ಯತ್ನಾಳ್ ವಿರುದ್ಧದ ಕೇಸ್​ಗೆ ಹೈಕೋರ್ಟ್ ತಡೆ,ಪ್ರಕರಣ ರದ್ದು ಕೋರಿ ರಮೇಶ್ ಜಾರಕಿಹೊಳಿ ಅರ್ಜಿ

| Updated By: ರಮೇಶ್ ಬಿ. ಜವಳಗೇರಾ

Updated on: Jan 12, 2024 | 6:20 PM

ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ವಿರುದ್ಧದ ಕೇಸ್​ಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಹೈಕೋರ್ಟ್ ಏಕಸದಸ್ಯ ಪೀಠ, ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಮತ್ತೊಂದೆಡೆ ಮತ್ತೋರ್ವ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರು ತಮ್ಮ ವಿರುದ್ಧ ಪ್ರಕರಣ ರದ್ದು ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ.

ಯತ್ನಾಳ್ ವಿರುದ್ಧದ ಕೇಸ್​ಗೆ ಹೈಕೋರ್ಟ್ ತಡೆ,ಪ್ರಕರಣ ರದ್ದು ಕೋರಿ ರಮೇಶ್ ಜಾರಕಿಹೊಳಿ ಅರ್ಜಿ
ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ
Follow us on

ಬೆಂಗಳೂರು/ವಿಜಯಪುರ, (ಜನವರಿ 12): ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್  (Basangouda Patil Yatnal) ವಿರುದ್ಧದ ಕೇಸ್​ಗೆ ಕರ್ನಾಟಕ ಹೈಕೋರ್ಟ್ (Karnataka high Court) ತಡೆ ನೀಡಿದೆ. ವಿಧಾನಸಭಾ ಚುನಾವಣೆ (Karnataka Assembly Elections 2023) ವೇಳೆ‌ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆಂದು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಡಿಯಲ್ಲಿ  ಕೇಸ್ ದಾಖಲಾಗಿತ್ತು. ಆದ್ರೆ, ಇದೀಗ ಈ ಪ್ರಕರಣಕ್ಕೆ ಹೈಕೋರ್ಟ್ ಏಕಸದಸ್ಯ ಪೀಠ, ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.

ಕೋರ್ಟ್​ ಮೆಟ್ಟಿಲೇರಿದ ರಮೇಶ ಜಾರಕಿಹೊಳಿ

ಮತ್ತೊಂದೆಡೆ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರು ತಮ್ಮ ವಿರುದ್ಧದ ಪ್ರಕರಣವನ್ನು ರದ್ದುಕೋರುವಂತೆ ಕೋರ್ಟ್ ಮೆಟ್ಟಿಲೇರಿದ್ದಾರೆ. ಸಾಲ ಪಾವತಿಸದೆ ಸಹಕಾರಿ ಬ್ಯಾಂಕ್‌ಗೆ ವಂಚನೆ ಆರೋಪ ಪ್ರಕರಣವನ್ನು ರದ್ದು ಕೋರಿ ರಮೇಶ್ ಜಾರಕಿಹೊಳಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.

ಕಂಪನಿಯ ಹುದ್ದೆಗಳಿಗೆ ರಾಜೀನಾಮೆ ನೀಡಿ ಹೊಸಬರ ನೇಮಕವಾಗಿದೆ. ಎನ್‌ಸಿಎಲ್‌ಟಿಯಲ್ಲಿ ವಿಚಾರಣೆ ಇರುವಾಗ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕ್ರಿಮಿನಲ್‌ ಪ್ರಕರಣ ರದ್ದು ಮಾಡುವಂತೆ ರಮೇಶ್ ಜಾರಕಿಹೊಳಿ ಮನವಿ ಮಾಡಿದ್ದಾರೆ.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಲಿಮಿಟೆಡ್ ಕಂಪನಿಗಾಗಿ 232 ಕೋಟಿ 88 ಲಕ್ಷ ರೂ. ಸಾಲ ಪಡೆದು ಪಡೆದು ಬಳಿಕ ಮರುಪಾವತಿಸದ ಹಿನ್ನೆಲೆಯಲ್ಲಿ ಅಪೆಕ್ಸ್ ಬ್ಯಾಂಕ್ ದೂರು ನೀಡಿತ್ತು. ಈ ದೂರಿನ ಅನ್ವಯ ರಮೇಶ್ ಜಾರಕಿಹೊಳಿ ವಿರುದ್ಧ ಎಫ್ಐಆರ್ ದಾಖಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:04 pm, Fri, 12 January 24