AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಹೈಕೋರ್ಟ್ ಶಾಕ್, ಪತ್ನಿ ವಿರುದ್ಧ ಪಡೆದಿದ್ದ ವಿಚ್ಛೇದನಕ್ಕೆ ತಡೆಯಾಜ್ಞೆ

ವಿವಾಹ ವಿಚ್ಛೇದನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಕರ್ನಾಟಕ ಹೈಕೋರ್ಟ್ ಶಾಕ್ ಕೊಟ್ಟಿದೆ.

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಹೈಕೋರ್ಟ್ ಶಾಕ್, ಪತ್ನಿ ವಿರುದ್ಧ ಪಡೆದಿದ್ದ ವಿಚ್ಛೇದನಕ್ಕೆ ತಡೆಯಾಜ್ಞೆ
ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Jan 06, 2023 | 10:46 PM

ಬೆಂಗಳೂರು: ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ(MP Kumaraswamy)  ಪತ್ನಿ ಸವಿತಾ ವಿರುದ್ಧ ಪಡೆದಿದ್ದ ವಿಚ್ಛೇದನಕ್ಕೆ (divorce) ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಮೈಸೂರಿನ ಕೋರ್ಟ್(Mysuru Court) ಎಂ.ಪಿ.ಕುಮಾರಸ್ವಾಮಿ ದಂಪತಿಗೆ ವಿಚ್ಛೇದನ ನೀಡಿತ್ತು. ಆದ್ರೆ ಇದನ್ನು ಪ್ರಶ್ನಿಸಿ ಪತ್ನಿ ಸವಿತಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಕೋರ್ಟ್, ವಿಚ್ಛೇದನ ತಡೆಯಾಜ್ಞೆ ನೀಡಿ ಇಂದು(ಜನವರಿ 06) ಆದೇಶ ಹೊರಡಿಸಿದೆ. ಇದರಿಂದ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಹೈಕೋರ್ಟ್ ಶಾಕ್ ಕೊಟ್ಟಿದೆ.

ಇದನ್ನೂ ಓದಿ: ಆನೆ ದಾಳಿಗೆ ಮಹಿಳೆ ಬಲಿ: ಸಾಂತ್ವನ ಹೇಳಲು ಬಂದ ಬಿಜೆಪಿ ಶಾಸಕನ ಮೇಲೆ ಹಲ್ಲೆ, ಪೊಲೀಸರ ವೈಫಲ್ಯ ಎಂದ ಕುಮಾರಸ್ವಾಮಿ

ಪತಿಯಿಂದ ವಿಚ್ಛೇದನ ಪಡೆಯುವ ಇಚ್ಛೆ ಪತ್ನಿಗೆ ಇಲ್ಲ. ಶಾಸಕ ಎಂ.ಪಿ.ಕುಮಾರಸ್ವಾಮಿ 2ನೇ ಮದುವೆಯಾಗುವ ಸಾಧ್ಯತೆ ಇದೆ. ಹೀಗಾಗಿ ವಿಚ್ಛೇದನ ಆದೇಶಕ್ಕೆ ತಡೆ ನೀಡುವಂತೆ ಸವಿತಾ ಪರ ವಕೀಲ ಕೆ.ಎ.ಚಂದ್ರಶೇಖರ್ ಅವರು ಹೈಕೋರ್ಟ್​ನಲ್ಲಿ ವಾದ ಮಂಡಿಸಿದರು. ಇದನ್ನು ಆಲಿಸಿದ ಹೈಕೋರ್ಟ್, ಮೈಸೂರು ಕೋರ್ಟ್‌ನ ವಿಚ್ಛೇದನ ಆದೇಶಕ್ಕೆ ತಡೆ ನೀಡಿದೆ.

ಅಕ್ರಮ ಸಂಬಂಧ ಹೊಂದಿದ್ದನ್ನು ಪ್ರಶ್ನಿಸಿ ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ 2016ರಲ್ಲಿ ಸಾರ್ವಜನಿಕರ ಎದುರೇ ಕುಮಾರಸ್ವಾಮಿಯವರು ಪತ್ನಿಗೆ ಹೊಡೆದಿದ್ದರು. ನಂತರ 2017ರಲ್ಲಿ ಪತ್ನಿ ಸವಿತಾ ಮೈಸೂರಿನ ಜೆಎಂಎಫ್​ಸಿ ನ್ಯಾಯಾಲಯದಲ್ಲಿ ವಿಚ್ಛೇದನ ಹಾಗೂ ಜೀವನಾಂಶ ಕೊಡಬೇಕೆಂದು ಕೋರಿ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಮನೆ ನಿರ್ಮಾಣಕ್ಕೆ ಅಕ್ರಮ ಮರಳು ಸಾಗಾಟ; ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ಗಂಭೀರ ಆರೋಪ

ಗಂಡನಿಗೆ (ಎಂ.ಪಿ.ಕುಮಾರಸ್ವಾಮಿ) ಇನ್ನೊಂದು ಹೆಣ್ಣಿನೊಂದಿಗೆ ಅಕ್ರಮ ಸಂಬಂಧ ಇದ್ದು, ಅವರ ಹೆಂಡತಿಯಾದ ನನಗೆ ಕೊಡಬೇಕಾದ ಸ್ಥಾನಮಾನಗಳನ್ನು ಕೊಡುತ್ತಿಲ್ಲ. ಇದ್ದರಿಂದ ನಾನು ಬೇಸತ್ತಿದ್ದು, ನನ್ನ ಗಂಡನಿಂದ ವಿವಾಹ ವಿಚ್ಛೇದನ ಕೊಡಿಸಿ ಜೀವನಾಂಶಕ್ಕೆ ಪ್ರತಿ ತಿಂಗಳೂ 1.5 ಲಕ್ಷ ಹಣ ಹಾಗೂ 2.50 ಕೋಟಿ ರೂ ಆಸ್ತಿಯನ್ನು ಕೊಡಿಸಬೇಕು. ಜೊತೆಗೆ ನ್ಯಾಯಾಲಯದ ವೆಚ್ಚಕ್ಕಾಗಿ 5 ಲಕ್ಷ ರೂ ಕೊಡಬೇಕೆಂದು ಅರ್ಜಿಯಲ್ಲಿ ಮನವಿ ಮಾಡಿದ್ದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ
ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