ಕಾಂಗ್ರೆಸ್​ನವರು ನನ್ನ ಮೇಲೆ ಅತ್ಯಾಚಾರ ಮಾಡಲು ಯತ್ನಿಸುತ್ತಿದ್ದಾರೆ: ಗೃಹ ಸಚಿವ ಆರಗ ಜ್ಞಾನೇಂದ್ರ ವಿವಾದಾತ್ಮಕ ಹೇಳಿಕೆ

| Updated By: guruganesh bhat

Updated on: Aug 26, 2021 | 6:57 PM

ಆ ಯುವಕ, ಯುವತಿ ಸಂಜೆ 7.30ರ ವೇಳೆಗೆ ನಿರ್ಜನ ಪ್ರದೇಶಕ್ಕೆ ಹೋಗಬಾರದಿತ್ತು. ಆದರೆ ಹೋಗಬೇಡಿ ಅಂತಾ ತಡೆಯೋದಕ್ಕೂ ಆಗೋದಿಲ್ಲ. ಸದ್ಯಕ್ಕೆ ಯುವಕ,ಯುವತಿ ಶಾಕ್​ನಲ್ಲಿ ಇದ್ದಾರೆ. ಅವರ ಸಂಪೂರ್ಣ ಸ್ಟೇಟ್ ಮೆಂಟ್ ಪಡೆಯಲು ಆಗಿಲ್ಲ. ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ. ಎಂದು ಸಹ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್​ನವರು ನನ್ನ ಮೇಲೆ ಅತ್ಯಾಚಾರ ಮಾಡಲು ಯತ್ನಿಸುತ್ತಿದ್ದಾರೆ: ಗೃಹ ಸಚಿವ ಆರಗ ಜ್ಞಾನೇಂದ್ರ ವಿವಾದಾತ್ಮಕ ಹೇಳಿಕೆ
ಆರಗ ಜ್ಞಾನೇಂದ್ರ
Follow us on

ಬೆಂಗಳೂರು: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್‌ನವರು ರಾಜಕೀಯ ಲಾಭ ಗಳಿಸಲು ಯತ್ನಿಸುತ್ತಿದ್ದಾರೆ. ಅತ್ಯಾಚಾರ ಆಗಿದ್ದು ಅಲ್ಲಿ, ಆದರೆ ಕಾಂಗ್ರೆಸ್‌ನವರು ನನ್ನನ್ನು ಅತ್ಯಾಚಾರ ಮಾಡ್ತಿದ್ದಾರೆ’ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅಲ್ಲಿ ಆಗಿರುವುದು ಅಮಾನುಷವಾದ ಕೆಲಸ. ಅದನ್ನು ಮಾನವೀಯ ದೃಷ್ಟಿಯಿಂದ ನೋಡಿ, ಡಿಟೆಕ್ಟ್ ಮಾಡಿ ಅನ್ನಬೇಕು. ಕಾಂಗ್ರೆಸ್​ನವರು ಹಾಗೆ ಮಾಡದೇ ನನ್ನ ಮೇಲೆ ಹರಿಹಾಯುತ್ತಿದ್ದಾರೆ. ಈ ಪ್ರಕರಣದಲ್ಲೂ ರಾಜಕೀಯ ಮಾಡಲು ಹೋಗಬಾರದು ಎಂದು ಅವರು ಕಿಡಿಕಾರಿದ್ದಾರೆ.

ಆ ಯುವಕ, ಯುವತಿ ಸಂಜೆ 7.30ರ ವೇಳೆಗೆ ನಿರ್ಜನ ಪ್ರದೇಶಕ್ಕೆ ಹೋಗಬಾರದಿತ್ತು. ಆದರೆ ಹೋಗಬೇಡಿ ಅಂತಾ ತಡೆಯೋದಕ್ಕೂ ಆಗೋದಿಲ್ಲ. ಸದ್ಯಕ್ಕೆ ಯುವಕ,ಯುವತಿ ಶಾಕ್​ನಲ್ಲಿ ಇದ್ದಾರೆ. ಅವರ ಸಂಪೂರ್ಣ ಸ್ಟೇಟ್ ಮೆಂಟ್ ಪಡೆಯಲು ಆಗಿಲ್ಲ. ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ. ಎಂದು ಸಹ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ತಮ್ಮ ಈ ಮಾತು ವಿವಾದದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತ ಗೃಹ ಇಲಾಖೆ ಸಚಿವ ಆರಗ ಜ್ಞಾನೇಂದ್ರ, ಕಾಂಗ್ರೆಸ್‌ನವರು ಗೃಹ ಸಚಿವರ ಮೇಲೆ ರೇಪ್ ಮಾಡ್ತಿದ್ದಾರೆ ಎಂದು ಅವರ ಮನಸ್ಸಿಗೆ ನೋವು ಮಾಡುವುದಕ್ಕೆ ಈ ಮಾತು ಹೇಳಿಲ್ಲ. ತಮಾಷೆ ರೀತಿಯಲ್ಲಿ ಮಾತಾಡಿದ್ದೇನೆ ಎಂದು ತಿದ್ದಿಕೊಂಡರು. ಇದು ಮೈಸೂರಿನಂತರ ಶಾಂತಿಯುವ ಸುಸಂಸ್ಕೃತರು ವಾಸಿಸುವ ನಾಡು. ಘಟನೆಗೆ ಯಾರು ಕಾರಣ ಅವರನ್ನ ಹಿಡಿಯುತ್ತೇವೆ. 12 ಗಂಟೆಯಲ್ಲಿ FIR ಆಗಿದೆ. ಆರೋಪಿಗಳನ್ನ ಬಂಧಿಸುತ್ತೇವೆ ಎಂದು ಹೇಳಿದರು.

