮುಚ್ಚಳಿಕೆ ಪತ್ರ ಬರೆದುಕೊಟ್ಟಿದ್ದರಿಂದ ಕೋರ್ಟ್, ಇಂದು(ನ.08) ಕಾಂಗ್ರೆಸ್ ಟ್ವಿಟರ್ ಹ್ಯಾಂಡಲ್ ನಿರ್ಬಂಧ ತೆರವುಗೊಳಿಸಿ ಆದೇಶಿಸಿದೆ.
ಜಿಎಫ್ 2 (KGF Chapter 2) ಹಾಡಿನ ದುರ್ಬಳಕೆ ಆರೋಪ ಮೇಲೆ ಕಾಂಗ್ರೆಸ್ ನ ಭಾರತ್ ಜೋಡೋ (Bharat Jodo Yatra) ಟ್ವಿಟ್ಟರ್ (Twitter) ಖಾತೆಗೆ ನಿರ್ಬಂಧಿಸಿ ಬೆಂಗಳೂರಿನ ವಾಣಿಜ್ಯ ನ್ಯಾಯಾಲಯ ಸೋಮವಾರ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಕಾಂಗ್ರೆಸ್ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಕಾಂಗ್ರೆಸ್ ಟ್ವಿಟರ್ ಹ್ಯಾಂಡಲ್ ನಿರ್ಬಂಧ ತೆರವುಗೊಳಿಸಿದೆ.
ಕೆಜಿಎಫ್ 2 ಸಾಂಗ್ ಬಳಕೆ: ಟ್ವಿಟರ್ ಖಾತೆ ನಿರ್ಬಂಧ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋದ ಕಾಂಗ್ರೆಸ್
ನಾಳೆ(ನವೆಂಬರ್ 8) ಮಧ್ಯಾಹ್ನದೊಳಗೆ ಕೆಜಿಎಫ್-2 ಹಾಡು ತೆಗೆಯುತ್ತೇವೆ. ಕಾಂಗ್ರೆಸ್ನ ಎಲ್ಲಾ ಸಾಮಾಜಿಕ ಜಾಲತಾಣದಲ್ಲಿ ಹಾಡು ತೆಗೆಯುತ್ತೇವೆ. ಸಾಮಾಜಿಕ ಜಾಲತಾಣದ ಸ್ಕ್ರೀನ್ ಶಾಟ್ ನೀಡುತ್ತೇವೆ. ಅರ್ಜಿದಾರ ಎಂಆರ್ಟಿ ಮ್ಯೂಸಿಕ್ ಸಂಸ್ಥೆಗೆ ದಾಖಲೆ ಒದಗಿಸುತ್ತೇವೆ ಎಂದು ಕಾಂಗ್ರೆಸ್ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಕೋರ್ಟ್ಗೆ ಸ್ಪಷ್ಟಪಡಿಸಿದರು. ಈ ಭರವಸೆಯನ್ನು ಪರಿಗಣಿಸಿದ ಕೋರ್ಟ್, ಕಾಂಗ್ರೆಸ್, ಭಾರತ ಜೋಡೋ ಯಾತ್ರೆ ಟ್ವಿಟರ್ ಖಾತೆ ನಿರ್ಬಂಧ ಆದೇಶ ತೆರವುಗೊಳಿಸಿದೆ.
ಪ್ರಕರಣ ಹಿನ್ನೆಲೆ
ಇತ್ತೀಚೆಗೆ ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆಗಾಗಿ ಕರ್ನಾಟಕಕ್ಕೆ ಬಂದಿದ್ದರು. ಅವರು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕಾಲ್ನಡಿಗೆಯಲ್ಲಿ ಸಾಗಿದ್ದರು. ಈ ವೇಳೆ ರಾಹುಲ್ ಗಾಂಧಿ ಅವರ ಕಾಲ್ನಡಿಗೆಯ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಾಕಲಾಗಿತ್ತು. ಈ ವಿಡಿಯೋಗೆ ‘ಕೆಜಿಎಫ್ 2’ ಚಿತ್ರದ ಹಿಂದಿ ಗೀತೆ ‘ಸುಲ್ತಾನ್..’ ಹಾಡನ್ನು ಬಳಕೆ ಮಾಡಲಾಗಿತ್ತು. ಈ ಕಾರಣಕ್ಕೆ ರಾಹುಲ್ ಗಾಂಧಿ ವಿರುದ್ಧ ಈ ಹಾಡಿನ ಹಿಂದಿ ಹಕ್ಕನ್ನು ಹೊಂದಿರುವ ಎಂಆರ್ಟಿ ಮ್ಯೂಸಿಕ್ನವರು ಫೋರ್ಜರಿ ಪ್ರಕರಣ ದಾಖಲು ಮಾಡಿದ್ದರು. ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹೀಗಾಗಿ ರಾಹುಲ್ ಗಾಂಧಿ ಮಾತ್ರವಲ್ಲದೆ, ಜೈರಾಮ್ ರಮೇಶ್, ಸುಪ್ರಿಯಾ ವಿರುದ್ಧವೂ ಎಫ್ಐಆರ್ ದಾಖಲಾಗಿತ್ತು.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 6:37 pm, Tue, 8 November 22