
ಬೆಂಗಳೂರು, (ಏಪ್ರಿಲ್ 23): ಗೃಹ ಸಚಿವ ಪರಮೇಶ್ವರ್ (G Parameshwar) ವಿರುದ್ಧದ 500 ರೂಪಾಯಿ ಬೆಟ್ಟಿಂಗ್ ಪ್ರಕರಣಕ್ಕೆ (Rs 500 Betting Case) ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ತಮಾಷೆಗಾಗಿ ಮಾತನಾಡಿದರೂ ಕೇಸ್ ಹಾಕಬಹುದೇ? ಉದ್ದೇಶಪೂರ್ವಕವಾಗಿ ಇಂತಹ ಹೇಳಿಕೆ ನೀಡಿದಂತೆ ಕಾಣುತ್ತಿಲ್ಲ. ತನಿಖೆಗೆ ಆದೇಶಿಸುವ ಮುನ್ನ ಪೊಲೀಸರಿಂದ ವಿವರಣೆ ಪಡೆಯಬೇಕಿತ್ತು ಎಂದು ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯ ಪಟ್ಟಿದೆ. ಅಲ್ಲದೇ ಪ್ರಕರಣಕ್ಕೆ ತಡೆ ನೀಡಿ ವಿಚಾರಣೆಯನ್ನು ಮುಂದೂಡಿದೆ. ಇದರಿಂದ ಗೃಹ ಸಚಿವ ಪರಮೇಶ್ವರ್ ಅವರಿಗೆ ರಿಲೀಫ್ ಸಿಕ್ಕಂತಾಗಿದೆ.
ಕಬಡ್ಡಿ ಟೂರ್ನಿಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರೊಂದಿಗೆ 500 ರೂಪಾಯಿ ಬಾಜಿ ಕಟ್ಟಿ ಸೋತ್ತಿದ್ದರು. ಬಳಿಕ ತಮಾಷೆಗೆ ಬೆಟ್ಟಿಂಗ್ ಕಟ್ಟಿರುವುದನ್ನು ಸಹ ಪರಮೇಶ್ವರ್ ಹೇಳಿಕೊಂಡಿದ್ದರು. ಇದನ್ನು ಹೆಚ್.ಆರ್.ನಾಗಭೂಷಣ್ ಎಂಬುವರು ಖಾಸಗಿ ದೂರು ಸಲ್ಲಿಸಿದ್ದರು. ಇದನ್ನು ವಿಚಾರಣೆ ನಡೆಸಿದ್ದ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್, ಪರಮೇಶ್ವರ್ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಆದೇಶ ಹೊರಡಿಸಿತ್ತು. ಬಳಿಕ ಇದನ್ನು ಪ್ರಶ್ನಿಸಿ ಪರಮೇಶ್ವರ್ ಹೈಕೋರ್ಟ್ ಮೆಟ್ಟಿಲೇರಿದ್ದು, ಪರಮೇಶ್ವರ್ ಪರವಾಗಿ ಹಿರಿಯ ವಕೀಲ ಕೆ.ಎನ್.ಫಣೀಂದ್ರ ವಾದ ಮಂಡಿಸಿದರು.
ಈ ವಾದ ಆಲಿಸಿದ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ, ತನಿಖೆಗೆ ಆದೇಶಿಸುವ ಮುನ್ನ ಪೊಲೀಸರಿಂದ ವಿವರಣೆ ಪಡೆಯಬೇಕಿತ್ತು ಎಂದು ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟು ಪ್ರಕರಣಕ್ಕೆ ತಡೆಯಾಜ್ಞೆ ನೀಡಿ ವಿಚಾರಣೆ ಮುಂದೂಡಿದೆ.
2025ರಲ್ಲಿ ತುಮಕೂರಿನಲ್ಲಿ ನಡೆದಿದ್ದ ಕಬ್ಬಡಿ ಟೂರ್ನಿಯಲ್ಲಿ ಚಿಕ್ಕೋಡಿ ಹಾಗೂ ವಿಜಯಪುರ ನಡುವೆ ಕಬಡ್ಡಿ ಪಂದ್ಯಾವಳಿ (Kabaddi Tournament) ನಡೆಯುತ್ತಿತ್ತು. ಈ ವೇಳೆ ಚಿಕ್ಕೋಡಿ ತಂಡ ಗೆಲ್ಲುವುದಾಗಿ ಪರಮೇಶ್ವರ್ ಅವರು 500 ರೂಪಾಯಿ ಬೆಟ್ಟಿಂಗ್ ಕಟ್ಟಿದ್ದರು. ಆದ್ರೆ, ವಿಜಯಪುರ ತಂಡ ಗೆಲುವು ಸಾಧಿಸಿತ್ತು. ಇದರಿಂದ ಪರಮೇಶ್ವರ್ ಸೋತ್ತಿದ್ದರಿಂದ ಡಿಸಿಗೆ 500 ರೂಪಾಯಿ ಹಣ ನೀಡಿದ್ದರು. ಇದನ್ನು ಸ್ವತಃ ಪರಮೇಶ್ವರ್ ಅವರೇ ಪ್ರಶಸ್ತಿ ನೀಡುವಾಗ ಬಹಿರಂಗವಾಗಿಯೇ ಹೇಳಿಕೊಂಡಿದ್ದರು.
ಕಬಡ್ಡಿ ಪಂದ್ಯದ ವೇಳೆ ನಾನು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರೊಂದಿಗೆ ತಮಾಷೆಗಾಗಿ ಬೆಟ್ಟಿಂಗ್ 500 ರೂಪಾಯಿ ಬೆಟ್ಟಿಂಗ್ ಕಟ್ಟಿದ್ದೆ ಎಂದು ಸಚಿವರು ಹೇಳಿದ್ದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಬೆಟ್ಟಿಂಗ್ ಕಟ್ಟುವುದು ಅಪರಾಧ ಎಂದು ಎಚ್.ಆರ್ ನಾಗಭೂಷಣ ಎಂಬುವರು ಖಾಸಗಿ ದೂರು ದಾಖಲಿಸಿದ್ದರು.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:03 pm, Thu, 23 April 26