AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಫಾರಸ್ಸಿನ ಮೇರೆಗೆ ವರ್ಗಾವಣೆ ಮಾಡುವುದು ತಪ್ಪಲ್ಲ: ತಹಶೀಲ್ದಾರ್​​​ಗೆ ಹೈಕೋರ್ಟ್ ಪಾಠ

ಕೆಲ ಸಂದರ್ಭಗಳಲ್ಲಿ ರಾಜಕೀಯ ನಾಯಕರ ಹಾಗೂ ಅಧಿಕಾರಿಗಳ ನಡುವೆ ವೈಮನಸ್ಸು ತಾರಕಕ್ಕೆ ಹೋಗಿ ವರ್ಗಾವಣೆ ಹಂತಕ್ಕೂ ಹೋಗಿವ ಉದಾಹರಣೆಗಳು ಇವೆ. ಇನ್ನು ಕೆಲ ಅಧಿಕಾರಿಗಳು ತಮ್ಮ ವರ್ಗಾವಣೆ ಪ್ರಶ್ನಿಸಿ ಕೆಎಟಿ ಮೆಟ್ಟಿಲೇರಿ ಸರ್ಕಾರದ ಆದೇಶಕ್ಕೆ ತಡೆ ತಂದಿರುವ ಪ್ರಕರಣಗಳಿವೆ. ಇದರ ಮಧ್ಯೆ ಶಾಸಕರೊಬ್ಬರ ಶಿಫಾರಸಿನ ಮೇರೆಗೆ ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿ ಹೈಕೋರ್ಟ್​​ ಮೆಟ್ಟಿಲೇರಿದ್ದ ತಹಶೀಲ್ದಾರ್ ಹಿನ್ನಡೆಯಾಗಿದೆ. ವರ್ಗಾವಣೆ ವಿಚಾರದಲ್ಲಿ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.

ಶಿಫಾರಸ್ಸಿನ ಮೇರೆಗೆ ವರ್ಗಾವಣೆ ಮಾಡುವುದು ತಪ್ಪಲ್ಲ: ತಹಶೀಲ್ದಾರ್​​​ಗೆ ಹೈಕೋರ್ಟ್ ಪಾಠ
Karnataka High Court
Ramesha M
| Updated By: ರಮೇಶ್ ಬಿ. ಜವಳಗೇರಾ|

Updated on: Aug 29, 2025 | 8:39 PM

Share

ಬೆಂಗಳೂರು, (ಆಗಸ್ಟ್ 29): ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸದ ಆರೋಪ ಹೊತ್ತ ಸರ್ಕಾರಿ ಅಧಿಕಾರಿಗಳನ್ನು ಸ್ಥಳೀಯ ಶಾಸಕ (ಜನಪ್ರತಿನಿಧಿ)ರ ಸಲಹೆ, ಶಿಫಾರಸ್ಸಿನ ಮೇರೆಗೆ ವರ್ಗಾವಣೆ ಮಾಡುವುದು ತಪ್ಪಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ (Karnataka High Court) ಸ್ಪಷ್ಟಪಡಿಸಿದೆ. ಬಂಗಾರಪೇಟೆ ಎಂಎಲ್ಎ (Bangarpet  MLA) ಶಿಫಾರಸ್ಸಿನಂತೆ ವರ್ಗಾವಣೆ ಮಾಡಿರುವುದನ್ನು ಪ್ರಶ್ನಿಸಿ ತಹಶೀಲ್ದಾರ್ ಎಸ್.ವೆಂಕಟೇಶಪ್ಪ ಕೆಎಟಿ ಮೊರೆ ಹೋಗಿದ್ದರು. ಆದ್ರೆ, ಕೆಎಟಿ ವಜಾ ಮಾಡಿದ ಹಿನ್ನೆಲೆಯಲ್ಲಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯನ್ನು ಇಂದು(ಆಗಸ್ಟ್ 29) ವಿಚಾರಣೆ ನಡೆಸಿದ ಹೈಕೋರ್ಟ್, ಕೆಎಟಿ ಆದೇಶವನ್ನು ಎತ್ತಿಹಿಡಿದೆ. ವಿಶೇಷ ಸಂದರ್ಭಗಳಲ್ಲಿ ಸಿಎಂ ಸಮ್ಮತಿಯೊಂದಿಗೆ ವರ್ಗಾವಣೆಗೆ ಅವಕಾಶವಿದೆ ಎಂದು ನ್ಯಾಯಮೂರ್ತಿ ಎಸ್.ಜಿ. ಪಂಡಿತ್ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ತಹಶೀಲ್ದಾರ್ ವೆಂಕಟೇಶಪ್ಪ ಪರ ವಕೀಲರ ವಾದ

