ವಕ್ಫ್ ನೋಟಿಸ್​ಗೆ ರೈತ ಆತ್ಮಹತ್ಯೆ ಎಂದು ಟ್ವೀಟ್: ತೇಜಸ್ವಿ ಸೂರ್ಯ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ

ವಕ್ಫ್ ನೋಟಿಸ್ ನೀಡಿದ್ದಕ್ಕೆ ಹಾವೇರಿಯಲ್ಲಿ ಓರ್ವ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸುಳ್ಳು ಟ್ವೀಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೈಕೋರ್ಟ್​ ಬಿಗ್ ರಿಲೀಫ್ ನೀಡಿದೆ.

ವಕ್ಫ್ ನೋಟಿಸ್​ಗೆ ರೈತ ಆತ್ಮಹತ್ಯೆ ಎಂದು ಟ್ವೀಟ್: ತೇಜಸ್ವಿ ಸೂರ್ಯ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ
Follow us
Ramesha M
| Updated By: ರಮೇಶ್ ಬಿ. ಜವಳಗೇರಾ

Updated on: Nov 14, 2024 | 7:56 PM

ಬೆಂಗಳೂರು, (ನವೆಂಬರ್ 14): ವಕ್ಫ್ ಆಸ್ತಿ ಅಂತ ಪಹಣಿಯಲ್ಲಿ ನಮೂದಾದ ಹಿನ್ನಲೆ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಸುಳ್ಳು ಸುದ್ದಿ ಪೋಸ್ಟ್ ಮಾಡಿದ್ದಾರೆಂಬ ಆರೋಪದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸಿಇಎನ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ. ಆದ್ರೆ, ಇದೀಗ ಈ ಪ್ರಕರಣಕ್ಕೆ ಹೈಕೋರ್ಟ್​ ತಡೆ ನೀಡಿದೆ. ಹೌದು…ಪ್ರಕರಣಕ್ಕೆ ತಡೆಕೋರಿ ತೇಜಸ್ವಿ ಸೂರ್ಯ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಮೃತ ರೈತನ‌ ತಂದೆಯ ಹೇಳಿಕೆ ಆಧರಿಸಿ ಟ್ವೀಟ್ ಮಾಡಲಾಗಿದ್ದು, ಬಳಿಕ ಪೊಲೀಸರ ಸ್ಪಷ್ಟನೆ ನಂತರ ಟ್ವೀಟ್ ಡಿಲೀಟ್ ಮಾಡಲಾಗಿದೆ. ಹೀಗಾಗಿ ಪ್ರಕರಣಕ್ಕೆ ತಡೆ ನೀಡುವಂತೆ ತೇಜಸ್ವಿ ಸೂರ್ಯ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದರು. ಇದನ್ನು ಪುರಸ್ಕರಿಸಿದ ಕೋರ್ಟ್, ತೇಜಸ್ವಿ ಸೂರ್ಯ ವಿರುದ್ಧದ ಪ್ರಕರಣಕ್ಕೆ ತಡೆಯಾಜ್ಞೆ ನೀಡಿದೆ.

ವಕ್ಫ್ ಆಸ್ತಿ ಅಂತ ಪಹಣಿಯಲ್ಲಿ ನಮೂದಾದ ಹಿನ್ನಲೆ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಸುಳ್ಳು ಸುದ್ದಿ ಪೋಸ್ಟ್ ಮಾಡಿದ್ದಾರೆಂಬ ಆರೋಪದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸಿಇಎನ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ. ಕರ್ನಾಟಕದಲ್ಲಿ ವಕ್ಫ್ ವಿವಾದ ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲೇ, ಹಾವೇರಿಯಲ್ಲಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರಿಗೆ ವಕ್ಫ್ ನೋಟಿಸ್ ಬಂದಿದ್ದೇ ಆತ್ಮಹತ್ಯೆಗೆ ಕಾರಣ ಎಂದು ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದರು.

ಹರನಗೇರಿ ರೈತ‌ ರುದ್ರಪ್ಪ ಆತ್ಮಹತ್ಯೆ ಬಗ್ಗೆ ಟ್ವೀಟ್​ ಮಾಡಿದ್ದ ತೇಜಸ್ವಿ ಸೂರ್ಯ, ವಕ್ಫ್​​ ನೋಟಿಸ್​ಗೆ ಹೆದರಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದಿದ್ದರು. ಇನ್ನು ಹಾನಗಲ್ ತಾಲೂಕು ಹರನಗೇರಿ ಗ್ರಾಮದ ರುದ್ರಪ್ಪ ಎಂಬ ರೈತ ಆತ್ಮಹತ್ಯೆಗೆ ಶರಣಾಗಿದ್ದ. 2022ರಲ್ಲಿ ಸಾಲ ಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿರೋದಾಗಿ ಪ್ರಕರಣ ದಾಖಲಾಗಿತ್ತು. ಆದರೆ ವಕ್ಪ್ ಅಂತ ಪಹಣಿಯಲ್ಲಿ ನಮೂದಾಗಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದ. ವಕ್ಪ್ ಬೋರ್ಡ್ ನಿಂದ ಅನ್ಯಾಯ ಆಗಿದೆ ಎಂದು ಕುಟುಂಬಸ್ಥರು ದೂರಿದ್ದರು.

