
ಕರ್ನಾಟಕದ ಉಡುಪಿ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರಿಕರಣ ಸಾಕಷ್ಟು ಚರ್ಚೆಯಾಗುತ್ತಿದೆ. ಈ ಸಂಬಂಧ ರಾಜ್ಯ ಬಿಜೆಪಿ ನಾಯಕರು ರಾಜ್ಯಪಾಲರಿಗೆ ದೂರು ನೀಡಿದ್ದು, ಎನ್ಐಎ ತನಿಖೆಗೆ ಒತ್ತಯಿಸುತ್ತಿದ್ದಾರೆ. ಇದರ ಬೆನ್ನಲ್ಲೇ ಗ್ಯಾರೆಂಟಿ ಯೋಜನೆಗಳಿ ಎಸ್ಸಿ/ಎಸ್ಟಿ ಸಮುದಾಯದ 11 ಸಾವಿರ ಕೋಟಿ ಹಣವನ್ನು ಬಳಸಿಕೊಂಡಿದ್ದು, ವಿರೋಧ ಪಕ್ಷದ ನಾಯಕರು ಇದನ್ನೇ ಅಸ್ತ್ರವಾಗಿಟ್ಟುಕೊಂಡು ಸರ್ಕಾರವನ್ನು ಅನ್ನು ಹಣಿಯುತ್ತಿದ್ದಾರೆ. ಇನ್ನು ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದು, ಆಗಸ್ಟ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರೊಂದಿಗೆ ಇಂದಿನ ಲೇಟೆಸ್ಟ್ ಅಪ್ಡೇಟ್ಸ್ ಇಲ್ಲಿದೆ.
ಮೈಸೂರು: ಸರ್ಕಾರದ ವಿರುದ್ಧ ಹೆಚ್ಡಿ ಕುಮಾರಸ್ವಾಮಿ ವರ್ಗಾವಣೆ ದಂಧೆ ಆರೋಪ ವಿಚಾರವಾಗಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್, ಸತ್ಯಹರಿಶ್ಚಂದ್ರ ಸತ್ತ ಮೇಲೆ ಈಗ ಇಬ್ಬರು ಸತ್ಯಹರಿಶ್ಚಂದ್ರ ಇದ್ದಾರೆ. ಒಬ್ಬರು ಹೆಚ್.ಡಿ.ಕುಮಾರಸ್ವಾಮಿ, ಇನ್ನೊಬ್ಬರು ಬಸವರಾಜ ಬೊಮ್ಮಾಯಿ. ಹೆಚ್.ಡಿ.ಕುಮಾರಸ್ವಾಮಿ ಅವರೇ ಆ ಪೆನ್ಡ್ರೈವ್ ಏನಾಯ್ತು? ಸುಮ್ಮನೆ ಬಾಯಿಗೆ ಬಂದಂತೆ ಮಾತನಾಡಬೇಡಿ. ನೀವು ಸಿಎಂ ಆಗಿದ್ದವರು, ಮಾತಿನಿಂದ ನಿಮ್ಮ ಘನತೆ ಕಡಿಮೆ ಆಗುತ್ತಿದೆ ಎಂದರು.
ನಿಗಮ ಮಂಡಳಿಗೆ ನೇಮಕಾತಿ ಪ್ರಕ್ರಿಯೆ ಆರಂಭ ಆಗಿದೆ ಎಂದು ಹುಬ್ಬಳ್ಳಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದ್ದಾರೆ. ಜಿಲ್ಲಾವಾರು ಮಾಹಿತಿ ತರಿಸಿಕೊಂಡು ನೇಮಕ ಮಾಡಲಾಗುತ್ತದೆ ಎಂದರು. ಜಗದೀಶ್ ಶೆಟ್ಟರ್ ಪಕ್ಷಕ್ಕೆ ಬಂದಿದ್ದರಿಂದ ನಮಗೆ ಶಕ್ತಿ ಬಂದಿದೆ ಎಂದರು. ಉಡುಪಿ ಕಾಲೇಜು ವಿಡಿಯೋ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ. ಇಂತಹ ವಿಚಾರದಲ್ಲಿ ರಾಜಕಾರಣ ಮಾಡುವುದು ಸರಿಯಲ್ಲ ಎಂದರು. ಸರ್ಕಾರದ ವಿರುದ್ಧ ಕುಮಾರಸ್ವಾಮಿ ವರ್ಗಾವಣೆ ದಂಧೆ ಆರೋಪ ಮಾಡಿದ ವಿಚಾರವಾಗಿ ಮಾತನಾಡಿದ ಅವರು, ಕುಮಾರಸ್ವಾಮಿ ಬಳಿ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ. ಸದನದಲ್ಲಿ ಅವಕಾಶ ಇತ್ತು, ಏಕೆ ದಾಖಲೆ ಬಿಡುಗಡೆ ಮಾಡಲಿಲ್ಲ. ಅವರು ಹಿಟ್ ಆ್ಯಂಡ್ ರನ್ ಮಾಡುತ್ತಿದ್ದಾರೆ ಎಂದರು.
