Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಮಾರ್ಗಸೂಚಿ ಉಲ್ಲಂಘಿಸಿ ನಂಜನಗೂಡಿನಲ್ಲಿ ಪೂಜೆ: ವಿಜಯೇಂದ್ರ ನಡೆಯ ಬಗ್ಗೆ ಹೈಕೋರ್ಟ್​ ಸಿಟ್ಟು

ಮಾರ್ಗಸೂಚಿ ಉಲ್ಲಂಘಿಸಿ ಬೆಳಗಾವಿಯಲ್ಲಿ ಬಿಜೆಪಿ ಸಮಾವೇಶ ನಡೆಸಿದ ಪ್ರಕರಣದಲ್ಲಿ ಪೊಲೀಸ್ ಆಯುಕ್ತರು ನೀಡಿದ ಪ್ರಮಾಣಪತ್ರದ ಕುರಿತು ಸಹ ಹೈಕೋರ್ಟ್ ಗರಂ ಆಯಿತು. ಕೇವಲ 6 ಜನರಿಂದ ಮಾರ್ಗಸೂಚಿ ಉಲ್ಲಂಘನೆಯಾಗಿದೆಯೇ? ಎಂದು ಪ್ರಶ್ನಿಸಿದ ಕೋರ್ಟ್, ಪೊಲೀಸ್ ಆಯುಕ್ತರ ವರದಿ ಹಾಸ್ಯಾಸ್ಪದವಾಗಿದೆ ಎಂದು ಪ್ರತಿಕ್ರಿಯಿಸಿತು.

ಕೊವಿಡ್ ಮಾರ್ಗಸೂಚಿ ಉಲ್ಲಂಘಿಸಿ ನಂಜನಗೂಡಿನಲ್ಲಿ ಪೂಜೆ: ವಿಜಯೇಂದ್ರ ನಡೆಯ ಬಗ್ಗೆ ಹೈಕೋರ್ಟ್​ ಸಿಟ್ಟು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: guruganesh bhat

Updated on:Jun 18, 2021 | 3:43 PM

ಬೆಂಗಳೂರು: ಕೊವಿಡ್ ಮಾರ್ಗಸೂಚಿ ಉಲ್ಲಂಘಿಸಿ ಸಿಎಂ ಯಡಿಯೂರಪ್ಪ ಅವರ ಮಗ ಬಿ.ವೈ.ವಿಜಯೇಂದ್ರ ನಂಜನಗೂಡಿನಲ್ಲಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್, ಸಾರ್ವಜನಿಕರಿಗೆ ದೇವಾಲಯ ಪ್ರವೇಶಕ್ಕೆ ಅವಕಾಶ ಇಲ್ಲವೆಂದ ಮೇಲೆ ಇತರರಿಗೂ ಇರಬಾರದು. ನಿಯಮ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಮುಜರಾಯಿ ಇಲಾಖೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಖಡಕ್ ಎಚ್ಚರಿಕೆ ನೀಡಿದೆ.

ವಿಜಯೇಂದ್ರ ಉದ್ದೇಶಪೂರ್ವಕವಾಗಿ ದೇವಾಲಯದ ಒಳಗೆ ಭೇಟಿ ನೀಡಿರಲಿಲ್ಲ. ಪೂಜೆ ವೇಳೆ ಅರ್ಚಕರು ಕರೆದರೆಂದು ಹೋಗಿದ್ದಾರೆ. ಬಿ.ವೈ.ವಿಜಯೇಂದ್ರ ಕೇವಲ ಐದರಿಂದ ಹತ್ತು ನಿಮಿಷವಷ್ಟೇ ಇದ್ದಿದ್ದರು ಎಂದು ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್​​ಗೆ ಎಜಿ ಪ್ರಭುಲಿಂಗ್ ನಾವದಗಿ ಸ್ಪಷ್ಟನೆ ನೀಡಲು ಪ್ರಯತ್ನಿಸಿದರು. ನಿಷೇಧವಿದ್ದರೂ ಜನರು ದೇವಾಲಯಕ್ಕೆ ಹೋಗಬಹುದೇ? ಹಾಗಿದ್ದರೆ ಜನಸಾಮಾನ್ಯರಿಗೂ ಆ ಅವಕಾಶ ನೀಡಬೇಕು. ನಿಯಮ ಉಲ್ಲಂಘಿಸಿ ದೇವಾಲಯದಲ್ಲಿ ಪೂಜೆ ಸಲ್ಲಿಸಲು ಅರ್ಚಕರಷ್ಟೇ ಹೊಣೆಯೇ, ಹೋದವರದ್ದಲ್ಲವೇ? ಎಂದು ಸಿಜೆ. ಎ.ಎಸ್.ಒಕಾ ನೇತೃತ್ವದ ಪೀಠ ಸರ್ಕಾರವನ್ನು ಪ್ರಶ್ನಿಸಿತು. ರಾಜಕಾರಣಿಗಳಿಗೆ ಇತರರಗಿಂತ ಹೆಚ್ಚು ಹೊಣೆಗಾರಿಕೆಯಿರುತ್ತದೆ. ಬಿ.ವೈ. ವಿಜಯೇಂದ್ರರಿಂದಲೂ ಕೋರ್ಟ್ ವಿವರಣೆ ಪಡೆಯಬಹುದು ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಅಡ್ವೊಕೇಟ್ ಜನರಲ್ ಪ್ರತಿಕ್ರಿಯೆ ನೀಡಿದರು. ಇದೇ ವೇಳೆ ಪ್ರತಿಕ್ರಿಯಿಸಿದ ಕೋರ್ಟ್, ಈ ಪ್ರಕರಣ ಸಂಬಂಧಪಟ್ಟ ಎಲ್ಲರ ಕಣ್ತೆರೆಸಬೇಕು. ಅಧಿಕಾರಿಗಳು, ರಾಜಕಾರಣಿಗಳಿಗೆ ಅರಿವಾಗಬೇಕು ಎಂದು ನಿರ್ದೇಶನ ನೀಡಿತು.