ಬಳಿಕ ಈ ಬಗ್ಗೆ ಹಾವೇರಿ ಜಿಲ್ಲಾ ಪೊಲೀಸ್ ಇಲಾಖೆ, ಸಾಲ ಬಾಧೆಯಿಂದ ರುದ್ರಪ್ಪ ಆತ್ಮಹತ್ಯೆ ಎಂದು ಪ್ರಕರಣ ದಾಖಲಾಗಿದೆ. ಪಹಣಿಯಲ್ಲಿ ವಕ್ಪ್ ಅಂತ ಸೇರಿಸದ್ದರಿಂದ ಆತ್ಮಹತ್ಯೆ ಎಂದು ಪ್ರಕರಣ ದಾಖಲಾಗಿಲ್ಲ ಎಂದು ಸ್ಪಷ್ಟೀಕರಣ ನೀಡಿದ್ದರು. ಬಳಿಕ ತೇಜಸ್ವಿ ಸೂರ್ಯ ವಿರುದ್ಧ 174 ಸಿಆರ್‌ಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ತೇಜಸ್ವಿ ಸೂರ್ಯ ಅವರು ಟ್ವೀಟ್ ಡಿಲೀಟ್ ಮಾಡಿದ್ದರು. ಇದೀಗ ಹೋರ್ಟ್​ ಎಸ್​ಐಆರ್​ಗೆ ತಡೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Video: ಜಾರ್ಖಂಡ್​ನಲ್ಲಿ ಬಸ್ ಪಲ್ಟಿ, 7 ಮಂದಿ ಸಾವು
Video: ಜಾರ್ಖಂಡ್​ನಲ್ಲಿ ಬಸ್ ಪಲ್ಟಿ, 7 ಮಂದಿ ಸಾವು
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲೋದು: ಕುಮಾರಸ್ವಾಮಿ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲೋದು: ಕುಮಾರಸ್ವಾಮಿ
6,6,6,6,6,6,6,6: ಸಿಕ್ಸರ್​ಗಳ ಸುರಿಮಳೆ, 8 ಎಸೆತಗಳಲ್ಲಿ 8 ಸಿಕ್ಸ್​
6,6,6,6,6,6,6,6: ಸಿಕ್ಸರ್​ಗಳ ಸುರಿಮಳೆ, 8 ಎಸೆತಗಳಲ್ಲಿ 8 ಸಿಕ್ಸ್​
ಬೈಂದೂರಲ್ಲಿ ಲ್ಯಾಂಡ್ ಆದ ಬಳಿಕ ಶಿವಕುಮಾರ್​ಗೆ ಶೆಡ್ಯೂಲ್ ಮರೆತುಹೋಯಿತೇ?
ಬೈಂದೂರಲ್ಲಿ ಲ್ಯಾಂಡ್ ಆದ ಬಳಿಕ ಶಿವಕುಮಾರ್​ಗೆ ಶೆಡ್ಯೂಲ್ ಮರೆತುಹೋಯಿತೇ?
ಯಾರದ್ದೋ ಪಿಂಚಣಿ ಹಣ, ಇನ್ನಯಾರದ್ದೋ ಖಾತೆಗೆ ಜಮೆ: ವೃದ್ಧ ದಂಪತಿ ಕಣ್ಣೀರು
ಯಾರದ್ದೋ ಪಿಂಚಣಿ ಹಣ, ಇನ್ನಯಾರದ್ದೋ ಖಾತೆಗೆ ಜಮೆ: ವೃದ್ಧ ದಂಪತಿ ಕಣ್ಣೀರು
ಕೇವಲ 2 ತಿಂಗಳು ಹಿಂದೆ ಚಿಕ್ಕಬಳ್ಳಾಪುರದಿಂದ ಟ್ರಾನ್ಸ್​ಫರ್ ಆಗಿರುವ ಅಧಿಕಾರಿ
ಕೇವಲ 2 ತಿಂಗಳು ಹಿಂದೆ ಚಿಕ್ಕಬಳ್ಳಾಪುರದಿಂದ ಟ್ರಾನ್ಸ್​ಫರ್ ಆಗಿರುವ ಅಧಿಕಾರಿ
ಸಿಎಂ ಇವತ್ತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ರನ್ನು ಭೇಟಿಯಾಗಲಿದ್ದಾರೆ
ಸಿಎಂ ಇವತ್ತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ರನ್ನು ಭೇಟಿಯಾಗಲಿದ್ದಾರೆ
ಕೇವಲ 27 ದಿನಗಳಲ್ಲೇ ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಕೇವಲ 27 ದಿನಗಳಲ್ಲೇ ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಪ್ರಧಾನಿ ಮೋದಿಗೆ ಗಾಯಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ
ಪ್ರಧಾನಿ ಮೋದಿಗೆ ಗಾಯಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ
ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಮಧು ಅಸ್ತ್ರ
ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಮಧು ಅಸ್ತ್ರ