2C 2D Reservation ಒಕ್ಕಲಿಗರಿಗೆ 2ಸಿ, ಲಿಂಗಾಯತರಿಗೆ 2ಡಿ ಕೆಟಗರಿಗೆ ಮೀಸಲಾತಿಗೆ ಬ್ರೇಕ್ ಹಾಕಿದ ಕರ್ನಾಟಕ ಹೈಕೋರ್ಟ್

ವಕ್ಕಲಿಗ ಹಾಗೂ ಪಂಚಮಸಾಲಿ ಲಿಂಗಾಯತ ಮೀಸಲಾತಿ ವಿಚಾರವಾಗಿ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ರಚಿಸಿದ್ದ 2ಸಿ, 2ಡಿ ಕ್ಯಾಟಗರಿ ಕರ್ನಾಟಕ ಹೈಕೋರ್ಟ್ ಬ್ರೇಕ್ ಹಾಕಿದೆ.

2C 2D Reservation ಒಕ್ಕಲಿಗರಿಗೆ 2ಸಿ, ಲಿಂಗಾಯತರಿಗೆ 2ಡಿ ಕೆಟಗರಿಗೆ ಮೀಸಲಾತಿಗೆ ಬ್ರೇಕ್ ಹಾಕಿದ ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Jan 12, 2023 | 6:51 PM

ಬೆಂಗಳೂರು: ಒಕ್ಕಲಿಗ (vokkaliga) ಹಾಗೂ ಲಿಂಗಾಯತ ಪಂಚಮಸಾಲಿಗೆ (panchamasali) ರಾಜ್ಯ ಸರ್ಕಾರ ನೀಡಿರುವ 2 ಸಿ, 2 ಡಿ ಮೀಸಲಾತಿಗೆ(Reservation) ಕರ್ನಾಟಕ ಹೈಕೋರ್ಟ್ (Karnataka High Court) ಬ್ರೇಕ್​ ಹಾಕಿದೆ. ಒಕ್ಕಲಿಗ ಮತ್ತು ಲಿಂಗಾಯತ ಪಂಚಮಸಾಲಿಗೆ ಮೀಸಲಾತಿಯನ್ನು ಯಥಾಸ್ಥಿತಿ ಕಾಯ್ದುಕೊಳ್ಳಲು ಇಂದು(ಜನವರಿ 12)  ಹೈಕೋರ್ಟ್ ಸೂಚಿಸಿ ಆದೇಶ ಹೊರಡಿಸಿದೆ.

ಇದನ್ನೂ ಓದಿ: Panchamasali Reservation: ಒಕ್ಕಲಿಗ ಹಾಗೂ ಲಿಂಗಾಯತರಿಗೆ ಪ್ರತ್ಯೇಕ ಕೆಟಗರಿ ರಚನೆ: ಮೀಸಲಾತಿ ಪರಿಹರಿಸಲು ಬೊಮ್ಮಾಯಿ ಸರ್ಕಾರದ ಹೊಸ ಸೂತ್ರ

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡದಂತೆ ರಾಘವೇಂದ್ರ ಡಿ.ಜಿ.ಎನ್ನುವರು ಹೈಕೋರ್ಟ್​ಗೆ ಪಿಐಎಲ್ ಸಲ್ಲಿಸಿದ್ದರು.  ಅರ್ಜಿದಾರರ ಪರ ಹಿರಿಯ ವಕೀಲ ರವಿವರ್ಮ ಕುಮಾರ್ ವಾದ ಮಂಡಿಸಿದ್ದು, ಹೊಸ ಮೀಸಲಾತಿಗೆ ತಡೆ ಕೋರಿ ಮನವಿ ಮಾಡಿದರು. ಬಳಿಕ ಕೋರ್ಟ್, ಕಾಲಾವಕಾಶದ ಕೊರತೆ ಹಿನ್ನೆಲೆಯಲ್ಲಿ ವಿಚಾರಣೆ ಜ.30 ಕ್ಕೆ ಮುಂದೂಡಿದ್ದು, ಅಲ್ಲಿಯವರೆಗೆ ಮೀಸಲಾತಿಯನ್ನು ಯಥಾಸ್ಥಿತಿ ಕಾಯ್ದುಕೊಳ್ಳಲು ಸೂಚಿಸಿದೆ.

