AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಂಚನೆ ಕೇಸ್: ರಮೇಶ್ ಜಾರಕಿಹೊಳಿಯನ್ನು ಅರೆಸ್ಟ್ ಮಾಡದಂತೆ ಹೈಕೋರ್ಟ್ ಸೂಚನೆ

Ramesh Jarkiholi Bank Case: ಸಹಕಾರಿ ಬ್ಯಾಂಕ್​ಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಗೆ ಕರ್ನಾಟಕ ಹೈಕೋರ್ಟ್​ ಕೊಂಚ ರಿಲೀಫ್ ನೀಡಿದೆ. ರಮೇಶ್ ಜಾರಕಿಹೊಳಿಯನ್ನು ಬಂಧಿಸಿದಂತೆ ಹೇಳಿದೆ. ಆದ್ರೆ, ತನಿಖೆಗೆ ಸಹಕರಿಸುವಂತೆ ಜಾರಕಿಹೊಳಿಗೆ ಸೂಚನೆ ನೀಡಿದೆ.

ವಂಚನೆ ಕೇಸ್: ರಮೇಶ್ ಜಾರಕಿಹೊಳಿಯನ್ನು ಅರೆಸ್ಟ್ ಮಾಡದಂತೆ ಹೈಕೋರ್ಟ್ ಸೂಚನೆ
TV9 Web
| Edited By: |

Updated on:Mar 15, 2024 | 3:55 PM

Share

ಬೆಂಗಳೂರು, (ಮಾರ್ಚ್ 15): ಅಪೆಕ್ಸ್ ಬ್ಯಾಂಕ್​ಗೆ ಸಾಲ ಪಾವತಿಸದೇ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಗೆ ಸಹಕರಿಸುವಂತೆ ಹೈಕೋರ್ಟ್(Karnataka High Court) ​ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಗೆ(Ramesh Jarkiholi)  ಸೂಚಿಸಿದೆ. ತಮ್ಮ ವಿರುದ್ಧ ದಾಖಲಾಗಿರುವ ಸಹಕಾರಿ ಬ್ಯಾಂಕ್​ಗೆ ವಂಚನೆ ಪ್ರಕರಣವನ್ನು ರದ್ದುಕೋರಿ ರಮೇಶ್ ಜಾರಕಿಹೊಳಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿದ್ದು, ಈ ವೇಳೆ ಸರ್ಕಾರದ ಪರ ಎಸ್​ಪಿಪಿ ಬ್ಯಾತ ಎನ್ ಜಗದೀಶ್ ವಾದ ಮಾಡಿ ಸಿಐಡಿ ನೋಟಿಸ್ ನೀಡಿದರೂ ತನಿಖೆಗೆ ಹಾಜರಾಗಿಲ್ಲ ಎಂದು ಹೈಕೋರ್ಟ್​ಗೆ ತಿಳಿಸಿದರು. ಈ ಹಿನ್ನೆಲೆಯಲ್ಲಿ ಕೋರ್ಟ್​, ತನಿಖೆಗೆ ಸಹಕರಿಸಬೇಕೆಂದು ಜಾರಕಿಹೊಳಿ ಸೂಚಿಸಿದೆ. ಇನ್ನು ವಿಚಾರಣೆಗೆ ಹಾಜರಾದರೆ ರಮೇಶ್ ಜಾರಕಿಹೊಳಿಯನ್ನು ಬಂಧಿಸದಂತೆ ಸಿಐಡಿಗೆ ಸೂಚಿಸಿದೆ. ಇದರಿಂದ ರಮೇಶ್ ಜಾರಕಿಹೊಳಿಗೆ ಕೊಂಚ ರಿಲೀಫ್ ಸಿಕ್ಕಂತಾಗಿದೆ.