ಹುಬ್ಬಳ್ಳಿ: ಕಾಂಗ್ರೆಸ್ ಸುಳ್ಳು ಹೇಳುವ ಸರ್ಕಾರ ಎಂದು ಕೇಂದ್ರ ಗಣಿ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಗೃಹ ಜ್ಯೋತಿ ಯೋಜನೆ ಜಾರಿಯಾಗುವ ಮೊದಲೇ ವಿದ್ಯುತ್ ಬೆಲೆ ಹೆಚಿಸಿದ್ದಾರೆ. ಗೃಹ ಜ್ಯೋತಿಗೆ ವಿದ್ಯುತ್ ಪೊರೈಕೆಗೆ ಕೇಂದ್ರ ಸರ್ಕಾರ ಯೋಜನೆಯೆ ಕಾರಣ. ಒನ್ ಗ್ರೀಡ್ ಒನ್ ನೇಷನ್ ಯೋಜನೆಯಿಂದ ಕಾಂಗ್ರೆಸ್ ಸರ್ಕಾರಕ್ಕೆ ವಿದ್ಯುತ್ ಪೊರೈಕೆ ಮಾಡಲಾಗುತ್ತಿದೆ. ರಾಜ್ಯ ಸರ್ಕಾರ ಬಿಟ್ಟಿಯಾಗಿ ವಿದ್ಯುತ್ ನಾವೇ ನಿಡುತ್ತೇವೆ ಎಂದು ದುರಹಂಕಾರದಿಂದ ವರ್ತಿಸುತ್ತಿದ್ದಾರೆ. ರಾಜ್ಯ ಸರ್ಕಾರದ ಅಭಿವೃದ್ಧಿ ಮರಿಚಿಕೆಯಾಗಿದೆ. ರಾಜ್ಯದ ಜನ ಕಾಂಗ್ರೆಸ್ಗೆ ಮುಂದಿನ ದಿನದಲ್ಲಿ ಸರಿಯಾದ ಉತ್ತರ ನೀಡುತ್ತಾರೆ ಎಂದರು.
ಹುಬ್ಬಳ್ಳಿ: ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ಕೊಟ್ಟ ತೀರ್ಪನ್ನ ಸ್ವಾಗತ ಮಾಡುತ್ತೆವೆ. ಬಿಜೆಪಿಗೆ ದೊಡ್ಡ ಮುಖಭಂಗ ಆಗಿದೆ. ಇದು ಸಂವಿಧಾನಕ್ಕೆ ಜಯವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಹೇಳಿದ್ದಾರೆ. ಕಾನೂನಿನ ಮೇಲೆ ನಮಗೆ ವಿಶ್ವಾಸ ಇತ್ತು, ನಮಗೆ ಇವತ್ತು ನಮಗೆ ಜಯ ಸಿಕ್ಕಿದೆ. ರಾಹುಲ್ ಗಾಂಧಿಗೆ ಜನಪ್ರಿಯತೆ ಹೆಚ್ಚಿಗೆ ಆಗುತ್ತಿತ್ತು, ಆದ್ದರಿಂದ ಬಿಜೆಪಿ ಇಂತಹ ಷಡ್ಯಂತ್ರ ಮಾಡಿದೆ ಎಂದರು. ದೆಹಲಿಯಲ್ಲಿ ನಡೆದ ಪಕ್ಷದ ಸಭೆಯಲ್ಲಿ ಲೋಕಸಭಾ ರಣತಂತ್ರದ ಬಗ್ಗೆ ಚರ್ಚೆ ಆಗಿದೆ. ಕಾಂಗ್ರೆಸ್ ಹೈಕಮಾಂಡ ನಮಗೆ ಟಾರ್ಗೆಟ್ ನೀಡದೆ. ರಾಜ್ಯದಲ್ಲಿ 20 ಕ್ಷೇತ್ರದಲ್ಲಿ ಗೆಲ್ಲಬೇಕೆಂದು ನೀಡಿದೆ. ನಾವು 20 ಕ್ಕೂ ಹೆಚ್ಚು ಕ್ಷೇತ್ರದಲ್ಲಿ ಗೆಲ್ಲುತ್ತೆವೆ ಎಂದರು. ಬಿಜೆಪಿ 9 ವರ್ಷಗಳ ಸುಳ್ಳು ಹೇಳುತ್ತಾ ಬಂದಿದೆ. ಆ ಸುಳ್ಳು ಜನರಿಗೆ ಮನವರಿಕೆ ಮಾಡುವ ಕೆಲಸವನ್ನ ಮಾಡುತ್ತೇವೆ.