ಕರ್ನಾಟಕದಲ್ಲಿ ಎರಡು ಪ್ರಬಲ ಸಮುದಾಯದವಾಗಿರುವ ಒಕ್ಕಲಿಗ ಹಾಗೂ ಲಿಂಗಾಯತ ಪಂಚಮಸಾಲಿ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ 2ಸಿ ಹಾಗೂ 2ಡಿ ಎಂದು ಎರಡು ಪ್ರತ್ಯೇಕ ಕೆಟಗರಿ ಮಾಡಿತ್ತು. 3Aನಲ್ಲಿದ್ದ ಒಕ್ಕಲಿಗರಿಗೆ ಹೊಸದಾಗಿ 2C ಕೆಟಗರಿ ಹಾಗೂ 3Bನಲ್ಲಿದ್ದ ಲಿಂಗಾಯತರಿಗೆ 2D ಕೆಟಗರಿ ರಚಿಸಲು ಡಿಸೆಂಬರ್ 29 ಬೆಳಗಾವಿಯಲ್ಲಿ ನಡೆದ ಸಚಿವ ಸಂಪುಟದಲ್ಲಿ ತೀರ್ಮಾನಿಸಿತ್ತು.

ಇದನ್ನೂ ಓದಿ: Reservation: ಚುನಾವಣೆ ಹೊತ್ತಲ್ಲಿ ಮೀಸಲಾತಿ ಅಸ್ತ್ರ ಪ್ರಯೋಗ, ಪ್ರಬಲ ಸಮುದಾಯಗಳನ್ನು ಎದುರು ಹಾಕಿಕೊಳ್ಳದೇ ಜಾಣ ನಡೆ ಇಟ್ಟ ಬಿಜೆಪಿ ಸರ್ಕಾರ 

ಹೊಸದಾಗಿ 2ಸಿ ಹಾಗೂ 2ಡಿ ಕೆಟಗರಿ ಸೃಷ್ಟಿಸುವ ಬಗ್ಗೆಯೂ ಹಲವು ಗೊಂದಲಗಳ ಗೂಡಾಗಿದೆ. ಈ ಹಿನ್ನೆಲೆಯಲ್ಲಿ ಪಂಚಮಸಾಲಿ ಲಿಂಗಾಯತ ಸಮುದಾಯ ತಮಗೆ ಸರ್ಕಾರ ನೀಡಿದ್ದ 2D ಕೆಟಗರಿಯನ್ನು ತಿರಸ್ಕರಿಸಿದ್ದು, 2A ಮೀಸಲಾತಿ ಬಗ್ಗೆ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದೆ.

ಇನ್ನು ಎರಡು ಹೊಸ ಕೆಟಗರಿ ರಚನೆ ಮಾಡುವುದೊಂದಿಗೆ ಈಗಾಗಲೇ 3ಎ ಮತ್ತು 3ಬಿನಲ್ಲಿದ್ದ ಉಳಿದ ಸಮುದಾಯಗಳು ಯಥಾಸ್ಥಿತಿಯಲ್ಲೇ ಇರಲಿವೆ. ಸದ್ಯ ಸಿಗುತ್ತಿರುವ ಮೀಸಲಾತಿ ಹಾಗೇ ಇರಲಿದೆ. ಆದ್ರೆ ಮುಂದಿನ ದಿನಗಳಲ್ಲಿ ಈ ಮೀಸಲಾತಿ ಪ್ರಮಾಣ ಹೆಚ್ಚು ಕಡಿಮೆ ಆಗುತ್ತಾ ಅನ್ನೋದು ಇನ್ನೂ ಸ್ಪಷ್ಟವಾಗಿಲ್ಲ. ಆದ್ರೆ ಸರ್ಕಾರವಂತೂ ಮೀಸಲಾತಿ ಸಂಕಷ್ಟದಿಂದ ಪಾರಾಗಲು ಈ ತಂತ್ರ ರೂಪಿಸಿತ್ತು.

Published On - 6:26 pm, Thu, 12 January 23