ಕಾಂಗ್ರೆಸ್‌ನವರು ರೇಪ್ ಮಾಡಿದ್ರೆ ಎಫ್ಐಆರ್ ದಾಖಲಿಸಲಿ
ಗ್ಯಾಂಗ್‌ರೇಪ್ ಆಗಿ 48 ಗಂಟೆಗಳು ಕಳೆದುಹೋಗಿದೆ. ಈವರೆಗೂ ಆರೋಪಿಗಳನ್ನು ಬಂಧಿಸುವ ಕೆಲಸ ಮಾಡಿಲ್ಲ. ಕಾಂಗ್ರೆಸ್‌ನವರು ಗೃಹ ಸಚಿವರನ್ನು ರೇಪ್ ಮಾಡಿದ್ದಾರಂತೆ. ಗೃಹ ಸಚಿವ ಆರಗ ಜ್ಞಾನೇಂದ್ರ ಈ ರೀತಿಯಾಗಿ ಹೇಳಿದ್ದಾರೆ. ರೇಪ್ ಎಂಬ ಪದ ಗೃಹ ಸಚಿವರಿಗೆ ಪ್ರಿಯವಾದ ಪದವಾಗಿದೆ. ರೇಪ್ ಪದವನ್ನು ಅವರು ಬಹಳ ಗೌರವದಿಂದ ಬಿಂಬಿಸಿದ್ದಾರೆ. ಇದಕ್ಕೆ ಸ್ಪಷ್ಟನೆ ಕೇವಲ ಗೃಹ ಸಚಿವರಿಂದ ಕೇಳುವುದಿಲ್ಲ. ಬಿಜೆಪಿಯ ಎಲ್ಲಾ ನಾಯಕರು ಇದಕ್ಕೆ ಸ್ಪಷ್ಟನೆ ನೀಡಬೇಕು. ಕಾಂಗ್ರೆಸ್‌ನವರು ಯಾಱರು ರೇಪ್ ಮಾಡಿದ್ದಾರೆಂದು ಹೇಳಲಿ. ವಿ.ಎಸ್.ಉಗ್ರಪ್ಪನಾ, ಹೆಚ್.ಎಂ.ರೇವಣ್ಣ ಮಾಡಿದ್ದಾರಾ? ಡಿ.ಕೆ.ಶಿವಕುಮಾರ್ ಅಥವಾ ಸಿದ್ದರಾಮಯ್ಯ ಮಾಡಿದ್ದಾರಾ? ಯಾರೇ ರೇಪ್ ಮಾಡಿದ್ದರೂ ಅವರ ವಿರುದ್ಧ ಕೇಸ್ ಹಾಕಲಿ. ಕಾಂಗ್ರೆಸ್‌ನವರು ರೇಪ್ ಮಾಡಿದ್ರೆ ಎಫ್ಐಆರ್ ದಾಖಲಿಸಲಿ ಎಂದು ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ.

ಮಹಿಳಾ ಆಯೋಗದಿಂದ ಪತ್ರ
ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ಮಹಿಳಾ ಆಯೋಗ ಡಿಜಿ ಮತ್ತು ಐಜಿಪಿಗೆ ಪತ್ರ ಬರೆದಿದೆ. ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಪತ್ರದಲ್ಲಿ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: 

ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ: ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಸ್ತಾಪಿಸಿ ಸಿದ್ದರಾಮಯ್ಯ ಟೀಕೆ

ಮೈಸೂರು: ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ; ಎಫ್​ಐಆರ್ ದಾಖಲಿಸಿಕೊಂಡ ಪೊಲೀಸರು

(Karnataka Home Minister Araga Jnanendra says in Mysuru Gangrape case Congress is trying to rape me)

Published On - 2:30 pm, Thu, 26 August 21