ಪ್ರಜ್ವಲ್​ ರೇವಣ್ಣ ಅನರ್ಹ ಬೆನ್ನಲ್ಲೇ ಇದೀಗ ತಂದೆ ಹೆಚ್​.ಡಿ.ರೇವಣ್ಣ ಶಾಸಕ ಸ್ಥಾನಕ್ಕೂ ಕುತ್ತು

ಪ್ರಜ್ವಲ್​ ರೇವಣ್ಣ ಅನರ್ಹ ಬೆನ್ನಲ್ಲೇ ಇದೀಗ ಅವರ ತಂದೆ ಹೆಚ್​.ಡಿ.ರೇವಣ್ಣ ಶಾಸಕ ಸ್ಥಾನಕ್ಕೂ ಕುತ್ತು ಬಂದಿದೆ. ಪರಾಜಿತ ಅಭ್ಯರ್ಥಿ ಸಲ್ಲಿಸಿದ್ದ ಶಾಸಕತ್ವ ಅಸಿಂಧು ಕೋರಿ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ರೇವಣ್ಣ ಸೇರಿದಂತೆ ಹಲವರಿಗೆ ಸಮನ್ಸ್ ಜಾರಿ ಮಾಡಿ ಆದೇಶಿಸಿದೆ.

ಪ್ರಜ್ವಲ್​ ರೇವಣ್ಣ ಅನರ್ಹ ಬೆನ್ನಲ್ಲೇ ಇದೀಗ ತಂದೆ ಹೆಚ್​.ಡಿ.ರೇವಣ್ಣ ಶಾಸಕ ಸ್ಥಾನಕ್ಕೂ ಕುತ್ತು
Follow us
| Updated By: ರಮೇಶ್ ಬಿ. ಜವಳಗೇರಾ

Updated on: Sep 04, 2023 | 12:38 PM

ಬೆಂಗಳೂರು, (ಸೆಪ್ಟೆಂಬರ್ 04): ಪ್ರಜ್ವಲ್​ ರೇವಣ್ಣ (Prajwal Revanna) ಅವರ ಸಂಸದ ಸ್ಥಾನ ಅಸಿಂಧುಗೊಳಿಸಿದ ಬೆನ್ನಲ್ಲೇ ಇದೀಗ ಶಾಸಕರಾಗಿ ಹೆಚ್​.ಡಿ.ರೇವಣ್ಣ (HD Revanna) ಆಯ್ಕೆ ಅಸಿಂಧು ಕೋರಿ ಅರ್ಜಿ ವಿಚಾರಣೆಗೆ ಬಂದಿದ್ದು, ಶಾಸಕ ಹೆಚ್.ಡಿ.ರೇವಣ್ಣ ಸೇರಿದಂತೆ ಎಲ್ಲಾ ಅಭ್ಯರ್ಥಿಗಳಿಗೂ ಕರ್ನಾಟಕ ಹೈಕೋರ್ಟ್ (Karnataka High Court) ಸಮನ್ಸ್ ಜಾರಿಗೆ ಆದೇಶಿಸಿದೆ. ಪರಾಜಿತ ಬಿಜೆಪಿ(BJP) ಅಭ್ಯರ್ಥಿ ದೇವರಾಜೇಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ಇಂದು(ಸೆಪ್ಟೆಂಬರ್ 04) ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಶಾಸಕ ಹೆಚ್.ಡಿ.ರೇವಣ್ಣ ಸೇರಿದಂತೆ ಅವರ ವಿರುದ್ಧ ಸ್ಪರ್ಧಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ಸಮನ್ಸ್ ಜಾರಿ ಮಾಡುವಂತೆ ಆದೇಶ ಹೊರಡಿಸಿದೆ. ವಿಧಾನಸಭೆ ಕಾರ್ಯದರ್ಶಿ ಮೂಲಕ ಸಮನ್ಸ್ ಜಾರಿಗೆ ಕೋರ್ಟ್ ಆದೇಶ ಮಾಡಿದೆ.

ಇದೇ ಚುನಾವಣಾ ತಕರಾರು ಅರ್ಜಿ ಸಂಬಂಧ ಶಾಸಕ ಹೆಚ್. ಡಿ.ರೇವಣ್ಣ ವಿರುದ್ಧ ಪರಾಜಿತ ಬಿಜೆಪಿ ಅಭ್ಯರ್ಥಿ ದೇವರಾಜೇಗೌಡ ಸಲ್ಲಿಸಿದ್ದ ಅರ್ಜಿ ವಿಚಾರವಾಗಿ ಹೈಕೋರ್ಟ್ ಏಕಸದಸ್ಯ ಪೀಠದಿಂದ ನೋಟಿಸ್​ ಜಾರಿ ಮಾಡಿತ್ತು. ಇದೀಗ ಸಮನ್ಸ್​ ಜಾರಿಗೆ ಆದೇಶಿಸಿದೆ.

ಇದನ್ನೂ ಓದಿ: ಶಾಸಕತ್ವ ಅಸಿಂಧು ಕೋರಿ ಅರ್ಜಿ: ಮಾಜಿ ಸಚಿವ ಹೆಚ್​ಡಿ ರೇವಣ್ಣಗೆ ಹೈಕೋರ್ಟ್ ನೋಟಿಸ್, ಸಚಿವ ಪ್ರಿಯಾಂಕ್ ಖರ್ಗೆಗೆ ಸಮನ್ಸ್​ ಜಾರಿ

ಚುನಾವಣಾ ಅಕ್ರಮಗಳಿಂದ ಹೆಚ್.ಡಿ. ರೇವಣ್ಣ ಜಯಗಳಿಸಿದ್ದಾರೆ. 2ನೇ ಸ್ಥಾನದಲ್ಲಿದ್ದ ಶ್ರೇಯಸ್ ಪಟೇಲ್ ಮತದಾರರಿಗೆ ಆಮಿಷ ಒಡ್ಡಿದ್ದಾರೆ. ಹೀಗಾಗಿ ಇವರಿಬ್ಬರ ಮತಗಳಿಕೆಯನ್ನು ಅಸಿಂಧುಗೊಳಿಸುವಂತೆ ಬಿಜೆಪಿ ಪರಾಜಿತ ಅಭ್ಯರ್ಥಿ ದೇವರಾಜೇಗೌಡ ಅವರು ಕೋರ್ಟ್​ಗೆ ಸಲ್ಲಿಸಿದ್ದ ಅರ್ಜಿಯಲ್ಲಿ ಮನವಿ ಮಾಡಿದ್ದರು.

ನಿಮ್ಮ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್