ಸಿಎಂ ಸಿದ್ದರಾಮಯ್ಯ ವಿರುದ್ಧದ ಮಾನನಷ್ಟ ಮೊಕದ್ದಮೆ ಕೇಸ್​ಗೆ ತಡೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಹೂಡಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಈ ಪ್ರಕರಣ 2023ರ ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಚಾರದ ಸಮಯದಲ್ಲಿ ನೀಡಲಾದ ಜಾಹೀರಾತಿಗೆ ಸಂಬಂಧಿಸಿದೆ. ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪಿಸಿ ಕಾಂಗ್ರೆಸ್ ಜಾಹೀರಾತು ನೀಡಿತ್ತು.

ಸಿಎಂ ಸಿದ್ದರಾಮಯ್ಯ ವಿರುದ್ಧದ ಮಾನನಷ್ಟ ಮೊಕದ್ದಮೆ ಕೇಸ್​ಗೆ ತಡೆ
ಸಿಎಂ ಸಿದ್ದರಾಮಯ್ಯ
Edited By:

Updated on: Jul 11, 2025 | 2:57 PM

ಬೆಂಗಳೂರು, ಜುಲೈ 11: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಬಿಜೆಪಿ (BJP) ಹೂಡಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಕರ್ನಾಟಕ ಹೈಕೋರ್ಟ್ (High Court)​ ಮಧ್ಯಂತರ ತಡೆ ನೀಡಿದೆ. ಈ ಪ್ರಕರಣ 2023ರ ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಚಾರದ ಸಮಯದಲ್ಲಿ ನೀಡಲಾದ ಜಾಹೀರಾತಿಗೆ ಸಂಬಂಧಿಸಿದೆ. ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಸರ್ಕಾರ ವಿವಿಧ ಹುದ್ದೆಗಳಿಗೆ ದರ ನಿಗದಿಪಡಿಸಿದೆ ಎಂದು ಆರೋಪಿಸಿ ಕಾಂಗ್ರೆಸ್​ ರಾಜ್ಯದ ಪ್ರಮುಖ ದಿನ ಪತ್ರಿಕೆಗಳ ಮುಖಪುಟದಲ್ಲಿ ‘ಭ್ರಷ್ಟಾಚಾರ ದರ ಪಟ್ಟಿ’ ಎಂಬ ಹೆಸರಿನಲ್ಲಿ ಜಾಹಿರಾತು ನೀಡಿತ್ತು.

ಪಕ್ಷದ ಗೌರವಕ್ಕೆ ದಕ್ಕೆ ತರುವ ರೀತಿಯಲ್ಲಿ ದಿನಪತ್ರಿಕೆಗಳಲ್ಲಿ ಜಾಹೀರಾತು ನೀಡಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಲಾಗಿತ್ತು. ಈ ಪ್ರಕರಣ ರದ್ದತಿ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಸ್. ಆರ್. ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.

ಇದನ್ನೂ ಓದಿ: ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಜಾಹೀರಾತು: ಸಿಎಂ, ಡಿಸಿಎಂ, ರಾಹುಲ್ ಗಾಂಧಿಗೆ ಕೋರ್ಟ್ ಸಮನ್ಸ್‌

ಇದನ್ನೂ ಓದಿ
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಪತ್ನಿಗೆ ನೋಟಿಸ್​ ಜಾರಿಗೆ ಹೈಕೋರ್ಟ್​ ಆದೇಶ
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ರಾಹುಲ್ ಗಾಂಧಿ ಜತೆ ಮಾತುಕತೆಗೂ ಮುನ್ನ ತಾವೇ 5 ವರ್ಷ ಸಿಎಂ ಎಂದ ಸಿದ್ದರಾಮಯ್ಯ

ಏನಿದು ಪ್ರಕರಣ?

ಕಳೆದ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್​, 2023ರ ಮೇ 5 ರಂದು ಎಲ್ಲ ಪ್ರಮುಖ ದಿನಪತ್ರಿಕೆಗಳ ಮುಖಪುಟದಲ್ಲಿ ಭ್ರಷ್ಟಾಚಾರ ದರ ಪಟ್ಟಿ ಎಂಬ ಹೆಸರಿನ ಅಡಿ ವಿವಿಧ ಹುದ್ದೆಗಳಿಗೆ ಬಿಜೆಪಿ ಲಂಚ ನಿಗದಿಪಡಿಸಿದೆ ಎಂದು ಆರೋಪಿಸಿ ಜಾಹೀರಾತು ನೀಡಿತ್ತು. ಪತ್ರಿಕೆಗಳಿಗೆ ನೀಡಿದ ಜಾಹೀರಾತಿನ ಕೊನೆಯಲ್ಲಿ 40 ಪರ್ಸೆಂಟ್​ ಕಮಿಷನ್​ ಸರ್ಕಾರವು 1.5 ಲಕ್ಷ ಕೋಟಿ ರೂ. ಅನ್ನು ಕಳೆದ ನಾಲ್ಕು ವರ್ಷಗಳಲ್ಲಿ ಲೂಟಿ ಮಾಡಿದೆ ಎಂದು ಕಾಂಗ್ರೆಸ್​ ಆರೋಪಿಸಿತ್ತು.

ಜಾಹೀರಾತು ವಿರುದ್ಧ ದೂರು ನೀಡಿದ್ದ ಬಿಜೆಪಿ

ಕೆಪಿಸಿಸಿ ಹಾಗೂ ಕಾಂಗ್ರೆಸ್‌ ನಾಯಕರು ಬಿಜೆಪಿ ವಿರುದ್ಧ ಸುಳ್ಳು ಆರೋಪಗಳ ಜಾಹೀರಾತು ನೀಡಿ ಪಕ್ಷದ ಗೌರವಕ್ಕೆ ಧಕ್ಕೆ ತಂದಿದ್ದಾರೆ. ಇದರಿಂದ ಪಕ್ಷಕ್ಕೆ ಹಾನಿಯಾಗಿದೆ. ಈ ನಿಟ್ಟಿನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಕೋರಿ ನ್ಯಾಯಾಲಯದಲ್ಲಿ ರಾಜ್ಯ ಬಿಜೆಪಿ ಕಾರ್ಯದರ್ಶಿ ಎಸ್‌. ಶಿವಪ್ರಸಾದ್‌ ಖಾಸಗಿ ದೂರು ಸಲ್ಲಿಸಿದ್ದರು. ದೂರಿನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌, ರಾಹುಲ್‌ ಗಾಂಧಿ, ಕೆಪಿಸಿಸಿ ಮತ್ತಿತರರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:54 pm, Fri, 11 July 25