ಮೈಸೂರು: ಸಚಿವ ಮಹದೇವಪ್ಪ ಪುತ್ರ ಸುನೀಲ್ ಬೋಸ್ ಅವರನ್ನು ಟಿ ನರಸೀಪುರ ತಾಲ್ಲೂಕು ಕೆಡಿಪಿ ಸಮಿತಿಗೆ ಸದಸ್ಯನಾಗಿ ನಾಮನಿರ್ದೇಶನ ಮಾಡಲಾಗಿದೆ. ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮವೂ ಸೇರಿದಂತೆ) ಪರಿಣಾಮಕಾರಿ ಅನುಷ್ಠಾನದ ಪರಿಶೀಲನೆಗಾಗಿ ನೇಮಕ ಮಾಡಿ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ರಾಮನಗರ: ಇನ್ಸ್ಪೆಕ್ಟರ್ಗಳ ವರ್ಗಾವಣೆಯಲ್ಲಿ ತಮ್ಮ ಹಸ್ತಕ್ಷೇಪ ಆರೋಪವಾಗಿ ಮಾತನಾಡಿದ ಕಾಂಗ್ರೆಸ್ ಸಂಸದ ಡಿಕೆ ಸುರೇಶ್, ಅಧಿಕಾರಿಗಳ ವರ್ಗಾವಣೆಗೂ ನನಗೂ ಯಾವುದೇ ಸಂಬಂಧ ಇಲ್ಲ. ಸರ್ಕಾರ ಉತ್ತಮ ಆಡಳಿತ ಕೊಡಲಿ ಅಂತಾ ಬೆಂಬಲ ಕೊಟ್ಟಿದ್ದೇನೆ. ಪಕ್ಷದಲ್ಲಿ ಬೇರೆ ಬೇರೆ ವಿಚಾರಕ್ಕೆ ಸಲಹೆ ಕೊಟ್ಟಿದ್ದೇನೆ. ಸರ್ಕಾರದ ಯಾವ ವಿಚಾರದಲ್ಲೂ ನಾನು ಮಧ್ಯಪ್ರವೇಶ ಮಾಡಲ್ಲ. ಆಡಳಿತ ವ್ಯವಸ್ಥೆಯಲ್ಲಿ ಮಧ್ಯಪ್ರವೇಶ ಮಾಡಲು ನಾನು ಮಂತ್ರಿಯಲ್ಲ ಎಂದರು. ಕುಮಾರಸ್ವಾಮಿ ಆರೋಪದ ಬಗ್ಗೆ ನನಗೆ ಗೊತ್ತಿಲ್ಲ. ಅವರ ಸರ್ಕಾರದಲ್ಲಿನ ವರ್ಗಾವಣೆ ರೇಟ್ ಕಾರ್ಡ್ ಬಗ್ಗೆ ಗೊತ್ತಿದೆ ಎಂದರು.
ಶಿವಮೊಗ್ಗ: ಗ್ರಾಮ ಪಂಚಾಯ್ತಿಗೊಂದು ಸಹಕಾರ ಸಂಘ ಆರಂಭಕ್ಕೆ ಸೂಚನೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಡಿಸೆಂಬರ್ ತಿಂಗಳ ಒಳಗಾಗಿ ಸಹಕಾರ ಸಂಘ ಆರಂಭಕ್ಕೆ ಸೂಚನೆ ಕೊಟ್ಟಿದ್ದೇನೆ. ಎಲ್ಲೆಲ್ಲಿ ಸ್ವಂತ ಕಟ್ಟಡ ಇಲ್ಲವೋ ಅಲ್ಲೆಲ್ಲಾ ಸ್ವಂತ ಕಟ್ಟಡ ಕಟ್ಟಬೇಕು ಎಂದರು. ಶಿವಮೊಗ್ಗ ಡಿಸಿಸಿ ಬ್ಯಾಂಕಿನ ನೇಮಕಾತಿಯಲ್ಲಿ ಅವ್ಯವಹಾರ ಆರೋಪ ವಿಚಾರವಾಗಿ ಮಾತನಾಡಿದ ಅವರು, ಈ ಬಗ್ಗೆ ಅಧಿಕಾರಿಗಳಿಗೆ ಗಮನ ಹರಿಸಲು ಹೇಳಿದ್ದೇನೆ ಎಂದರು.
ಮೈಸೂರು: ಚಾಮುಂಡಿ ಬೆಟ್ಟಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಭೇಟಿ ನೀಡಿ ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದರು. ಇದೇ ವೇಳೆ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು. ಚಾಮುಂಡೇಶ್ವರಿ ದೇಗುಲದ ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ್ ಅವರು ರಾಜ್ಯಪಾಲರಿಗೆ ಶಾಲು ಹೊದಿಸಿ ಸನ್ಮಾನಿಸಿ ತೀರ್ಥ ಪ್ರಸಾದ ವಿತರಣೆ ಮಾಡಿದರು.
