AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್ ಕನಿಷ್ಠ ಶುಲ್ಕಕ್ಕೆ ತೆರಿಗೆ ವಿಧಿಸುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ವಿದ್ಯುತ್​ ಗ್ರಾಹಕರಿಗೆ ಕರ್ನಾಟಕ ಹೈಕೋರ್ಟ್ ಸಿಹಿ ಸುದ್ದಿ ನೀಡಿದೆ. ಹೈಕೋರ್ಟ್​ ನ ಆದೇಶ ಗ್ರಾಹಕರ ಮೇಲಿನ ಹೊರೆಯನ್ನು ಕಡಿಮೆ ಮಾಡಿದೆ. ವಿದ್ಯುತ್ ಕನಿಷ್ಠ ಶುಲ್ಕದ ಮೇಲಿನ ತೆರಿಗೆಯನ್ನು ಅಸಂವಿಧಾನಿಕ ಎಂದು ಹೈಕೋರ್ಟ್​ ಆದೇಶ ನೀಡಿದೆ. ಕೇವಲ ಬಳಕೆಯಾದ ವಿದ್ಯುತ್‌ಗೆ ಮಾತ್ರ ತೆರಿಗೆ ವಿಧಿಸಬೇಕು ಎಂದು ಆದೇಶಿಸಿದೆ. 2003 ಮತ್ತು 2004ರ ತಿದ್ದುಪಡಿಗಳನ್ನು ರದ್ದುಗೊಳಿಸಲಾಗಿದೆ.

ವಿದ್ಯುತ್ ಕನಿಷ್ಠ ಶುಲ್ಕಕ್ಕೆ ತೆರಿಗೆ ವಿಧಿಸುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು
ಹೈಕೋರ್ಟ್​, ವಿದ್ಯುತ್​ ಮೀಟರ್​
Ramesha M
| Edited By: |

Updated on: Jun 25, 2025 | 10:24 PM

Share

ಬೆಂಗಳೂರು, ಜೂನ್​ 25: ವಿದ್ಯುತ್​ ಕನಿಷ್ಠ ಶುಲ್ಕಗಳ ಮೇಲೆ ತೆರಿಗೆ (Minimum electricity charges Tax) ವಿಧಿಸುವಂತಿಲ್ಲ. ಬಳಸಿದ ವಿದ್ಯುತ್ ಶುಲ್ಕಕ್ಕೆ ಮಾತ್ರ ತೆರಿಗೆ ವಿಧಿಸಬಹುದು. ಬಳಸದ ವಿದ್ಯುತ್​ಗೆ ಗ್ರಾಹಕರು ತೆರಿಗೆ ಕಟ್ಟಬೇಕಿಲ್ಲ ಎಂದು ಹೈಕೋರ್ಟ್ (High Court) ಆದೇಶ ನೀಡಿದೆ. ಜೊತೆಗೆ ಕರ್ನಾಟಕ ವಿದ್ಯುತ್ ಕಾಯ್ದೆ ಸೆಕ್ಷನ್​ 3 (1) ರ ತಿದ್ದುಪಡಿಯನ್ನು ನ್ಯಾ.ಅನಂತ್ ರಾಮನಾಥ್ ಹೆಗ್ಡೆ ಅವರಿದ್ದ ಹೈಕೋರ್ಟ್​ ಪೀಠ ರದ್ದುಪಡಿಸಿದೆ.

ಏನಿದು ಪ್ರಕರಣ?

