AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆ-ಕಾಲೇಜುಗಳಲ್ಲಿ ಹಿಜಾಬ್​ ಧರಿಸಲು ಅವಕಾಶವಿಲ್ಲ, ಸರ್ಕಾರದ ವಸ್ತ್ರ ಸಂಹಿತೆಯನ್ನು ಪ್ರಶ್ನೆ ಮಾಡುವಂತಿಲ್ಲ: ಹೈಕೋರ್ಟ್​

ಕರ್ನಾಟಕ ಹಿಜಾಬ್​ ವಿವಾದ - ಹೈಕೊರ್ಟ್​ ತೀರ್ಪು: ಪ್ರತಿ ಪುಟಕ್ಕೂ ಸಹಿ ಹಾಕಿ ಹೇಳಿಕೆ ನೀಡಿದ ಮುಖ್ಯ ನ್ಯಾಯಮೂರ್ತಿ ಸಿಜೆ ರಿತುರಾಜ್ ಅವಸ್ತಿ, ಕೆಲವು ಪ್ರಶ್ನೆಗಳನ್ನು ರಚಿಸಿದ್ದೇವೆ. ಅವುಗಳಿಗೆ ಉತ್ತರವನ್ನೂ ನೀಡಿದ್ದೇವೆ.

ಶಾಲೆ-ಕಾಲೇಜುಗಳಲ್ಲಿ ಹಿಜಾಬ್​ ಧರಿಸಲು ಅವಕಾಶವಿಲ್ಲ, ಸರ್ಕಾರದ ವಸ್ತ್ರ ಸಂಹಿತೆಯನ್ನು ಪ್ರಶ್ನೆ ಮಾಡುವಂತಿಲ್ಲ: ಹೈಕೋರ್ಟ್​
ಕೇಸರಿ ಶಾಲು ಧರಿಸಿರುವ ವಿದ್ಯಾರ್ಥಿಗಳು, ಹಿಜಾಬ್ ಧರಿಸಿರುವ ವಿದ್ಯಾರ್ಥಿನಿಯರು
TV9 Web
| Updated By: sandhya thejappa|

Updated on:Mar 15, 2022 | 11:03 AM

Share

ಬೆಂಗಳೂರು: ವಿಶ್ವ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದ್ದ ಹಿಜಾಬ್ (Hijaba) ವಿವಾದಕ್ಕೆ ಕೊನೆಗೂ ತೆರೆ ಬಿದ್ದಿದೆ. ಇಂದು (ಮಾರ್ಚ್​ 15) ಕರ್ನಾಟಕ ಹೈಕೋರ್ಟ್​ನ (Karnataka High Court) ಪೂರ್ಣ ಪೀಠ ಮಹತ್ವದ ತೀರ್ಪು ನೀಡಿದೆ. ಪ್ರತಿ ಪುಟಕ್ಕೂ ಸಹಿ ಹಾಕಿ ಹೇಳಿಕೆ ನೀಡಿದ ಮುಖ್ಯ ನ್ಯಾಯಮೂರ್ತಿ ಸಿಜೆ ರಿತುರಾಜ್ ಅವಸ್ತಿ, ಕೆಲವು ಪ್ರಶ್ನೆಗಳನ್ನು ರಚಿಸಿದ್ದೇವೆ. ಅವುಗಳಿಗೆ ಉತ್ತರವನ್ನೂ ನೀಡಿದ್ದೇವೆ. ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ. ಸಮವಸ್ತ್ರ ನಿಗದಿಪಡಿಸುವುದು ಸೂಕ್ತವಾದ ನಿರ್ಬಂಧನೆ. ಸರ್ಕಾರದ ಆದೇಶ ಕಾನೂನುಬದ್ದವಾಗಿದೆ ಎಂದರು.

ಉಡುಪಿಯಿಂದ ಶುರುವಾಗಿದ್ದ ಹಿಜಾಬ್ ಗಲಾಟೆ ಇಡೀ ವಿಶ್ವಕ್ಕೆ ವ್ಯಾಪಿಸಿತ್ತು. ಮುಸ್ಲಿಂ ಸಮುದಾಯದ ಕೆಲ ವಿದ್ಯಾರ್ಥಿನಿಯರು ಹಿಜಾಬ್ ನಮ್ಮ ಹಕ್ಕು,  ನಾವು ಧರಿಸಿಯೇ ಶಾಲೆ- ಕಾಲೇಜಿಗೆ ಬರುತ್ತೇವೆ ಎಂದು ಪ್ರತಿಭಟನೆ ನಡೆಸಿದ್ದರು. ಜೊತೆಗೆ ಹಿಜಾಬ್ ಧರಿಸುವವರೆಗೆ ಕೇಸರಿ ಶಾಲು ಧರಿಸುತ್ತೇವೆ ಅಂತ ಹಲವು ಹಿಂದೂ ವಿದ್ಯಾರ್ಥಿಗಳು ಪಟ್ಟು ಬಿದ್ದಿದ್ದರು.

ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, ನ್ಯಾ.ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್​ರವರ ಪೂರ್ಣ ಪೀಠ ತೀರ್ಮಾನ ಕೈಗೊಂಡಿದ್ದು, ಸಮವಸ್ತ್ರ ನಿಗದಿಪಡಿಸುವ ಅಧಿಕಾರ ಶಾಲೆಗಳಿಗಿದೆ. ರಾಜ್ಯ ಸರ್ಕಾರದ ಆದೇಶ ಕಾನೂನುಬದ್ಧವಾಗಿದೆ. ಉಡುಪಿ ಕಾಲೇಜಿಗೆ ನಿರ್ದೇಶನ ಹೇರುವ ಅಗತ್ಯವಿಲ್ಲ ಅಂತ ಕೋರ್ಟ್​ ತಿಳಿಸಿದೆ.

ಸಿಎಂ ಬೊಮ್ಮಾಯಿ ಹೇಳಿದ್ದೇನು?: ಈಗತಾನೇ ಮಾಧ್ಯಮಗಳಿಂದ ಹೈಕೋರ್ಟ್​ನ ಸಮವಸ್ತ್ರದ ತೀರ್ಪಿನ ಮಾಹಿತಿ ಬಂದಿದೆ. ಸಮವಸ್ತ್ರವನ್ನ ಎತ್ತಿ ಹಿಡಿದಿದೆ. ಮಕ್ಕಳ ಶಿಕ್ಷಣದ ಪ್ರಜ್ಞೆ ಇದೆ. ಮಕ್ಕಳಿಗೆ ಶಿಕ್ಷಣಕ್ಕಿಂತ ಬೇರೆ ಯಾವುದು ಇಲ್ಲ. ಇದನ್ನ ಮಕ್ಕಳು ಪಾಲಿಸಬೇಕು. ಇದನ್ನ ಅನುಷ್ಠಾನಕ್ಕೆ ತರುವ ಸಂದರ್ಭದಲ್ಲಿ ಎಲ್ಲರು ಸಹಕರಿಸಬೇಕು. ಶಾಂತಿ ಸುವ್ಯವಸ್ಥೆ ಬಹಳ ಮುಖ್ಯ. ನಾನು ಎಲ್ಲಾ ಸಮುದಾಯದ ನಾಯಕರಿಗೆ ಶಿಕ್ಷಕರಿಗೆ ಪೋಷಕರಿಗೆ ಮಕ್ಕಳಿಗೆ ಮನವಿ ಮಾಡುತ್ತೇನೆ. ಎಲ್ಲರೂ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಸಹಕರಿಸಬೇಕು. ಎಲ್ಲಾ ಪರೀಕ್ಷೆಗಳಿಗೂ ಭಾಗವಹಿಸಬೇಕು. ಶಿಕ್ಷಣ ಬಹಳ ಮುಖ್ಯ. ಕಾನೂನು ಸುವ್ಯವಸ್ಥೆಗೆ ನಿಯೋಜನೆ ಮಾಡಿದ್ದೇವೆ. ಹೈಕೋರ್ಟ್ ತೀರ್ಪನ್ನ ಎಲ್ಲರೂ ಪಾಲಿಸಬೇಕು ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇದನ್ನೂ ಓದಿ

Rohit Sharma: ದ್ವಿತೀಯ ಟೆಸ್ಟ್ ಮುಗಿದ ಬಳಿಕ ರೋಹಿತ್ ಶರ್ಮಾ ಏನು ಹೇಳಿದರು ಗೊತ್ತೇ?: ಇಲ್ಲಿದೆ ನೋಡಿ

ಪಂಜಾಬ್​​ನಲ್ಲಿ ಗೆದ್ದ ಆಮ್​ ಆದ್ಮಿ ಪಾರ್ಟಿಗೆ ಹರ್ಯಾಣದ ಹಲವು ಬಿಜೆಪಿ, ಕಾಂಗ್ರೆಸ್​ ನಾಯಕರ ಸೇರ್ಪಡೆ; ಕೇಜ್ರಿವಾಲ್​​ಗೆ ಜಾಕ್​ಪಾಟ್​

Published On - 10:33 am, Tue, 15 March 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