Mekedatu Project: ಮೇಕೆದಾಟು ಯೋಜನೆ ವಿಚಾರದಲ್ಲಿ ಕರ್ನಾಟಕಕ್ಕೆ ನ್ಯಾಯ ಸಿಕ್ಕೇ ಸಿಗುತ್ತದೆ; ಗೃಹಸಚಿವ ಬೊಮ್ಮಾಯಿ ವಿಶ್ವಾಸ

Basavaraj Bommai: ಮೇಕೆದಾಟು ಯೋಜನೆಯನ್ನು ಕೈಬಿಡುವ ಪ್ರಶ್ನೆಯೇ ಇಲ್ಲ. ಈ ವಿಚಾರದಲ್ಲಿ ಎಲ್ಲ ರೀತಿಯ ಅನುಮತಿಯನ್ನು ಪಡೆಯುತ್ತೇವೆ. ಮೇಕೆದಾಟು ಯೋಜನೆಯ ವಿಚಾರದಲ್ಲಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ನ್ಯಾಯ ಒದಗಿಸಲಿದೆ ಎಂಬ ವಿಶ್ವಾಸ ನಮಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Mekedatu Project: ಮೇಕೆದಾಟು ಯೋಜನೆ ವಿಚಾರದಲ್ಲಿ ಕರ್ನಾಟಕಕ್ಕೆ ನ್ಯಾಯ ಸಿಕ್ಕೇ ಸಿಗುತ್ತದೆ; ಗೃಹಸಚಿವ ಬೊಮ್ಮಾಯಿ ವಿಶ್ವಾಸ
ಗೃಹ ಸಚಿವ ಬಸವರಾಜ್ ಬೊಮ್ಮಾಯಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jul 12, 2021 | 5:48 PM

ಬೆಂಗಳೂರು: ಕೃಷಿಗಿಂತಲೂ ಕುಡಿಯುವ ನೀರಿಗೆ ಮೊದಲ ಆದ್ಯತೆಯಾದ್ದರಿಂದ ಕರ್ನಾಟಕಕ್ಕೆ ಮೇಕೆದಾಟು ಯೋಜನೆ ಜಾರಿಗೊಳಿಸಲು ಸಂಪೂರ್ಣ ಹಕ್ಕಿದೆ. ಕಾನೂನಿನ ಪ್ರಕಾರವಾಗಿ ನಾವು ಇಟ್ಟಿರುವ ಬೇಡಿಕೆಯನ್ನು ಕೇಂದ್ರ ಸರ್ಕಾರ ಪರಿಗಣಿಸಿ, ನಮಗೆ ಮೇಕೆದಾಟು ಯೋಜನೆ ಪೂರ್ಣಗೊಳಿಸಲು ಅನುಮತಿ ನೀಡಬೇಕು. ಕೇಂದ್ರ ಸರ್ಕಾರದಿಂದ ನಮಗೆ ನ್ಯಾಯ ಸಿಗುವ ಭರವಸೆಯಿದೆ ಎಂದು ಕರ್ನಾಟಕದ ಗೃಹ ಸಚಿವ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ನೇತೃತ್ವದಲ್ಲಿ ಇಂದು ಸರ್ವಪಕ್ಷಗಳ ಸಭೆ ನಡೆದಿದ್ದು, ಯಾವುದೇ ಕಾರಣಕ್ಕೆ ಮೇಕೆದಾಟಿನಲ್ಲಿ ಅಣೆಕಟ್ಟು ನಿರ್ಮಿಸಲು ಬಿಡಬಾರದು ಎಂದು ನಿರ್ಧರಿಸಲಾಗಿದೆ. ಈ ಕುರಿತು ತಮ್ಮ ನಿರ್ಣಯವನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲು ತೀರ್ಮಾನ ಮಾಡಲಾಗಿದೆ. ಸಭೆಯ ಬಳಿಕ ಮಾತನಾಡಿರುವ ತಮಿಳುನಾಡು ಸಿಎಂ ಸ್ಟಾಲಿನ್, ಕಾವೇರಿ ನದಿ ನೀರಿನ ಮೇಲೆ ಕೇವಲ ಕರ್ನಾಟಕಕ್ಕೆ ಮಾತ್ರವಲ್ಲ ತಮಿಳುನಾಡಿಗೂ ಸಂಪೂರ್ಣ ಹಕ್ಕಿದೆ. ಯಾವುದೇ ಕಾರಣಕ್ಕೂ ಮೇಕೆದಾಟಿನಲ್ಲಿ ಕಾವೇರಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಿಸಲು ನಾವು ಒಪ್ಪುವುದಿಲ್ಲ. ಇದರಿಂದ ಕಾವೇರಿ ತೀರದ ತಮಿಳುನಾಡಿನ ರೈತರ ವ್ಯವಸಾಯಕ್ಕೆ ತೊಂದರೆಯಾಗಲಿದೆ ಎಂದಿದ್ದಾರೆ.

ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಕರ್ನಾಟಕದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಾವೇರಿ ನ್ಯಾಯಾಧಿಕರಣದ ಆದೇಶದ ಅನುಸಾರ ಕರ್ನಾಟಕದಿಂದ ತಮಿಳುನಾಡಿಗೆ ಎಷ್ಟು ನೀರನ್ನು ಬಿಡಬೇಕು ಎಂಬುದರ ಬಗ್ಗೆ ನಿರ್ಧಾರವಾಗಿದೆ. ಉಳಿದ ನೀರನ್ನು ಕುಡಿಯುವ ನೀರು, ವಿದ್ಯುತ್ ಉತ್ಪಾದನೆಗೆ ಬಳಸಿಕೊಳ್ಳಲು ಸಮಸ್ಯೆಯಿಲ್ಲ. ಕರ್ನಾಟಕದಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದರಿಂದ ಆ ನೀರನ್ನು ನಾವು ಬಳಸಿಕೊಳ್ಳಲು ಮೇಕೆದಾಟು ಯೋಜನೆಯನ್ನು ಕೈಗೆತ್ತಿಕೊಂಡಿದ್ದೇವೆ. ಈ ಯೋಜನೆಯನ್ನು ಕೈಬಿಡುವ ಪ್ರಶ್ನೆಯೇ ಇಲ್ಲ. ಈ ವಿಚಾರದಲ್ಲಿ ಎಲ್ಲ ರೀತಿಯ ಅನುಮತಿಯನ್ನು ಪಡೆಯುತ್ತೇವೆ. ಮೇಕೆದಾಟು ಯೋಜನೆಯ ವಿಚಾರದಲ್ಲಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ನ್ಯಾಯ ಒದಗಿಸಲಿದೆ ಎಂಬ ವಿಶ್ವಾಸ ನಮಗಿದೆ ಎಂದು ಹೇಳಿದ್ದಾರೆ.

ರಾಮನಗರದ ಬಳಿ ಇರುವ ಮೇಕೆದಾಟು ಎಂಬಲ್ಲಿ ಸಣ್ಣದಾದ ಅಣೆಕಟ್ಟನ್ನು ನಿರ್ಮಿಸಿ, ಸುಮಾರು 65ರಿಂದ 66 ಟಿಎಂಸಿ ಹೆಚ್ಚುವರಿ ನೀರನ್ನು ಸಂಗ್ರಹಿಸುವ ಉದ್ದೇಶ ಕರ್ನಾಟಕ ಸರ್ಕಾರದ್ದು. 2008ರಲ್ಲಿ ಈ ಯೋಜನೆಯನ್ನು ಆರಂಭಿಸಲಾಯಿತು. ಬೆಂಗಳೂರಿನಿಂದ 90 ಕಿ.ಮೀ. ದೂರದಲ್ಲಿರುವ ಮೇಕೆದಾಟುವಿನಲ್ಲಿ ಈ ಡ್ಯಾಂ ನಿರ್ಮಿಸಿದರೆ ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಸಾಧ್ಯವೆಂಬುದು ಸರ್ಕಾರದ ಲೆಕ್ಕಾಚಾರವಾಗಿತ್ತು. ಹಾಗೇ, ಇದರಿಂದ ವಿದ್ಯುತ್ ಉತ್ಪಾದನೆ ಮಾಡುವ ಯೋಚನೆಯೂ ಇತ್ತು. ಕೆಆರ್​ಎಸ್, ಕಬಿನಿ ಜಲಾಶಯಗಳಿಂದ ಹರಿಯುವ ಹೆಚ್ಚುವರಿ ನೀರನ್ನು ಸಂಗ್ರಹಿಸಲು ಈ ಮೇಕೆದಾಟು ಯೋಜನೆಯಿಂದ ಅನುಕೂಲವಾಗಲಿದೆ ಎಂದು 9 ಸಾವಿರ ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕ ಸರ್ಕಾರ ಈ ಯೋಜನೆಯನ್ನು ಕೈಗೆತ್ತಿಕೊಂಡಿತ್ತು.