ಈ ಜನ್ಮದಲ್ಲಿ ಡಿಕೆ ಶಿವಕುಮಾರ್ ಅವರಂತಹ ತಮ್ಮ ಬೇಡ ಎಂದು ಹೆಚ್ಡಿ ಕುಮಾರಸ್ವಾಮಿ ನೀಡಿದ ಹೇಳಿಕೆಗೆ ತಿರುಗೇಟು ನೀಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಬಹಳ ಸಂತೋಷ, ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ಏನಿದೆ? ನುಡಿಮುತ್ತುಗಳನ್ನು ಬಹಳ ಸಂತೋಷದಿಂದ ಸ್ವೀಕಾರ ಮಾಡಿದ್ದೇನೆ. ನಾಳೆನೋ, ನಾಡಿದ್ದೋ ಹೆಚ್ಡಿ ಕುಮಾರಸ್ವಾಮಿ ಪ್ರಶ್ನೆಗಳಿಗೆ ಉತ್ತರ ಕೊಡೋಣ ಎಂದರು. ನನ್ನ ಜಾಯಮಾನದಲ್ಲೇ ಹಿಟ್ ಆ್ಯಂಡ್ ರನ್ ಮಾಡಲ್ಲ ಎಂಬ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಯಾರ ಜಾಯಮಾನ ಏನು ಅಂತಾ ನಾಳೆ ಮಾತನಾಡೋಣ ಎಂದರು.
ಮೈಸೂರು: ರಾಷ್ಟಪತಿ ದ್ರೌಪದಿ ಮುರ್ಮು ಅವರು ವಿಶೇಷ ವಿಮಾನ ಮೂಲಕ ಮೈಸೂರಿಗೆ ಆಗಮಿಸಿದ್ದು, ಇವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೇರಿದಂತೆ ಇನ್ನಿತರರು ಸ್ವಾಗತಕೋರಿದರು. ರಾಷ್ಟ್ರಪತಿಯವರು ಮೈಸೂರಿನಿಂದ ಹೆಲಿಕಾಪ್ಟರ್ ಮೂಲಕ ತಮಿಳುನಾಡಿನ ಮಧು ಮಲೈಗೆ ಪ್ರಯಾಣ ಕೈಗೊಳ್ಳಲಿದ್ದು, ಹುಲಿಸಂರಕ್ಷಿತ ಅರಣ್ಯ ವ್ಯಾಪ್ತಿಯ ತೆಪ್ಪಕಾಡು ಆನೆ ಶಿಬಿರಕ್ಕೆ ಭೇಟಿನೀಡಿ ಆಸ್ಕರ್ ಪ್ರಶಸ್ತಿ ವಿಜೇತ ಕಾವಾಡಿ ದಂಪತಿ ಬೊಮ್ಮ, ಬೆಳ್ಳಿ ಜೊತೆ ಕಾವಾಡಿ, ಮಾವುತರ ಜೊತೆ ಸಂವಾದ ನಡೆಸಲಿದ್ದಾರೆ.
ಕಲಬುರಗಿ: ನಮ್ಮ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನರ ಖುಷಿಯಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ‘ಗೃಹಜ್ಯೋತಿ’ ಯೋಜನೆಗೆ ಚಾಲನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗೃಹಜ್ಯೋತಿ ಯೋಜನೆ ಜುಲೈ ತಿಂಗಳಿಂದಲೇ ಜಾರಿಯಾಗಿದೆ. ಕಲ್ಯಾಣ ಕರ್ನಾಟಕ ಭಾಗಕ್ಕೆ ಬಿಜೆಪಿಯ ಕೊಡುಗೆ ಏನೂ ಇಲ್ಲ. ಶಕ್ತಿ ಯೋಜನೆಯಿಂದ ಮಹಿಳೆಯರು ಉಚಿತ ಪ್ರಯಾಣ ಮಾಡ್ತಿದ್ದಾರೆ. ಹಾಗಾಗಿ ಬಿಜೆಪಿಯವರಿಗೆ ಹೊಟ್ಚೆ ಉರಿ ಶುರುವಾಗಿದೆ. ಹೊಟ್ಚೆ ಉರಿಯಿಂದ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಬಿಜೆಪಿಗೆ ತಾಕತ್ ಇದ್ದರೆ ದೇಶಾದ್ಯಂತ 5 ಗ್ಯಾರಂಟಿ ಜಾರಿ ಮಾಡಲಿ ಎಂದರು.
