Janardhan Reddy ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಕೊನೆಗೂ ಸರ್ಕಾರ ಅಸ್ತು, ಚುನಾವಣೆ ಹೊತ್ತಲ್ಲಿ ಗಣಿ ಧಣಿಗೆ ಸಂಕಷ್ಟ

ಗಾಲಿ ಜನಾರ್ದನ ರೆಡ್ಡಿ ಆಸ್ತಿ ಜಪ್ತಿ ಪ್ರಕ್ರಿಯೆಗೆ ಕೊನೆಗೂ ಸರ್ಕಾರ ಅನುಮತಿ ನೀಡಿದೆ. ಇದರಿಂದ ಚುನಾವಣೆ ಹೊತ್ತಲ್ಲೇ ಗಣಿ ಧಣಿಗೆ ಸಂಕಷ್ಟ ಎದುರಾಗಿದೆ.

Janardhan Reddy ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಕೊನೆಗೂ ಸರ್ಕಾರ ಅಸ್ತು, ಚುನಾವಣೆ ಹೊತ್ತಲ್ಲಿ ಗಣಿ ಧಣಿಗೆ ಸಂಕಷ್ಟ
ಜನಾರ್ದನ ರೆಡ್ಡಿ ಆಸ್ತಿ ಪ್ರಕರಣ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Jan 12, 2023 | 3:07 PM

ಬೆಂಗಳೂರು: ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸಂಸ್ಥಾಪಕ, ಮಾಜಿ ಸಚಿವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ (Gali Janardhan Reddy) ಆಸ್ತಿ ಜಪ್ತಿಗೆ ಕೊನೆಗೂ ಕರ್ನಾಟಕ ಗೃಹ ಇಲಾಖೆ ಅನುಮತಿ ನೀಡಿ ಆದೇಶ ಹೊರಡಿಸಿದೆ. ಕರ್ನಾಟಕ ಹೈಕೋರ್ಟ್ (Karnataka High Court) ಚಾಟಿ ಬೀಸಿದ ಬಳಿಕೆ ಎಚ್ಚೆತ್ತುಕೊಂಡ ಸರ್ಕಾರ, ಅಂತಿಮವಾಗಿ ಇಂದು(ಜನವರಿ 12) ರೆಡ್ಡಿ ಆಸ್ತಿ ಜಪ್ತಿ ಪ್ರತಿಕ್ರಿಯೆಗೆ ಅನುಮತಿ ನೀಡಿದೆ. ಇದರಿಂದ ರಾಜಕೀಯದಲ್ಲಿ ಎರಡನೇ ಇನ್ನಿಂಗ್ಸ್ ಆರಂಭಿಸಿರುವ ಜನಾರ್ದನ ರೆಡ್ಡಿಗೆ ಸಂಕಷ್ಟ ಎದುರಾಗಿದೆ.

ಇದನ್ನೂ ಓದಿ: ಜನಾರ್ದನ ರೆಡ್ಡಿ ಆಸ್ತಿ ಜಪ್ತಿ ಅನುಮತಿಗೆ ವಿಳಂಬ: ಬೊಮ್ಮಾಯಿ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌

ಕಳೆ‌ದ ಆಗಸ್ಟ್ ತಿಂಗಳಲ್ಲೇ ಸಿಬಿಐ ತೆಲಂಗಾಣ, ಆಂಧ್ರಪ್ರದೇಶದಲ್ಲಿನ ಆಸ್ತಿ ಜಪ್ತಿಗೆ ಅನುಮತಿ ಕೇಳಿತ್ತು ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಕರ್ನಾಟಕ ಸರ್ಕಾರ ಅನುಮತಿ ನೀಡದ ಹಿನ್ನೆಲೆಯಲ್ಲಿ ಸಿಬಿಐ (CBI) ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಅರ್ಜಿ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್ (Karnataka High court) ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿತ್ತು.

5 ತಿಂಗಳಾದರೂ ಸರ್ಕಾರ ಏಕೆ ನಿರ್ಧಾರ ಕೈಗೊಂಡಿಲ್ಲ. ನಿಮ್ಮ ದೃಷ್ಟಿಯಲ್ಲಿ ನಿರ್ಧಾರ ಕೈಗೊಳ್ಳದಿರುವುದೂ ಇಂದು ಕ್ರಮವಿರಬಹುದು. ಆದರೆ ಇದನ್ನು ಕೋರ್ಟ್ ಒಪ್ಪಲು ಸಾಧ್ಯವಿಲ್ಲ ಎಂದು ಬೊಮ್ಮಾಯಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಸರ್ಕಾರದ ಪ್ರತಿಕ್ರಿಯೆ ತಿಳಿಸಲು ಖಡಕ್ ಸೂಚನೆ ಕೊಟ್ಟಿತ್ತು. ಇದರ ಬೆನ್ನಲ್ಲೇ ಇದೀಗ ರಾಜ್ಯ ಗೃಹ ಇಲಾಖೆ ರೆಡ್ಡಿ ಆಸ್ತಿ ಜಪ್ತಿ ಪ್ರಕ್ರಿಯೆ ಅನುಮತಿ ನೀಡಿ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಬೊಮ್ಮಾಯಿ ಸರ್ಕಾರ ಮೀನಾಮೇಷ: ಹೈಕೋರ್ಟ್ ಮೆಟ್ಟಿಲೇರಿದ ಸಿಬಿಐ

