AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಕ್ಸಿಜನ್ ಕೊರತೆಯಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡಿ; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಆಮ್ಲಜನಕ ಕೊರತೆಯಿಂದ ಮರಣಿಸಿದವರ ಕುಟುಂಬಕ್ಕೆ ಪರಿಹಾರ ಒದಗಿಸುವತ್ತ ಸರ್ಕಾರ ಕಾರ್ಯ ಕೈಗೊಳ್ಳಬೇಕು ಎಂದು ಮುಖ್ಯ ನ್ಯಾಯಮೂರ್ತಿ ಅಭಯ್ ಒಕಾ ಮತ್ತು ನ್ಯಾಯಮೂರ್ತಿ ಅರವಿಂದ್ ಕುಮಾರ್ ತಿಳಿಸಿದ್ದಾರೆ.

ಆಕ್ಸಿಜನ್ ಕೊರತೆಯಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡಿ; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಕರ್ನಾಟಕ ಹೈಕೋರ್ಟ್
TV9 Web
| Updated By: ganapathi bhat|

Updated on:Aug 23, 2021 | 12:35 PM

Share

ಬೆಂಗಳೂರು: ಆಕ್ಸಿಜನ್ ಪೂರೈಕೆ ಸಮಸ್ಯೆಯಿಂದ ಸಾವನ್ನಪ್ಪಿದ ಕೊರೊನಾ ಸೋಂಕಿತರ ಕುಟುಂಬಕ್ಕೆ ಪರಿಹಾರ ನೀಡಬೇಕು ಎನ್ನುವ ವಿಚಾರವನ್ನು ಹೈಕೋರ್ಟ್ ಕರ್ನಾಟಕ ಸರ್ಕಾರದ ಗಮನಕ್ಕೆ ತಂದಿದೆ. ಚಾಮರಾಜನಗರ ಕೊವಿಡ್ ಆಸ್ಪತ್ರೆಯಲ್ಲಿ ವೈದ್ಯಕೀಯ ಆಮ್ಲಜನಕ‌ ಕೊರತೆಯಿಂದ 24 ಮಂದಿ ಮರಣಿಸಿದ್ದರು. ಅವರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಗುರುವಾರ ಸೂಚನೆ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಅಭಯ್ ಒಕಾ ಮತ್ತು ನ್ಯಾಯಮೂರ್ತಿ ಅರವಿಂದ್ ಕುಮಾರ್ ಹೀಗೆ ಹೇಳಿದ್ದಾರೆ. ಆಮ್ಲಜನಕ ಕೊರತೆಯಿಂದ ಮರಣಿಸಿದವರ ಕುಟುಂಬಕ್ಕೆ ಪರಿಹಾರ ಒದಗಿಸುವತ್ತ ಸರ್ಕಾರ ಕಾರ್ಯ ಕೈಗೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಮೃತಪಟ್ಟವರು 24 ಜನರಲ್ಲ, 36 ಜನರು ಎಂದು ನ್ಯಾ.ಎ.ಎನ್. ವೇಣುಗೋಪಾಲಗೌಡ ನೇತೃತ್ವದ ಸಮಿತಿ ಹೈಕೋರ್ಟ್​ಗೆ ವರದಿ ಸಲ್ಲಿಸಿತ್ತು. ಮೇ 2ರ ರಾತ್ರಿ 10.30ರಿಂದ ತಡರಾತ್ರಿ 2.30ರವರೆಗೆ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಮಸ್ಯೆ ಉಂಟಾಗಿತ್ತು. ಈ 4 ಗಂಟೆಗಳ ಅವಧಿಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಚಿಕಿತ್ಸೆಗಾಗಿ ಆಕ್ಸಿಜನ್ ಇರಲಿಲ್ಲ ಎಂದು ವರದಿಯಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

ಆಡಿಟ್ ವರದಿ ಪ್ರಕಾರ ಆಕ್ಸಿಜನ್ ಕೊರತೆಯಿಂದ ಮೂವರು ಸಾವನ್ನಪ್ಪಿದ್ದಾರೆ. ಮೆದುಳಿನ ಆಘಾತದಿಂದ 7 ರೋಗಿಗಳು ಮೃತಪಟ್ಟಿದ್ದಾರೆ. ಕೊರೊನಾ ಸೋಂಕಿನಿಂದ 14 ಸಾವಾಗಿದೆ ಎಂದು ಆಡಿಟ್ ವರದಿಯಲ್ಲಿ ತಿಳಿಸಲಾಗಿದೆ. ಆದರೆ ಇವರೆಲ್ಲರಿಗೂ ಆಕ್ಸಿಜನ್ ಕೊರತೆ ಆಗಿದ್ದು ನಿಜ. ಆಕ್ಸಿಜನ್ ಕೊರತೆಯಾದ ನಂತರ 36 ಒಳರೋಗಿಗಳು ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ನ್ಯಾ.ಎ.ಎನ್. ವೇಣುಗೋಪಾಲಗೌಡ ನೇತೃತ್ವದ ಸಮಿತಿ ಹೈಕೋರ್ಟ್​ಗೆ ವರದಿ ಸಲ್ಲಿಸಿದೆ.

ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದ ಜನರ ಸಾವು ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡುವ ಬಗ್ಗೆ ನಿರ್ಧರಿಸಿ ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಕಳ್ಳಬಟ್ಟಿ ದುರಂತಕ್ಕೂ ಪರಿಹಾರ ಕೊಟ್ಟಿದ್ದೀರಿ. ಹೀಗಾಗಿ ಈ ಪ್ರಕರಣದಲ್ಲಿ ಪರಿಹಾರ ನೀಡಲು ಹಿಂಜರಿಕೆ ಸರಿಯಲ್ಲ ಎಂದ ಹೈಕೋರ್ಟ್ ವಿಭಾಗೀಯ ಪೀಠ,  ಪರಿಹಾರ ನೀಡುವ ಬಗ್ಗೆ ಪ್ರತಿಕ್ರಿಯಿಸಲು  ಸರ್ಕಾರಕ್ಕೆ ತಿಳಿಸಿದೆ.

ಇದನ್ನೂ ಓದಿ: ಕೊವಿಡ್ ಲಸಿಕೆಯ 1ನೇ ಡೋಸ್ ಕೊಟ್ಟು 2ನೇ ಡೋಸ್ ಕೊಡದಿರುವುದು ಸಂವಿಧಾನದ ಆರ್ಟಿಕಲ್ 21ರ ಉಲ್ಲಂಘನೆ: ಹೈಕೋರ್ಟ್

ಕೋವಿಡ್​ ಸಂಬಂಧಿತ ಅರ್ಜಿಗಳನ್ನ ಹಾಕಿದ್ರೆ ವಕೀಲರಿಂದಲೇ ವೆಚ್ಚ ವಸೂಲಿ ಮಾಡ್ತೇವೆ: ಕರ್ನಾಟಕ ಹೈಕೋರ್ಟ್ ಎಚ್ಚರಿಕೆ

Published On - 4:46 pm, Fri, 14 May 21

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