ಕರ್ನಾಟಕ ವಿದ್ಯುತ್ (ಬಳಕೆಯ ಮೇಲಿನ ತೆರಿಗೆ)​ ಕಾಯ್ದೆ 1959ರ ಸೆಕ್ಷನ್​ 3 (1) ಗೆ 2003ರಲ್ಲಿ ಮತ್ತು 2004ರಲ್ಲಿ ರಾಜ್ಯ ಸರ್ಕಾರ ತಿದ್ದುಪಡಿ ಮಾಡಿದೆ. ಈ ತಿದ್ದುಪಡಿ ಮೂಲಕ ವಿದ್ಯುತ್​ ಕನಿಷ್ಠ ಶುಲಕ್ಕಕ್ಕೆ ತೆರಿಗೆ ವಿಧಿಸಲಾಗಿದೆ. ಈ ತಿದ್ದುಪಡಿಯು ನಿಯಮದ ತದ್ವಿರುದ್ಧವಾಗಿದೆ ಎಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಹಾಗೂ ಮೆಸಸ್​ ಸೋನಾ ಸಿಂಥೆಟೆಕ್ ಕಂಪನಿ ಅರ್ಜಿ ಸಲ್ಲಿಸಿದ್ದವು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯ ಪೀಠ, ಈಗಾಗಲೇ ಸಂಗ್ರಹಿಸಿರುವ ತೆರಿಗೆಯನ್ನು ಹಿಂದಿರುಗಿಸುವಂತೆ ನಿರ್ದೇಶನ ನೀಡುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಿದೆ. ಇದೇ ವೇಳೆ, ವಿದ್ಯುತ್​ ಶುಲ್ಕದ ಮೇಲಿನ ತೆರಿಗೆ ವಿಧಿಸಿದ್ದ ತಿದ್ದುಪಡಿಯನ್ನು ಅಸಂವಿಧಾನಿಕ ಎಂದು ಘೋಷಿಸಿದೆ.

ಇದನ್ನೂ ಓದಿ
Image
ಬಿಬಿಎಂಪಿಯ ಈಜುಕೊಳ ಪ್ರವೇಶ ದರ ಏರಿಕೆ: ಬೆಂಗಳೂರಿನ ಜನರಿಗೆ ಮತ್ತೊಂದು ಶಾಕ್​
Image
ಹಾಲು, ಮೊಸರು ಬೆಲೆ ಏರಿಕೆ ಬೆನ್ನಲ್ಲೇ ವಿದ್ಯುತ್‌ ದರ ಹೆಚ್ಚಳ!
Image
ಸ್ಮಾರ್ಟ್ ಮೀಟರ್ ಹಗರಣ ಆರೋಪ: ಊಹಾಪೋಹಗಳಿಗೆ ಕೆಪಿಟಿಸಿಎಲ್​​ ಎಂಡಿ ಸ್ಪಷ್ಟನೆ
Image
ಬೆಂಗಳೂರಿನಲ್ಲಿ ಆಟೋ ಮೀಟರ್ ದರ ಏರಿಕೆಗೆ ಮುಹೂರ್ತ ಫಿಕ್ಸ್

ಇದನ್ನೂ ಓದಿ: ನಿಮ್ಮ ಮನೆ, ಆಫೀಸ್, ಅಂಗಡಿಯ ವಿದ್ಯುತ್​ ಮೀಟರ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಚಿವ ಕೆಜೆ ​ಜಾರ್ಜ್

ಏನಿದು ವಿದ್ಯುತ್​ ಕನಿಷ್ಠ ಶುಲ್ಕ

ವಿದ್ಯುತ್ ಕನಿಷ್ಠ ಶುಲ್ಕ ತೆರಿಗೆ ಅಂದರೆ ವಿದ್ಯುತ್ ಅನ್ನು ಬಳಸಿದರೂ ಅಥವಾ ಬಳಸದಿದ್ದರೂ, ಪ್ರತಿ ತಿಂಗಳು ವಿಧಿಸಲಾಗುವ ಕನಿಷ್ಠ ಮೊತ್ತದ ತೆರಿಗೆಯಾಗಿದೆ. ನೀವು ವಿದ್ಯುತ್ ಬಳಸಿದಷ್ಟು, ಬಳಕೆಯ ಆಧಾರದ ಮೇಲೆ ಲೆಕ್ಕ ಹಾಕಿದ ಬಿಲ್ಲಿನ ಜೊತೆಗೆ ಈ ಕನಿಷ್ಠ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಇದು ವಿದ್ಯುತ್ ಸರಬರಾಜು ಕಂಪನಿಯು ವಿಧಿಸುವ ಶುಲ್ಕವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?