Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಎಎಸ್​ ವರ್ಸಸ್ ಐಪಿಎಸ್​: ರೋಹಿಣಿ ಸಿಂಧೂರಿಗೆ ತಾತ್ಕಾಲಿಕ ರಿಲೀಫ್ ನೀಡಿದ ಕೋರ್ಟ್​​

ಐಪಿಎಸ್​ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಹಾಗೂ ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿನ ನಡುವೆ ಕಾನೂನು ನಡೆಯುತ್ತಿದ್ದು, ರೂಪಾ ಮೌದ್ಗಿಲ್ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ದಾಖಲಿಸಿದ್ದ ಮಾನನಷ್ಟ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್, One Minute Apology ಪುಸ್ತಕ ಓದುವಂತೆ ಇಬ್ಬರು ಅಧಿಕಾರಿಗಳಿಗೆ ಸಲಹೆ ನೀಡಿತ್ತು. ಇದಾದ ಬೆನ್ನಲ್ಲೆ ಇದೀಗ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್​ ರೂಪಾ ದಾಖಲಿಸಿದ್ದ ಕೇಸ್‌ಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಐಎಎಸ್​ ವರ್ಸಸ್ ಐಪಿಎಸ್​: ರೋಹಿಣಿ ಸಿಂಧೂರಿಗೆ ತಾತ್ಕಾಲಿಕ ರಿಲೀಫ್ ನೀಡಿದ ಕೋರ್ಟ್​​
Rohini And Roopa
Follow us
Ramesha M
| Updated By: ರಮೇಶ್ ಬಿ. ಜವಳಗೇರಾ

Updated on:Feb 21, 2025 | 5:07 PM

ಬೆಂಗಳೂರು, (ಫೆಬ್ರವರಿ 21): ಐಪಿಎಸ್ ಅಧಿಕಾರಿ​ ರೂಪಾ ಮೌದ್ಗಿಲ್ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಕೋರ್ಟ್​ ರಿಲೀಫ್ ನೀಡಿದೆ. ರೋಹಿಣಿ ಸಿಂಧೂರಿ ವಿರುದ್ಧ ಡಿ.ರೂಪಾ ಮೌದ್ಗಿಲ್ ದಾಖಲಿಸಿದ್ದ ಮಾನನಷ್ಟ ಪ್ರಕರಣಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಙೆ ನೀಡಿದೆ. ಮಾರ್ಚ್​ 12 ರವರೆಗೆ ವಿಚಾರಣೆಗೆ ತಡೆಯಾಜ್ಙೆ ನೀಡಿದ್ದು, ರಾಜಿ ಸಂಧಾನಕ್ಕೆ ಪ್ರಯತ್ನಿಸುವಂತೆ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: One Minute Apology ಪುಸ್ತಕ ಓದುವಂತೆ ರೂಪಾ ಹಾಗೂ ರೋಹಿಣಿ ಸಿಂಧೂರಿಗೆ ಕೋರ್ಟ್ ಸಲಹೆ

ಪ್ರಕರಣ ಹಿನ್ನೆಲೆ

19. 2. 2023ರಂದು ರೋಹಿಣಿ ಸಿಂಧೂರಿ ಮಾಧ್ಯಮ ಹೇಳಿಕೆ ನೀಡಿದ್ದು, ನಂತರ ಅದನ್ನು ಎಕ್ಸ್ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಹೇಳಿಕೆಯಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಆರೋಪ ಮಾಡಿದ್ದಾರೆ. ಈ ಹೇಳಿಕೆಯನ್ನು 1.8 ಲಕ್ಷ ಜನರು ವೀಕ್ಷಣೆ ಮಾಡಿದ್ದಾರೆ. ರೋಹಿಣಿ ಸಿಂಧೂರಿ ಅವರ ಅವಹೇಳನಕಾರಿ ಹೇಳಿಕೆ ನಂತರ 6 ತಿಂಗಳವರೆಗೆ ಸಂಬಳ ನೀಡದೇ ಹುದ್ದೆ ಇಲ್ಲದೇ ವರ್ಗಾಯಿಸಿದ್ದರು. ಈ ಹೇಳಿಕೆಯಿಂದ, ತಂಗಿ, ಪತಿ, ಮಕ್ಕಳಿಗೂ ಮಾನಸಿಕ ಯಾತನೆಯಾಗಿದೆ ಎಂದು ರೂಪಾ ಮೌದ್ಗಿಲ್ ಅವರು ರೋಹಿಣಿ ಸಿಂಧೂರಿ ವಿರುದ್ಧ ಬೆಂಗಳೂರಿನ 7 ನೇ ಎಸಿಎಂಎಂ ಕೋರ್ಟ್​ನಲ್ಲಿ ಮಾನನಷ್ಡ ಪ್ರಕರಣ ದಾಖಲಿಸಿದ್ದರು.

