AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

500 ರೂ. ಬೆಟ್ಟಿಂಗ್ ಕೇಸ್: ಗೃಹ ಸಚಿವ ಪರಮೇಶ್ವರ್​​​ಗೆ ಬಿಗ್ ರಿಲೀಫ್!

500 ರೂಪಾಯಿ ಬೆಟ್ಟಿಂಗ್ ಪ್ರಕರಣದಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಕಬಡ್ಡಿ ಪಂದ್ಯಾವಳಿ ವೇಳೆ ಬೆಟ್ಟಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹಸಚಿವ ಜಿ. ಪರಮೇಶ್ವರ್‌ ವಿರುದ್ಧ ಎಫ್‌ಐಆರ್‌ ದಾಖಲಿಸಲು ಬೆಂಗಳೂರು 42ನೇ ಎಸಿಜೆಎಂ ಕೋರ್ಟ್ ಆದೇಶಿಸಿದ್ದು, ಇದೀಗ ಈ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

500 ರೂ. ಬೆಟ್ಟಿಂಗ್ ಕೇಸ್: ಗೃಹ ಸಚಿವ ಪರಮೇಶ್ವರ್​​​ಗೆ ಬಿಗ್ ರಿಲೀಫ್!
G Parameshwar
ರಮೇಶ್​ ಎಮ್​.
| Edited By: |

Updated on:Apr 23, 2026 | 4:21 PM

Share

ಬೆಂಗಳೂರು, (ಏಪ್ರಿಲ್ 23): ಗೃಹ ಸಚಿವ ಪರಮೇಶ್ವರ್ (G Parameshwar)  ವಿರುದ್ಧದ 500 ರೂಪಾಯಿ ಬೆಟ್ಟಿಂಗ್ ಪ್ರಕರಣಕ್ಕೆ (Rs 500 Betting Case) ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ತಮಾಷೆಗಾಗಿ ಮಾತನಾಡಿದರೂ ಕೇಸ್ ಹಾಕಬಹುದೇ? ಉದ್ದೇಶಪೂರ್ವಕವಾಗಿ ಇಂತಹ ಹೇಳಿಕೆ ನೀಡಿದಂತೆ ಕಾಣುತ್ತಿಲ್ಲ. ತನಿಖೆಗೆ ಆದೇಶಿಸುವ ಮುನ್ನ ಪೊಲೀಸರಿಂದ ವಿವರಣೆ ಪಡೆಯಬೇಕಿತ್ತು ಎಂದು ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯ ಪಟ್ಟಿದೆ. ಅಲ್ಲದೇ ಪ್ರಕರಣಕ್ಕೆ ತಡೆ ನೀಡಿ ವಿಚಾರಣೆಯನ್ನು ಮುಂದೂಡಿದೆ. ಇದರಿಂದ ಗೃಹ ಸಚಿವ ಪರಮೇಶ್ವರ್ ಅವರಿಗೆ ರಿಲೀಫ್ ಸಿಕ್ಕಂತಾಗಿದೆ.

ಕಬಡ್ಡಿ ಟೂರ್ನಿಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರೊಂದಿಗೆ 500 ರೂಪಾಯಿ ಬಾಜಿ ಕಟ್ಟಿ ಸೋತ್ತಿದ್ದರು. ಬಳಿಕ ತಮಾಷೆಗೆ ಬೆಟ್ಟಿಂಗ್ ಕಟ್ಟಿರುವುದನ್ನು ಸಹ ಪರಮೇಶ್ವರ್ ಹೇಳಿಕೊಂಡಿದ್ದರು. ಇದನ್ನು ಹೆಚ್.ಆರ್.ನಾಗಭೂಷಣ್ ಎಂಬುವರು ಖಾಸಗಿ ದೂರು ಸಲ್ಲಿಸಿದ್ದರು. ಇದನ್ನು ವಿಚಾರಣೆ ನಡೆಸಿದ್ದ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್, ಪರಮೇಶ್ವರ್ ವಿರುದ್ಧ ಎಫ್​​ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಆದೇಶ ಹೊರಡಿಸಿತ್ತು. ಬಳಿಕ ಇದನ್ನು ಪ್ರಶ್ನಿಸಿ ಪರಮೇಶ್ವರ್ ಹೈಕೋರ್ಟ್​ ಮೆಟ್ಟಿಲೇರಿದ್ದು, ಪರಮೇಶ್ವರ್ ಪರವಾಗಿ ಹಿರಿಯ ವಕೀಲ ಕೆ.ಎನ್.ಫಣೀಂದ್ರ ವಾದ ಮಂಡಿಸಿದರು.

ಇದನ್ನೂ ಓದಿ: ಗೃಹ ಸಚಿವ ಪರಮೇಶ್ವರ್‌ಗೆ ‘500 ರೂ. ಬೆಟ್ಟಿಂಗ್’ ಸಂಕಷ್ಟ: ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಕೋರ್ಟ್ ಆದೇಶ!