ಸದ್ಯ ಸಿಬಿಐಗೆ ಅನುಮತಿ ನೀಡಿ ಗೃಹ ಇಲಾಖೆ ಆದೇಶ ನೀಡಿದ್ದು, ಅನುಮತಿ ನೀಡಿ ಆದೇಶ ನೀಡಿರುವ ಕುರಿತಂತೆ ಹೈಕೋರ್ಟ್​​ಗೆ ಸರ್ಕಾರದ ಪರ ವಕೀಲರು ಮಾಹಿತಿ ನೀಡಿದ್ದಾರೆ. ಹೊಸದಾಗಿ ಪತ್ತೆಯಾದ ಆಸ್ತಿ ಜಪ್ತಿಗೆ ಸರ್ಕಾರದ ಅನುಮತಿ ನೀಡಿದ ಕಾರಣ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ‌ ಇತ್ಯರ್ಥಗೊಳಿಸಿದೆ. ಇದರಿಂದ ಹೊಸ ಪಕ್ಷ ಕಟ್ಟಿಕೊಂಡು ಹೊಸ ರಾಜಕೀಯ ಜೀವನ ಆರಂಭಿಸಿದ ಗಣಿಧಣಿಗೆ ಆರಂಭದಲ್ಲಿ ಸಂಕಷ್ಟ ಎದುರಾಗಿದೆ.

ಆಸ್ತಿ ಜಪ್ತಿ ಮಾಡುತ್ತೇವೆ ಎನ್ನುವವರಿಗೆ ಹೆದರಲ್ಲ ಎಂದಿದ್ದ ರೆಡ್ಡಿ

ನಿನ್ನೆ (ಜನವರಿ 11) ಅಷ್ಟೇ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ್ದ ರೆಡ್ಡಿ,  ನನ್ನ ಆಸ್ತಿಪಾಸ್ತಿ ಜಪ್ತಿ ಮಾಡುತ್ತಾರೆ ಅಂತಾರೆ, ಅದಕ್ಕೆಲ್ಲ ನಾನು ಹೆದರಲ್ಲ. ಜೈಲಿನಲ್ಲಿ 4X5 ಅಡಿ ಜಾಗದಲ್ಲಿ ಇದ್ದವನು ನಾನು. ಯಾವೂದಕ್ಕೆ ಹೆದರುವುದಿಲ್ಲ. ನನ್ನ ಬಂಧನದ ಸಮಯದಲ್ಲಿ 1,200 ಕೋಟಿ ಆಸ್ತಿ ಜಪ್ತಿ ಮಾಡಿದ್ದರು. ಆದರೆ ಹೈಕೋರ್ಟ್​​ನಲ್ಲಿ ಗೆದ್ದಿದ್ದೆ, ಈಗ ‘ಸುಪ್ರೀಂ’ ಮೆಟ್ಟಿಲೇರಿದ್ದಾರೆ. ಅದಕ್ಕೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ, ನನ್ನ ಸ್ಪೀಡ್ ಜಾಸ್ತಿಯಾಗಿದೆ. 1,200 ಕೋಟಿ ಇದ್ದ ಆಸ್ತಿ 4,000 ಕೋಟಿಯಾಗಿದೆ. ಹನುಮ ಹುಟ್ಟಿದ ನಾಡಿಗೆ ನಾನು ಬಂದಿದ್ದೇನೆ, ನನಗೆ ಲಕ್ಷ್ಮೀ ಕೃಪೆ ಇದೆ. ಇನ್ಮುಂದೆ ನಾನು ಕಣ್ಣೀರು ಹಾಕಲ್ಲ. ನನ್ನ ಕಣ್ಣೀರು 12 ವರ್ಷದ ಹಿಂದೆಯೇ ಮುಗಿದಿದೆ ಎಂದು ಹೇಳಿದ್ದರು.

Published On - 2:43 pm, Thu, 12 January 23

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು
ಸರ್ಕಾರ ನಮ್ಮ ಬೇಡಿಕೆಗೆ ಸಮ್ಮತಿಸಿಲ್ಲ: ಡಿ 31ರಂದು ಕೆಎಸ್​ಆರ್​ಟಿಸಿ ಬಂದ್​
ಸರ್ಕಾರ ನಮ್ಮ ಬೇಡಿಕೆಗೆ ಸಮ್ಮತಿಸಿಲ್ಲ: ಡಿ 31ರಂದು ಕೆಎಸ್​ಆರ್​ಟಿಸಿ ಬಂದ್​