ಕೊಪ್ಪಳ: ಮಲ್ಲಿಕಾರ್ಜು ಖರ್ಗೆ ಬಗ್ಗೆ ಆರಗ ಜ್ಞಾನೇಂದ್ರ ಹೇಳಿಕೆ ವಿಚಾರವಾಗಿ ಮಾತನಾಡಿದ ಸಚಿವ ಶಿವರಾಜ್ ತಂಗಡಗಿ, ಅರಗಗೆ ಬುದ್ದಿ ಭ್ರಮಣೆಯಗಿದೆ. ಈ ಭಾಗಕ್ಕೆ ಖರ್ಗೆ ಕೊಡುಗೆ ಏನು ಎಂಬುದು ಗೊತ್ತಿಲ್ಲದೇ ಮಾತನಾಡಿದ್ದಾರೆ. ಅವರನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು. ಖರ್ಗೆಯವರಿಗೆ ಮಾತ್ರ ಅಲ್ಲ ಇಡೀ ಕಲ್ಯಾಣ ಕರ್ನಾಟಕದ ಜನರಿಗೆ ಅಪಮಾನ ಆಗಿದೆ. ಆರಗ ಈ ಭಾಗದ ಜನರಿಗೆ ಕ್ಷಮೆ ಕೇಳಬೇಕು. ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಸ್ವಾಭಿಮಾನ ಇದ್ದರೆ, ಬಿಜೆಪಿ ಅವರು ಈ ಭಾಗದಲ್ಲಿ ಓಡಾಡದಂತೆ ಮಾಡಬೇಕು. ಮೋದಿ ಅಂತಾ ಹೆಸರು ಹೇಳಿದ್ದಕ್ಕೆ ರಾಹುಲ್ ಗಾಂಧಿ ಅವರ ಸಂಸತ್ ಸ್ಥಾನ ಅನರ್ಹ ಮಾಡಿದ್ದರು. ಇವರಿಗೆ ಬುದ್ದಿ ಹೆಳೋಕೆ ಆಗಲ್ವಾ ಎಂದರು.
ಬೆಂಗಳೂರು: ವಿಧಾನ ಪರಿಷತ್ ನಾಮ ನಿರ್ದೇಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ಹೆಸರು ಅಂತಿಮಗೊಳಿಸಿದ್ದಾರೆ. ಮಾಜಿ ಸಚಿವೆ ಉಮಾಶ್ರೀ, ಮಾಜಿ ಸಚಿವ ಎಂ ಆರ್ ಸೀತಾರಾಂ ಅವರ ಹೆಸರು ಅಂತಿಮಗೊಂಡಿದೆ. ಇನ್ನು ಮಾಜಿ ಇಡಿ ಅಧಿಕಾರಿ ಸುಧಾಮ್ ದಾಸ್ ಅವರ ಹೆಸರು ಬಹುತೇಕ ಫೈನಲ್ ಆಗಬೇಕಿದೆ. ಸೋಮವಾರ ಸಿದ್ದರಾಮಯ್ಯ ಅವರು ರಾಜ್ಯಪಾಲರನ್ನು ಭೇಟಿಯಾಗಿ ಪತ್ರ ನೀಡುವ ನಿರೀಕ್ಷೆ ಇದೆ.
ಬೆಂಗಳೂರು: ದುಡ್ಡಿಲ್ಲ ದುಡ್ಡಿಲ್ಲ ಅಂತಿರಾ ಯಾಕೆ ದುಡ್ಡಿಲ್ಲ. ಟ್ಯಾಕ್ಸ್ ಸಾಕಷ್ಟು ವಸೂಲಿ ಆಗಿದೆ. ಅಷ್ಟು ಹಣ ಇದ್ದರೂ ದುಡ್ಡಿಲ್ಲ ದುಡ್ಡಿಲ್ಲ ಅಂತಿರಾ. ವರ್ಗಾವಣೆ ಬಗ್ಗೆ ಮಾತನಾಡಲು ಅಸಹ್ಯ ಆಗುತ್ತೆ. ನಾನು ಏನೂ ಸಲಹೆ ಕೊಡುತ್ತಿದ್ದೆ ಹೇಳಿ ಪರಮೇಶ್ವರ. ಬಿಡಿಎ ,ಪೊಲೀಸ್, ಅಧಿಕಾರಿಗಳ ವರ್ಗಾವಣೆಯಲ್ಲಿ ನಾನು ಯಾವುದಕ್ಕೆ ಹಸ್ತಕ್ಷೇಪ ಮಾಡಿದ್ದೇನೆ. ಏನೆಲ್ಲ ಆಯ್ತು ಅಂತ ನನಗೆ ಗೊತ್ತಿದೆ ಎಂದು ಹೆಚ್ ಡಿ ಕುಮಾರಸ್ವಾಮಿ ಹೇಳಿದರು.
