ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗ ಅಲ್ಲ: ಹೈಕೋರ್ಟ್ ತ್ರಿಸದಸ್ಯ ಪೀಠ ತೀರ್ಪು

ಹೈಕೋರ್ಟ್​ ತ್ರಿಸದಸ್ಯ ಪೀಠವು ಹಿಜಾಬ್ ವಿವಾದ ಕುರಿತು ತೀರ್ಪು ನೀಡಿದ್ದು ಹಿಜಾಬ್​ ಇಸ್ಲಾಂನ ಅತ್ಯಗತ್ಯ ಭಾಗ ಅಲ್ಲ ಎಂದು ಹೇಳಿದೆ.

ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗ ಅಲ್ಲ: ಹೈಕೋರ್ಟ್ ತ್ರಿಸದಸ್ಯ ಪೀಠ ತೀರ್ಪು
ಕರ್ನಾಟಕ ಉಚ್ಚ ನ್ಯಾಯಾಲಯ
Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Mar 15, 2022 | 11:28 AM

ಬೆಂಗಳೂರು: ಹೈಕೋರ್ಟ್​ ತ್ರಿಸದಸ್ಯ ಪೀಠವು ಹಿಜಾಬ್ (Hijab) ವಿವಾದ ಕುರಿತು ತೀರ್ಪು ನೀಡಿದ್ದು ಹಿಜಾಬ್​ ಇಸ್ಲಾಂನ ಅತ್ಯಗತ್ಯ ಭಾಗ ಅಲ್ಲ ಎಂದು ಹೇಳಿದೆ. ಸರ್ಕಾರದ ಆದೇಶವು ಕಾನೂನುಬದ್ಧವಾಗಿದೆ ಎಂದು ಕರ್ನಾಟಕ ಹೈಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ.

ಶಾಲೆಗಳಿಗೆ ನಿಗದಿಪಡಿಸಿರುವ ಸಮವಸ್ತ್ರಗಳನ್ನು ಮಾತ್ರ ವಿದ್ಯಾರ್ಥಿಗಳು ಧರಿಸಬೇಕು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಮತ್ತು ನ್ಯಾಯಮೂರ್ತಿ ಖಾಜಿ ಜೈಬುನ್ನಿಸಾ ಈ ನ್ಯಾಯಪೀಠದಲ್ಲಿದ್ದರು. ಎಲ್ಲ ರಿಟ್ ಅರ್ಜಿಗಳನ್ನೂ ನ್ಯಾಯಪೀಠ ವಜಾಗೊಳಿಸಿದೆ. ಉಡುಪಿ ಕಾಲೇಜಿಗೆ ಪ್ರತ್ಯೇಕ ನಿರ್ದೇಶನ ನೀಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

Published On - 10:40 am, Tue, 15 March 22