ಈ ವಾದ ಆಲಿಸಿದ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ, ತನಿಖೆಗೆ ಆದೇಶಿಸುವ ಮುನ್ನ ಪೊಲೀಸರಿಂದ ವಿವರಣೆ ಪಡೆಯಬೇಕಿತ್ತು ಎಂದು ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟು ಪ್ರಕರಣಕ್ಕೆ ತಡೆಯಾಜ್ಞೆ ನೀಡಿ ವಿಚಾರಣೆ ಮುಂದೂಡಿದೆ.

ಏನಿದು ಪ್ರಕರಣ

2025ರಲ್ಲಿ ತುಮಕೂರಿನಲ್ಲಿ   ನಡೆದಿದ್ದ ಕಬ್ಬಡಿ ಟೂರ್ನಿಯಲ್ಲಿ ಚಿಕ್ಕೋಡಿ ಹಾಗೂ ವಿಜಯಪುರ ನಡುವೆ ಕಬಡ್ಡಿ ಪಂದ್ಯಾವಳಿ (Kabaddi Tournament) ನಡೆಯುತ್ತಿತ್ತು. ಈ ವೇಳೆ ಚಿಕ್ಕೋಡಿ ತಂಡ ಗೆಲ್ಲುವುದಾಗಿ ಪರಮೇಶ್ವರ್‌ ಅವರು 500 ರೂಪಾಯಿ ಬೆಟ್ಟಿಂಗ್‌ ಕಟ್ಟಿದ್ದರು.  ಆದ್ರೆ, ವಿಜಯಪುರ ತಂಡ ಗೆಲುವು ಸಾಧಿಸಿತ್ತು. ಇದರಿಂದ ಪರಮೇಶ್ವರ್ ಸೋತ್ತಿದ್ದರಿಂದ ಡಿಸಿಗೆ 500 ರೂಪಾಯಿ ಹಣ ನೀಡಿದ್ದರು. ಇದನ್ನು ಸ್ವತಃ ಪರಮೇಶ್ವರ್ ಅವರೇ ಪ್ರಶಸ್ತಿ ನೀಡುವಾಗ ಬಹಿರಂಗವಾಗಿಯೇ ಹೇಳಿಕೊಂಡಿದ್ದರು.

ಇದನ್ನೂ ಓದಿ: ಬೆಟ್ಟಿಂಗ್ ಆಡಿ ಸೋತ ಗೃಹ ಸಚಿವ: ವ್ಯಾಪಕ ಟೀಕೆಗೆ ಗುರಿಯಾದ ಪರಮೇಶ್ವರ್!

ಕಬಡ್ಡಿ ಪಂದ್ಯದ ವೇಳೆ ನಾನು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರೊಂದಿಗೆ ತಮಾಷೆಗಾಗಿ ಬೆಟ್ಟಿಂಗ್ 500 ರೂಪಾಯಿ ಬೆಟ್ಟಿಂಗ್ ಕಟ್ಟಿದ್ದೆ ಎಂದು ಸಚಿವರು ಹೇಳಿದ್ದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಬೆಟ್ಟಿಂಗ್ ಕಟ್ಟುವುದು ಅಪರಾಧ ಎಂದು ಎಚ್.ಆರ್ ನಾಗಭೂಷಣ ಎಂಬುವರು ಖಾಸಗಿ ದೂರು ದಾಖಲಿಸಿದ್ದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:03 pm, Thu, 23 April 26

Follow Us
ರಮೇಶ್​ ಎಮ್​.
ರಮೇಶ್​ ಎಮ್​.

ರಮೇಶ್​ ಎಂ ವಿಶೇಷ ವರದಿಗಾರರಾಗಿದ್ದಾರೆ, ಮೂಲತಃ ಕಾನೂನು ಪದವೀಧರನಾಗಿದ್ದು ಕಳೆದ 18 ವರ್ಷಗಳಿಂದ ಟಿವಿ9 ಸುದ್ದಿ ವಾಹಿನಿಯಲ್ಲಿ ಕಾನೂನು ಸಂಬಂಧಿತ ವರದಿ ನೀಡುತ್ತಿದ್ದಾರೆ. ಹೈಕೋರ್ಟ್, ಸುಪ್ರೀಂ ಕೋರ್ಟ್ ಹಾಗೂ ವಿಚಾರಣಾ ನ್ಯಾಯಾಲಯಗಳ ಪ್ರಮುಖ ಪ್ರಕರಣಗಳ ವರದಿಗಾರಿಕೆ ಮಾಡುತ್ತಿದ್ದು, ಬೆಂಗಳೂರಿನ ನಿವಾಸಿಯಾಗಿದ್ದಾರೆ.

Read More
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