ರಾಜ್ಯದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ.ರೂಪಾ ಅವರ ನಡುವೆ ಕಳೆದ ಎರಡು ವರ್ಷಗಳ ಹಿಂದೆ ಆರಂಭವಾಗಿತ್ತು. ಬಿಜೆಪಿ ಸರ್ಕಾರದಲ್ಲಿ ಆರಂಭವಾಗಿದ್ದ ಇವರ ಆರೋಪ, ಪ್ರತ್ಯಾರೋಪದ ಜಗಳ ಬಿಜೆಪಿ ಹೋಗಿ ಕಾಂಗ್ರೆಸ್ ಸರ್ಕಾರ ಬಂದು ಒಂದೂವರೆ ವರ್ಷ ಆಡಳಿತ ಮಾಡಿದರೂ ಮುಕ್ತಾಯಗೊಂಡಿಲ್ಲ. ಡಿ. ರೂಪಾ ಅವರು ರೋಹಿಣಿ ಸಿಂಧೂರಿ ಅವರ ಮೇಲೆ ಕೆಲವೊಂದಿಷ್ಟು ಆರೋಪಗಳನ್ನು ಮಾಡಿ ಸಾಮಾಜಿಕ ಜಾಲತಾಣದಲ್ಲಿ ರೋಹಿಣಿ ಸಿಂಧೂರಿ ಅವರ ಖಾಸಗಿ ಫೋಟೋಗಳನ್ನು ಹಂಚಿಕೊಂಡಿದ್ದರು. ಇದರ ಬೆನ್ನಲ್ಲಿಯೇ ಕೋರ್ಟ್ ಮೊರೆ ಹೋಗಿದ್ದ ರೋಹಿಣಿ ಸಿಂಧೂರಿ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಇದಾದ ನಂತರ ಈ ಪ್ರಕರಣ ಸುಪ್ರೀಂ ಕೋರ್ಟ್‌ವರೆಗೂ ಹೋಗಿತ್ತು. ಆದರೆ, ಅಲ್ಲಿಯೂ ನ್ಯಾಯ ಬಗೆಹರಿಯದೇ ಪುನಃ ವಿಚಾರಣಾ ಕೋರ್ಟ್​ನಲ್ಲಿ ಬಗೆಹರಿಸಿಕೊಳ್ಳುವಂತೆ ವಾಪಸ್ ಕಳುಹಿಸಲಾಗಿತ್ತು.

ಈ ಸಂಬಂಧ ಬೆಂಗಳೂರಿನ 5ನೇ ಎಸಿಎಂಎಂ ಕೋರ್ಟ್ ನಲ್ಲಿಂದು ಸಾಕ್ಷ್ಯ ವಿಚಾರಣೆ ನಡೆದಿದ್ದು, ಈ ವೇಳೆ ಕೋರ್ಟ್ ಗೆ ಹಾಜರಾಗಿದ್ದ ರೋಹಿಣಿ ಸಿಂಧೂರಿ ಹಾಗೂ ರೂಪಾ‌ ಮೌದ್ಗಿಲ್ ನಡುವೆ ರಾಜಿ ಮಾಡಲು ಮುಂದಾಗಿತ್ತು. ಇಬ್ಬರೂ ಉತ್ತಮ ಹೆಸರು ಗಳಿಸಿದ ಹಿರಿಯ ಅಧಿಕಾರಿಗಳಾಗಿದ್ದೀರಿ. ನಿಮ್ಮ ಸಮಯ ಸಮಾಜಕ್ಕಾಗಿ ಮೀಸಲಿಡಬೇಕು. ಕೋರ್ಟ್ ಕಲಾಪದಲ್ಲಿ ಸಮಯ ವ್ಯಯಿಸುವ ಬದಲು ರಾಜಿ ಸಾಧ್ಯವೇ ಯೋಚಿಸಿ ಎಂದು ನ್ಯಾಯಾಧೀಶ ವಿಜಯ್ ಕುಮಾರ್ ಜಾಟ್ಲಾ ಅವರು ಕಿವಿ ಮಾತು ಹೇಳಿದ್ದರು. ಅಲ್ಲದೇ ಇಬ್ಬರು ಅಧಿಕಾರಿಗಳಿಗೆ One Minute Apology ಪುಸ್ತಕ ಓದುವಂತೆ ಸಲಹೆ ನೀಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:47 pm, Fri, 21 February 25