ಕರ್ನಾಟಕ ಮೇಕೆದಾಟು ಅಣೆಕಟ್ಟು ಕಟ್ಟಿದರೆ ಕಾವೇರಿ ನೀರಿನ 67 ಟಿಎಂಸಿ ನೀರು ಸಂಗ್ರಹಣೆಯಾಗಿ ತಮಿಳುನಾಡಿಗೆ ನೀರಿನ ಹರಿಯುವಿಕೆಗೆ ತಡೆಯಾಗುತ್ತದೆ. ತಮಿಳು ನಾಡಿನಲ್ಲಿ ಕಾವೇರಿ ಜಲಾನಯನ ಪ್ರದೇಶದ ಜನರಿಗೆ ಭತ್ತ ಇಳುವರಿ ಬೆಳೆಯಲು ಕಾವೇರಿ ನೀರನ್ನೇ ಅವಲಂಬಿಸಿದ್ದಾರೆ. ಕರ್ನಾಟಕ ಕಾವೇರಿ ನದಿಗೆ ಮೇಕೆದಾಟಿನಲ್ಲಿ ಅಣೆಕಟ್ಟು ಕಟ್ಟಿದರೆ ತಮಿಳು ನಾಡಿನ ಜನರಿಗೆ ವ್ಯವಸಾಯಕ್ಕೆ ನೀರಿಗೆ ಸಮಸ್ಯೆಯಾಗುತ್ತದೆ ಎಂಬುದು ತಮಿಳುನಾಡು ಸರ್ಕಾರದ ವಾದ. ಈ ಹಿನ್ನೆಲೆಯಲ್ಲಿ ಮೇಕೆದಾಟು ಯೋಜನೆಗೆ ತಡೆಯೊಡ್ಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಲು ತಮಿಳು ನಾಡು ಸರ್ಕಾರ ಪ್ರಯತ್ನಿಸುತ್ತಿದೆ.

ರಾಮನಗರ ಬಳಿ ಇರುವ ಮೇಕೆದಾಟು ಎಂಬಲ್ಲಿ ಅಣೆಕಟ್ಟು ನಿರ್ಮಿಸುವ ಕರ್ನಾಟಕ ಸರ್ಕಾರದ ಯೋಜನೆಗೆ ತಮಿಳುನಾಡಿನಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಈ ಕುರಿತು ಚರ್ಚಿಸಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಇಂದು ಸರ್ವಪಕ್ಷ ಸಭೆ ಕರೆದಿದ್ದರು. ಈ ಸಭೆಯಲ್ಲಿ ಡಿಎಂಕೆ, ಕಾಂಗ್ರೆಸ್, ಬಿಜೆಪಿ, ಎಐಎಡಿಎಂಕೆ ಸೇರಿ ಎಲ್ಲ ಪಕ್ಷಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಯಾವುದೇ ಕಾರಣಕ್ಕೂ ಮೇಕೆದಾಟು ಡ್ಯಾಂ ನಿರ್ಮಾಣಕ್ಕೆ ಅನುಮತಿ ನೀಡಬಾರದು ಎಂದು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕೆಂದು ಈ ಸಭೆಯಲ್ಲಿ ನಿರ್ಧರಿಸಲಾಗಿದೆ.

ಇದನ್ನೂ ಓದಿ: Mekedatu Project: ಮೇಕೆದಾಟು ಯೋಜನೆಗೆ ಅವಕಾಶ ನೀಡಬಾರದು; ಸ್ಟಾಲಿನ್ ನೇತೃತ್ವದಲ್ಲಿ ತಮಿಳುನಾಡು ನಾಯಕರ ನಿರ್ಧಾರ

ಇದನ್ನೂ ಓದಿ: Mekedatu Project: ಮೇಕೆದಾಟು ಯೋಜನೆಗೆ ವಿರೋಧ; ಸರ್ವ ಪಕ್ಷ ನಾಯಕರ ಮಹತ್ವದ ಸಭೆ ಕರೆದ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್

(Karnataka Home Minister Basavaraj Bommai Reaction on Mekedatu Dam Project which is Opposed by Tamil Nadu)

Published On - 5:45 pm, Mon, 12 July 21

14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು
Daily horoscope: ಈ ರಾಶಿಯವರು ಇಂದು ಕೆಲಸಗಳಲ್ಲಿ ಯಶಸ್ಸು ಕಾಣುವರು
Daily horoscope: ಈ ರಾಶಿಯವರು ಇಂದು ಕೆಲಸಗಳಲ್ಲಿ ಯಶಸ್ಸು ಕಾಣುವರು