One Nation One Uniform ಪೊಲೀಸರಿಗೆ ‘ಒಂದು ದೇಶ, ಒಂದು ಸಮವಸ್ತ್ರ’: ಕೇಂದ್ರದ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಒಪ್ಪಿಗೆ

ಕೇಂದ್ರ ಸರ್ಕಾರದ ಒನ್ ನೇಷನ್ ಒನ್ ಯೂನಿಫಾರ್ಮ್ ಪ್ರಸ್ತಾವನೆಗೆ ರಾಜ್ಯ ಗೃಹ ಇಲಾಖೆ ಸಮ್ಮತಿಸಿದೆ. ದೇಶದ ಎಲ್ಲಾ ರಾಜ್ಯಗಳ ಪೊಲೀಸರಿಗೆ ಅನ್ವಯಗುವಂತಹ ಏಕರೂಪದ ಯೂನಿಫಾರ್ಮ್ ಪದ್ಧತಿ ಜಾರಿಗೆ ತರಲು ರಾಜ್ಯ ಸರ್ಕಾರಗಳ ಅಭಿಪ್ರಾಯ ಕೇಳಿದ್ದ ಕೇಂದ್ರ ಗೃಹ ಇಲಾಖೆ.

One Nation One Uniform ಪೊಲೀಸರಿಗೆ 'ಒಂದು ದೇಶ, ಒಂದು ಸಮವಸ್ತ್ರ': ಕೇಂದ್ರದ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಒಪ್ಪಿಗೆ
ವಿಧಾನಸೌಧ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Jan 17, 2023 | 6:15 PM

ಬೆಂಗಳೂರು: ಕೇಂದ್ರ ಸರ್ಕಾರದ ಒಂದು ದೇಶ, ಒಂದು ಸಮವಸ್ತ್ರ (One Nation One Uniform) ಪ್ರಸ್ತಾವನೆಗೆ ಕರ್ನಾಟಕ ಸರ್ಕಾರ ಒಪ್ಪಿಗೆ ಸೂಚಿಸಿದೆ. ಕೇಂದ್ರ ಸರ್ಕಾರದ ಪ್ರಸ್ತಾವನೆಗೆ ರಾಜ್ಯ ಗೃಹ ಇಲಾಖೆ ಸಮ್ಮತಿ ನೀಡಿದೆ. ಎಲ್ಲಾ ರಾಜ್ಯಗಳ ಪೊಲೀಸರಿಗೆ ಅನ್ವಯವಾಗುವಂತೆ ಒಂದೇ ರೀತಿಯ ಸಮವಸ್ತ್ರ ಜಾರಿಗೆ ತರುವ ಬಗ್ಗೆ ಕೇಂದ್ರ ಗೃಹ ಇಲಾಖೆ, ದೇಶದ ಎಲ್ಲಾ ರಾಜ್ಯ ಸರ್ಕಾರಗಳ ಅಭಿಪ್ರಾಯ ಕೇಳಿತ್ತು. ಇದೀಗ ಇದಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಸಮ್ಮತಿಸಿದ್ದಾರೆ.

ಇತ್ತೀಚೆಗೆ ಹರ್ಯಾಣದಲ್ಲಿ ಸೂರಜ್‌ಕುಂಡ್‌ನಲ್ಲಿ ನಡೆದಿದ್ದ ಗೃಹ ಸಚಿವರ ಚಿಂತನ್ ಶಿವರ್‌ನ ಸಮಾರೋಪ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ‘ಒಂದು ರಾಷ್ಟ್ರ, ಒಂದು ಸಮವಸ್ತ್ರ’ ನೀತಿಯನ್ನು ಸೂಚಿಸಿದ್ದರು.

ರಾಜ್ಯ ಸರ್ಕಾರಗಳ ಗೃಹ ಸಚಿವರಿಗೆ ಹರ್ಯಾಣದಲ್ಲಿ ಆಯೋಜಿಸಿರುವ ಚಿಂತನ ಶಿಬಿರವನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ್ದ ಪ್ರಧಾನಿ ಮೋದಿ, ದೇಶಾದ್ಯಂತ ಇರುವ ಪೊಲೀಸರ ಗುರುತು ಅನನ್ಯವಾಗಿರಬೇಕು ಎಂದು ಅಭಿಪ್ರಾಯಪಟ್ಟಿದ್ದರು. ಇದು ಒಂದು ‘ಪರಿಕಲ್ಪನೆ’ ಅಷ್ಟೇ ಆಗಿದ್ದು, ಹೇರಿಕೆ ಅಲ್ಲ ಎಂದು ಹೇಳಿದ್ದ ಪ್ರಧಾನಿ ನರೇಂದ್ರ ಮೋದಿ, ಇದೊಂದು ಸಲಹೆಯಾಗಿ ಪರಿಗಣಿಸುವಂತೆ ರಾಜ್ಯಗಳಿಗೆ ಅವರು ಸಲಹೆ ನೀಡಿದ್ದರು. ಅದರಂತೆ ದೇಶದ ಎಲ್ಲಾ ರಾಜ್ಯಗಳ ಪೊಲೀಸರಿಗೆ ಅನ್ವಯಗುವಂತಹ ಏಕರೂಪದ ಯೂನಿಫಾರ್ಮ್ ಪದ್ಧತಿ ಜಾರಿಗೆ ತರಲು ಕೇಂದ್ರ ಗೃಹ ಇಲಾಖೆ ರಾಜ್ಯ ಸರ್ಕಾರಗಳ ಅಭಿಪ್ರಾಯ ಕೇಳಿತ್ತು.

ಇನ್ನಷ್ಟು ರಾಜ್ಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