ಬೆಂಗಳೂರು: ನೈಸ್ ಹಗರಣದ ದಾಖಲೆ ದೆಹಲಿಯಲ್ಲಿ ಬಿಡುಗಡೆ ಮಾಡುತ್ತೇನೆ. ರೈತರ ಹೆಸರಿನಲ್ಲಿ ಕೋಟಿ ಕೋಟಿ ಲೂಟಿ ಹೊಡೆದಿದ್ದೀರಿ. ಆ ಎಲ್ಲಾ ದಾಖಲೆ ಸಂಗ್ರಹ ಮಾಡಿದ್ದೇನೆ. ಪ್ರಧಾನಿ ಮೋದಿಯವರಿಗೆ ಪ್ರಶ್ನೆ ಮಾಡುತ್ತೇನೆ. ನಾನು ದಾಖಲೆ ಕೊಡುತ್ತೇನೆ ರೈತರಿಗೆ ನ್ಯಾಯ ಕೊಡಿಸುತ್ತೇನೆ. ವರ್ಗಾವಣೆಯಲ್ಲಿ ಒಂದು ಸಾವಿರ ಕೋಟಿಗಿಂತ ಅಧಿಕ ಹಣ ಸಂಗ್ರಹ ಮಾಡಿದ್ದಾರೆ. ಒಂದೊಂದು ಪೋಸ್ಟ್ಗೆ ಮೂರು ನಾಲ್ಕು ಜನಕ್ಕೆ ಲೆಟರ್ ಕೊಟ್ಟಿದ್ದಾರೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.
ಬೆಂಗಳೂರು: ಕಾಂಗ್ರೆಸ್ ಶಾಸಕ ಟಿ.ಬಿ.ಜಯಚಂದ್ರಕ್ಕೆ ಬೆದರಿಕೆ ಕರೆ ಅನ್ನೋದು ಗಮನಿಸಿದ್ದೇನೆ. ನಿಮಗೆ ಯಾರು ಬೆದರಿಕೆ ಕರೆ ಮಾಡಿದ್ದ. ರೈತಪರ ಧ್ವನಿ ಎತ್ತಿದ್ದೀರಿ ಮುಲಾಜಿಗೆ ಒಳಗಾಗದೆ ಕೆಲಸ ಮಾಡಿದ್ದೀರಿ. ನಿಮಗೆ ಗ್ಯಾರಂಟಿ ವಿಚಾರ ಬಿಟ್ಟರೆ ಯಾವ ಅಭಿವೃದ್ಧಿ ವಿಚಾರವಿಲ್ಲ. ಟೋಪಿ ಹಾಕೋಕೆ ಒಂದು ಇತಿಮಿತಿ ಇದೆ. ಕಿವಿಗೆ ಹೂ ಇಟ್ಟುಕೊಂಡು ಜನರಿಗೆ ಟೋಪಿ ಹಾಕಲು ಹೊರಟ್ಟಿದ್ದೀರಾ? ಜನರ ತಲೆ ಮೇಲೆ ಹೂವಿನ ಕುಂಡ ಇಟ್ಟಿದ್ದೀರಿ ಎಂದು ಸರ್ಕಾರದ ವಿರುದ್ಧ ಹೆಚ್ ಡಿ ಕುಮಾರಸ್ವಾನಿ ವಾಗ್ದಾಳಿ ಮಾಡಿದರು.
ಬೆಂಗಳೂರು: ನಾನು ಕೆಲವು ವಿಚಾರ ಪ್ರಸ್ತಾಪ ಮಾಡೋದು ಹುಡುಗಾಟಕ್ಕೆ ಅಲ್ಲ. ನಾನು ಹಿಟ್ ಆ್ಯಂಡ್ ರನ್ ಜಯಮಾನದ ವ್ಯಕ್ತಿ ನಾನಲ್ಲ. ಇದನ್ನು ಮುಖ್ಯಮಂತ್ರಿಗಳಿಗೆ ಹೇಳೋಕೆ ಬಯಸುತ್ತೇನೆ. ಹಿಟ್ ಆ್ಯಂಡ್ ರನ್ ಇದ್ದರೇ ಅದು ಕಾಂಗ್ರೆಸ್. ಹಿಂದೆ ನೀವು ಸಾಕಷ್ಟು ಆರೋಪ ಮಾಡಿದ್ದೀರಿ. ಆದರೆ ಒಂದಾದರೂ ದಾಖಲೆ ಬಿಡುಗಡೆ ಮಾಡಿದ್ದೀರಾ? ನಿಮ್ಮದೆ ಸರ್ಕಾರ ಇದೆ ದಾಖಲೆ ಯಾಕೆ ಬಿಡುಗಡೆ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದರು.
ಚಿತ್ರದುರ್ಗ: ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಐವರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಥಳಕ್ಕೆ ಭೇಟಿ ನೀಡಿ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದರು. ಅಲ್ಲದೇ ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರದ ಚೆಕ್ ವಿತರಣೆ ಮಾಡಿದರು.