ಕೊರೊನಾ ಹಾಗೂ ಲಾಕ್​ಡೌನ್ ನಡುವೆಯೂ ನಂಜನಗೂಡು ದೇಗುಲದಲ್ಲಿ ಬಿ.ವೈ. ವಿಜಯೇಂದ್ರ ಪೂಜೆ ಮಾಡಿಸಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುತ್ರ ವಿಜಯೇಂದ್ರ ವಿರುದ್ಧ ಮೈಸೂರು ಜಿಲ್ಲಾಧಿಕಾರಿಗೆ ಈ ಮುನ್ನ ದೂರು ನೀಡಲಾಗಿತ್ತು. ಜಿಲ್ಲಾಧಿಕಾರಿಗಳಿಗೆ ಮೈಸೂರು ಜಿಲ್ಲಾ ಕಾಂಗ್ರೆಸ್​ ಘಟಕ ಈ ಬಗ್ಗೆ ದೂರು ನೀಡಿದೆ. ವಿಜಯೇಂದ್ರ ವಿರುದ್ಧ ಎಫ್​ಐಆರ್ ದಾಖಲಿಸುವಂತೆ ದೂರಿನಲ್ಲಿ ತಿಳಿಸಲಾಗಿತ್ತು.

ಬಿಜೆಪಿ ಸಮಾವೇಶಕ್ಕೂ ಹೈಕೋರ್ಟ್ ಗರಂ ಮಾರ್ಗಸೂಚಿ ಉಲ್ಲಂಘಿಸಿ ಬೆಳಗಾವಿಯಲ್ಲಿ ಬಿಜೆಪಿ ಸಮಾವೇಶ ನಡೆಸಿದ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್​ನ ಸಿಜೆ ಎ.ಎಸ್.ಒಕಾ ನೇತೃತ್ವದ ಪೀಠ, ಸಾವಿರಾರು ಜನರು ಸಮಾವೇಶದಲ್ಲಿ ಭಾಗಿಯಾಗಿದ್ದಾರೆ. ಮಾಸ್ಕ್ ಧರಿಸದವರ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿತು.

ಮಾರ್ಗಸೂಚಿ ಉಲ್ಲಂಘಿಸಿ ಬೆಳಗಾವಿಯಲ್ಲಿ ಬಿಜೆಪಿ ಸಮಾವೇಶ ನಡೆಸಿದ ಪ್ರಕರಣದಲ್ಲಿ ಪೊಲೀಸ್ ಆಯುಕ್ತರು ನೀಡಿದ ಪ್ರಮಾಣಪತ್ರದ ಕುರಿತು ಸಹ ಹೈಕೋರ್ಟ್ ಗರಂ ಆಯಿತು. ಕೇವಲ 6 ಜನರಿಂದ ಮಾರ್ಗಸೂಚಿ ಉಲ್ಲಂಘನೆಯಾಗಿದೆಯೇ? ಎಂದು ಪ್ರಶ್ನಿಸಿದ ಕೋರ್ಟ್, ಪೊಲೀಸ್ ಆಯುಕ್ತರ ವರದಿ ಹಾಸ್ಯಾಸ್ಪದವಾಗಿದೆ ಎಂದು ಪ್ರತಿಕ್ರಿಯಿಸಿತು.

ಇದೇ ವೇಳೆ ಈ ಘಟನೆಗೆ ಸಂಬಂಧಿಸಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಸರ್ಕಾರದ ಪರ ವಕೀಲರ ಸ್ಪಷ್ಟಪಡಿಸಲು ಯತ್ನಿಸಿದರೂ, ತನಿಖಾ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲು ಪೊಲೀಸರಿಗೆ ಹೈಕೋರ್ಟ್ ಸೂಚನೆ ನೀಡಿತು.

ಇದನ್ನೂ ಓದಿ: Lakshadweep Sedition Case: ಆಯೆಷಾ ಸುಲ್ತಾನಾಗೆ ಮಧ್ಯಂತರ ಜಾಮೀನು ನೀಡಿದ ಕೇರಳ ಹೈಕೋರ್ಟ್ 

ಸಿಎಂ ಯಡಿಯೂರಪ್ಪಗೆ ಅಖಿಲ ಭಾರತ ವೀರಶೈವ ಮಹಾಸಭಾದ ಬೆಂಬಲವಿದೆ: ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ

(Karnataka High Court slams BY Vijayendra on Nanjangud temple special pooja case and BGP on Belagavi function case)

Published On - 3:37 pm, Fri, 18 June 21

ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