Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರೂರ ಮತ್ತು ಅಪಾಯಕಾರಿ ನಾಯಿ ತಳಿಗಳ ಮೇಲಿನ ನಿಷೇಧಕ್ಕೆ ಹೈಕೋರ್ಟ್​ ತಡೆ

ಕ್ರೂರ ಹಾಗೂ ಅಪಾಯಕಾರಿ ಶ್ವಾನಗಳ ತಳಿಗಳ ಸಂತಾನೋತ್ಪತ್ತಿ ನಿಷೇಧಿಸುವ ಸಲುವಾಗಿ ಅವುಗಳ ಮಾಲೀಕರು ಸಂತಾನಹರಣಕ್ಕಾಗಿ ಅಗತ್ಯವಿರವ ಕ್ರ್ರಿಮಿನಾಶಕಗಳನ್ನು ಬಳಕೆ ಮಾಡಬೇಕು ಎಂದು ಕೇಂದ್ರ ಸರ್ಕಾರ 2024ರ ಮಾರ್ಚ್ 12ರಂದು ಅಧಿಸೂಚನೆ ಹೊರಡಿಸಿತ್ತು. ಇದಕ್ಕೆ ಕರ್ನಾಟಕ ಹೈಕೋರ್ಟ್​ ತಡೆ ನೀಡಿದೆ.

ಕ್ರೂರ ಮತ್ತು ಅಪಾಯಕಾರಿ ನಾಯಿ ತಳಿಗಳ ಮೇಲಿನ ನಿಷೇಧಕ್ಕೆ ಹೈಕೋರ್ಟ್​ ತಡೆ
ನಾಯಿ
Follow us
ವಿವೇಕ ಬಿರಾದಾರ
|

Updated on: Mar 20, 2024 | 11:15 AM

ಬೆಂಗಳೂರು, ಮಾರ್ಚ್​​ 20: ಮನುಷ್ಯನ ಜೀವಕ್ಕೆ ಅಪಾಯ ಎಂದು ಪರಿಗಣಿಸಲಾದ 23 ಅಪಾಯಕಾರಿ ನಾಯಿ (Dog) ತಳಿಗಳ ಆಮದು, ಮಾರಾಟ ಮತ್ತು ಸಂತಾನೋತ್ಪತ್ತಿಗೆ ನಿಷೇಧ ಹೇರಿದ್ದ ಕೇಂದ್ರ ಸರ್ಕಾರದ (Union Government) ಅಧಿಸೂಚನೆಗೆ ಕರ್ನಾಟಕ ಹೈಕೋರ್ಟ್ ​(Karnataka High Court) ಕರ್ನಾಟಕಕ್ಕೆ ಸೀಮಿತವಾಗಿ ಮಂಗಳವಾರ ಮಧ್ಯಂತರ ತಡೆ ನೀಡಿದೆ.

ಬೆಂಗಳೂರಿನ ನಿವಾಸಿಗಳಾದ ಕಿಂಗ್ ಸೊಲೊಮನ್ ಡೇವಿಡ್ ಮತ್ತು ಮರ್ಡೋನಾ ಜೋನ್ಸ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಈ ಮಧ್ಯಂತರ ಆದೇಶ ನೀಡಿದ್ದಾರೆ.

ಕೇಂದ್ರ ಸರ್ಕಾರದ ಪರ ವಕೀಲರ ವಾದ ಆಲಿಸಿದ ಪೀಠ, ಅಪಯಕಾರಿ ಶ್ವಾನಗಳ ತಳಿ ನಿಷೇಧಿಸುವ ಕುರಿತಂತೆ ಸಂಬಂಧಪಟ್ಟ ಎಲ್ಲ ಪಾಲುದಾರರೊಂದಿಗೆ ಚರ್ಚಿಸಬೇಕೆ ಎಂದು ದೆಹಲಿ ಹೈಕೋರ್ಟ್​ ಹೇಳಿದೆ. ಅವುಗಳಲ್ಲಿ ಕೆನ್ನಲ್​ ಕ್ಲಬ್​ ಆಪ್​ ಇಂಡಿಯಾ ಕೂಡ ಒಂದಾಗಿದ್ದು, ಅದರ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿಲ್ಲ. ಹೀಗಾಗಿ ಕೇಂದ್ರ ಸರ್ಕಾರ ಸುತ್ತೋಲೆ ಹೊರಡಿಸುವ ಸಂಬಂಧ ನಿರ್ಧಾರ ತೆಗೆದುಕೊಳ್ಳುವುದಕ್ಕೆ ಪರಿಗಣಿಸಿರುವ ಎಲ್ಲ ಅಂಶಗಳಿರುವ ದಾಖಲೆಗಳನ್ನು ಸಲ್ಲಿಸಬೇಕು ಎಂದು ಕರ್ನಾಟಕ ಹೈಕೋರ್ಟ್​ ಕೇಂದ್ರ ಸರ್ಕಾರದ ಪರ ವಕೀಲರಿಗೆ ಸೂಚಿಸಿದೆ.

ಇದನ್ನೂ ಓದಿ: ಪಿಟ್‌ಬುಲ್ ಟೆರಿಯರ್ ಸೇರಿದಂತೆ 23 ‘ಅಪಾಯಕಾರಿ’ ಶ್ವಾನ ತಳಿ ನಿಷೇಧಕ್ಕೆ ಕೇಂದ್ರ ಪ್ರಸ್ತಾಪ

ಮನುಷ್ಯನ ಜೀವಕ್ಕೆ ಅಪಾಯಕಾರಿ ಮತ್ತು ಉಗ್ರವಾಗಿ ವರ್ತಿಸುವ ತಳಿಯ ಶ್ವಾನಗಳನ್ನು ಗುರುತಿಸುವುದಕ್ಕೆ ಆಳವಾದ ಅಧ್ಯಯನದ ಅಗತ್ಯವಿದೆ. ಆದರೆ ಸುತ್ತೋಲೆಯಲ್ಲಿ ಉಲ್ಲೇಖಿಸದ ಹಲವು ತಳಿಗಳು ಕ್ರೂರ ವರ್ಗಕ್ಕೆ ಸೇರಲಿವೆ ಎಂದು ಅರ್ಜಿದಾರರ ಪರ ವಕೀಲರು ಪೀಠಕ್ಕೆ ತಿಳಿಸಿದರು.

ಕ್ರೂರ ಹಾಗೂ ಅಪಾಯಕಾರಿ ಶ್ವಾನಗಳ ತಳಿಗಳ ಸಂತಾನೋತ್ಪತ್ತಿ ನಿಷೇಧಿಸುವ ಸಲುವಾಗಿ ಅವುಗಳ ಮಾಲೀಕರು ಸಂತಾನಹರಣಕ್ಕಾಗಿ ಅಗತ್ಯವಿರವ ಕ್ರ್ರಿಮಿನಾಶಕಗಳನ್ನು ಬಳಕೆ ಮಾಡಬೇಕು ಎಂದು ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆ 2024ರ ಮಾರ್ಚ್ 12ರಂದು ಹೊರಡಿಸಿದ್ದ ಸುತ್ತೋಲೆಯಲ್ಲಿ ತಿಳಿಸಲಾಗಿತ್ತು. ಇದನ್ನು ಅರ್ಜಿದಾರರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