ಬೆಂಗಳೂರು: ಮಾನನಷ್ಟ ಪ್ರಕರಣದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ಗೆ (Dr K Sudhakar) ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಮನ್ಸ್ಗೆ ಹೈಕೋರ್ಟ್ ತಡೆ ನೀಡಿದೆ. ಮಾನಹಾನಿಕರ ಹೇಳಿಕೆ ನೀಡಿದ್ದಾರೆಂದು ಖಾಸಗಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸುಧಾಕರ್ ಅವರಿಗೆ ಸಮನ್ಸ್ ನೀಡಿತ್ತು. ಇದನ್ನು ಪ್ರಶ್ನಿಸಿ ಸುಧಾಕರ್ ಹೈಕೋರ್ಟ್ (Karnataka High Court) ಮೊರೆ ಹೋಗಿದ್ದರು. ಇದೀಗ ಹೈಕೋರ್ಟ್ ಸುಧಾಕರ್ ಅವರ ಮನವಿಯನ್ನು ಪುರಸ್ಕರಿಸಿದ್ದು, ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಮನ್ಸ್ಗೆ ಹೈಕೋರ್ಟ್ ತಡೆ ನೀಡಿ ಆದೇಶ ಹೊರಡಿಸಿದೆ.
ತಮ್ಮ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ್ದಾರೆಂದು ಚಿಕ್ಕಬಳ್ಳಾಪುರದ ಆಂಜನೇಯ ರೆಡ್ಡಿ ಎನ್ನುವರು ಸಚಿವ ಸುಧಾಕರ್ ವಿರುದ್ಧ ಮಾನನಷ್ಟ ದೂರು ದಾಖಲಿಸಿದ್ದರು. ಇನ್ನು ಈ ಪ್ರಕರಣ ಸಂಬಂಧ ಚಿವ ಡಾ.ಕೆ.ಸುಧಾಕರ್ ಪರ ಹಿರಿಯ ವಕೀಲ ಉದಯ್ ಹೊಳ್ಳ ಅರ್ಜಿ ಸಲ್ಲಿಸಿ ಆಂಜನೇಯ ರೆಡ್ಡಿ ಉಲ್ಲೇಖಿಸಿ ಹೇಳಿಕೆ ನೀಡಿಲ್ಲವ. ಹಾಗಾಗಿ ವಿಶೇಷ ನ್ಯಾಯಾಲದ ಸಮನ್ಸ್ಗೆ ತಡೆ ನಿಡುವಂತೆ ಮನವಿ ಮಾಡಿದರು. ಇದನ್ನು ಪರಿಗಣಿಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರು ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದರು. ಇದರಿಂದ ಸಚಿವ ಸುಧಾಕರ್ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.