Beer Price Hike: ಬಿಯರ್ ಪ್ರಿಯರಿಗೆ ಕಹಿ ಸುದ್ದಿ: ಜ. 20ರಿಂದಲೇ ದರ ಏರಿಕೆ
ಕರ್ನಾಟಕ ಸರ್ಕಾರವು ಬಿಯರ್ ದರವನ್ನು ಏರಿಸಿದೆ. ಅಬಕಾರಿ ಆದಾಯದ ಕೊರತೆಯಿಂದಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಪ್ರೀಮಿಯಂ ಬಿಯರ್ ಬೆಲೆ 10 ರಿಂದ 50 ರೂಪಾಯಿಗಳವರೆಗೆ ಹೆಚ್ಚಾಗಲಿದೆ. ಭಾರತೀಯ ನಿರ್ಮಿತ ಮದ್ಯದ ಬೆಲೆ ಕಡಿಮೆಯಾಗುವ ಸಾಧ್ಯತೆ ಇದೆ. ಬ್ರೂವರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಈ ಏರಿಕೆಯನ್ನು ವಿರೋಧಿಸಿದೆ.ಕಳೆದ ಎರಡು ವರ್ಷಗಳಲ್ಲಿ ಬಿಯರ್ ಮಾರಾಟ ದ್ವಿಗುಣಗೊಂಡಿದೆ.
ಬೆಂಗಳೂರು, ಜನವರಿ 10: ಬಸ್ ಟಿಕೆಟ್ ದರ ಏರಿಕೆ ಮಾಡಿ ಪ್ರಯಾಣಿಕರಿಗೆ ಬಿಸಿ ಮುಟ್ಟಿಸಿದ್ದ ಸರ್ಕಾರ ಇದೀಗ ಮದ್ಯ ಪ್ರಿಯರಿಗೆ ಶಾಕ್ ನೀಡಿದೆ. ಪ್ರಸಕ್ತ ಆರ್ಥಿಕ ವರ್ಷದ ಮೊದಲ 9 ತಿಂಗಳಲ್ಲಿ ಅಬಕಾರಿಯಿಂದ ನಿರೀಕ್ಷಿತ ಆದಾಯ ಬಾರದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ (Karnataka Government) ಬಜೆಟ್ಗೆ ಮುನ್ನವೇ ಬಿಯರ್ (Beer) ದರ ಏರಿಕೆ ಮಾಡಿದೆ.
ಪ್ರೀಮಿಯಂ ಮದ್ಯದ ಬಾಟಲ್ಗೆ ಕನಿಷ್ಠ 10 ರಿಂದ 50 ರೂ.ವರೆಗೆ ಹೆಚ್ಚಳವಾಗಲಿದೆ. ಪ್ರತಿ ಬಿಯರ್ನಲ್ಲಿನ ಅಲ್ಕೋಹಾಲ್ ಅಂಶದ ಮೇಲೆ ದರ ಏರಿಕೆಯಾಗಲಿದೆ. ಈ ಪರಿಷ್ಕೃತ ದರ ಜನವರಿ 20 ರಿಂದ ಜಾರಿಗೆ ಬರಲಿದೆ. ಭಾರತೀಯ ನಿರ್ಮಿತ ಮದ್ಯದ (ಐಎಂಎಲ್) ಮಾರಾಟವನ್ನು ರಾಜ್ಯದಲ್ಲಿ ಉತ್ತೇಜಿಸುವ ಸಲುವಾಗಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ. ಐಎಂಎಲ್ ಮದ್ಯದ ಬೆಲೆ ಶೇ 25 ರಷ್ಟು ಕಡಿಮೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: ಮೊದಲ ರಾತ್ರಿಯಲ್ಲಿ ಬಿಯರ್ ಮತ್ತು ಗಾಂಜಾ ಕೇಳಿದ ವಧು, ಮದುವೆಗೆ ಇತಿಶ್ರೀ ಹಾಡಿದ ವರ
ಬಿಯರ್ ದರ ಪರಿಷ್ಕರಿಸಲು 2024ರ ಆಗಸ್ಟ್ನಲ್ಲಿಯೇ ಕರಡು ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ, ನಾನಾ ಕಾರಣಗಳಿಂದ ದರ ಪರಿಷ್ಕರಣೆ ಕಡತಕ್ಕೆ ಮುಖ್ಯಮಂತ್ರಿಗಳು ಸಹಿ ಹಾಕಿರಲಿಲ್ಲ. ಈಗ, ಮುಖ್ಯಮಂತ್ರಿಗಳು ದರ ಏರಿಕೆಗೆ ಸಮ್ಮತಿಸಿರುವ ಹಿನ್ನೆಲೆಯಲ್ಲಿ ಸರ್ಕಾರ ಆದೇಶ ಹೊರಡಿಸಿದೆ.
ಪ್ರೀಮಿಯಂ ಬಿಯರ್ ಬೆಲೆ ಏರಿಕೆಗೆ ಬ್ರೂವರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ (BAI) ತಕರಾರು ವ್ಯಕ್ತಪಡಿಸಿದೆ. ದೇಶದಲ್ಲೇ ಕರ್ನಾಟಕದಲ್ಲಿ ಅತಿ ಹೆಚ್ಚಿನ ಬೆಲೆಗೆ ಬಿಯರ್ ಮಾರಾಟವಾಗುತ್ತಿದೆ. ಬೆಲೆ ಏರಿಕೆಯಿಂದ ಬಿಯರ್ ಮಾರಾಟ ಕಡಿಮೆಯಾಗಿದೆ ಎಂದು ಹೇಳಿದೆ.
ಬಿಯರ್ ಮಾರಾಟ ಎರಡು ಪಟ್ಟು ಹೆಚ್ಚಳ
ಕಳೆದ ಎರಡು ವರ್ಷಗಳಲ್ಲಿ ಕರ್ನಾಟಕದಲ್ಲಿ ಬಿಯರ್ ಮಾರಾಟ ಎರಡು ಪಟ್ಟು ಹೆಚ್ಚಾಗಿದೆ. ಕೋವಿಡ್ ನಂತರದ ಅವಧಿಯಲ್ಲಿ ಗ್ರಾಹಕರ ನಡವಳಿಕೆಯಲ್ಲಿನ ಬದಲಾವಣೆ ಮತ್ತು ಬೇಸಿಗೆಯ ತಾಪಮಾನದಲ್ಲಿನ ಏರಿಕೆ ಕೂಡ ಬಿಯರ್ ಬೇಡಿಕೆ ಹೆಚ್ಚಲು ಕಾರಣ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:56 pm, Fri, 10 January 25