ಕಲಬುರಗಿ: ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ವರ್ಗಾವಣೆ ದಂಧೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ನಿಖರವಾಗಿ ಮಾಹಿತಿ ಇದ್ದರೆ ಯಾವಾಗ ಆಗಿದೆ ಅಂತ ಹೇಳಲಿ. ಪೆನ್ಡ್ರೈ ತೋರಿಸಿಕೊಂಡು ಇಲ್ಲಿದೆ ಇಲ್ಲಿದೆ ಎಂದು ತೋರಿಸುತ್ತಿದ್ದಾರೆ. ಏನಿದೆ ಎಲ್ಲವನ್ನೂ ಬಹಿರಂಗಪಡಿಸಲಿ, ಬಳಿಕ ಎಲ್ಲವೂ ಗೊತ್ತಾಗುತ್ತೆ. ಯಾರು ತಪ್ಪಿತಸ್ಥರಿದ್ದಾರೆ ಗೊತ್ತಾಗಲಿದೆ. ಸುಮ್ಮನೆ ಸುಳ್ಳು ಆಪಾದನೆ ಮಾಡುವಂತಹದ್ದು ಶೋಭೆ ತರುವುದಿಲ್ಲ ಎಂದು ಹಾಸನದಲ್ಲಿ ಸಹಕಾರ ಇಲಾಖೆ ಸಚಿವ ಕೆ.ಎನ್.ರಾಜಣ್ಣ ಹೇಳಿದರು.
ಬೆಂಗಳೂರು: ಇನ್ಸ್‌ಪೆಕ್ಟರ್ ವರ್ಗಾವಣೆ ತಡೆ ಹಿಡಿದಿರುವ ವಿಚಾರಕ್ಕೆ ಸಂಬಂಧಿಸಿದಂತೆ ತಾಂತ್ರಿಕವಾಗಿ 250 ಜನರನ್ನ ವರ್ಗಾವಣೆ ಮಾಡಿದ್ದೇವು. ಬಹುತೇಕ ಎಲ್ಲರೂ ರಿಪೋರ್ಟ್ ಮಾಡಿಕೊಂಡಿದ್ದಾರೆ, ಕೆಲವು ಕಡೆ ಆಗಿಲ್ಲ. ಅದನ್ನು ಸರಿಪಡಿಸಿಕೊಂಡು ಮಾಡುತ್ತೇವೆ. ಎಲ್ಲವನ್ನೂ ಕ್ರಿಟಿಸೈಸ್ ಮಾಡೋದಲ್ಲ. ಸೋಮವಾರದೊಳಗೆ ಟ್ರಾನ್ಸ್‌ಫರ್ ಇಶು ಮಾಡುತ್ತೇವೆ ಎಂದು ಡಾ.ಜಿ ಪರಮೇಶ್ವರ ಹೇಳಿದರು.
ಶಿವಮೊಗ್ಗ: ವಿಐಎಸ್ಎಲ್ ಕಾರ್ಖಾನೆಯನ್ನು ರಾಜ್ಯ ಸರಕಾರ ಬಂದ್ ಮಾಡುತ್ತೇವೆ ಅಂತ ಎಲ್ಲೂ ಹೇಳಿರಲಿಲ್ಲ. ಇಲ್ಲಿನ ಜನಪ್ರತಿನಿಧಿಗಳು, ಸಂಸದರು ಮಧ್ಯೆ ಬಂದು ಹೇಳಿಕೆ ಕೊಟ್ಟರು. ಇನ್ನೊಂದು ಏಳು ತಿಂಗಳಿಗೆ ಲೋಕಸಭೆ ಚುನಾವಣೆ ಬರಲಿದೆ. ವಿಐಎಸ್ಎಲ್ಗೆ ತಾತ್ಕಾಲಿಕವಾಗಿ ಚಾಲನೆ ಕೊಟ್ಟಿದ್ದಾರೆ. ಪೂರ್ಣವಾಗಿ ಚಾಲನೆ ಕೊಟ್ಟರೆ ಒಳ್ಳೆಯದು. ಕಾರ್ಖಾನೆ ಮುಚ್ಚದೆ ಮುಂದುವರಿಸಿದರೆ ಒಳ್ಳೆಯದು. ವಿಐಎಸ್ಎಲ್, ಎಂಪಿಎಂ ಕಾರ್ಖಾನೆ ಶಿವಮೊಗ್ಗ ಜಿಲ್ಲೆಗೆ ಕಿರೀಟ ಇದ್ದ ಹಾಗೆ. ಕಾರ್ಖಾನೆ ನಡೆಸಲು ಹೊರೆ ಇರುತ್ತದೆ. ಅದನ್ನು ಉಳಿಸುವುದು ಕೇಂದ್ರ ಸರಕಾರದ ಕೈಯಲ್ಲಿರುತ್ತದೆ. ಯಾರು ಯಾರು ಬಿಟ್ಟು ಹೋಗಿದ್ದಾರೆ ಅವರಿಗೆ ಅನುಕೂಲ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
ಚಿತ್ರದುರ್ಗ: ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಐವರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿಂದತೆ ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಹೀಗಾಗಿ ಎಚ್ಚೆತ್ತುಕೊಂಡ ಚಿತ್ರದುರ್ಗ ನಗರಸಭೆ ಅಧಿಕಾರಿಗಳು ಸ್ವಚ್ಛತಾ ಕಾರ್ಯ ತೊಡಗಿಸಿಕೊಂಡಿದ್ದಾರೆ.
