ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಚಕ್ರವರ್ತಿ ಸೂಲಿಬೆಲೆ ಮೇಲಿನ ಎಫ್​ಐಆರ್​ಗೆ ಹೈಕೋರ್ಟ್ ತಡೆ

ಅಕ್ಟೋಬರ್ 3 ರಂದು ಕಾರವಾರದ ದೇವಸ್ಥಾನಕ್ಕೆ ಭೇಟಿ ನೀಡಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಚಕ್ರವರ್ತಿ ಸೂಲಿಬೆಲೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಅದಕ್ಕಾಗಿ ಕಾರವಾರ ಗ್ರಾಮಾಂತರ ಪೊಲೀಸರು ಸೂಲಿಬೆಲೆ ವಿರುದ್ಧ ಅಕ್ಟೋಬರ್ 5 ರಂದು ಎಫ್‌ಐಆರ್ ದಾಖಲಿಸಿದ್ದರು. ಈ ವಿಚಾರವಾಗಿ ಸೂಲಿಬೆಲೆ ಹೈಕೋರ್ಟ್ ಮೆಟ್ಟಿಲೇರಿದ್ದರು.

ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಚಕ್ರವರ್ತಿ ಸೂಲಿಬೆಲೆ ಮೇಲಿನ ಎಫ್​ಐಆರ್​ಗೆ ಹೈಕೋರ್ಟ್ ತಡೆ
ಚಕ್ರವರ್ತಿ ಸೂಲಿಬೆಲೆ
Follow us
|

Updated on: Nov 16, 2023 | 6:20 PM

ಬೆಂಗಳೂರು, ನವೆಂಬರ್ 16: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಮತ್ತು ಸಮುದಾಯಗಳ ನಡುವೆ ದ್ವೇಷ ಹರಡಿದ ಆರೋಪದ ಮೇಲೆ ಯುವಾ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ (Chakravarti Sulibele) ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಕರ್ನಾಟಕ ಹೈಕೋರ್ಟ್ (Karnataka High Court) ಗುರುವಾರ ತಡೆಯಾಜ್ಞೆ ನೀಡಿದೆ. ಸೂಲಿಬೆಲೆ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ನ ಧಾರವಾಡ ಪೀಠದ ನ್ಯಾಯಮೂರ್ತಿ ಶಿವಶಂಕರ ಅಮರಣ್ಣನವರ್ ಅವರು, ಎಫ್​ಐಆರ್​ಗೆ ತಡೆ ನೀಡಿ ವಿಚಾರಣೆಯನ್ನು ಮುಂದೂಡಿದರು.

ಅಕ್ಟೋಬರ್ 3 ರಂದು ಕಾರವಾರದ ದೇವಸ್ಥಾನಕ್ಕೆ ಭೇಟಿ ನೀಡಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಚಕ್ರವರ್ತಿ ಸೂಲಿಬೆಲೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಅದಕ್ಕಾಗಿ ಕಾರವಾರ ಗ್ರಾಮಾಂತರ ಪೊಲೀಸರು ಸೂಲಿಬೆಲೆ ವಿರುದ್ಧ ಅಕ್ಟೋಬರ್ 5 ರಂದು ಎಫ್‌ಐಆರ್ ದಾಖಲಿಸಿದ್ದರು. ಈ ವಿಚಾರವಾಗಿ ಸೂಲಿಬೆಲೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆಯನ್ನು ಧಾರವಾಡ ಪೀಠ ಮುಂದೂಡಿದೆ ಎಂದು ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ.

ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದಾಗಲೆಲ್ಲಾ ಹಿಂದೂಗಳು ತೊಂದರೆ ಎದುರಿಸುತ್ತಿದ್ದಾರೆ ಮತ್ತು ಅವರು ಮುಸ್ಲಿಮರನ್ನು ಬೆಂಬಲಿಸುವವರೆಗೂ ಇಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ ಎಂದು ಚಕ್ರವರ್ತಿ ಸೂಲಿಬೆಲೆ ಆರೋಪಿಸಿದ್ದರು. ಇದು ಕಾಂಗ್ರೆಸ್​​​ನವರನ್ನು ಕೆರಳಿಸಿತ್ತು.

ಹಿಂದೂಗಳು ಮತ್ತು ಮುಸ್ಲಿಮರ ನಡುವೆ ದ್ವೇಷವನ್ನು ಹುಟ್ಟುಹಾಕಲು ಪ್ರಯತ್ನಿಸುವ ಹಲವಾರು ಇತರ ಹೇಳಿಕೆಗಳನ್ನು ಅವರು ನೀಡಿದ್ದಾರೆ ಎಂದು ಎಫ್ಐಆರ್​​ನಲ್ಲಿ ಉಲ್ಲೇಖಿಸಲಾಗಿತ್ತು. ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 505 (2) (ವರ್ಗಗಳ ನಡುವೆ ದ್ವೇಷ, ಶತ್ರುತ್ವ ಅಥವಾ ಅಸಹನೆ ಸೃಷ್ಟಿಸುವ ಅಥವಾ ಉತ್ತೇಜಿಸುವ ಹೇಳಿಕೆಗಳು) ಅಡಿಯಲ್ಲಿ ಸೂಲಿಬೆಲೆ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಇದನ್ನೂ ಓದಿ: ಚಕ್ರವರ್ತಿ ಸೂಲೆಬೆಲೆ ವಿರುದ್ಧ ಮತ್ತೊಂದು ದೂರು ದಾಖಲು: ಏನಿದು ಪ್ರಕರಣ?

ಚಕ್ರವರ್ತಿ ಸೂಲೆಬೆಲೆ ಇತ್ತೀಚಿಗೆ ಜಣಗಣಮನ ಅಭಿಯಾನ ಹಿನ್ನೆಲೆ ಕಾರವಾರದ ಕಡವಾಡಕ್ಕೆ ತೆರಳಿದ್ದರು. ಈ ವೇಳೆ ಕಾರವಾರ ತಾಲೂಕಿನ ಕಡವಾಡದ ಬೋವಿವಾಡದಲ್ಲಿರುವ ಶ್ರೀ ಆದಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಹೀಗಾಗಿ ಸೂಲೆಬೆಲೆ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