ರಮೇಶ್ ಜಾರಕಿಹೊಳಿ ಒಡೆತನದ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಲಿಮಿಟೆಡ್ ಕಂಪನಿಗಾಗಿ ಅಪೆಕ್ಸ್ ಬ್ಯಾಂಕ್​ನಿಂದ 232 ಕೋಟಿ 88 ಲಕ್ಷ rಊಪಾಯಿ ಸಾಲ ಪಡೆದಿದ್ದರು. ಆದ್ರೆ, ಸಾಲವನ್ನು ವಾಪಸ್ ಕಟ್ಟಿಲ್ಲ. ಹೀಗಾಗಿ ಸಾಲ ಮರುಪಾವತಿಸದೇ ಬ್ಯಾಂಕ್​ಗೆ ವಂಚನೆ ಮಾಡಿದ್ದಾರೆ ಎಂದು ಅಪೆಕ್ಸ್ ಬ್ಯಾಂಕ್ ಮ್ಯಾನೇಜರ್ ದೂರು ನೀಡಿದ್ದರು. ಆದ್ರೆ, ಈ ದೂರು ರದ್ದುಗೊಳಿಸುವಂತೆ ರಮೇಶ್ ಜಾರಕಿಹೊಳಿ ಹೈಕೋರ್ಟ್ ಮೆಟ್ಟಿಲೇರಿದ್ದು, ಕಂಪನಿಯ ಹುದ್ದೆಗಳಿಗೆ ರಾಜಿನಾಮೆ ನೀಡಿ ಹೊಸಬರ ನೇಮಕವಾಗಿದೆ. ಎನ್​​ಸಿಎಲ್​ಟಿಯಲ್ಲಿ ವಿಚಾರಣೆ ಇರುವಾಗ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕ್ರಿಮಿನಲ್‌ ಪ್ರಕರಣವನ್ನು ರದ್ದುಗೊಳಿಸಬೇಕೆಂದು ಕೋರ್ಟ್​ಗೆ ಮನವಿ ಮಾಡಿದ್ದಾರೆ.

ಪ್ರಕರಣದ ಹಿನ್ನೆಲೆ

ಬೆಂಗಳೂರಿನ ಚಾಮರಾಜಪೇಟೆಯ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‍ನಿಂದ ಬೆಳಗಾವಿಯ (Belagavi) ಗೋಕಾಕ್‍ನ ಸೌಭಾಗ್ಯಲಕ್ಷ್ಮಿ ಶುಗರ್ ಲಿಮಿಟೆಡ್ ಕಂಪನಿ ಹೆಸರಲ್ಲಿ ಅವರು ಸಾಲ ಪಡೆದಿದ್ದಾರೆ. 2013 ರಿಂದ 2017 ರವರೆಗೆ 232 ಕೋಟಿ 88 ಲಕ್ಷ ರೂ. ಸಾಲ ಪಡೆದಿದ್ದಾರೆ. ಅಲ್ಲದೇ ಬೇರೆ ಬೇರೆ ಜಿಲ್ಲೆಗಳ ಅಪೆಕ್ಸ್ ಬ್ಯಾಂಕ್‍ನ ಸಮೂಹ ಬ್ಯಾಂಕ್‍ಗಳಲ್ಲೂ ಸಾಲ ಪಡೆದಿರುವ ಅವರು, 439 ಕೋಟಿ 7 ಲಕ್ಷ ರೂ. ಸಾಲ ಬಾಕಿ ಉಳಿಸಿಕೊಂಡಿದ್ದು, ಸಾಲ ಮರುಪಾವತಿಸದೆ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್‌ನ ಪ್ರಧಾನ ವ್ಯವಸ್ಥಾಪಕ ರಾಜಣ್ಣ (56) ಅವರು ಶುಕ್ರವಾರ ದೂರು ದಾಖಲಿಸಿದ್ದಾರೆ.

ರಮೇಶ್‌ ಜಾರಕಿಹೊಳಿ ಅವರು ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಬೆಳಗಾವಿಯ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಲಿಮಿಟೆಡ್‌ ಸಕ್ಕರೆ ಕಾರ್ಖಾನೆಯ ಸ್ಥಾಪನೆ, ವಿಸ್ತರಣೆ ಹಾಗೂ ನಿರ್ವಹಣೆಗಾಗಿ 2013 ರಿಂದ 2017ರವರೆಗೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್‌ ಬ್ಯಾಂಕ್‌ ಮತ್ತು ಅದರ ಸಮೂಹ ಬ್ಯಾಂಕ್‌ಗಳಿಂದ ಸಾಲ ಪಡೆದಿದ್ದರು. ನಂತರ ಆ ಸಾಲ ಹಿಂದಿರುಗಿಸದೆ ವಂಚಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:52 pm, Fri, 15 March 24

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್