2024ರ ಜುಲೈ 31ರಿಂದ ಕೋಲಾರ ಜಿಲ್ಲೆಯ ಬಂಗಾರಪೇಟೆಯ ತಹಶೀಲ್ದಾರ್ ಕಚೇರಿಯಲ್ಲಿ ಗ್ರೇಡ್ – 1 ತಹಶೀಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದರು. 2024ರ ಡಿಸೆಂಬರ್ 31ರಂದು ಕೋಲಾರ ಜಿಲ್ಲಾಧಿಕಾರಿಗಳ ಕಚೇರಿಗೆ ಅಂದರೆ, ನಿಗದಿತ ಅವಧಿಗೂ ಮುನ್ನ ವರ್ಗಾವಣೆ ಮಾಡಲಾಗಿತ್ತು. 2025ರ ಜೂನ್ 25ರ ವರ್ಗಾವಣೆ ಮಾರ್ಗಸೂಚಿಗಳಿಗಳ ಪ್ರಕಾರ ಯಾವುದೇ ಅಧಿಕಾರಿಯನ್ನು ಎರಡು ವರ್ಷಗಳಿಗೂ ಮುನ್ನ ವರ್ಗಾವಣೆ ಮಾಡಬಾರದು ಎಂಬುದಾಗಿ ತಿಳಿಸಲಾಗಿದೆ. ಆದರೆ, ಅಧಿಕಾರ ಸ್ವೀಕರಿಸಿದ ಆರು ತಿಂಗಳಿಗೂ ಮುನ್ನ ವರ್ಗಾವಣೆ ಮಾಡಿದ್ದು, ಮಾರ್ಗಸೂಚಿಗಳನ್ನು ಉಲ್ಲಂಘಿಸಲಾಗಿದೆ. ಈ ವರ್ಗಾವಣೆ ಶಾಸಕರ ಮನವಿಯ ಮೇರೆಗೆ ಆದೇಶಿಸಲಾಗಿದ್ದು, ಇದರಲ್ಲಿ ಸಾರ್ವಜನಿಕ ಹಿತಾಸಕ್ತಿ ಅಡಿದೆ ಎನ್ನಲಾಗದು. ಆದ್ದರಿಂದ ವರ್ಗಾವಣೆ ಆದೇಶವನ್ನು ರದ್ದುಪಡಿಸಬೇಕು ಎಂದು  ಮನವಿ ಮಾಡಿದರು.

ಇದನ್ನೂ ಓದಿ: 1991ರಲ್ಲಿಯೇ ಕಾಂಗ್ರೆಸ್ ಮತಕಳ್ಳತನ ಮಾಡಿತ್ತಾ? ತಿರುಗುಬಾಣವಾದ ಸಿದ್ದರಾಮಯ್ಯ ಹೇಳಿಕೆ

ಸರ್ಕಾರದ ಪರ ವಕೀಲರ ವಾದ

ನಿಯಮದಂತೆ ವರ್ಗಾವಣೆಗೆ ಮುಖ್ಯಮಂತ್ರಿಗಳ ಅನುಮತಿ ಪಡೆಯಲಾಗಿದೆ. ಸ್ಥಳೀಯ ನಿವಾಸಿಗಳ ದೂರಿದ್ದಿದ್ದರಿಂದ ವರ್ಗಾವಣೆ ಮಾಡಲಾಗಿದೆ ಎಂದು ಸರ್ಕಾರದ ಪರ ವಕೀಲರು ವಾದ ಮಂಡಿಸಿದರು. ಇದನ್ನು ಆಲಿಸಿದ ಹೈಕೋರ್ಟ್, ವಿಶೇಷ ಸಂದರ್ಭಗಳಲ್ಲಿ ಸಿಎಂ ಸಮ್ಮತಿಯೊಂದಿಗೆ ವರ್ಗಾವಣೆಗೆ ಅವಕಾಶವಿದೆ. ಶಾಸಕರ ಶಿಫಾರಸು ಆಧರಿಸಿದ ವರ್ಗಾವಣೆ ಅಮಾನ್ಯವಲ್ಲ ಎಂದು ಹೇಳಿ ತಹಶೀಲ್ದಾರ್ ಎಸ್.ವೆಂಕಟೇಶಪ್ಪ ವರ್ಗಾವಣೆ ರದ್ದಿಗೆ ಹೈಕೋರ್ಟ್ ನಿರಾಕರಿಸಿದೆ.

ಅವಧಿಪೂರ್ವ ವರ್ಗಾವಣೆ ಮಾಡಿದ್ದರೂ, ಅವರ ವಿರುದ್ಧ ಕಚೇರಿಗೆ ಸಮಯಕ್ಕೆ ಬಾರದಿರುವುದು, ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಒದಗಿಸದಿರುವ ಕಾರಣದಿಂದ ಸ್ಥಳೀಯರು ಶಾಸಕರಿಗೆ ದೂರು ನೀಡಿದ್ದಾರೆ. ಈ ದೂರಿನ ಮುಂದಿನ ಭಾಗವಾಗಿ ಅರ್ಜಿದಾರರನ್ನು ವರ್ಗಾವಣೆ ಮಾಡುವಂತೆ ಸ್ಥಳೀಯ ಶಾಸಕರು ಕಂದಾಯ ಸಚಿವರಿಗೆ ಮನವಿ ಮಾಡಿದ್ದಾರೆ. ಆದ ಕಾರಣದ ಕೆಎಟಿ ಅರ್ಜಿದಾರರನ್ನು ವರ್ಗಾವಣೆ ಮಾಡಿರುವ ಕ್ರಮವನ್ನು ಎತ್ತಿಹಿಡಿದಿದೆ. ಈ ಆದೇಶದಲ್ಲಿ ಯಾವುದೇ ಕಾನೂನು ಉಲ್ಲಂಘನೆ ಮತ್ತು ದೋಷಗಳು ಕಂಡು ಬರುತ್ತಿಲ್ಲ ಎಂದು ಪೀಠ ತಿಳಿಸಿದೆ.