ಬೆಂಗಳೂರು: ಇಂದಿನಿಂದ ಸಾರ್ವಜನಿಕರಿಗೆ ಪ್ಲವರ್ ಶೋ ವೀಕ್ಷಣೆಗೆ ಅವಕಾಶ ನೀಡಲಾಗಿದ್ದು, ಶನಿವಾರ ಮತ್ತು ಭಾನುವಾರ ರಜಾದಿನಗಳಲ್ಲಿ ವಯಸ್ಕರಿಗೆ 80 ರೂ. ಹಾಗೂ ಮಕ್ಕಳಿಗೆ 30 ರೂ ಟಿಕೆಟ್ ನಿಗದಿ ಪಡಿಸಲಾಗಿದೆ.
ಫ್ಲವರ್ ಶೋ ಜೊತೆಗೆ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜಸಲಾಗಿದೆ. ವಿಕೆಂಡ್ ಹಿನ್ನೆಲೆಯಲ್ಲಿ ಲಾಲ್ ಬಾಗ್ ಸುತ್ತ – ಮುತ್ತ ಟ್ರಾಫಿಕ್ ಜಾಮ್ ಉಂಟಾಗುವ ಸಧ್ಯಾತೆ ಇದೆ. ಹೀಗಾಗಿ ಮೆಟ್ರೋ ಹಾಗೂ ಬಿಎಂಟಿಸಿ ಬಸ್ಸುಗಳನ್ನ ಬಳಸಿಕೊಳ್ಳುವಂತೆ ತೋಟಗಾರಿಕೆ ಇಲಾಖೆ ಮನವಿ ಮಾಡಿದೆ.
ಚಿತ್ರದುರ್ಗ: ಕಲುಷಿತ ನೀರು ಸೇವಿಸಿ ಐವರು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಅಸ್ವಸ್ಥಗೊಂಡವರ ಸಂಖ್ಯೆ 185ಕ್ಕೆ ಏರಿಕೆಯಾಗಿದೆ. ಓರ್ವ ಗರ್ಭಿಣಿಯ ಗರ್ಭಪಾತವಾಗಿದೆ. 25 ಜನ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. 155 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೈಸೂರು: ಇಂದು (ಜು.05) ಮೈಸೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸಲಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮಧ್ಯಾಹ್ನ 12.30ಕ್ಕೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುವ ರಾಷ್ಟ್ರಪತಿ ಮುರ್ಮು ಅವರು ನಂತರ ಮೈಸೂರಿನಿಂದ ಹೆಲಿಕಾಪ್ಟರ್ ಮೂಲಕ ತಮಿಳುನಾಡಿಗೆ ಪ್ರಯಾಣ ಬೆಳಸಲಿದ್ದಾರೆ. ಮಧುಮಲೈ ಹುಲಿಸಂರಕ್ಷಿತ ವ್ಯಾಪ್ತಿಯ ತೆಪ್ಪಕಾಡು ಆನೆ ಶಿಬಿರಕ್ಕೆ ಭೇಟಿ ನೀಡಿ ಆಸ್ಕರ್ ಪ್ರಶಸ್ತಿ ವಿಜೇತ ಕಾವಾಡಿ ದಂಪತಿ, ಮಾವುತರ ಜೊತೆ ಸಂವಾದ ನಡೆಸಲಿದ್ದಾರೆ. ಸಂಜೆ 5:45ಕ್ಕೆ ಪುನಃ ಮೈಸೂರಿಗೆ ಆಗಮಿಸಿ, ಇಲ್ಲಿಂದ ಚೆನ್ನೈಗೆ ಹೋಗುತ್ತಾರೆ. ರಾಷ್ಟ್ರಪತಿಯವರಿಗೆ ಮೈಸೂರು ಜಿಲ್ಲಾಡಳಿತ ಸ್ವಾಗತ ಕೋರಲಿದೆ.
ಕಲಬುರಗಿ: ಇಂದು ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಬೆಳಗ್ಗೆ 11 ಗಂಟೆಗೆ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ವೇದಿಕೆ ಮೇಲೆ 10 ಜನರಿಗೆ ಸಾಂಕೇತಿಕವಾಗಿ ಜಿರೋ ಬಿಲ್ ವಿತರಣೆ ಮಾಡಲಾಗುತ್ತದೆ. ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ.
Published On - 8:58 am, Sat, 5 August 23