2024ರ ಮಾರ್ಗಸೂಚಿಗಳ ಷರತ್ತುಗಳ ಪ್ರಕಾರ ವಿಶೇಷ ಅಥವಾ ಅಸಾಮಾನ್ಯ ಕಾರಣಗಳಿಗೆ ಮುಖ್ಯಮಂತ್ರಿಗಳಿಂದ ಅನುಮೋದನೆ ಪಡೆದು ವರ್ಗಾವಣೆ ಮಾಡುವುದಕ್ಕೆ ಅವಕಾಶವಿದೆ. ಈ ಪ್ರಕರಣದಲ್ಲಿ ಮುಖ್ಯಮಂತ್ರಿಗಳಿಂದ ಅನುಮತಿ ಪಡೆದ ಬಳಿಕವೇ ವರ್ಗಾವಣೆ ಮಾಡಿರುವುದು ದಾಖಲೆಗಳಿಂದ ಗೊತ್ತಾಗುತ್ತಿದೆ. ಆದ್ದರಿಂದ ಈ ವರ್ಗಾವಣೆಯಲ್ಲಿ ದುರುದ್ದೇಶಪೂರಿತ ಎಂಬ ಆರೋಪಕ್ಕೆ ಯಾವುದೇ ಆಧಾರಗಳಿಲ್ಲ. ಜೊತೆಗೆ, ಅರ್ಜಿದಾರರು, ವರ್ಗಾವಣೆಗೆ ಹೊಣೆಗಾರರಾಗಿದ್ದು, ಅವರನ್ನು ಕೋಲಾರ ಜಿಲ್ಲೆಯಲ್ಲಿ ಮತ್ತೊಂದು ಸ್ಥಳಕ್ಕೆ ನಿಯೋಜನೆ ಮಾಡಲಾಗಿದೆ. ಆದ್ದರಿಂದ ಅವರಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಪೀಠ ಅಭಿಪ್ರಾಯಪಟ್ಟಿದೆ.

ಪ್ರಕರಣದ ಹಿನ್ನೆಲೆ

ಎಸ್.ವೆಂಕಟೇಶಪ್ಪ ಅವರು 2024ರ ಜುಲೈ 31ರಿಂದ ಕೋಲಾರ ಜಿಲ್ಲೆಯ ಬಂಗಾರಪೇಟೆಯ ತಹಶೀಲ್ದಾರ್ ಕಚೇರಿಯಲ್ಲಿ ಗ್ರೇಡ್ -1 ತಹಶೀಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಅರ್ಜಿದಾರರ ವಿರುದ್ಧ ಸಮಯಕ್ಕೆ ಸರಿಯಾಗಿ ಕಚೇರಿಗೆ ಹಾಜರಾಗದಿರುವುದು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದೆ ಇರುವ ಆರೋಪವಿತ್ತು. ಈ ಹಿನ್ನೆಲೆಯಲ್ಲಿ ಬಂಗಾರಪೇಟೆ ಕ್ಷೇತ್ರದ ಶಾಸಕರು, ಕಂದಾಯ ಸಚಿವರಿಗೆ ಪತ್ರವೊಂದನ್ನು ಬರೆದಿದ್ದರು. ಆ ಮೂಲಕ ಅರ್ಜಿದಾರರನ್ನು ವರ್ಗಾವಣೆ ಮಾಡಿ ಅವರ ಸ್ಥಾನಕ್ಕೆ ಬೇರೆ ಅಧಿಕಾರಿಯನ್ನು ನಿಯೋಜನೆ ಮಾಡುವಂತೆ ಕೋರಿದ್ದರು. ಅದರಂತೆ ಅರ್ಜಿದಾರರನ್ನು 2024ರ ಡಿಸೆಂಬರ್ 13ರಂದು ವರ್ಗಾವಣೆ ಮಾಡಿ ಆದೇಶಿಸಲಾಗಿತ್ತು. ಆದ್ರೆ, ಇದನ್ನು ಪ್ರಶ್ನಿಸಿ ಎಸ್.ವೆಂಕಟೇಶಪ್ಪ ಅವರು ಕೆಎಟಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಕೆಎಟಿ ವರ್ಗಾವಣೆ ಆದೇಶವನ್ನು ಎತ್ತಿಹಿಡಿದು, ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿತ್ತು. ಬಳಿಕ ಈ ಆದೇಶ ಪ್ರಶ್ನಿಸಿ ಎಸ್.ವೆಂಕಟೇಶಪ್ಪ ಅವರಯ ಹೈಕೋರ್ಟ್ ಮೆಟ್ಟಿಲೇರಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